ರಾಜ್ಯ

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್

ಸಮಗ್ರ ನ್ಯೂಸ್: ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬಂದ್ ಗೆ ಕರೆ ಕೊಟ್ಟಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್ Read More »

ಕೊಟ್ಟಿಗೆಹಾರ: ಮೀಸಲು ಅರಣ್ಯದಲ್ಲಿ
ಫೈರಿಂಗ್ ಆದ ಖಾಲಿ ಕಾಟ್ರೆಜ್ ಗಳು ಪತ್ತೆ

ಸಮಗ್ರ ನ್ಯೂಸ್:ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಸಾರಗೋಡು-ತತ್ಕೋಳ ಮೀಸಲು ಅರಣ್ಯದ ಕಂಡು ಬಂದಿದೆ. ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ 60ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದ್ದು ಕಾಡು ಪ್ರಾಣಿಗಳ ಶಿಕಾರಿಗಾಗಿ ಬಳಕೆಯಾಗಿತ್ತಾ ಕಾಟ್ರೆಜ್ ಎಂಬ ಅನುಮಾನ ವ್ಯಕ್ತವಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅನಧಿಕೃತ ಬಂದೂಕುಗಳ ವಶದ ಬೆನ್ನಲ್ಲೆ ಖಾಲಿ‌ ಕಾಟ್ರೆಜ್ ಗಳು ಪತ್ತೆಯಾಗಿದ್ದು ಕಾಡು ಪ್ರಾಣಿಗಳು

ಕೊಟ್ಟಿಗೆಹಾರ: ಮೀಸಲು ಅರಣ್ಯದಲ್ಲಿ
ಫೈರಿಂಗ್ ಆದ ಖಾಲಿ ಕಾಟ್ರೆಜ್ ಗಳು ಪತ್ತೆ
Read More »

ಹವಾಮಾನ ವರದಿ| ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ| ಕರಾವಳಿಯಲ್ಲಿ ಮಳೆ ಬರುತ್ತಾ?

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಮೋಡಕವಿದ

ಹವಾಮಾನ ವರದಿ| ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ| ಕರಾವಳಿಯಲ್ಲಿ ಮಳೆ ಬರುತ್ತಾ? Read More »

ಇಂದು ವೋಲ್ವೋ ಸೇರಿದಂತೆ ಬಿಎಂಟಿಸಿ ಎಲ್ಲಾ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಸಮಗ್ರ ನ್ಯೂಸ್: ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ. ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವುದು ಬಿಎಂಟಿಸಿ ಉದ್ದೇಶವಾಗಿದೆ. ಮಹಿಳಾ ದಿನದಂದು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರು ಒಂದು ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಮೂಲಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕುರಿತು ಅರಿವು ಮೂಡಿಸಿದಂತಾಗಲಿದೆ. ಜೊತೆಗೆ ವಿಶ್ವ ಮಹಿಳಾ ದಿನದಂದು ಮಹಿಳೆಯರಿಗೆ ವಿಶೇಷ

ಇಂದು ವೋಲ್ವೋ ಸೇರಿದಂತೆ ಬಿಎಂಟಿಸಿ ಎಲ್ಲಾ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ Read More »

ಮಕ್ಕಳಾಗದೆಂಬ ಭಯಕ್ಕೆ ರಾಹುಲ್ ಮದುವೆಯಾಗುತ್ತಿಲ್ಲ ಎಂದ ಕಟೀಲ್| ಮದುವೆಯಾಗಿ ಮಕ್ಕಳನ್ನು ಪಡೆಯಲೇ ಬೇಕೇ ಎಂದು ಆಕ್ಷೇಪಿಸಿದ ಅಹಿಂಸಾ ಚೇತನ್

ಸಮಗ್ರ ನ್ಯೂಸ್: ಲಸಿಕೆ ಪಡೆದರೆ ಮಕ್ಕಳಾಗದೆಂಬ ಸಿದ್ದರಾಮಯ್ಯ ಅವರ ಮಾತು ಕೇಳಿ ರಾಹುಲ್ ಗಾಂಧಿ ಮದುವೆ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಚೇತನ್ ಕಟೀಲ್‌ ಹೇಳಿಕೆಯು ಕೀಳು ಮಟ್ಟದ್ದು ಮತ್ತು ತರ್ಕವಿಲ್ಲದ್ದು ಎಂದು ಚೇತನ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಸಾಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಬಿಜೆಪಿ ಪೇಜ್ ಪ್ರಮುಖರ ಸಭೆಯಲ್ಲಿ ಮಾತನಾಡಿದ್ದ ಕಟೀಲ್‌, ‘ಕೊರೊನಾ ಲಸಿಕೆ

ಮಕ್ಕಳಾಗದೆಂಬ ಭಯಕ್ಕೆ ರಾಹುಲ್ ಮದುವೆಯಾಗುತ್ತಿಲ್ಲ ಎಂದ ಕಟೀಲ್| ಮದುವೆಯಾಗಿ ಮಕ್ಕಳನ್ನು ಪಡೆಯಲೇ ಬೇಕೇ ಎಂದು ಆಕ್ಷೇಪಿಸಿದ ಅಹಿಂಸಾ ಚೇತನ್ Read More »

ಕೊಡಗು: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ| ಓರ್ವ ಬಂಧನ

ಸಮಗ್ರ ನ್ಯೂಸ್: ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ. ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ಮಾಡಿದ ಪೊಲೀಸರು 400 ಗ್ರಾಂ ಗಾಂಜಾ ಸಹಿತ ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30) ಎಂಬಾತನನ್ನು ವಶಕ್ಕೆ ಪಡೆದರು.ಡಿವೈಎಸ್‌ಪಿ ನಿರಂಜನ್ ರಾಜೇ ಅರಸ್, ಸಿಪಿಐ ವಸಂತ್.ಕೆ.ಎಂ, ಪಿಎಸ್‌ಐ ಸಿದ್ದರಾಜು ಟಿ. ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಇವರ ಕಾರ್ಯಕ್ಷಮತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ

ಕೊಡಗು: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ| ಓರ್ವ ಬಂಧನ Read More »

ತಲಕಾವೇರಿಯ ವನ್ಯಜೀವಿ ವಲಯಕ್ಕೆ ಬೇಟೆಗೆಂದು ಬಂದಿದ್ದ ಓರ್ವ ಬಂಧನ|ಮೂವರ ಪರಾರಿ

ಸಮಗ್ರ ನ್ಯೂಸ್: ಕೇರಳ ಗಡಿಯಿಂದ ತಲಕಾವೇರಿ ವನ್ಯಜೀವಿ ವಲಯದಲ್ಲಿ ಬೇಟೆಗೆಂದು ಬಂದಿದ್ದ ನಾಲ್ವರು ಆರೋಪಿಗಳಲ್ಲಿ ಓರ್ವನನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಲಕಾವೇರಿ ವನ್ಯಜೀವಿ ವಲಯದ ಪದಿನಾಲ್ಕುನಾಡು ಮೀಸಲು ಅರಣ್ಯದಲ್ಲಿ ಬೇಟೆಗಾರರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಚಾಂದೆಟ್ಟುಕೊಲ್ಲಿ ಗಸ್ತು ಹಾಗೂ ಉಪವಲಯದ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಒಂಟಿ ನಳಿಕೆಯ ಎರಡು ನಾಡ ಬಂದೂಕು ಸಹಿತ ಓರ್ವ ಆರೋಪಿಯನ್ನು ವಶಕ್ಕೆ ಪಡೆದರು. ತಲೆ ಮರೆಸಿಕೊಂಡಿರುವ ಮೂವರ ಪತ್ತೆಗೆ ತನಿಖೆ ಮುಂದುವರೆದಿದೆ ಎಂದು

ತಲಕಾವೇರಿಯ ವನ್ಯಜೀವಿ ವಲಯಕ್ಕೆ ಬೇಟೆಗೆಂದು ಬಂದಿದ್ದ ಓರ್ವ ಬಂಧನ|ಮೂವರ ಪರಾರಿ Read More »

ಚಿಕ್ಕಮಗಳೂರು: 3 ದಿನದಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಅರಣ್ಯ, ಬದುಕುಳಿಯಲು ಮನೆ ಬಳಿ ಬಂದ ಕಾಳಿಂಗ ಸರ್ಪ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ನಾಡಿನತ್ತ ಮುಖ ಮಾಡಿವೆ. ಮರದ ಪೊಟರೆ, ಭೂಮಿಯ ಒಳಗೆ ಹೆಚ್ಚಾಗಿ ವಾಸ ಮಾಡುವ ಕಾಳಿಂಗ ಸರ್ಪಗಳು ಮರದಲ್ಲೂ ಇರಲಾಗದೆ, ಬೆಂಕಿ ಬಿದ್ದ ಭೂಮಿಯ ತಾಪದಿಂದ ಭೂಮಿಯ ಒಳಗೂ ಇರಲಾರದೆ

ಚಿಕ್ಕಮಗಳೂರು: 3 ದಿನದಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಅರಣ್ಯ, ಬದುಕುಳಿಯಲು ಮನೆ ಬಳಿ ಬಂದ ಕಾಳಿಂಗ ಸರ್ಪ Read More »

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಮಂಗಳವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಸುಮನ್ ಅವರು, “ಎಫ್ ಐ ಆರ್ ನಲ‌್ಲಿ ಅರ್ಜಿದಾರರ ವಿರುದ್ಧ

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ Read More »

ಮಾಡಾಳ್ ವಿರೂಪಾಕ್ಷಪ್ಪ ಬೆಂಗ್ಳೂರಲ್ಲೇ ಇದ್ದಾರೆ, ಸರ್ಕಾರವೇ ರಕ್ಷಣೆ ನೀಡ್ತಿದೆ – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಜೆಪಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿನಲ್ಲೇ ಇದ್ದಾರೆ, ರಾಜ್ಯ ಸರ್ಕಾರವೇ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಸರ್ಕಾರ ಇನ್ನೂ ಶಾಸಕರನ್ನು ಬಂಧಿಸಿಲ್ಲ. ಸರ್ಕಾರವೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಭದ್ರತೆ ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿನಲ್ಲೇ

ಮಾಡಾಳ್ ವಿರೂಪಾಕ್ಷಪ್ಪ ಬೆಂಗ್ಳೂರಲ್ಲೇ ಇದ್ದಾರೆ, ಸರ್ಕಾರವೇ ರಕ್ಷಣೆ ನೀಡ್ತಿದೆ – ಸಿದ್ದರಾಮಯ್ಯ Read More »