ರಾಜ್ಯ

ಇಂದಿನಿಂದ ಮೇ6 ರವರೆಗೆ ಅಂಚೆ ಮತದಾನ

ಸಮಗ್ರ ನ್ಯೂಸ್: ಮುಂದಿನ ತಿಂಗಳ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆಗೆ ನಾಳೆಯಿಂದ ಬ್ಯಾಲೇಟ್ ಪೇಪರ್ ವೋಟಿಂಗ್ ಶುರುವಾಗುತ್ತಿದೆ. 80 ವರ್ಷ ಮೇಲ್ಪಟ್ಟ ವೃದ್ದರು ಹಾಗೂ ವಿಕಲಚೇತನರು ಮನೆಯಿಂದ, ಪೊಲೀಸರು, ಚುನಾವಣಾ ಸಿಬ್ಬಂದಿಗಳು ಹಾಗೂ ಪತ್ರಕರ್ತರು ಬ್ಯಾಲೇಟ್ ಪೇಪರ್ ಮೂಲಕ ತಮ್ಮ ಹಕ್ಕು ಚಲಾಯಿಸಬಹುದಾಗಿದೆ. 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮನೆ ಬಳಿಯೇ ವೋಟಿಂಗ್ ವ್ಯವಸ್ಥೆ ಮಾಡಲಾಗಿದ್ದರೆ, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಪತ್ರಕರ್ತರು ಅವರವರ ಕ್ಷೇತ್ರಗಳಲ್ಲಿ ನಾಳೆಯಿಂದ ಬ್ಯಾಲೇಟ್ ವೋಟಿಂಗ್ ಮಾಡಬಹುದಾಗಿದೆ. ಚುನಾವಣಾ

ಇಂದಿನಿಂದ ಮೇ6 ರವರೆಗೆ ಅಂಚೆ ಮತದಾನ Read More »

ಬಾರ್ ಡ್ಯಾನ್ಸರ್, ವಿಷಕನ್ಯೆ, ಜರ್ಸಿ‌ಹಸು; ಬಿಜೆಪಿಗರಿಂ‌ದ ನಿಂದನೆಗೆ ಒಳಗಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ| ಆಕೆ ಮಾಡಿದ ಅಪರಾದವಾದರೂ‌ ಏನು?

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿರುದ್ಧ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ‘ಯತ್ನಾಳರ ವಿಷಕನ್ಯೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆ ಇರಬಹುದೇನೋ, ಅವರದ್ದೂ ಇದೇ ಮನಸ್ಥಿತಿಯಲ್ಲವೇ. ಕಾಂಗ್ರೆಸ್ಸಿನ ವಿಧವೆ, ಜರ್ಸಿ ಹಸು, ವಿಷಕನ್ಯೆ,

ಬಾರ್ ಡ್ಯಾನ್ಸರ್, ವಿಷಕನ್ಯೆ, ಜರ್ಸಿ‌ಹಸು; ಬಿಜೆಪಿಗರಿಂ‌ದ ನಿಂದನೆಗೆ ಒಳಗಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ| ಆಕೆ ಮಾಡಿದ ಅಪರಾದವಾದರೂ‌ ಏನು? Read More »

‘ಮೀನು ಮುಟ್ಟಿದ್ದೇನೆ, ದೇವಸ್ಥಾನದ ಒಳಗೆ ಬರಬಹುದೇ?’ | ಅರ್ಚಕರ ಜೊತೆ ಸಂದೇಹ ಬಗೆಹರಿಸಿಕೊಂಡ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಭೇಟಿ ನೀಡಿದಾಗ ಕೆಲ ಹೊತ್ತು ಗೊಂದಲಕ್ಕೆ ಒಳಗಾದರು. ಇಲ್ಲಿಗೆ ಬರುವುದಕ್ಕೂ ಮೊದಲು ಮೀನು ಮುಟ್ಟಿದ್ದೇನೆ ದೇವಸ್ಥಾನದ ಒಳಗೆ ಹೋಗಬೇಕೋ ಬೇಡವೋ ಎಂಬ ಗೊಂದಲಕ್ಕೆ ಸಿಲುಕಿದ್ದರು. ರಾಹುಲ್ ಗಾಂಧಿಗೆ ಮಹಿಳೆಯೊಬ್ಬರು ದೊಡ್ಡ ಗಾತ್ರದ ಅಂಜಲ್ ಮೀನು ಒಂದನ್ನು ಉಡುಗೊರೆಯಾಗಿ ನೀಡಿದ್ದರು. ಈ ಮೀನನ್ನು ಎತ್ತಿ ಖುಷಿ ಪಟ್ಟ ರಾಹುಲ್, ಮೀನುಗಾರ ಮಹಿಳೆಯ ಜೊತೆ ಆತ್ಮೀಯವಾಗಿ ನಿಂತು ಫೋಟೋಗೆ ಪೋಸ್ ಕೊಟ್ಟರು. ಅಲ್ಲಿಂದ ನೇರವಾಗಿ

‘ಮೀನು ಮುಟ್ಟಿದ್ದೇನೆ, ದೇವಸ್ಥಾನದ ಒಳಗೆ ಬರಬಹುದೇ?’ | ಅರ್ಚಕರ ಜೊತೆ ಸಂದೇಹ ಬಗೆಹರಿಸಿಕೊಂಡ ರಾಹುಲ್ ಗಾಂಧಿ Read More »

‘ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ; ಮೋದಿ – ದೇವೇಗೌಡ್ರ ನಡುವೆ ಮಾತುಕತೆ ಆಗಿದೆ’ | ವೈರಲ್ ಆಗ್ತಿದೆ ಪ್ರೀತಂಗೌಡ ಹೇಳಿಕೆ

ಸಮಗ್ರ ನ್ಯೂಸ್: ‘ಜೆಡಿಎಸ್‌ಗೆ ಮತ ಹಾಕಿದರೆ, ಬಿಜೆಪಿಗೇ ಹಾಕಿದಂತೆ. ದೇವೇಗೌಡರು, ಮೋದಿ ಸಾಹೇಬರು ಮಾತನಾಡಿಕೊಂಡಿದ್ದಾರೆ. ಏಕೆಂದರೆ ಅವರಿಗೆ ಬರೋದು 20- 25 ಮಾತ್ರ’ ಎಂದು ಶಾಸಕ ಪ್ರೀತಂ ಗೌಡ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಸನ ನಗರ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಪ್ರಚಾರದ ಸಂದರ್ಭದಲ್ಲಿ ಪ್ರೀತಂ ಮಾತನಾಡಿದ್ದು, ‘ಮೈಸೂರಿನ ಮೇಲೆ ಬೆಂಗಳೂರಿಗೆ ಹೋಗೋದು ಬೇಡ. ಹಾಸನದಿಂದ ಬೆಳ್ಳೂರು ಕ್ರಾಸ್‌ ಮೇಲೆ ಹೋಗಿ ಎಂದು ಹೇಳುತ್ತೇನೆ. ಅದರ ಮೇಲೆ ನಿಮ್ಮಿಷ್ಟ’ ಎಂದಿದ್ದಾರೆ. ‘ಮೈಸೂರಿನ ಮೇಲೆಯೇ ಬೆಂಗಳೂರಿಗೆ ಹೋಗೋದಕ್ಕೆ

‘ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ; ಮೋದಿ – ದೇವೇಗೌಡ್ರ ನಡುವೆ ಮಾತುಕತೆ ಆಗಿದೆ’ | ವೈರಲ್ ಆಗ್ತಿದೆ ಪ್ರೀತಂಗೌಡ ಹೇಳಿಕೆ Read More »

ಹವಾಮಾನ ವರದಿ(Weather Report) ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು

ಹವಾಮಾನ ವರದಿ(Weather Report) ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಕಾಂಗ್ರೆಸ್ ಕೈ ಹಿಡಿಯಲಿರುವ ಗೀತಾ ಶಿವರಾಜ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹತ್ವದ ರಾಜಕೀಯ ವಿದ್ಯಮಾನ ಎನ್ನುವಂತೆ ನಾಳೆ (ಎ.28) ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಈ ಕುರಿತಂತೆ ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಾಳೆ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ

ಕಾಂಗ್ರೆಸ್ ಕೈ ಹಿಡಿಯಲಿರುವ ಗೀತಾ ಶಿವರಾಜ್ ಕುಮಾರ್ Read More »

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ| ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷ, ತನ್ನ ಗ್ಯಾರಂಟಿ ಘೋಷಣೆಗಳನ್ನು ಮುಂದುವರೆಸಿದೆ. ಇಂದು ಮಂಗಳೂರಿನಲ್ಲಿ ನಡೆದ ಬಹಿರಂಗ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಪಕ್ಷದ 5ನೇ ಗ್ಯಾರಂಟಿ ಘೋಷಣೆಯನ್ನು ನೀಡಿದರು. ಕಾಂಗ್ರೆಸ್​ ಪಕ್ಷ ಗೆದ್ದು ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ನಿಂದ ಮತ್ತೊಂದು ಗ್ಯಾರಂಟಿ ಘೋಷಣೆ| ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ Read More »

ವಯಸ್ಸು ಜಸ್ಟ್ 26; ಪ್ರಕರಣ 40: ಆಸ್ತಿ 29 ಕೋಟಿ| ಚಿತ್ತಾಪುರ ಬಿಜೆಪಿ ಅಭ್ಯರ್ಥಿ ರೌಡಿಶೀಟರ್!! ವಿಪಕ್ಷಗಳಿಂದ ಬಿಜೆಪಿ ಮೇಲೆ ವಾಗ್ದಾಳಿ

ಸಮಗ್ರ ನ್ಯೂಸ್: ಆತನ ವಯಸ್ಸು 26, ದಾಖಲಾಗಿರುವ ಪ್ರಕರಣಗಳು 40, ಆಸ್ತಿ 29 ಕೋಟಿ, ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಅಂಗನವಾಡಿ ಮಕ್ಕಳಿಗೆ ಹಂಚುವ ಹಾಲಿನ ಪುಡಿ, ಪಡಿತರ ಅಕ್ಕಿ ಕಳ್ಳ ಸಾಗಣೆ ಆರೋಪ ಎದುರಿಸುತ್ತಿರುವ ಈತ ಈ ಬಾರಿಯ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ. ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್. ಬಿಜೆಪಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಅಸಮಾಧಾನ ಹೊರಹಾಕಿವೆ. ಇಂತಹ

ವಯಸ್ಸು ಜಸ್ಟ್ 26; ಪ್ರಕರಣ 40: ಆಸ್ತಿ 29 ಕೋಟಿ| ಚಿತ್ತಾಪುರ ಬಿಜೆಪಿ ಅಭ್ಯರ್ಥಿ ರೌಡಿಶೀಟರ್!! ವಿಪಕ್ಷಗಳಿಂದ ಬಿಜೆಪಿ ಮೇಲೆ ವಾಗ್ದಾಳಿ Read More »

ಬೆಂಗಳೂರು: ಉದ್ಯೋಗ ಅರಸಿ ಬಂದ ಯುವಕ ಲಿಪ್ಟ್ ನಲ್ಲಿ ಸಿಲುಕಿ ಸಾವು

ಸಮಗ್ರ ನ್ಯೂಸ್: ಉದ್ಯೋಗ ಅರಸಿಕೊಂಡು ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಯುವಕ ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ನಗರದ ಜೆ.ಸಿ.ರಸ್ತೆ ಭರತ್ ಸರ್ಕಲ್​ ಬಳಿಯ ಕಮರ್ಷಿಯಲ್​ ಬಿಲ್ಡಿಂಗ್​ನಲ್ಲಿ ನಡೆದಿದೆ. ಲಿಫ್ಟ್​​ನಲ್ಲಿ ಸಿಲುಕಿ ಮೃತಪಟ್ಟ ಯುವಕನನ್ನು ಉತ್ತರಪ್ರದೇಶ ಮೂಲದ ವಿಕಾಸ್​(26) ಎಂದು ಗುರುತಿಸಲಾಗಿದೆ. ಸಂಜಯ್ ಆಟೋಮೊಬೈಲ್​​ ಶಾಪ್​ನಲ್ಲಿ ಕೆಲಸ ಮಾಡ್ತಿದ್ದ ವಿಕಾಸ್​​, ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ. ಸಂಜೆ ಏಳು ಗಂಟೆ ಸುಮಾರಿಗೆ ಕಮರ್ಷಿಯಲ್​ ಬಿಲ್ಡಿಂಗ್​ನ ಲಿಫ್ಟ್​​ನಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸ್

ಬೆಂಗಳೂರು: ಉದ್ಯೋಗ ಅರಸಿ ಬಂದ ಯುವಕ ಲಿಪ್ಟ್ ನಲ್ಲಿ ಸಿಲುಕಿ ಸಾವು Read More »

ಬೆಳ್ತಂಗಡಿ: ಸೋಮಾವತಿ ನದಿಗೆ ವಿಷಪ್ರಾಶನ| ನೂರಾರು ಮೀನುಗಳ ಮಾರಣಹೋಮ

ಸಮಗ್ರ ನ್ಯೂಸ್: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದ್ದ ಸೋಮಾವತಿ ನದಿ ನೀರಿಗೆ ಕಿಡಿಕೇಡಿಗಳು ವಿಷ ಪದಾರ್ಥ ಹಾಕಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಘಟನೆ ವರದಿಯಾಗಿದ್ದು, ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ನದಿಯಲ್ಲಿದ್ದ ಘಟಕಕ್ಕೆ ವಿಷ ಪ್ರಾಶನ ಮಾಡಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಸತ್ತುಬಿದ್ದಿವೆ.‌ ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು. ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು

ಬೆಳ್ತಂಗಡಿ: ಸೋಮಾವತಿ ನದಿಗೆ ವಿಷಪ್ರಾಶನ| ನೂರಾರು ಮೀನುಗಳ ಮಾರಣಹೋಮ Read More »