ರಾಜ್ಯ

ಉಡುಪಿ: ಬಸ್- ಬೈಕ್ ಅಪಘಾತ| ಗಂಭೀರ ಗಾಯಗೊಂಡಿದ್ದ ಯುವತಿ ಸಾವು

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮಣಿಪಾಲದ ಮೃತಪಟ್ಟಿದ್ದಾಳೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಿರ್ಮಿತಾ (19) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿರ್ಮಿತಾ ಹಾಗೂ ಶಶಾಂಕ್ ಜೂನ್ 18 ರಂದು ಬೈಕನಲ್ಲಿ ತೆರಳುತಿದ್ದಾಗ ಆಗುಂಬೆ ಘಾಟ್‌ನಲ್ಲಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದರು. ಈ ದುರ್ಘಟನೆ ವೇಳೆ ಶಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದರು.ಇನ್ನೂ ಶಶಾಂಕ್ ಮತ್ತು ನಿರ್ಮಿತಾ ಇವರಿಬ್ಬರು ಉಡುಪಿಯ ಬಾರ್ಕೂರಿನ ನಾಗರಮಠದವರು. ಶಶಾಂಕ್ ಇಂಜಿನಿಯರಿಂಗ್

ಉಡುಪಿ: ಬಸ್- ಬೈಕ್ ಅಪಘಾತ| ಗಂಭೀರ ಗಾಯಗೊಂಡಿದ್ದ ಯುವತಿ ಸಾವು Read More »

ಪೊನ್ನಂಪೇಟೆ: ಹುಲಿ ದಾಳಿಗೆ ಎಮ್ಮೆ ಬಲಿ

ಸಮಗ್ರ ನ್ಯೂಸ್:‌ ಹುಲಿ ದಾಳಿಗೆ ಎಮ್ಮೆ ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಬಾಡಗರಕೇರಿ ಗ್ರಾಮದಲ್ಲಿ ನಡದಿದೆ, ರೈತ ಚಂದ್ರಶೇಖರ್ ಅವರಿಗೆ ಸೇರಿದ ಎಮ್ಮೆಯನ್ನು ಮೇಯಲು ಗದ್ದೆಯಲ್ಲಿ ಕಟ್ಟಿದ್ದ ಸಂದರ್ಭ ಜೂ.18ರಂದು ಸಂಜೆ ಹುಲಿ ದಾಳಿ ನಡೆಸಿದೆ. ಎಮ್ಮೆ ಕಳೆದುಕೊಂಡಿರುವ ರೈತನಿಗೆ ಹೆಚ್ಚಿನ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪೊನ್ನಂಪೇಟೆ: ಹುಲಿ ದಾಳಿಗೆ ಎಮ್ಮೆ ಬಲಿ Read More »

ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯ| ಡಿವೈಎಸ್ಪಿ ವೀರಯ್ಯ ಹಿರೇಮಠ ಜಾಮೀನಿನ ಮೇಲೆ ಬಿಡುಗಡೆ

ಸಮಗ್ರ ನ್ಯೂಸ್: ಪುತ್ತೂರುನಲ್ಲಿ ನಡೆದಿದ್ದ ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಡಿವೈಎಸ್ಪಿ ಡಾ|ವೀರಯ್ಯ ಹಿರೇಮಠ ಅವರು ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಪುತ್ತೂರಿನ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಯುವಕರನ್ನು ಪೊಲೀಸರು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದರು

ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯ| ಡಿವೈಎಸ್ಪಿ ವೀರಯ್ಯ ಹಿರೇಮಠ ಜಾಮೀನಿನ ಮೇಲೆ ಬಿಡುಗಡೆ Read More »

ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ|ಐದು ಮಂದಿ ಪತ್ರಕರ್ತರಿಗೆ ಪ್ರಶಸ್ತಿ ವಿತರಣೆ

ಸಮಗ್ರ ನ್ಯೂಸ್: ಕೊಡಗಿನಲ್ಲಿ ವೈದ್ಯಕೀಯ ಕ್ಷೇತ್ರ ತೀರಾ ಹಿಂದುಳಿದಿದ್ದು, ಇದು ಆದಷ್ಟು ಶೀಘ್ರವಾಗಿ ಅಭಿವೃದ್ಧಿಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಅನುಭವಿ ತಜ್ಞ ವೈದ್ಯರು ಒಟ್ಟಾಗಿ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇದಕ್ಕೆ ಪೂರಕವಾಗಿ ತಾನು ಯಾವುದೇ ಸಹಾಯ ಬೇಕಾದರೂ ಮಾಡಲು ಸಿದ್ಧ ಎಂದು ನಿವೃತ್ತ ಲೆ.ಜ. ಡಾ. ಬಿ.ಎನ್.ಬಿ.ಎಂ. ಪ್ರಸಾದ್ ಅವರು‌ ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದಲ್ಲಿ ಭರವಸೆ ನೀಡಿದರು.ಮಡಿಕೇರಿಯ ಪತ್ರಿಕಾಭವನದ ಸಭಾಂಗಣದಲ್ಲಿ ಭಾನುವಾರ ನಡೆದ ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಪ್ರಶಸ್ತಿ

ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ|ಐದು ಮಂದಿ ಪತ್ರಕರ್ತರಿಗೆ ಪ್ರಶಸ್ತಿ ವಿತರಣೆ Read More »

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಒಂದು ರೂಪಾಯಿಯನ್ನೂ ಪಡೆಯದೇ ನಿರಪರಾದಿಗೆ ನ್ಯಾಯ ಕೊಡಿಸಿದ ಯುವ ವಕೀಲರು

ಸಮಗ್ರ ನ್ಯೂಸ್: ದೇಶವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕೊನೆಗೂ ನಿರಪರಾಧಿಗೆ ನ್ಯಾಯ ಸಿಕ್ಕಿದೆ. ಸಂತೋಷ್‌ ರಾವ್‌ ಸುಮಾರು 11 ವರ್ಷಗಳ ಕಾಲ ಅನುಭವಿಸಿದ್ದ ಜೈಲು ಶಿಕ್ಷೆಯಿಂದ ಕೊನೆಗೂ ಮುಕ್ತಿ ದೊರಕಿದೆ. 1 ರೂಪಾಯಿಯನ್ನೂ ತೆಗೆದುಕೊಳ್ಳದೇ ನಿರಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿದ್ದ ಪುತ್ತೂರು ಮೂಲದ ಮೋಹಿತ್ ಕುಮಾರ್ ಹಾಗೂ ನವೀನ್ ಕುಮಾರ್ ಪದ್ಯಾಣ ಅವರಿಗೆ ಎಲ್ಲೆಡೆಯಿಂದಲೂ ಪ್ರಶಂಸೆ, ಮೆಚ್ಚುಗೆ ವ್ಯಕ್ತವಾಗುತ್ತಿದೆ. 2012ರಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಒಂದು ರೂಪಾಯಿಯನ್ನೂ ಪಡೆಯದೇ ನಿರಪರಾದಿಗೆ ನ್ಯಾಯ ಕೊಡಿಸಿದ ಯುವ ವಕೀಲರು Read More »

ಸಾವಿನ ದಾರಿ ತೋರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ| ಸಮಯ ಉಳಿಸುವ ಜೊತೆಗೆ ಆಯುಷ್ಯವೂ ಕಡಿಮೆ!!

ಸಮಗ್ರ ನ್ಯೂಸ್: ದುಬಾರಿ ಟೋಲ್‌ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಈಗ ಸಾವಿನ ಹೆದ್ದಾರಿಯಾಗುತ್ತಿದೆ. ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಪ್ರಯಾಣಿಸಿದರೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ ಎಂದು ಪ್ರಯಾಣಿಸುವ ಪ್ರಯಾಣಿಕರು ತಮ್ಮ ಆಯುಷ್ಯವನ್ನೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಜನವರಿಯಿಂದ ಇಲ್ಲಿಯವರೆಗೂ 105 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 50, ಮಂಡ್ಯ ಜಿಲ್ಲೆಯಲ್ಲಿ 55 ಜನ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು 190 ಜನರಿಗೆ ಗಾಯಗಳಾಗಿವೆ. ಸದಾ ಒಂದಿಲ್ಲೊಂದು

ಸಾವಿನ ದಾರಿ ತೋರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ| ಸಮಯ ಉಳಿಸುವ ಜೊತೆಗೆ ಆಯುಷ್ಯವೂ ಕಡಿಮೆ!! Read More »

ಜೂ.22ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕರ್ನಾಟಕ ಚೇಂಬರ್ ಆಫ್ ಕಾಮರ್ ಹಾಗೂ ಇಂಡಸ್ಟ್ರೀಸ್ ( KCC & I) ಜೂನ್ 22ರಂದು ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕೈಗಾರಿಕೆ ಬಂದ್ ನಡೆಸಲಾಗುತ್ತಿದೆ ಎಂದು ತಿಳಿಸಿದೆ. ವಿದ್ಯುತ್ ದರ ಇಳಿಕೆ ಸಂಬಂಧ ಸರ್ಕಾರಕ್ಕೆ ಈಗಾಗಲೇ ಮನವಿ

ಜೂ.22ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ Read More »

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ

ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶನಿವಾರ ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ್ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ Read More »

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಕಾಮದಾಟ ವಿಡಿಯೋ ವೈರಲ್| ವಿದ್ಯಾರ್ಥಿ ನಾಯಕ ಅರೆಸ್ಟ್

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜೊಂದರ ಯುವಕ-ಯುವತಿಯ ಕಾಮದಾಟ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಆರೋಪಿ ಬಂಧನದ ಬಳಿಕ ವಿಡಿಯೋ ವೈರಲ್‌ ಬಗ್ಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಕಾಮದಾಟ ವಿಡಿಯೋ ವೈರಲ್| ವಿದ್ಯಾರ್ಥಿ ನಾಯಕ ಅರೆಸ್ಟ್ Read More »

ಕರಾವಳಿಗೆ ಬರಲಿದೆಯೇ ವಂದೇ ಭಾರತ್ ಎಕ್ಸ್ ಪ್ರೆಸ್?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿನ ಎರಡು ಪ್ರಮುಖ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಕ್ಕೂ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸೇವೆ ದೊರೆಯುವ ಸಾಧ್ಯತೆ ಇದೆ ಎಂದು ಇದೀಗ ಸುದ್ದಿಯಾಗುತ್ತಿದೆ. ಮುಂಬೈ-ಗೋವಾ ವಂದೇ ಭಾರತ್ ರೈಲನ್ನು ಉಡುಪಿ ಮತ್ತು ಮಂಗಳೂರಿಗೂ ವಿಸ್ತರಣೆ ಮಾಡುವಂತೆ ಬೇಡಿಕೆ ಕೇಳಿಬರುತ್ತಿದೆ. ಉಡುಪಿಯ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸಚಿವೆ ಶೋಭಾ ಕರಂದ್ಲಾಜೆಗೆ ಈ ಕುರಿತು ಮನವಿ ಮಾಡಿರುವುದಾಗಿ ಒನ್ ಇಂಡಿಯಾ ಕನ್ನಡದಲ್ಲಿ ವರದಿ ಮಾಡಿದೆ. ಮುಂಬೈ-ಗೋವಾ ವಂದೇ ಭಾರತ್ ಎಕ್ಸ್

ಕರಾವಳಿಗೆ ಬರಲಿದೆಯೇ ವಂದೇ ಭಾರತ್ ಎಕ್ಸ್ ಪ್ರೆಸ್? Read More »