ರಾಜ್ಯ

ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ!

ಸಮಗ್ರ ನ್ಯೂಸ್: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗದ ಶಿವಪ್ಪ ನಾಯಕ ಸಿಟಿ ಸೆಂಟರ್ ಮಾಲ್ ಪಕ್ಕದ ಕಟ್ಟಡದಲ್ಲಿ ನಗರ ಕ್ಷೇತ್ರದ ಶಾಸಕರ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಿತು.‌‌ ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ.

ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ! Read More »

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಹಾಗಾದರೆ, ಯಾರಿಗೆ ಯಾವ ಖಾತೆ ನೀಡಲಾಗಿದೆ? . ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ…ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ,ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ,

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ Read More »

‘ತಾತನಿಗೆ ಮಿನಿಸ್ಟರ್ ಪೋಸ್ಟ್ ಕೊಡಿ’ | ಟಿ.ಬಿ ಜಯಚಂದ್ರ ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ

ಸಮಗ್ರ ನ್ಯೂಸ್: ಶಿರಾ ಶಾಸಕ ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಬೇಸರಗೊಂಡ ಮೊಮ್ಮಗಳು ರಾಹುಲ್‌ ಗಾಂಧಿಗೆ ಪತ್ರ ಬರೆದಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಆರನಾ, ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ. ಅವರು ಹಾರ್ಡ್ ವರ್ಕ್ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿ. ಜನರಿಗೆ ತುಂಬಾ ಪ್ರೀತಿ‌ ಕೊಟ್ಟು,ಸಹಾಯ ಮಾಡ್ತಾರೆ ಎಂದು ಟಿ.ಬಿ. ಜಯಚಂದ್ರ ಮೊಮ್ಮಗಳಾದ ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಲಾಗಿದೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ

‘ತಾತನಿಗೆ ಮಿನಿಸ್ಟರ್ ಪೋಸ್ಟ್ ಕೊಡಿ’ | ಟಿ.ಬಿ ಜಯಚಂದ್ರ ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ Read More »

ಲಾರಿಗೆ ಡಿಕ್ಕಿ ಹೊಡೆದ ಕಾರು| 6 ಜನ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕಲಕೇರಿ ಬಳಿ ಇಂದು(ಮೇ.28) ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಪ್ಪ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಹಾಗೂ ರಶ್ಮಿಕಾ ಅಂತ ಗುರುತಿಸಲಾಗಿದೆ. ವಿಜಯಪುರಿಂದ ಬೆಂಗಳೂರಿಗೆ ಇಂಡಿಕಾ ಕಾರಿನಲ್ಲಿ ಹೋಗುವಾಗ ಕುಷ್ಟಗಿ ಹೆದ್ದಾರಿಯಲ್ಲಿ ಕಾರಿನ ಟೈರ್‌ ಸ್ಪೋಟಗೊಂಡಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಲಾರಿಗೆ ಡಿಕ್ಕಿ ಹೊಡೆದ ಕಾರು| 6 ಜನ ಸ್ಥಳದಲ್ಲೇ ದುರ್ಮರಣ Read More »

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’

ಸಮಗ್ರ ನ್ಯೂಸ್: ರಾಷ್ಟ್ರರಾಜಧಾನಿಯಲ್ಲಿ ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನಿಸಿದರೆ, ಮತ್ತೊಂದೆಡೆ ಜಂತರ್‌-ಮಂತರ್‌ನಲ್ಲಿ ಒಂದು ರೀತಿಯಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ದೇಶಕ್ಕೆ ಪದಕ ಜಯಿಸಿದ ಭಜರಂಗ್ ಫೂನಿಯಾ, ವಿನೇಶ್ ಫೋಗಾಟ್, ಸಾಕ್ಷಿ ಮಲಿಕ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಜನತಾ ಪಕ್ಷ(ಬಿಜೆಪಿ) ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರ ಮೇಲೆ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಕೂಡಲೇ

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’ Read More »

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ|

ಇಂದು(ಮೇ.28) ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಚಿವರು, ಧಾರ್ಮಿಕ ಮುಖಂಡರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ನೂತನ ಸಂಸತ್ ಕಟ್ಟಡ ಉದ್ಘಾಟನಾ ಸಮಾರಂಭವು ಮುಂಜಾನೆ ಹವನ ಮತ್ತು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಔಪಚಾರಿಕ ಉದ್ಘಾಟನೆ ಕಾರ್ಯ ನಿರ್ವಹಿಸಲಿದ್ದಾರೆ. ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 2020 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದರು. ಉದ್ಘಾಟನೆಯ ಉದ್ಘಾಟನಾ

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ| Read More »

ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಆಗಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150 ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸರ್ಕಾರಿ

ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ Read More »

“ಕಟೀಲ್ ರಾಜೀನಾಮೆ ಕೊಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಉದ್ಯೋಗ ಕೊಡುತ್ತೇನೆ”-ಪ್ರತಿಭಾ ಕುಳಾಯಿ ಸವಾಲು

ಸಮಗ್ರ ನ್ಯೂಸ್: “ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರ್ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದವರು. ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ, ಆದರೆ ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ. ಬಿಜೆಪಿ ಸರಕಾರ ಇದ್ದಾಗ ಮುಖ್ಯಮಂತ್ರಿಯವರಿಗೆ, ಎಂಪಿ ನಳಿನ್ ಕುಮಾರ್ ಕಟೀಲ್ ಗೆ ನೆಟ್ಟಾರ್ ಪತ್ನಿಯನ್ನು ಕೇಂದ್ರ ಅಥವಾ ರಾಜ್ಯ ಸ್ವಾಮ್ಯದ ಕಂಪೆನಿಗಳಲ್ಲಿ ಕೆಲಸಕ್ಕೆ ಸೇರಿಸಬಹುದಿತ್ತು ಅಥವಾ ಸರಕಾರದಿಂದ ಶಾಶ್ವತ ಉದ್ಯೋಗ

“ಕಟೀಲ್ ರಾಜೀನಾಮೆ ಕೊಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಉದ್ಯೋಗ ಕೊಡುತ್ತೇನೆ”-ಪ್ರತಿಭಾ ಕುಳಾಯಿ ಸವಾಲು Read More »

ಹಾಸನ: ಸಬ್‌ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳಿಂದ ಬೆಂಕಿ

ಲಕ್ಷಾಂತರ ಮೌಲ್ಯದ ವಸ್ತುಗಳು ನಷ್ಟ ಸಮಗ್ರ ನ್ಯೂಸ್: ಸಬ್‌ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ಸಂಧರ್ಭದಲ್ಲಿ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಶೋಭಾ ಅವರು ರಜೆ ಮುಗಿಸಿ

ಹಾಸನ: ಸಬ್‌ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳಿಂದ ಬೆಂಕಿ Read More »

ನೂತನ‌ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಖಾತೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಗೃಹ ಖಾತೆಯನ್ನು ಡಾ. ಜಿ ಪರಮೇಶ್ವರ್ ಅವರಿಗೆ ನೀಡಲಾಗಿದೆ. ಸಚಿವರಿಗೆ ನೀಡಲಾಗಿರುವ ಖಾತೆಗಳ ವಿವರ ಹೀಗಿದೆ.

ನೂತನ‌ ಸಚಿವರಿಗೆ ಖಾತೆ ಹಂಚಿಕೆ| ಯಾರಿಗೆ ಯಾವ ಖಾತೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »