ರಾಜ್ಯ

‘ಕನ್ನಡಿಗರ ಏಟಿಗೆ ಬಿಜೆಪಿ ಚಿಕಿತ್ಸೆ ಪಡೆಯುವುದು ಒಳಿತು’ | ‘ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಬಿಜೆಪಿಯಲ್ಲಿಲ್ಲ’| ಕಮಲ ಪಾಳಯವನ್ನು ಕಿಂಡಲ್ ಮಾಡಿದ ‘ಕೈ’ ಟ್ವೀಟ್

ಸಮಗ್ರ ನ್ಯೂಸ್: ”ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ಏಟಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ”ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ಬಿಜೆಪಿಯವರೇ?

‘ಕನ್ನಡಿಗರ ಏಟಿಗೆ ಬಿಜೆಪಿ ಚಿಕಿತ್ಸೆ ಪಡೆಯುವುದು ಒಳಿತು’ | ‘ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಬಿಜೆಪಿಯಲ್ಲಿಲ್ಲ’| ಕಮಲ ಪಾಳಯವನ್ನು ಕಿಂಡಲ್ ಮಾಡಿದ ‘ಕೈ’ ಟ್ವೀಟ್ Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ| ಶನಿವಾರ(ಮೇ.27) 24 ಮಂದಿ ನೂತನ ಸಚಿವರಾಗಿ ಪದಗ್ರಹಣ

ಸಮಗ್ರ ನ್ಯೂಸ್: ಬೆಂಗಳೂರು ಶನಿವಾರ (ಮೇ.27) ಬೆಳಗ್ಗೆ 11.45ಕ್ಕೆ ನೂತನ 24 ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ. ಸರ್ಕಾರದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಸಂಪುಟ ವಿಸ್ತರಣೆಗೆ ಶನಿವಾರ ಮುಹೂರ್ತ ಫಿಕ್ಸ್ ಆಗಿದೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸಮಾಲೋಚನೆಯ ಬಳಿಕ ಸಂಪುಟಕ್ಕೆ 24 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಶನಿವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ನೂತನ ಸಚಿವರು ಯಾರು?ಈಶ್ವರ ಖಂಡ್ರೆ, ಲಕ್ಷ್ಮೀ

ರಾಜ್ಯ ಸಚಿವ ಸಂಪುಟ ವಿಸ್ತರಣೆ| ಶನಿವಾರ(ಮೇ.27) 24 ಮಂದಿ ನೂತನ ಸಚಿವರಾಗಿ ಪದಗ್ರಹಣ Read More »

ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು| ವ್ಯಕ್ತಿಯ ಪತ್ತೆಗೆ ಕೋರಿಕೆ

ಸಮಗ್ರ ನ್ಯೂಸ್: ಇಲ್ಲಿನ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆ ಬಸ್ ನಿಲ್ದಾಣದ ಸಮೀಪ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯನ್ನು ಮೇ.10 ರಂದು ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಒಳರೋಗಿಯಾಗಿ ದಾಖಲಿಸಲಾಗಿದ್ದು ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಸುಮಾರು 70 ರಿಂದ 75 ವರ್ಷದವವರಾಗಿದ್ದು ಎತ್ತರ 6.2 ಅಡಿ, ಸಾಧರಣ ಮೈಕಟ್ಟು, ಕೋಲು ಮುಖ, ಗೋಧಿ ಮೈ ಬಣ್ಣ ಹೊಂದಿದ್ದು, ನೀಲಿ ಬಣ್ಣದ ಅರ್ಧ ತುಂಡರಿಸಿದ ಪ್ಯಾಂಟ್ ಧರಿಸಿದ್ದಾರೆ.

ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು| ವ್ಯಕ್ತಿಯ ಪತ್ತೆಗೆ ಕೋರಿಕೆ Read More »

ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ

ಸಮಗ್ರ ನ್ಯೂಸ್: ಇಲ್ಲಿನ ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂನ್ 7ರೊಳಗೆ ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಈ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಂಸ್ಥೆಯಲ್ಲಿ ನಿಗದಿತ ಪ್ರಮಾಣದಲ್ಲಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೆ ಇದ್ದಲ್ಲಿ ಪುರುಷ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಲು ಅಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2216360, 9880119147

ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ Read More »

ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: 2022-23ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಗೆ ಕರ್ನಾಟಕ ಸರ್ಕಾರದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖಾ ವತಿಯಿಂದ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗಳನ್ನು ಗುರುತಿಸಲು ಅರ್ಜಿ, ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳನ್ನು ಮಲೆನಾಡು ಮತ್ತು ಕರಾವಳಿ ವಲಯ, ದಕ್ಷಿಣ ವಲಯ ಮತ್ತು ಉತ್ತರ ವಲಯಗಳಲ್ಲಿ ತಲಾ ಒಬ್ಬರು ವ್ಯಕ್ತಿ ಮತ್ತು ಒಂದು ಸಂಸ್ಥೆಗೆ ನೀಡಲಾಗುವುದು. ವ್ಯಕ್ತಿ/ಸಂಸ್ಥೆಯ ಹೆಸರು ವ್ಯವಹರಿಸಬೇಕಾದ ವಿಳಾಸ, ನಿರ್ವಹಿಸಲಾದ ಕಾರ್ಯ ಕುರಿತಾಗಿ

ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಪಿಲಿಕುಳ ಮೇ. 29ರಂದು ವೀಕ್ಷಣೆಗೆ ಲಭ್ಯ

ಸಮಗ್ರ ನ್ಯೂಸ್: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದರಿಂದ ಮೇ.29ರ ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳನ್ನು ತೆರೆಯಲಾಗುವುದು. ಅಂದು ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮ (ಕುಶಲಕರ್ಮಿ ಗ್ರಾಮ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ ಮೇ. 29ರಂದು ವೀಕ್ಷಣೆಗೆ ಲಭ್ಯ Read More »

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕ್ತಿದೀರಾ? ಹಾಗಾದ್ರೆ ಜೋಕೆ…

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕುವವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ. “ಸಾರ್ವಜನಿಕರ ಗಮನಕ್ಕೆ ಸುಳ್ಯ ಪೊಲೀಸ್ ಠಾಣಾ ಪ್ರಕಟಣೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ , ಇನ್ಸ್ಟಾಗ್ರಾಮ್, ಟ್ವಿಟ್ಟರ್ ಮುಂತಾದವುಗಳಲ್ಲಿ ಇತರರ ಬಗ್ಗೆ ಅವಹೇಳನಕಾರಿ ಭಾವಚಿತ್ರ ವಿಡಿಯೋ ಮುಂತಾದ ಪೋಸ್ಟ್ ಗಳನ್ನು ಹಾಕಬಾರದು. ಯಾರಾದರೂ ಪೋಸ್ಟ್ ಮಾಡಿದ ಬಗ್ಗೆ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವುದು. ಹಾಗೂ ಈ ಬಗ್ಗೆ ಯಾವುದೇ ಅಹಿತಕರ ಘಟನೆಗೆ ಆಸ್ಪದ

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕ್ತಿದೀರಾ? ಹಾಗಾದ್ರೆ ಜೋಕೆ… Read More »

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ!

ಸಮಗ್ರ ನ್ಯೂಸ್: ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್ ಶ್ರೀ ಕೃಷ್ಣ ಭಜನಾ ಮಂದಿರ ಮುಂಭಾಗ ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ. ಶೆಟ್ಟಿಯವರಿಗೆ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ಯುವಮೋರ್ಚಾ ಮುಖಂಡ ಭರತ್ ರಾಜ್ ಕೃಷ್ಣಾಪುರ ಅವರ ಭಾವಚಿತ್ರಕ್ಕೆ ಚೂರಿಯಿಂದ ಹಾನಿ ಮಾಡಲಾದ ಘಟನೆ ಇಂದು ಬೆಳಕಿಗೆ ಬಂದಿದೆ. ಭರತ್ ರಾಜ್ ಕೃಷ್ಣಾಪುರ ಬಿಜೆಪಿ ಯುವಮೋರ್ಚಾ ಮಂಗಳೂರು ಉತ್ತರ ಮಂಡಲದ ಅಧ್ಯಕ್ಷರಾಗಿದ್ದು ಕೆಲವು ತಿಂಗಳ ಹಿಂದೆ ಇದೇ ರೀತಿ ಬ್ಯಾನರ್ ನಲ್ಲಿದ್ದ ಅವರ

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ! Read More »

ಮಂಗಳೂರು: ಟೇಕಾಪ್ ಅಗ್ತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ| ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ವಿಮಾನ ಜಸ್ಟ್​ ಎಸ್ಕೇಪ್​​​ ಆಗಿದ್ದು, ಟೇಕಾಫ್​ ಮಾಡ್ತಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಭಾರೀ ಅವಘಡದಿಂದ ಇಂಡಿಗೋ ವಿಮಾನ ಪಾರಾಗಿದೆ. ಈ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಇಂಡಿಗೋ ವಿಮಾನ ಮಂಗಳೂರಿನಿಂದ ದುಬೈಗೆ ಹೊರಟಿತ್ತು, ವಿಮಾನ ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ದುಬೈಗೆ ಹೊರಟಿದ್ದು, ಇಂಡಿಗೋ ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದು, ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಬಡಿದಿದೆ. ಪೈಲಟ್ ತಕ್ಷಣ

ಮಂಗಳೂರು: ಟೇಕಾಪ್ ಅಗ್ತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ| ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ Read More »

ಮರಗಳನ್ನು ಕಡಿಯುವುದು ಮಹಾ ಪಾಪ:-ನಾರಾಯಣ ಆರ್

ಸಮಗ್ರ ನ್ಯೂಸ್: ‘ಮರಗಳನ್ನು ಕಡಿಯುವುದು ಮಹಾ ಪಾಪ ಕಾಡು ಮನುಷ್ಯನಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಾ ಬಂದಿದೆ ಕಾಡು ಮನುಷ್ಯನ ಮೂಲಭೂತ ಸೌಕರ್ಯಗಳನ್ನು ಪೂರೈಸಲು ಸಹಾಯಕವಾಗಿದೆ’ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ದೊಡ್ಡಬೈರನಕುಪ್ಪೆ ವಲಯದ ಉಪವಲಯ ಅಧಿಕಾರಿ ನಾರಾಯಣ ಆರ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ಸಂಶೋಧನಾ ಮತ್ತು ಅಧ್ಯಯನ ವಿಭಾಗದಿಂದ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದ ನಾಲ್ಕನೇ ದಿನದ ಮಾಹಿತಿ ಕಾರ್ಯಾಗಾರದಲ್ಲಿ ಮಂಗಳವಾರ ಮಾತನಾಡಿದರು. ಕಾಡು ಹಲವು ಜೀವಿಗಳಿಗೆ ವಾಸಸ್ಥಾನ.

ಮರಗಳನ್ನು ಕಡಿಯುವುದು ಮಹಾ ಪಾಪ:-ನಾರಾಯಣ ಆರ್ Read More »