ರಾಜ್ಯ

ಜಾತಕ ತೋರಿಸಲು ಬಂದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ| ದಲಿತ ಸಂತ್ರಸ್ತೆಯಿಂದ ಪೊಲೀಸ್ ದೂರು

ಸಮಗ್ರ ನ್ಯೂಸ್: ಧರ್ಮ ಮತ್ತು ನಂಬಿಕೆಯ ಹೆಸರಿನಲ್ಲಿ ಯುವತಿಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಲಜ್ಜೆಗೆಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಜಾತಕ ದೋಷದ ಹೆಸರಲ್ಲಿ ಯುವತಿಯನ್ನು ನಂಬಿಸಿ ವಂಚಿಸಿದ ಅರ್ಚಕ ಕೃಷ್ಣರಾವ್ ಎಂಬಾತನನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ಹೊರಟ್ಟಿ ಗ್ರಾಮದ ಪುರಾತನ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕನಾಗಿದ್ದ ಕೃಷ್ಣರಾವ್ ಬಳಿ 23 ವರ್ಷದ ಯುವತಿ ತನ್ನ ಮದುವೆ ವಿಚಾರವಾಗಿ ಜಾತಕ ತೋರಿಸಲು ಹೋಗಿದ್ದರು. ಈ ಸಂದರ್ಭವನ್ನು ಬಳಸಿಕೊಂಡ […]

ಜಾತಕ ತೋರಿಸಲು ಬಂದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ| ದಲಿತ ಸಂತ್ರಸ್ತೆಯಿಂದ ಪೊಲೀಸ್ ದೂರು Read More »

ಹಿಂದುತ್ವದ ಬಗ್ಗೆ ಮಾತನಾಡುವವರು ಸಾಂಪ್ರದಾಯಿಕ ಕೋಳಿ ಅಂಕದ ಕುರಿತು ಯಾಕೆ ಮಾತಾಡ್ತಿಲ್ಲ – ಅಶೋಕ್ ರೈ

ಸಮಗ್ರ ನ್ಯೂಸ್: ಹಿಂದುತ್ವದ ಬಗ್ಗೆ ಭಾಷಣ ಮಾಡುವವರು ಕೋಳಿ ಅಂಕದ ವಿಚಾರದಲ್ಲಿ ಈಗ ಎಲ್ಲಿದ್ದಾರೆ. ಎಲ್ಲರೂ ಬರಬೇಕಿತ್ತಲ್ಲಾ ಎಂದು ಶಾಸಕ ಅಶೋಕ್ ರೈ ಪ್ರಶ್ನಿಸಿದರು. ತುಳುನಾಡ ಆಚರಣೆ, ಸಂಪ್ರದಾಯ ಉಳಿವಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆಯು ಕೊಟೆಚಾ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ದೇವಸ್ಥಾನ, ದೈವಸ್ಥಾನಗಳ ಉತ್ಸವಗಳ ಸಂದರ್ಭದಲ್ಲಿ ಹಲವು ವರ್ಷಗಳಿಂದ ಸಾಂಪ್ರದಾಯಿಕವಾಗಿ ಕೋಳಿ ಅಂಕ ನಡೆದು ಬಂದಿದೆ. ಆದರೆ ಹಿಂದುತ್ವದ ಬಗ್ಗೆ ಮಾತನಾಡುವವರು ಯಾರು ಬಂದಿಲ್ಲ. ಜೂಜು ರಹಿತ

ಹಿಂದುತ್ವದ ಬಗ್ಗೆ ಮಾತನಾಡುವವರು ಸಾಂಪ್ರದಾಯಿಕ ಕೋಳಿ ಅಂಕದ ಕುರಿತು ಯಾಕೆ ಮಾತಾಡ್ತಿಲ್ಲ – ಅಶೋಕ್ ರೈ Read More »

ಕೊಟ್ಟಿಗೆಹಾರ: ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರಮೂಡಿಗೆರೆ ತಾಲ್ಲೂಕಿನ ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಆರಂಭವಾದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯಲ್ಲೇ ಆಂಬುಲೆನ್ಸ್‌ನಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಗೆ ಆಂಬುಲೆನ್ಸ್ ಚಾಲಕ ಆರೀಫ್ ಸಮಯಪ್ರಜ್ಞೆ ತೋರಿಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಆಸ್ಪತ್ರೆಯಲ್ಲಿ

ಕೊಟ್ಟಿಗೆಹಾರ: ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ ಹೇಗಿರಲಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ:ಈ ವಾರ ಮೇಷ ರಾಶಿಯವರಿಗೆ ಚಟುವಟಿಕೆಗಳು ಹೆಚ್ಚಾಗುವ ಕಾಲ. ಕೆಲಸ ಕಾರ್ಯಗಳಲ್ಲಿ ವೇಗ ಇದ್ದರೂ ಆತುರದಿಂದ ತೀರ್ಮಾನ ಮಾಡುವ ಸ್ವಭಾವವನ್ನು ನಿಯಂತ್ರಿಸಬೇಕು. ಉದ್ಯೋಗದಲ್ಲಿ ಮೇಲಾಧಿಕಾರಿಗಳೊಂದಿಗೆ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ವಾಕ್ ಸ್ವಾತಂತ್ರ್ಯದ ಹೆಸರಲ್ಲಿ ಎಲ್ಲವನ್ನೂ ಸಹಿಸಲಾಗದು – ಹೈಕೋರ್ಟ್| ಬೆಳ್ತಂಗಡಿಯ ‘ಭಜರಂಗಿ ಗೋಕಳ್ಳರು’ ವಾಟ್ಸಾಪ್ ಗ್ರೂಪ್ ನ ಅಡ್ಮಿನ್ ವಿರುದ್ಧ ಕಿಡಿ

ಸಮಗ್ರ ನ್ಯೂಸ್:  ‘ಭಜರಂಗಿ ಗೋ ಕಳ್ಳರು’ ಹೆಸರಿನಲ್ಲಿ ವಾಟ್ಸ್‌ ಆ್ಯಪ್ ಗ್ರೂಪ್‌ ರಚಿಸಿ ಅದರಲ್ಲಿ, ಹಿಂದೂ ದೇವತೆಗಳನ್ನು ಮತ್ತು ರಾಜಕೀಯ ನಾಯಕರನ್ನು ಅಶ್ಲೀಲವಾಗಿ ಬಿಂಬಿಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಡಿಯ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿರುವ ಹೈಕೋರ್ಟ್‌, ‘ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲವನ್ನೂ ಸಹಿಸಲಾಗುವುದಿಲ್ಲ’ ಎಂದು ಕಿಡಿ ಕಾರಿದೆ. ‘ನನ್ನ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಕುಪ್ಪೆಟ್ಟಿ ಕರಾಯ ಗ್ರಾಮದ ಸಿರಾಜುದ್ದೀನ್‌ ಬಿನ್‌ ಮೊಹಮದ್‌ ಇಸ್ಮಾಯಿಲ್‌ (30)

ವಾಕ್ ಸ್ವಾತಂತ್ರ್ಯದ ಹೆಸರಲ್ಲಿ ಎಲ್ಲವನ್ನೂ ಸಹಿಸಲಾಗದು – ಹೈಕೋರ್ಟ್| ಬೆಳ್ತಂಗಡಿಯ ‘ಭಜರಂಗಿ ಗೋಕಳ್ಳರು’ ವಾಟ್ಸಾಪ್ ಗ್ರೂಪ್ ನ ಅಡ್ಮಿನ್ ವಿರುದ್ಧ ಕಿಡಿ Read More »

ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ಬ್ರೇಕ್| ಸಾರಿಗೆ ಸಚಿವರಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸರ್ಕಾರಿ ಬಸ್​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಪ್ರತಿಯೊಂದು ಸರ್ಕಾರಿ ಬಸ್​​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಈ ಬಗ್ಗೆ ಕನ್ನಡ ಸಂಘಟನೆಗಳು ಸೇರಿದಂತೆ ಜನರು ಕೂಡ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಬಸ್​ಗಳ ಮೇಲಿನ ಜಾಹೀರಾತು ತೆಗೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ನಾಲ್ಕು ನಿಗಮಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದಾಯ

ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ಬ್ರೇಕ್| ಸಾರಿಗೆ ಸಚಿವರಿಂದ ಮಹತ್ವದ ಆದೇಶ Read More »

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಮೋಟಾರು ವಾಹನ ಕಾಯ್ದೆಯಲ್ಲಿ ಬೈಕ್ ಅನ್ನು ಸಾರಿಗೆ ವಾಹನ ಎಂದು ಪರಿಗಣಿಸದಿರುವ ಕಾರಣ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ವಾದ ಮಂಡಿಸಿತ್ತು. ಇದೀಗ ಹೈಕೋರ್ಟ್ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ Read More »

ಸಿವಿಲ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಸಾಮಾನ್ಯ ವರ್ಗದ ವಯೋಮಿತಿಯನ್ನು 40 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದುವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇತ್ತು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ

ಸಿವಿಲ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪ್ರಕರಣ ಇನ್ನು ತಾರ್ಕಿಕ ಅಂತ್ಯ ಕಂಡಿಲ್ಲ. ಇದೀಗ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ Read More »

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ

ಸಮಗ್ರ ನ್ಯೂಸ್: ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು, ಮಂಗಳವಾರ ಪ್ರತಿ 1 ಕೆಜಿ ಬೆಳ್ಳಿ ಬೆಲೆ ದಾಖಲೆಯ 3.20 ಲಕ್ಷ ರು.ಗೆ ತಲುಪಿದೆ. ದೆಹಲಿಯಲ್ಲಿ ಬೆಳ್ಳಿ ಬೆಲೆ ಒಂದೇ ದಿನ 20400 ರು. ಏರಿಕೆ ಕಂಡು 3.23 ಲಕ್ಷ ರು.ಗೆ ತಲುಪಿದೆ. ಬೆಂಗಳೂರಿನಲ್ಲಿ ಕೂಡಾ ಬೆಲೆ 15000 ರು. ಏರಿಕೆ ಕಂಡು 3.20 ಲಕ್ಷ ರು. ತಲುಪಿದೆ. ಮತ್ತೊಂದೆಡೆ ದೆಹಲಿಯಲ್ಲಿ 99.9 ಶುದ್ಧತೆಯ ಚಿನ್ನ 5100 ರು. ಏರಿಕೆ ಕಂಡು 10 ಗ್ರಾಂಗೆ 1,53,200 ರು.ಗೆ

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ Read More »