ರಾಜ್ಯ

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ ಕುಮಾರ್‌ ಎಂಬವರ ನಡುವೆ ಕೌಟುಂಬಿಕ

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ Read More »

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್

ಸಮಗ್ರ ನ್ಯೂಸ್: ದಿವಾಕರ್ ದಾಸ್ ನೇರ್ಲಾಜೆ ನಿರ್ಮಾಣದ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ ಬೇರ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರು ಬಿಡುಗಡೆಗೊಳಿಸಿದ್ದು ಈಗಾಗಲೇ ಹತ್ತು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಭಾರೀ ವೈರಲ್ ಆಗ್ತಾ ಇದೆ. ಇದೀಗ ಬೇರ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿ ಶುಭ

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್ Read More »

ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ| ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಹಾಗೂ ಬಿಪಿಎಲ್, ಎಪಿಎಲ್ ಸೇರಿದಂತೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ನಾಳೆ ಸಿಎಂ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಖಚಿತ ಎಂದು ತಿಳಿಸಿದ್ದಾರೆ. ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ

ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ| ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ Read More »

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ

ಸಮಗ್ರ ನ್ಯೂಸ್: ಸುಮಾರು ಒಂದು ತಿಂಗಳ ಹಿಂದೆ ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ನಾಲ್ಕು ಮಕ್ಕಳ ಶವ ದೊರೆತಿರಲಿಲ್ಲ. ಅವರ ಜತೆ 11 ತಿಂಗಳ ಮಗು ಕೂಡ ಇತ್ತು ಎನ್ನಲಾಗಿದೆ. ಅರ್ಧ ತಿಂದಿರುವ ಹಣ್ಣು, ಮಗುವಿನ ಡೈಪರ್, ಒಂದು ಜತೆ ಶೂ ಪತ್ತೆಯಾಗಿದೆ. ಹಾಗಾಗಿ ಒಂದು ತಿಂಗಳಾದರೂ ಮಕ್ಕಳು ಬದುಕಿರಬಹುದು ಎನ್ನುವ ಭರವಸೆ ಒಂದೆಡೆ ಇದೆ. ಒಂದೊಮ್ಮೆ ಮೃತಪಟ್ಟಿದ್ದರೆ ಶ್ವಾನಗಳು ಅವರನ್ನು ಪತ್ತೆಹಚ್ಚುತ್ತವೆ. ಮೇ 1 ರಂದು ಕೊಲಂಬಿಯಾದ ಆಗ್ನೇಯದಲ್ಲಿ

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ Read More »

ಬಳಕೆದಾರರೇ ಗಮನಿಸಿ| ಗ್ಯಾರಂಟಿ ನಂಬಿ ಬಿಲ್ ಕಟ್ಟದಿದ್ರೆ ಕನೆಕ್ಷನ್ ಕಟ್ ಆಗುತ್ತೆ!!

ಸಮಗ್ರ ನ್ಯೂಸ್: ಕರೆಂಟ್ ಬಿಲ್ ಕಟ್ಟದ ಜನತೆಗೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ಎಲ್ಲಾ ಎಸ್ಕಾಂಗಳಿಗೆ ಖಡಕ್ ಸೂಚನೆ ನೀಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಇನ್ನೂ ಜಾರಿಯಾಗಿಲ್ಲ. ಆದರೆ ಜನರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ. ಜನರು ಬಾಕಿ ಇರುವ,

ಬಳಕೆದಾರರೇ ಗಮನಿಸಿ| ಗ್ಯಾರಂಟಿ ನಂಬಿ ಬಿಲ್ ಕಟ್ಟದಿದ್ರೆ ಕನೆಕ್ಷನ್ ಕಟ್ ಆಗುತ್ತೆ!! Read More »

ರಾಜ್ಯದಲ್ಲಿ ಪೂರ್ವಮುಂಗಾರು ಅಬ್ಬರ; ಸಿಡಿಲಿಗೆ ನಾಲ್ವರು ಬಲಿ| ಮುಂದಿನ ಮೂರು ದಿನ ಭಾರೀ‌ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ.

ರಾಜ್ಯದಲ್ಲಿ ಪೂರ್ವಮುಂಗಾರು ಅಬ್ಬರ; ಸಿಡಿಲಿಗೆ ನಾಲ್ವರು ಬಲಿ| ಮುಂದಿನ ಮೂರು ದಿನ ಭಾರೀ‌ ಮಳೆ‌ ಸಾಧ್ಯತೆ Read More »

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ| ಕಳೆದ‌ 24 ಗಂಟೆಗಳಲ್ಲಿ 10 ಮಂದಿ ಬಲಿ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಮತ್ತೆ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಕಳೆದ 24 ಗಂಟೆಗಳಲ್ಲಿ ಕನಿಷ್ಠ 10 ಮಂದಿ ಬಲಿಯಾಗಿದ್ದಾರೆ. ಹಿಂಸಾಚಾರದ ಬೆನ್ನಲ್ಲೇ ಸೇನಾ ತುಕಡಿಗಳ ಮೇಲೆ ಪದೇ ಪದೇ ದಾಳಿ ನಡೆಯುತ್ತಿರುವ ಜಿಲ್ಲೆಗಳಲ್ಲಿ ಗುಂಡು ನಿರೋಧಕ ವಾಹನಗಳಲ್ಲಿ ಸೇನೆ, ಕ್ಷೇತ್ರ ಪ್ರಾಬಲ್ಯ ಕಾರ್ಯಾಚರಣೇ ನಡೆಸಿದೆ. ಮೇ 3 ರಿಂದ ನಡೆಯುತ್ತಿರುವ ಹಿಂಸಾಕೃತ್ಯಗಳ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಭೇಟಿಯ ಮುನ್ನಾದಿನ ಮೀಟಿ ಜನಾಂಗಕ್ಕೆ ಸೇರಿದ ವ್ಯಕ್ತಿಯೊಬ್ಬರು ಇಂಫಾಲ ಪೂರ್ವ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ| ಕಳೆದ‌ 24 ಗಂಟೆಗಳಲ್ಲಿ 10 ಮಂದಿ ಬಲಿ Read More »

ಸಿದ್ದಾಪುರ: ಕೋಳಿ ಗೂಡಿನೊಳಗೆ ನುಗ್ಗಿದ್ದ ನಾಗರಹಾವು ಸೆರೆ

ಸಮಗ್ರ ನ್ಯೂಸ್: ಕೋಳಿಗೂಡಿನೊಳಗೆ ನುಗ್ಗಿದ್ದ ನಾಗರಹಾವನ್ನು ಸೆರೆಹಿಡಿದು ರಕ್ಷಿಸಿದ ಘಟನೆ ಸಿದ್ದಾಪುರ ಗ್ರಾಮದ ಬೀಟಿಕಾಡು ಎಸ್ಟೇಟ್ ನಲ್ಲಿ ನಡೆದಿದೆ. ಇಲ್ಲಿನ ಶರತ್ ಕುಮಾರ್ ಅವರ ಮನೆಯ ಕೋಳಿ ಗೂಡಿನೊಳಗೆ ಹಾವು ಇರುವುದು ಕಂಡು ಬಂದಿದ್ದು, ತಕ್ಷಣ ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿಯವರಿಗೆ ಮಾಹಿತಿ ನೀಡಲಾಯಿತು. ಸುರೇಶ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಕೋಳಿಗೂಡಿನ ಒಳಗೆ ಬೃಹತ್ ಗಾತ್ರದ ನಾಗರಹಾವು ನಾಲ್ಕು ಮೊಟ್ಟೆಯನ್ನು ನುಂಗಿ ಮಲಗಿರುವ ದೃಶ್ಯ ಕಂಡುಬಂದಿದ್ದು ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಹಾವನ್ನು ಹಿಡಿಯಲಾಯಿತು.

ಸಿದ್ದಾಪುರ: ಕೋಳಿ ಗೂಡಿನೊಳಗೆ ನುಗ್ಗಿದ್ದ ನಾಗರಹಾವು ಸೆರೆ Read More »

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮೇಜರ್ ಸರ್ಜರಿ| ಮೂರು ಲಕ್ಷಕ್ಕೂ ಅಧಿಕ ಅನರ್ಹ ಪಡಿತರ ಕಾರ್ಡ್ ಗಳು ರದ್ದು

ಸಮಗ್ರ ನ್ಯೂಸ್: ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, ಮೂರು ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಆಹಾರ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯಾದ್ಯಂತ 3,30,002 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 ಬಿಪಿಎಲ್ ಕಾರ್ಡ್ ಗಳಿವೆ. ಕೆಲ ಕಾರ್ಡ್ ಗಳನ್ನು ಎಪಿಎಲ್ ಗೂ ಪರಿವರ್ತಿಸಲಾಗಿದೆ. ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735,

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮೇಜರ್ ಸರ್ಜರಿ| ಮೂರು ಲಕ್ಷಕ್ಕೂ ಅಧಿಕ ಅನರ್ಹ ಪಡಿತರ ಕಾರ್ಡ್ ಗಳು ರದ್ದು Read More »

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ ಕಾರಿಡಾರ್ ಭಾನುವಾರ ಮಧ್ಯಾಹ್ನ ಬೀಸಿದ ಬಿರುಗಾಳಿಯಿಂದ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿಯಾಗಿದೆ. ಏಳು ಪ್ರತಿಮೆಗಳಲ್ಲಿ ಆರು ಸ್ಥಳಾಂತರಗೊಂಡಿವೆ ಮತ್ತು ಎರಡು ಹಾನಿಗೊಳಗಾಗಿವೆ. ಇದರ ಜೊತೆಗೆ ಬಿರುಗಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಬಿರುಗಾಳಿಯಿಂದ ಪ್ರತಿಮೆಗಳಲ್ಲಿ ಕೆಲವು ನೆಲಕ್ಕೆ ಉರುಳಿದ್ದರಿಂದ ಕೈಗಳು ಮತ್ತು ತಲೆಗಳು ಮುರಿದಿವೆ. 2022 ರ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಮಹಾಕಾಲ್ ಲೋಕ ದೇವಾಲಯದ ಕಾರಿಡಾರ್‌ನಲ್ಲಿ ಘಟನೆ ಸಂಭವಿಸಿದೆ. ದೇವಾಲಯದ ಕಾರಿಡಾರ್‌ನಲ್ಲಿ ಆರು ಪ್ರತಿಮೆಗಳನ್ನು

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು Read More »