ರಾಜ್ಯ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇದೇ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ; ಸಿಡಿಲಿಗೆ ಇಬ್ಬರು ಬಲಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ‌ಮುಂಗಾರು ಪೂರ್ವ ಮಳೆ ಆರ್ಭಟ‌ ಮುಂದುವರೆದಿದ್ದು ಮಡಿಕೇರಿ, ಮೈಸೂರು, ಹಾಸನ, ಕೊಪ್ಪಳ, ಬೆಳಗಾವಿ, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಹಲವೆಡೆ ಮಂಗಳವಾರವೂ ಧಾರಾಕಾರ ಮಳೆಯಾಗಿದೆ. ರಾಜ್ಯದಲ್ಲಿ ಸಿಡಿಲಿಗೆ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಹಲವೆಡೆ ಜಾನುವಾರುಗಳೂ ಸಾವನ್ನಪ್ಪಿವೆ. ಮಳೆ‌ ಅವಾಂತರಕ್ಕೆ ಕೃಷಿ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕಕಮರಿಯ ಗ್ರಾಮದ ಅಮೂಲ್‌ ಜೈಸಿಂಗ್‌ (24) ಹಾಗೂ ದೇಸರಹಟ್ಟಿಯ ವಿಠ್ಠಾಬಾಯಿ ಕಮಕಾರ (50) ಸಿಡಿಲು ಬಡಿದು

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ; ಸಿಡಿಲಿಗೆ ಇಬ್ಬರು ಬಲಿ Read More »

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು. ಏತನ್ಮಧ್ಯೆ, ಕ್ರೀಡೆಯ ಅಂತರಾಷ್ಟ್ರೀಯ

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ Read More »

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು”

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರಲಿದ್ದು, ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈಗಾಗಲೇ ಶಾಲೆ ಪ್ರಾರಂಭೋತ್ಸವಕ್ಕೆ ಎಲ್ಲಾ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರ ಮತ್ತು ಮಂಗಳವಾರ ಶಾಲೆಯ ಕೊಠಡಿ, ಶೌಚಾಲಯ, ಕಾಂಪೌಂಡ್, ಆವರಣ ಎಲ್ಲವನ್ನು ಹಿರಿಯ ವಿದ್ಯಾರ್ಥಿಗಳು

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು” Read More »

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ

ಸಮಗ್ರ ನ್ಯೂಸ್: ರಾಜಕೀಯ ಕೆಸರೆರಚಾಟಗಳನ್ನು ಬದಿಗೊತ್ತಿದ ಸುಮಲತಾ ಅಂಬರೀಷ್ ಅವರು, ಮುಖ್ಯಮಂತ್ರಿ ಸಿದ್ದರಾಯ್ಯ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಪುತ್ರ ಅಭಿಷೇಕ್ ಅಂಬರೀಷ್ ಮದುವೆಗೆ ಆಹ್ವಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ನೀಡಿದ ಫೋಟೋಗಳನ್ನ ಸ್ವತಃ ಸುಮಲತಾ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಭಿಷೇಕ್ ಅಂಬರೀಶ್ ಅವರ ವಿವಾಹ ಮಾಡೆಲ್ ಅವಿವಾ ಬಿದ್ದಪ್ ಜೊತೆಗೆ ಫಿಕ್ಸ್ ಆಗಿದ್ದು, ಜೂನ್ 5ರಂದು ಅದ್ದೂರಿಯಾಗಿ ವಿವಾಹ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ

ರಾಜಕಾರಣ ಬದಿಗೊತ್ತಿ ಸಿಎಂ ಭೇಟಿ ಮಾಡಿ ಮಗನ ಮದುವೆ ಆಮಂತ್ರಣ ನೀಡಿದ ಸುಮಲತಾ Read More »

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್.. ಮೊಬೈಲ್ ಅಂಗಡಿ ಉದ್ಯೋಗಿಗೆ ಹಲ್ಲೆ!

ಸಮಗ್ರನ್ಯೂಸ್: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ(19ವ)ರವರು ನೀಡಿದ ದೂರಿನಂತೆ ಉಮೇಶ್ ಕುಲಾಲ್, ರಂಜಿತ್ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S)

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್.. ಮೊಬೈಲ್ ಅಂಗಡಿ ಉದ್ಯೋಗಿಗೆ ಹಲ್ಲೆ! Read More »

ಚಿಕ್ಕಮಗಳೂರು: ಸಾವಿರಾರು ಹಾವುಗಳನ್ನು ಸೆರೆ ಹಿಡಿದಿದ್ದ ಉರಗ ತಜ್ಞ ಸಾವು|ಚೀಲದ ತುಂಬೆಲ್ಲಾ ಹಾವೋ… ಹಾವು…

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ “ಸ್ನೇಕ್ ನರೇಶ್” ಎಂದೇ ಖ್ಯಾತಿ ಪಡೆದಿದ್ದ ಉರಗ ತಜ್ಞ ನರೇಶ್(51) ಸೆರೆ ಹಿಡಿದಿದ್ದ ಹಾವಿನಿಂದಲೇ ಜೀವಾಂತ್ಯ ಕಂಡಿದ್ದಾರೆ. ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ನರೇಶ್ ಮಧ್ಯಾಹ್ನ ಮತ್ತೊಂದು ಹಾವು ಹಿಡಿಯಲು ಕರೆ ಬಂತೆಂದು ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ್ದರು. ಈ ಸಂದರ್ಭದಲ್ಲಿ ಡಿಕ್ಕಿ ಓಪನ್ ಆದ ಕೂಡಲೇ ನಾಗರಹಾವು ಕಚ್ವಿರುವುದಾಗಿ ತಿಳಿದುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತರಲಾದರು ದಾರಿ ಮಧ್ಯದಲ್ಲೇ ಸಾವನ್ನಪ್ಪಿದರು. ಇನ್ನು ಇವರು

ಚಿಕ್ಕಮಗಳೂರು: ಸಾವಿರಾರು ಹಾವುಗಳನ್ನು ಸೆರೆ ಹಿಡಿದಿದ್ದ ಉರಗ ತಜ್ಞ ಸಾವು|ಚೀಲದ ತುಂಬೆಲ್ಲಾ ಹಾವೋ… ಹಾವು… Read More »

ಕರಾವಳಿಯಲ್ಲಿ ಖಾಸಗಿ ಬಸ್ ಗಳಿಗೂ ಉಚಿತ ಪ್ರಯಾಣ ಸೌಲಭ್ಯ ವಿಸ್ತರಿಸಿ – ಶಾಸಕ ಸುನಿಲ್ ಕುಮಾರ್

ಸರ್ಕಾರಿ ಬಸ್‌ ಗಳೊಂದಿಗೆ ಖಾಸಗಿ ಬಸ್‌ ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸುನಿಲ್ ಕುಮಾರ್ ಟ್ವೀಟ್‌ನಲ್ಲಿ ಬರೆದುಕೊಂಡಿದ್ದು, ಉಡುಪಿ,

ಕರಾವಳಿಯಲ್ಲಿ ಖಾಸಗಿ ಬಸ್ ಗಳಿಗೂ ಉಚಿತ ಪ್ರಯಾಣ ಸೌಲಭ್ಯ ವಿಸ್ತರಿಸಿ – ಶಾಸಕ ಸುನಿಲ್ ಕುಮಾರ್ Read More »

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!?

ಸಮಗ್ರ ನ್ಯೂಸ್: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು. ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ

‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!? Read More »

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು ಒಂದೇ

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ Read More »