ರಾಜ್ಯ

ಸೇನೆಯ ನೂತನ ಎಂಜಿಎಫ್ ಆಗು ಅಮರದೀಪ್ ಸಿಂಗ್ ಔಜ್ಲಾ ನೇಮಕ

ಸಮಗ್ರ ನ್ಯೂಸ್: ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅಮರ್‌ದೀಪ್ ಸಿಂಗ್ ಔಜ್ಲಾ ಅವರನ್ನು ಭಾರತೀಯ ಸೇನೆಯ ನೂತನ ಮಾಸ್ಟರ್ ಜನರಲ್ ಸಸ್ಟೆನೆನ್ಸ್ (MGS) ಆಗಿ ನೇಮಿಸಲಾಗಿದೆ. ಯುದ್ಧ ಮತ್ತು ಶಾಂತಿ ಸನ್ನಡತೆ ಕಾಪಾಡುವ ನಿಟ್ಟಿನಲ್ಲಿ ಈ ನೇಮಕಾತಿ ನಡೆದಿದೆ. ಎಲ್ಲಾ ಸಮಯದಲ್ಲೂ ವಾಹನಗಳು ಮತ್ತು ಮಳಿಗೆಗಳು ಸೇರಿದಂತೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸಲಕರಣೆಗಳ ಹೆಚ್ಚಿನ ಲಭ್ಯತೆಯನ್ನು ಖಾತ್ರಿಪಡಿಸುವ ಮೂಲಕ ಯುದ್ಧ ಮತ್ತು ಶಾಂತಿಯ ಸಮಯದಲ್ಲಿ ಭಾರತೀಯ ಸೇನೆಯನ್ನು ಬೆಂಬಲಿಸುವುದು MGS ನ ಪಾತ್ರವಾಗಿದೆ. ಲೆಫ್ಟಿನೆಂಟ್

ಸೇನೆಯ ನೂತನ ಎಂಜಿಎಫ್ ಆಗು ಅಮರದೀಪ್ ಸಿಂಗ್ ಔಜ್ಲಾ ನೇಮಕ Read More »

ಕರ್ನಾಟಕದ ನೂತನ ಡಿಜಿ ಐಜಿಪಿ ಆಗಿ ಡಾ. ಅಲೋಕ್ ಮೋಹನ್ ನೇಮಕ

ಸಮಗ್ರ ನ್ಯೂಸ್: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ. ಬಿಹಾರ ಮೂಲದ ಡಾ.ಅಲೋಕ್ ಮೋಹನ್ ಅವರು 1987 ರ ಬ್ಯಾಚ್ ನ ಹಿರಿಯ IPS ಅಧಿಕಾರಿಯಾಗಿದ್ದಾರೆ. ಅವರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಸದ್ಯ ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದಾರೆ.

ಕರ್ನಾಟಕದ ನೂತನ ಡಿಜಿ ಐಜಿಪಿ ಆಗಿ ಡಾ. ಅಲೋಕ್ ಮೋಹನ್ ನೇಮಕ Read More »

ಐದು ಗ್ಯಾರಂಟಿಗೆ ತಾತ್ವಿಕ ಅನುಮೋದನೆ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹೆಚ್ಚಿನ ವಿವರಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುವುದು. ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು. 200 ಯುನಿಟ್ ಗಳವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಉಚಿತವಾಗಿ ತಿಂಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ, ಮನೆಯ ಯಜಮಾನಿಗೆ ತಿಂಗಳಿಗೆ ₹ 2,000 ನೆರವು, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹

ಐದು ಗ್ಯಾರಂಟಿಗೆ ತಾತ್ವಿಕ ಅನುಮೋದನೆ – ಸಿಎಂ ಸಿದ್ದರಾಮಯ್ಯ Read More »

ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ| ಕಂಠೀರವ ಕ್ರೀಡಾಂಗಣದಿಂದ ನೇರಪ್ರಸಾರ

ಸಮಗ್ರ ನ್ಯೂಸ್: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ

ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ| ಕಂಠೀರವ ಕ್ರೀಡಾಂಗಣದಿಂದ ನೇರಪ್ರಸಾರ Read More »

ಚಲಿಸುತ್ತಿರುವ ಬಸ್ ನಲ್ಲಿ ಗರ್ಭಿಣಿ‌ಗೆ ಹೆರಿಗೆ ಮಾಡಿಸಿ ದೇವರಾದ ಮಹಿಳಾ ಕಂಡಕ್ಟರ್ ವಸಂತಮ್ಮ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಹಿಳಾ ಕಂಡಕ್ಟರ್ ಬೆಂಗಳೂರು-‌ಚಿಕ್ಕಮಗಳೂರು ಮಾರ್ಗದಲ್ಲಿ ಚಲಿಸುವ‌ ಬಸ್‌ನಲ್ಲಿ ಮಹಿಳಾ ಕಂಡೆಕ್ಟರ್ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದರು. ಸೋಮವಾರ (ಮೇ. 15) ಮಧ್ಯಾಹ್ನ 1.25ರ ಸುಮಾರಿಗೆ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಈ ಘಟನೆ ನಡೆದಿದೆ. ಮಹಿಳಾ ಕಂಡಕ್ಟರ್ ಎಸ್.ವಸಂತಮ್ಮ, ಚಾಲಕನಿಗೆ ಬಸ್ ನಿಲ್ಲಿಸುವಂತೆ ಹೇಳಿ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲು ಹೇಳಿದರು. ಸೋಮವಾರ ಮಹಿಳೆಗೆ ಹೆರಿಗೆಯಾಗಿದ್ದು, ತಾಯಿ(ಫಾತಿಮಾ) ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಷ್ಟೇ

ಚಲಿಸುತ್ತಿರುವ ಬಸ್ ನಲ್ಲಿ ಗರ್ಭಿಣಿ‌ಗೆ ಹೆರಿಗೆ ಮಾಡಿಸಿ ದೇವರಾದ ಮಹಿಳಾ ಕಂಡಕ್ಟರ್ ವಸಂತಮ್ಮ Read More »

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಆರೋಗ್ಯ ಸಚಿವರಾಗಿದ್ದ, ಪ್ರಭಾವಿ ಬಿಜೆಪಿ ನಾಯಕ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದ ಪ್ರದೀಪ್‌ ಈಶ್ವರ್‌ ಅವರ ಸಾಕು ತಾಯಿ ರತ್ನಮ್ಮ ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ರತ್ನಮ್ಮ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ರತ್ನಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇನ್ನು ಮತ್ತೊಂದೆಡೆ ಇಂದು ಸಿಎಂ ಮತ್ತು ಡಿಸಿಎಂ ಸೇರಿದಂತೆ ಕೆಲ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಮಾತೃವಿಯೋಗ Read More »

13 ವರ್ಷದ ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: 13 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿರುವ ವಾಹನದಲ್ಲಿ ಸಾಮೂಹಿಕ ಬಲಾತ್ಕಾರ ಮಾಡಿರುವ ಘಟನೆ ಆಸ್ಸಾಂ ರಾಜ್ಯದ ಕೊಕರಾಝಾರ ಜಿಲ್ಲೆಯ ಡೋಟಮಾ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ರೂಬೆಲ್ ರೆಹಮಾನ, ಇಮ್ರಾನ್ ಹುಸೇನ, ಅನ್ವರ ಹುಸೇನ ಮತ್ತು ಮೊಮಿನೂರ ರಹಮಾನ ಎಂದು ಗುರುತಿಸಲಾಗಿದೆ. ಪೊಲೀಸರು ಗಸ್ತು ಮಾಡುತ್ತಿರುವಾಗ ಅವರಿಗೆ ವಾಹನದ ಬಗ್ಗೆ ಸಂದೇಹ ಬಂದಿತು. ಅವರು ವಾಹನವನ್ನು ನಿಲ್ಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂತು. ಅ. 13 ರಂದು ಮಧ್ಯಾಹ್ನ ಡೊಟಮಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ

13 ವರ್ಷದ ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ Read More »

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‍ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ, ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆ‌ಸ್‌ನವರೇ, ಕಾಂಗ್ರೆಸ್ ಸರಕಾರ ಬಂದರೆ ಹೀಗೆಲ್ಲಾ ಆಗುತ್ತದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಕಲ್ಲಡ್ಕ

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ Read More »

ಇಂದು ರಾಜ್ಯದ 31ನೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ| ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ

ಇಂದು ರಾಜ್ಯದ 31ನೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ| ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ Read More »

ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ

ಸಮಗ್ರ ನ್ಯೂಸ್: ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ ಕೆ ಭುಜಂಗಶೆಟ್ಟಿ ಅವರು ನಿಧನ ಹೊಂದಿದ್ದಾರೆ. ಇಂದು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಡಾ.ಕೆ ಭುಜಂಗಶೆಟ್ಟಿ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, ಅಲ್ಲಿ ಅವರು 1978ರಲ್ಲಿ ಎಂಬಿಬಿಎಸ್ ಮಾಡಿದರು.

ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ Read More »