ರಾಜ್ಯ

ಮತಗಟ್ಟೆ ಆವರಣದಲ್ಲೇ ಗಂಡು ಮಗುವಿಗೆ ಜನ್ಮನೀಡಿದ ಮಹಿಳೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ನಿಮಿತ್ತ ಮತದಾನ ಮಾಡಲು ಬಂದಿದ್ದ ಗರ್ಭಿಣಿಯೊಬ್ಬರು ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮನೀಡಿದ ಘಟನೆ ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228 ರಲ್ಲಿ ಈ ಘಟನೆ ನಡೆದಿದ್ದು, ಮಣಿಲಾ ಎನ್ನುವವರೇ ಮಗುವಿಗೆ ಜನ್ಮನೀಡಿದ ಮಹಿಳೆಯಾಗಿದ್ದಾಳೆ. ಗರ್ಭಿಣಿ ಮಣಿಲಾ ಅವರು ಹಕ್ಕು ಚಲಾಯಿಸಲು ಮತಗಟ್ಟೆಗೆ ಬಂದಿದ್ದಾರೆ. ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಪಕ್ಕದಲ್ಲೇ ಇದ್ದ ಕೊಠಡಿಗೆ ಕರೆದುಕೊಂಡು

ಮತಗಟ್ಟೆ ಆವರಣದಲ್ಲೇ ಗಂಡು ಮಗುವಿಗೆ ಜನ್ಮನೀಡಿದ ಮಹಿಳೆ Read More »

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್

ಸಮಗ್ರ ನ್ಯೂಸ್: ಚುನಾವಣಾ ಕರ್ತವ್ಯಕ್ಕೆ ಕುಡಿದು ಬಂದಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮಾಲತೇಶ್ ಶಿಕ್ಷಕ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಹೀಗಾಗಿ ಇಬ್ಬರನ್ನೂ ಅಮಾನತು ಮಾಡುವಂತೆ

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್ Read More »

ರಾಜ್ಯ ವಿಧಾನಸಭಾ ಚುನಾವಣೆ| ಬಿರುಸಿನಿಂದ ನಡೆಯುತ್ತಿರುವ ಮತದಾನ

ಸಮಗ್ರ ನ್ಯೂಸ್: ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, ಮತಗಟ್ಟೆಗಳ ಬಳಿ ಪಕ್ಷಗಳ ಕಾರ್ಯಕರ್ತರು ಕೊನೆ ಕ್ಷಣದ ಕಸರತ್ತಾಗಿ ಮತಯಾಚನೆಯಲ್ಲಿ ತೊಡಗಿದ್ದಾರೆ. ರಾಜ್ಯದಾದ್ಯಂತ ಮತದಾನ ಶಾಂತಿಯುತವಾಗಿ ಸಾಗಿದ್ದು, ಕೆಲವೆಡೆ ಪಕ್ಷಗಳ ಕಾರ್ಯಕರ್ತರ ನಡುವೆ ಸಣ್ಣ ಮಟ್ಟದಲ್ಲಿ ಮಾತಿನ ಚಕಮಕಿ ನಡೆದಿದೆ. ಮಧ್ಯಾಹ್ನದ ಬಳಿಕ ಮಳೆ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಮತದಾರರು ಬೆಳಿಗ್ಗೆಯಿಂದಲೇ ಕ್ಯೂ ನಿಂತಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ| ಬಿರುಸಿನಿಂದ ನಡೆಯುತ್ತಿರುವ ಮತದಾನ Read More »

ಇಂದು ಪ್ರಜಾಪ್ರಭುತ್ವದ ಹಬ್ಬ; ರಾಜ್ಯದೆಲ್ಲೆಡೆ ಮತದಾನ ಪ್ರಕ್ರಿಯೆ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದು ಪ್ರಜಾಪ್ರಭುತ್ವದ ಹಬ್ಬ! ರಾಜ್ಯದ ಗದ್ದುಗೆಯ ಭವಿಷ್ಯ ನಿರ್ಧಾರಕ್ಕೆ ಪ್ರಜಾ ದೊರೆಗಳು ಮುಂದಾಗಿದ್ದು, ಬೆಳಗ್ಗೆ 7 ಗಂಟೆಗೆ ರಾಜ್ಯಾದ್ಯಂತ ಮತದಾನ ಆರಂಭವಾಗಿದೆ. ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಲು ಮತಗಟ್ಟೆಯ ಬಳಿ ಆಗಮಿಸುತ್ತಿದ್ದಾರೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಚುನಾವಣಾ ಆಯೋಗ ಸಾಕಷ್ಟು ಪ್ರಯತ್ನ ನಡೆಸಿದ್ದು, ಎಲ್ಲರು ತಪ್ಪದೇ ಮತದಾನ ಮಾಡುವಂತೆ ಕರೆ ಕೊಟ್ಟಿದೆ. ಸುಭದ್ರ ಕರ್ನಾಟಕಕ್ಕಾಗಿ ಮತದಾನ ಮಾಡುವುದು ನಮ್ಮ ಕರ್ತವ್ಯ ಕೂಡ ಆಗಿದೆ. ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ

ಇಂದು ಪ್ರಜಾಪ್ರಭುತ್ವದ ಹಬ್ಬ; ರಾಜ್ಯದೆಲ್ಲೆಡೆ ಮತದಾನ ಪ್ರಕ್ರಿಯೆ ಆರಂಭ Read More »

ಮತದಾರರನ್ನು ವಾಹನಗಳಲ್ಲಿ ಕರೆತಂದರೆ ನಿರ್ದಾಕ್ಷಿಣ್ಯ ಕ್ರಮ| ಜಿಲ್ಲಾಧಿಕಾರಿ ರವಿಕುಮಾರ್ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ನಾಳೆ ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಮತದಾನ ನಡೆಸುವ ಮತದಾರರನ್ನು ವಾಹನಗಳ ಮೂಲಕ ಕರೆ ತರಲು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದವರಿಗೆ ಅವಕಾಶವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ರವಾನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರನ್ನು ವಾಹನಗಳಲ್ಲಿ ಕರೆ ತರಲು ಅವಕಾಶವಿಲ್ಲ. ಯಾವುದೇ ಪಕ್ಷ, ಯಾವುದೇ ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ಅಂತಹ ವಿಚಾರಗಳಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಭಾಗದಿಂದ ನೇರವಾಗಿ ಕರೆ ತರಲು ಅವಕಾಶವಿಲ್ಲ

ಮತದಾರರನ್ನು ವಾಹನಗಳಲ್ಲಿ ಕರೆತಂದರೆ ನಿರ್ದಾಕ್ಷಿಣ್ಯ ಕ್ರಮ| ಜಿಲ್ಲಾಧಿಕಾರಿ ರವಿಕುಮಾರ್ ಖಡಕ್ ಎಚ್ಚರಿಕೆ Read More »

ನಮೀಬಿಯಾದಿಂದ ತಂದ ಮತ್ತೊಂದು ಚೀತಾ ದುರಂತ ಸಾವು| ಎರಡೇ ತಿಂಗಳಲ್ಲಿ ಮೂರನೇ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಕುನೋ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ತಂದಿದ್ದ ಇನ್ನೊಂದು ಹೆಣ್ಣು ಚೀತಾ ‘ದಕ್ಷಾ’ ಮಂಗಳವಾರ ಸಾವು ಕಂಡಿದೆ. ಗಂಡು ಚೀತಾದ ಆಕ್ರಮಣಕಾರಿ ಸಂಭೋಗದ ಕಾರಣದಿಂದಾಗಿ ಚೀತಾ ಸಾವು ಕಂಡಿದೆ ಎಂದು ಹೇಳಲಾಗಿದೆ. ಕುನೋದಲ್ಲಿ ಕಳೆದ ಎರಡು ತಿಂಗಳಲ್ಲಿ ಸಾವು ಕಂಡ ಮೂರನೇ ಆಫ್ರಿಕಾದ ಚೀತಾ ಇದಾಗಿದೆ.‌ ಕೆಲವು ವಾರಗಳ ಹಿಂದೆ, ಏಪ್ರಿಲ್‌ನಲ್ಲಿ, ದಕ್ಷಿಣ ಆಫ್ರಿಕಾದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಗೊಂಡಿದ್ದ ಆರು ವರ್ಷದ ಗಂಡು ಚೀತಾ ಉದಯ್ ಹೃದಯಾಘಾತದಿಂದ ಸಾವು ಕಂಡಿತ್ತು. ಮಾರ್ಚ್‌

ನಮೀಬಿಯಾದಿಂದ ತಂದ ಮತ್ತೊಂದು ಚೀತಾ ದುರಂತ ಸಾವು| ಎರಡೇ ತಿಂಗಳಲ್ಲಿ ಮೂರನೇ ಸಾವು Read More »

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ?

ಸಮಗ್ರ ನ್ಯೂಸ್: ಮೇ 09, ರಾಜ್ಯಾದ್ಯಂತ ನಾಳೆ ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮತದಾರರು ತಮ್ಮ ಮತಗಟ್ಟೆ ವಿಳಾಸ ಎಲ್ಲಿದೆ ಎಂದು ಸುಲಭವಾಗಿ ಹುಡುಕಬಹುದು. ಮತದಾರರಿಗೆ ಅನುಕೂಲ ಆಗುವಂತೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣಾ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮತಗಟ್ಟೆಗೆ ಗೂಗಲ್ ಲೊಕೇಶನ್ ಆಧರಿಸಿ ಮತಗಟ್ಟೆ ತಲುಪಬಹುದು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳಲ್ಲಿ ಸಣ್ಣ ಪುಟ್ಟ ಸ್ಥಳಗಳ ಬಗ್ಗೆ ಗೂಗಲ್‌ನಲ್ಲಿಯೂ ಮಾಹಿತಿ ಲಭ್ಯವಾಗದೆ ಮತ್ತು ಅಂತಹ ಸ್ಥಳಗಳನ್ನು ಗೂಗಲ್ ಮ್ಯಾಪ್ ಲಭ್ಯವಿರುವುದಿಲ್ಲ. ಅದಕ್ಕಾಗಿ,

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ? Read More »

ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ಎನ್‍ಐಎ ದಾಳಿ

ಸಮಗ್ರ ನ್ಯೂಸ್: ಮೇ 09ಮಂಗಳವಾರದಂದು ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಎನ್ಐಎ ದಾಳಿ ನಡೆಸಿದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ ಪ್ರಕರಣದ ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಸೇರಿದಂತೆ ಆರು ಜಿಲ್ಲೆಗಳ ಪ್ರದೇಶಗಳಲ್ಲಿ ಕಾರ್ಯಚರಣೆ ನಡೆಯುತ್ತಿದೆ. ಈ ಪ್ರಕರಣ ಸೆ. 19 ರಂದು ದಾಖಲಾದಾಗಿನಿಂದ ಇಲ್ಲಿಯವರೆಗೆ 10 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಯಿತು. ಹಲವಾರು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು , ಆರೋಪಿಗಳು ಕೋಮು ಸೌಹರ‍್ದತೆಗೆ

ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ಎನ್‍ಐಎ ದಾಳಿ Read More »

ಕಡಬ: ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಪ್ರಕರಣ| ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿ ಸಹಕರಿಸಿದ ಅರುಣ್ ಕುಮಾರ್ ಪುತ್ತಿಲ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ಸಹೋದರಿಯರಿಬ್ವರು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದು, ಮೃತರ ಪೋಸ್ಟ್ ಮಾರ್ಟಂ ನಡೆಸಲು ನಿರಾಕರಿಸಿದ ವೇಳೆ ಅರುಣ್ ಕುಮಾರ್ ಪುತ್ತಿಲರು ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿದ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಈ ಬಗ್ಗೆ ಶ್ರೀನಿಧಿ ಅಮ್ಮಣ್ಣಾಯ ಸೌತಡ್ಕ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, `ಪಂಜ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಭಾಗ ಅಲ್ಲಿ ನಿನ್ನೆ ನನ್ನ ಅಣ್ಣನ ಮಕ್ಕಳಿಬ್ಬರು ನದಿ ನೀರಿನಲ್ಲಿ

ಕಡಬ: ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಪ್ರಕರಣ| ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿ ಸಹಕರಿಸಿದ ಅರುಣ್ ಕುಮಾರ್ ಪುತ್ತಿಲ Read More »

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!!

ಸಮಗ್ರ ನ್ಯೂಸ್: ಪ್ರತಿಯೊಬ್ಬರೂ ತಾವು ಮತದಾನ ಮಾಡಿದ ಮೇಲೆ ತಮ್ಮ ಕೈಯ ತೋರು ಬೆರಳನ್ನು ಏಕೆ ತೋರಿಸುತ್ತಿದ್ದಾರೆ ಎಂಬ ಸಂದೇಹ ಚಿಕ್ಕ ಮಕ್ಕಳಲ್ಲಿ ಮೂಡಿದರೂ ದೊಡ್ಡವರಾದವರಿಗೆ ಈ ಬಗ್ಗೆ ಸಹಜವಾಗಿ ಗೊತ್ತೇ ಇರುತ್ತದೆ. ಹೌದು, ವ್ಯಕ್ತಿಯೊಬ್ಬನಿಗೆ ಸಾಂವಿಧಾನಿಕವಾಗಿ ಬಂದಿರುವ ಮತದಾನದ ಹಕ್ಕನ್ನು ಅವನು ಚಲಾಯಿಸಿದ್ದಾನೆ ಎಂಬುದನ್ನು ಸೂಚಿಸುವ ಹಾಗೂ ಒಂದೇ ಬಾರಿ ಮಾಡಬೇಕಾಗಿರುವ ತನ್ನ ಸರಿಯಾದ ಹಕ್ಕನ್ನು ಚಲಾಯಿಸಿದ್ದಾನೆ ಎಂದು ಖಾತರಿಪಡಿಸುವ ಸಂಕೇತವಾಗಿ ಅವನ/ಅವಳ ಕೈಯ ತೋರು ಬೆರಳಿಗೆ ಸುಲಭವಾಗಿ ಅಳಿಸಲಾಗದಂತಹ ಒಂದು ಶಾಯಿಯ ಗುರುತನ್ನು ಹಾಕಿರುತ್ತಾರೆ.

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!! Read More »