ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಅವಮಾನ| ವಿಧಾನಸೌಧದಿಂದ ಫೋಟೋ ಹೊರಹಾಕಿದ ಕಾಂಗ್ರೆಸ್
ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಅವರ ವಿಧಾನಸೌಧದೊಳಗಿದ್ದ ಫೋಟೋಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಗೆ ಹಾಕಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಶಾಸಕರು, ಸಚಿವರು ಹಾಗೂ ಮುಖ್ಯಮಂತ್ರಿಗಳು ತಮ್ಮ ಅಧಿಕಾರವನ್ನು ಆರಂಭಿಸಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಎಲ್ಲ ಸಚಿವರಿಗೂ ಕೊಠಡಿಗಳನ್ನು ಕೊಡಲಾಗಿದ್ದು, ಹಳೆಯ ಕೊಠಡಿಯನ್ನು ಸ್ವಚ್ಛಗೊಳಿಸಿ ಸುಣ್ಣ, ಬಣ್ಣ ಬಳಿಸಿ ತಮಗೆ ಬೇಕಾದಂತೆ ಆಲ್ಟ್ರೇಷನ್










