Bengaluru mysore express way| ಟೋಲ್ ತಪ್ಪಿಸಲು ಒನ್ ವೇ ನಲ್ಲಿ ನುಗ್ಗಿದ ಕೆಎಸ್ಆರ್ ಟಿಸಿ ಬಸ್| ಬೈಕ್ ಸವಾರ ಸಾವು
ಸಮಗ್ರ ನ್ಯೂಸ್: ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಣಿಮಿಣಿಕೆ ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಒನ್‌ವೇನಲ್ಲಿ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಬೈಕ್‌ಗೆ ಗುದ್ದಿದ್ದು, ಓರ್ವ ಬೈಕ್ ಸವಾರ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ಅವಾಂತರದಲ್ಲಿ ಈಗಾಗಲೇ 85ಕ್ಕೂ ಅಧಿಕ ಅಪಘಾತಗಳು ಸಂಭವಿಸಿವೆ. ಆದರೆ, ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸರ್ವಿಸ್ ರಸ್ತೆಯನ್ನು ಸಮರ್ಪಕವಾಗಿ ನಿರ್ಮಾಣ ಮಾಡಿಲ್ಲ. ಆದ್ದರಿಂದ ವಾಹನ ಸವಾರರು ಪರದಾಡುತ್ತಿದ್ದು, ಎಲ್ಲಿ









