ರಾಜ್ಯ

ರಾಜ್ಯದ ಹಲವೆಡೆ ಬಿರುಸಿನ ಮಳೆ| ಕೃಷಿ ಹಾನಿ; ಕಾಫಿ, ಅಡಿಕೆ ನಷ್ಟ| ಫೆ.2ರವರೆಗೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ದ.ಕ ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿರುಸಿನ ಮಳೆಯಾಗಿದೆ. ಮಡಿಕೇರಿ ನಗರವೂ ಸೇರಿದಂತೆ ಕೊಡಗು ಜಿಲ್ಲೆಯ ಭಾಗಮಂಡಲ, ಸಂಪಾಜೆ ಸಮೀಪದ ಚೆಂಬು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಅಮ್ಮತ್ತಿ, ಸೋಮವಾರಪೇಟೆ ಭಾಗದಲ್ಲಿ ಮಳೆ ಸುರಿದಿದೆ. ಒಣಗಿಸಲು ಕಣದಲ್ಲಿ ಹಾಕಿದ್ದ ಕಾಫಿ ಹಾಗೂ ಕೊಯ್ಲು ಮಾಡಿದ್ದ ಕಾಫಿ ಮಳೆಯಿಂದ ಹಾಳಾಗಿದೆ. ಭಾಗಮಂಡಲದ ಕೆಲವೆಡೆ ಇನ್ನೂ ಭತ್ತದ ಕೊಯ್ಲು ಆಗಿಲ್ಲ. ಮಳೆಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಚದುರಿದಂತೆ […]

ರಾಜ್ಯದ ಹಲವೆಡೆ ಬಿರುಸಿನ ಮಳೆ| ಕೃಷಿ ಹಾನಿ; ಕಾಫಿ, ಅಡಿಕೆ ನಷ್ಟ| ಫೆ.2ರವರೆಗೂ ಮಳೆ ಸಾಧ್ಯತೆ Read More »

ಜ.30: ಜೆಸಿಐ ಜೋಡುಮಾರ್ಗ ಪದಗ್ರಹಣ

ಸಮಗ್ರ ನ್ಯೂಸ್: ಜೇಸಿಐ ಜೋಡುಮಾರ್ಗ ನೇತ್ರಾವತಿಯ 2023 ನೇ ಸಾಲಿನ ಅಧ್ಯಕ್ಷರಾಗಿ JFD ಗಾಯತ್ರಿ ಲೋಕೇಶ್ ರವರು ಆಯ್ಕೆಯಾಗಿದ್ದು, ಪದಗ್ರಹಣ ಸಮಾರಂಭ ಜ.30ರಂದು ನಡೆಯಲಿದೆ. ಘಟಕದ ಕಾರ್ಯದರ್ಶಿಯಾಗಿ ರಮ್ಯ, ಕೋಶಾಧಿಕಾರಿಯಾಗಿ ದೀಪ್ತಿ ಶ್ರೀನಿಧಿ ಹಾಗು ಘಟಕದ ಉಪಾಧ್ಯಕ್ಷರುಗಳಾಗಿ ಸುಬ್ರಹ್ಮಣ್ಯ ಪೈ, ಕಿಶನ್ ಎನ್ ರಾವ್, ಅಮಿತಾ ಹರ್ಷರಾಜ್, ಡಾ.ವಿನಾಯಕ್ ಕೆ.ಎಸ್. ಪ್ರಕಾಶ್ ಆಳ್ವ, ಶ್ರೀನಿಧಿ ಭಟ್ ಆಯ್ಕೆಯಾಗಿರುತ್ತಾರೆ. ಘಟಕದ ಜೇಜೇಸಿ ಅಧ್ಯಕ್ಷರಾಗಿ ರಶ್ಮಿತಾ ಆಯ್ಕೆಯಾಗಿರುತ್ತಾರೆ. ಘಟಕದ ನಿರ್ದೇಶಕರುಗಳಾಗಿ ಹರಿಶ್ಚಂದ್ರ ಆಳ್ವ, ಹರ್ಷರಾಜ್, ಡಾ.ಧೀರಜ್ ಹೆಬ್ರಿ, ರವೀಂದ್ರ ಕುಕ್ಕಾಜೆ

ಜ.30: ಜೆಸಿಐ ಜೋಡುಮಾರ್ಗ ಪದಗ್ರಹಣ Read More »

ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ, ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆ| ಕಾಂಗ್ರೆಸ್ ನಿಂದ ಭರಪೂರ ಕೊಡುಗೆಗಳ ಭರವಸೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಮತದಾರರ ಓಲೈಕೆಗೆ ಭರವಸೆಗಳ ಮೇಲೆ ಭರವಸೆ ನೀಡತೊಡಗಿದೆ. ಈಗಾಗಲೇ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2,000 ರೂ., ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಕೆಜಿ ಅಕ್ಕಿ ವಿತರಿಸುತಾಗಿ ಘೋಷಣೆ ಮಾಡಿರುವ ಕಾಂಗ್ರೆಸ್, ಈಗ ಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಹೇಳಿದೆ. ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವ ಜೊತೆಗೆ ರೈತರು ಮತ್ತು ಸ್ತ್ರೀಶಕ್ತಿ ಸಾಲದ

ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ, ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆ| ಕಾಂಗ್ರೆಸ್ ನಿಂದ ಭರಪೂರ ಕೊಡುಗೆಗಳ ಭರವಸೆ Read More »

LICಯಲ್ಲಿ‌‌ 9394 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಸಂಪೂರ್ಣ ಮಾಹಿತಿ ಇಲ್ಲಿದೆ

ಸಮಗ್ರ ನ್ಯೂಸ್: ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ)ದಲ್ಲಿ ಅಪ್ರೆಂಟಿಸ್‌ ಡೆವಲಪ್‌ಮೆಂಟ್‌ ಆಫೀಸರ್‌ಗಳ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿರುವ ಎಲ್‌ಐಸಿ, ಇಂದಿನಿಂದ ಅರ್ಜಿ ಸ್ವೀಕಾರ ಶುರುಮಾಡಿದೆ. ಒಟ್ಟು 9394 ಹುದ್ದೆಗಳ ಭರ್ತಿಗೆ ಎಲ್‌ಐಸಿ ಈ ನೇಮಕ ಅಭಿಯಾನ ಕೈಗೊಂಡಿದೆ. ಅರ್ಜಿ ಸಲ್ಲಿಕೆ ಶುರು – 21 ಜನವರಿ 2023.ಅರ್ಜಿ ಸಲ್ಲಿಕೆಗೆ ಕೊನೇ ದಿನ – 10 ಫೆಬ್ರವರಿ 2023.ಕಾಲ್‌ ಲೆಟರ್‌ ಡೌನ್‌ಲೋಡ್‌ – 4 ಮಾರ್ಚ್‌ 2023.ಪ್ರಿಲಿಮಿನರಿ ಎಕ್ಸಾಂ ದಿನಾಂಕ –

LICಯಲ್ಲಿ‌‌ 9394 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಸಂಪೂರ್ಣ ಮಾಹಿತಿ ಇಲ್ಲಿದೆ Read More »

ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ

ಸಮಗ್ರ ನ್ಯೂಸ್: ಭಾರತೀಯ ರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ ಮಾಡಿಕೊಡಲಾಗಿದ್ದು, ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 10ನೇ ತರಗತಿ ವಿದ್ಯಾರ್ಹತೆಯೊಂದಿಗೆ ಉದ್ಯೋಗ ಪಡೆಯುವ ಅವಕಾಶವನ್ನ ಭಾರತೀಯ ರೈಲ್ವೇ ಈಗ ಒದಗಿಸುತ್ತಿದೆ. ಗ್ರೂಪ್ ಡಿ ಹುದ್ದೆಗಳ ಪ್ರಕಟಣೆಯ ನಂತ್ರ ಮತ್ತೊಂದು ಬೃಹತ್ ಅಧಿಸೂಚನೆಯನ್ನ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ ಅಧಿಸೂಚನೆಯ ಮೂಲಕ 7,914 ಹುದ್ದೆಗಳನ್ನ ಭರ್ತಿ ಮಾಡಲಾಗುವುದು. ದಕ್ಷಿಣ ಮಧ್ಯ ರೈಲ್ವೆ, ಆಗ್ನೇಯ ರೈಲ್ವೆ, ವಾಯುವ್ಯ ರೈಲ್ವೆ ನೇಮಕಾತಿಗಳನ್ನ ವಲಯಗಳಾದ್ಯಂತ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ

ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ Read More »

ಎರಡು ದಿನ‌ ಕರ್ನಾಟಕದಲ್ಲಿ ಸಾಧಾರಣ ಮಳೆ‌ ಸಾಧ್ಯತೆ |ಹವಾಮಾನ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ಮುಂದಿನ ದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ

ಎರಡು ದಿನ‌ ಕರ್ನಾಟಕದಲ್ಲಿ ಸಾಧಾರಣ ಮಳೆ‌ ಸಾಧ್ಯತೆ |ಹವಾಮಾನ ಇಲಾಖೆ ಮಾಹಿತಿ Read More »

ಕಾವೂರು: 3.56 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭರತ್ ಶೆಟ್ಟಿಯಿಂದ ಗುದ್ದಲಿಪೂಜೆ!

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು 18ನೇ ವಾರ್ಡ್ ನಲ್ಲಿ 3.56 ಕೋಟಿ ರೂ. ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ. ಅವರು ಗುದ್ದಲಿಪೂಜೆ ನೆರವೇರಿಸಿದರು. ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೋದರ್ ಶಾಲೆ, ಮಾಲಾಡಿ ಮಂಜಲ್ ಕಟ್ಟೆ ರಸ್ತೆ, ಚರಂಡಿ ಮತ್ತಿತರ ಕಾಮಗಾರಿಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಬಳಿಕ ಮಾತಾಡಿದ ಶಾಸಕ ಭರತ್ ಶೆಟ್ಟಿ ಅವರು, “ಈ ಭಾಗದ ಜನರಿಗೆ

ಕಾವೂರು: 3.56 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭರತ್ ಶೆಟ್ಟಿಯಿಂದ ಗುದ್ದಲಿಪೂಜೆ! Read More »

2.41 ಕೋ. ರೂ. ಅನುದಾನದಲ್ಲಿ ಬೈಕಂಪಾಡಿಯಲ್ಲಿ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ!

ಸಮಗ್ರ ನ್ಯೂಸ್: ಬೈಕಂಪಾಡಿ 10ನೇ ವಾರ್ಡ್ ಅಭಿವೃದ್ಧಿಗಾಗಿ 2.41 ಕೋಟಿ ರೂ. ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ. ಅವರು ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತಾಡಿದ ಶಾಸಕರು “ಬೈಕಂಪಾಡಿ 10ನೇ ವಾರ್ಡ್ ನಲ್ಲಿ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಣ್ಣಪುಟ್ಟ ಅಡಚಣೆ ಎದುರಾಗುವುದು ಸಹಜ. ಜನರು ಸಹಕಾರ ನೀಡಿದಲ್ಲಿ ಆದಷ್ಟು ಶೀಘ್ರವಾಗಿ ಕಾಮಗಾರಿ ಮುಗಿಯಲಿದೆ” ಎಂದರು. ಸ್ಥಳೀಯ ಕಾರ್ಪೋರೇಟರ್ ಸುಮಿತ್ರಾ ಕರಿಯ,

2.41 ಕೋ. ರೂ. ಅನುದಾನದಲ್ಲಿ ಬೈಕಂಪಾಡಿಯಲ್ಲಿ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ! Read More »

ಉತ್ತರದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಂಭವ| ಕರ್ನಾಟಕದಲ್ಲಿಯೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ ಎರಡ್ಮೂರು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶೀತದ‌ ವಾತಾವರಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಆದರೆ ಜನವರಿ 24 ಮತ್ತು 26 ರ ನಡುವೆ ದೆಹಲಿಯು ಲಘು ಮಳೆ ಮತ್ತು ಮೋಡ ಕವಿದ ಆಕಾಶ ಇರಲಿದೆ ಎಂದು ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ

ಉತ್ತರದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಂಭವ| ಕರ್ನಾಟಕದಲ್ಲಿಯೂ ಮಳೆ ಸಾಧ್ಯತೆ Read More »

ಕಾರ್ಕಳದಲ್ಲಿ ಬಿಜೆಪಿಗೆ ಬಿಗ್ ಶಾಕ್| ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಕಣಕ್ಕೆ

ಸಮಗ್ರ ನ್ಯೂಸ್: ‘ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದು, ಬಿಜೆಪಿಗೆ ಬಾರೀ ಶಾಕ್ ನೀಡಿದ್ದಾರೆ. ಹಾಲಿ ಎಂಎಲ್ಎ ಹಾಗೂ ಸಚಿವ ಸುನಿಲ್ ಕುಮಾರ್ ಗೆ ಇದು ನುಂಗಲಾರದ ತುತ್ತಾಗಿ‌ ಪರಿಣಮಿಸಿದೆ. ಕಾರ್ಕಳದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡುತ್ತಿದ್ದೇನೆ. ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ.

ಕಾರ್ಕಳದಲ್ಲಿ ಬಿಜೆಪಿಗೆ ಬಿಗ್ ಶಾಕ್| ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಕಣಕ್ಕೆ Read More »