ರಾಜ್ಯ

ಬಿಜೆಪಿಯ ಮತ್ತೊಂದು ವಿಕೆಟ್ ಪತನ| ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಸಮಗ್ರ ನ್ಯೂಸ್: ಹೊಸದುರ್ಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಗೆ ಟಿಕೆಟ್ ತಪ್ಪಿದ್ದು, ಇದರಿಂದ ಬೇಸರಗೊಂಡ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಭೇಟಿಯಾದ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿ ವಿಫಲವಾಗಿದೆ. ಹೀಗಾಗಿ ಬೇಸರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬಿಜೆಪಿಯ ಮತ್ತೊಂದು ವಿಕೆಟ್ ಪತನ| ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ Read More »

ಇಂದಿನಿಂದ ರಾಜ್ಯದಲ್ಲಿ ಚುನಾವಣಾ ಹಬ್ಬ ಶುರು| ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟ; ಚುನಾವಣಾ ಪ್ರಕ್ರಿಯೆಗೆ ಚಾಲನೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು‌ ಗುರುವಾರ (ಏ 13) ಮುಂಜಾನೆ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಸೂಚನೆ ಮೇರೆಗೆ ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದ್ದು, ಇಂದಿನಿಂದ ಚುನಾವಣಾ ವಿಧಿವಿಧಾನಗಳು ಅಧಿಕೃತವಾಗಿ ಆರಂಭಗೊಂಡಂತೆ ಆಗಿವೆ. ಅಧಿಸೂಚನೆಯ ಪ್ರಕಾರ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20, ನಾಮಪತ್ರ ಪರಿಶೀಲನೆಗೆ ಏ 21, ನಾಮಪತ್ರ ಹಿಂಪಡೆಯಲು ಏ 24 ಕೊನೆಯ ದಿನ. ಮೇ 10ರಂದು ಮತದಾನ ನಡೆಯಲಿದೆ. ಮೇ 15ರ ಒಳಗೆ ಚುನಾವಣೆ ಪ್ರಕ್ರಿಯೆಗಳು

ಇಂದಿನಿಂದ ರಾಜ್ಯದಲ್ಲಿ ಚುನಾವಣಾ ಹಬ್ಬ ಶುರು| ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟ; ಚುನಾವಣಾ ಪ್ರಕ್ರಿಯೆಗೆ ಚಾಲನೆ Read More »

ಉಡುಪಿ: ಸಿಎಂ ಬೊಮ್ಮಾಯಿ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 12ರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಸಿಎಂ

ಉಡುಪಿ: ಸಿಎಂ ಬೊಮ್ಮಾಯಿ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಅವಘಡ Read More »

ಮಡಿಕೇರಿ: ಹಿರಿಯ ವಕೀಲ, ವಿಎಚ್ ಪಿ ಮುಖಂಡ‌ ಕೃಷ್ಣಮೂರ್ತಿ ಕಾರಿನ ಮೇಲೆ ಗುಂಡಿನ ದಾಳಿ

ಸಮಗ್ರ ನ್ಯೂಸ್: ಮಡಿಕೇರಿಯ ಹಿರಿಯ ವಕೀಲ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ ಎಂಬವರ ಮೇಲೆ ಕಳೆದ ರಾತ್ರಿ ಗುಂಡಿನ ದಾಳಿ ನಡೆದಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಚೆಟ್ಟಲ್ಲಿ ಹತ್ತಿರದ ಅಭ್ಯಾಲ ಬಳಿ ಕೃಷ್ಣಮೂರ್ತಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕೃಷ್ಣಮೂರ್ತಿ ಚಲಿಸುತ್ತಿದ್ದ ಕಾರಿಗೆ ಗುಂಡು ತಗುಲಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಡಗು ಜಿಲ್ಲಾ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಮಡಿಕೇರಿ: ಹಿರಿಯ ವಕೀಲ, ವಿಎಚ್ ಪಿ ಮುಖಂಡ‌ ಕೃಷ್ಣಮೂರ್ತಿ ಕಾರಿನ ಮೇಲೆ ಗುಂಡಿನ ದಾಳಿ Read More »

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ| ಹುಲಿ ಕಾಣದ್ದಕ್ಕೆ ಸಫಾರಿ ವಾಹನ ಚಾಲಕನ ಮೇಲೆ ಕ್ರಮಕ್ಕೆ ಒತ್ತಡ

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದರು. ಈ ವೇಳೆ ಅವರಿಗೆ ಹುಲಿಗಳೇ ಕಾಣದಿರುವುದಕ್ಕೆ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಆತನ ವಾಹನದ ನೋಂದಣಿ ರದ್ದುಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬಿಜೆಪಿಯ ಕೆಲವು ಮುಖಂಡರು ಒತ್ತಡ ಹೇರುತ್ತಿದ್ದಾರೆ. ಆದರೆ ಪ್ರಧಾನಿ ಮತ್ತು ಅರಣ್ಯ ಅಧಿಕಾರಿಗಳು ಭದ್ರತಾ ತಂಡಗಳನ್ನು ದೂಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು 22 ಕಿಲೋಮೀಟರ್ ಸಫಾರಿ ನಡೆಸಿದರೂ ಒಂದೇ ಒಂದು ಹುಲಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ| ಹುಲಿ ಕಾಣದ್ದಕ್ಕೆ ಸಫಾರಿ ವಾಹನ ಚಾಲಕನ ಮೇಲೆ ಕ್ರಮಕ್ಕೆ ಒತ್ತಡ Read More »

ಇಂದು‌ ಯುಜಿಸಿ ನೆಟ್ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಇಂದು(ಎ.13) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್(UGC NET) ಫಲಿತಾಂಶ ಪ್ರಕಟವಾಗಲಿದೆ ಎಂದು UGC ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ. 83 ವಿಷಯಗಳಿಗೆ ಐದು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿತ್ತು. 8.34 ಲಕ್ಷ ಅಭ್ಯರ್ಥಿಗಳು ಈ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಏಜನ್ಸಿ (NTA) ಅಧಿಕೃತ ವೆಬ್‌ಸೈಟ್ ugcntet.nta.nic.in ಅಥವಾ ntaresults.nic.in ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಬಹುದಾಗಿದೆ.

ಇಂದು‌ ಯುಜಿಸಿ ನೆಟ್ ಫಲಿತಾಂಶ ಪ್ರಕಟ Read More »

ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆರ್.ಶಂಕರ್

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಈ ಬಾರಿ ಬಿಜೆಪಿ ಟಿಕೆಟ್ ನೀಡದೇ ಇದ್ದದ್ದಕ್ಕೆ ಆಕ್ರೋಶವನ್ನು ಹೊರ ಹಾಕಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬುಧವಾರ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅತ್ತ ಕಾಂಗ್ರೆಸ್ ಟಿಕೆಟ್‍ಗೂ ಪ್ರಯತ್ನ ಪಟ್ಟು ನಿರಾಸೆಯಾಗಿದ್ದ ಅವರು, ಇತ್ತ ಬಿಜೆಪಿ ಟಿಕೆಟ್ ಕೂಡಾ ಮಿಸ್ ಆಗಿದ್ದರಿಂದ ಬೇಸರಗೊಂಡಿದ್ದರು. ಈ ಹಿನ್ನಲೆಯಲ್ಲೇ ಎಂಎಲ್ಸಿ ಸ್ಥಾನಕ್ಕೆ

ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆರ್.ಶಂಕರ್ Read More »

ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು

ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ Read More »

ಸುಳ್ಯ: ‘ದಲಿತೋದ್ಧಾರ’ ವೆಂದು ಮೈಲೇಜ್ ತೆಗೆದುಕೊಳ್ಳಲು ಹೋಗಿ‌ ಟ್ರೋಲ್ ಗೆ ಒಳಗಾದ ನಳಿನ್ ಕುಮಾರ್ ಕಟೀಲ್| ಮೀಸಲು ಕ್ಷೇತ್ರದಲ್ಲಿ “ಬಿಟ್ಟಿ ಬಿಲ್ಡಪ್” ಎಂದು ಕಾಲೆಳೆದ ನೆಟ್ಟಿಗರು

ಸಮಗ್ರ ನ್ಯೂಸ್: ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್‌ ನೀಡಿರುವುದನ್ನು ಉಲ್ಲೇಖಿಸಿ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಮಾಡಿರುವ ಟ್ವೀಟ್‌ ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ. ‘ದಲಿತೋದ್ಧಾರ ಎಂಬುದು ಬಿಜೆಪಿಗೆ ಭಾಷಣದ ಸರಕಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ, ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ಆದಿದ್ರಾವಿಡ ಸಮುದಾಯದ ಓರ್ವ ಮಹಿಳೆ, ಮಹಿಳಾ ಮೋರ್ಚಾದ ಸಾಮಾನ್ಯ ಕಾರ್ಯಕರ್ತೆ ‘ಭಾಗೀರಥಿ ಮುರುಲ್ಯ’ರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಎಲ್ಲವೂ ಬಿಜೆಪಿಯಲ್ಲಿ ಮಾತ್ರ ಸಾಧ್ಯ!’ ಎಂದು

ಸುಳ್ಯ: ‘ದಲಿತೋದ್ಧಾರ’ ವೆಂದು ಮೈಲೇಜ್ ತೆಗೆದುಕೊಳ್ಳಲು ಹೋಗಿ‌ ಟ್ರೋಲ್ ಗೆ ಒಳಗಾದ ನಳಿನ್ ಕುಮಾರ್ ಕಟೀಲ್| ಮೀಸಲು ಕ್ಷೇತ್ರದಲ್ಲಿ “ಬಿಟ್ಟಿ ಬಿಲ್ಡಪ್” ಎಂದು ಕಾಲೆಳೆದ ನೆಟ್ಟಿಗರು Read More »

ಕೆಲಸ ಕೊಡಿಸುವ ಆಮಿಷ ಒಡ್ಡಿ ವಂಚನೆ| ಫ್ರೀಡಂ ಆ್ಯಪ್ ನ ಸಿಇಒ ಸುಧೀರ್ ಅರೆಸ್ಟ್

ಸಮಗ್ರ ನ್ಯೂಸ್: ಫಾರ್ಟ್ ಟೈಂ ಕೆಲಸದ ಆಮಿಷವೊಡ್ಡಿ ಹಣ ನೀಡದೆ ವಂಚಿಸಿರುವ ಆರೋಪದ ಮೇಲೆ ಇಂಡಿಯನ್ ಮನಿ ಮತ್ತು ಫೈನಾನ್ಸಿಯಲ್ ಫ್ರೀಡಂ ಆ್ಯಪ್‍ನ ಸಿಇಒ ಸಿ.ಎಸ್.ಸುಧೀರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾಗಿರುವ 21 ಮಂದಿ ನೀಡಿದ ದೂರಿನ ಅನ್ವಯ ಸಿ.ಎಸ್.ಸುಧೀರ್ ಸೇರಿದಂತೆ 23 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಿರೀಕ್ಷಣಾ ಜಾಮೀನು ಪಡೆದಿದ್ದ ಸುಧೀರ್‍ನನ್ನು ಮತ್ತೊಂದು ಪ್ರಕರಣದಲ್ಲಿ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. 4 ಪ್ರತ್ಯೇಕ ವಂಚನೆ ಕೇಸ್ ದಾಖಲಾದ ಹಿನ್ನೆಲೆ ವಿಚಾರಣೆಗೆ ಬಂದಿದ್ದ ಸಿ.ಎಸ್.ಸುಧೀರ್ ನ್ನು ಪೊಲೀಸರು

ಕೆಲಸ ಕೊಡಿಸುವ ಆಮಿಷ ಒಡ್ಡಿ ವಂಚನೆ| ಫ್ರೀಡಂ ಆ್ಯಪ್ ನ ಸಿಇಒ ಸುಧೀರ್ ಅರೆಸ್ಟ್ Read More »