ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ. ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ Read More »

ಮೂಡಬಿದಿರೆ ಜಾಂಬೂರಿ ಹಿನ್ನಲೆ| ದ.ಕ ಜಿಲ್ಲೆಯಲ್ಲಿ 3 ದಿನ ಬಸ್ ಸಂಚಾರದಲ್ಲಿ ವ್ಯತ್ಯಯ| ಕೆಎಸ್ಆರ್ ಟಿಸಿ ಯಿಂದ ಪ್ರಕಟಣೆ

ಸಮಗ್ರ ನ್ಯೂಸ್: ಮೂಡುಬಿದಿರೆಯಲ್ಲಿ ಜಾಂಬೂರಿ ನಡೆಯುತ್ತಿದ್ದು, ಈ ಹಿನ್ನೆಲೆ ರಾಜ್ಯ, ಹೊರ ರಾಜ್ಯಗಳಿಂದ ಸ್ಕೌಟ್ಸ್‌ ಮತ್ತು ಗೈಡ್ಸ್‌ನ 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಜಾಂಬೂರಿಗೆ ಆಗಮಿಸಿದ್ದಾರೆ. ಅಲ್ಲದೇ ಅವರ ಜೊತೆಗೆ ಪೋಷಕರು, ಶಿಕ್ಷಕರು ಸಹ ಆಗಮಿಸಿದ್ದಾರೆ. ಇವರೆಲ್ಲರೂ ಜಾಂಬೂರಿ ಮುಗಿಸಿ ತಮ್ಮ ಊರುಗಳಿಗೆ ಹಿಂದಿರುಗುವ ವೇಳೆ ಡಿಸೆಂಬರ್‌ 26ರಿಂದ 28ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಕಾರ್ಯಕ್ರಮ ಮುಗಿಸಿ ತಮ್ಮ ಊರುಗಳಿಗೆ ಹಿಂತಿರುಗುವಾಗ ಮೂಡಬಿದಿರೆಯಿಂದ

ಮೂಡಬಿದಿರೆ ಜಾಂಬೂರಿ ಹಿನ್ನಲೆ| ದ.ಕ ಜಿಲ್ಲೆಯಲ್ಲಿ 3 ದಿನ ಬಸ್ ಸಂಚಾರದಲ್ಲಿ ವ್ಯತ್ಯಯ| ಕೆಎಸ್ಆರ್ ಟಿಸಿ ಯಿಂದ ಪ್ರಕಟಣೆ Read More »

ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಲ್ಲಿ ಇಂದು ಐದನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟರೂ ಪ್ರತಿಭಟನೆಗಳು ಕಮ್ಮಿಯಾಗಿಲ್ಲ. ಇಂದು ಕೂಡ ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಕೊಂಡಸಕೊಪ್ಪ, ಬಸ್ತವಾಡ ಬಳಿ 11 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 2 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಲವ್ ಜಿಹಾದ್ ವಿರುದ್ಧ ವಿಶೇಷ ಪೊಲೀಸ್ ದಳ ಸ್ಥಾಪಿಸಲು ಆಗ್ರಹಿಸಲಿವೆ. ಹಿಂದೂ ಜನ ಜಾಗೃತಿ ಸಮಿತಿ ಗೋವಾದಿಂದ ಪ್ರತಿಭಟನೆ ನಡೆಸಲಿದೆ. ಗಂಟು ರೋಗದಿಂದ ಮೃತಪಟ್ಟ

ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ Read More »

ಇದೇನಾ ನಿಮ್ಮ ಗೋರಕ್ಷಣೆ? ಪೂಜೆ ಮಾಡಿ ಫೋಟೋ ತೆಗೆಸ್ಕೊಂಡರೆ ಗೋರಕ್ಷಣೆ ಆಗ್ಬಿಡುತ್ತಾ? ಸಚಿವ ಚೌಹಾಣ್ ಬೆವರಿಳಿಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಜಾನುವಾರಿನ ಗಂಟು ರೋಗ ವಿಚಾರವಾಗಿ ಪಶು ಸಂಗೋಪನೆ ಇಲಾಖೆ ಕಾರ್ಯನಿರ್ವಹಣೆ ಬಗ್ಗೆ ಪ್ರಶ್ನೆ ಮಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪಶು ಸಂಗೋಪನಾ ಸಚಿವರನ್ನು ಇಕ್ಕಟಿಕೆ ಸಿಲುಕಿಸಿದರು. ಕಳೆದ ಆರು ತಿಂಗಳಿಂದ ದೇಶದಲ್ಲಿ ಜಾನುವಾರಿನ ಚರ್ಮ ರೋಗ ಸಮಸ್ಯೆ ಬಗ್ಗೆ ದಾಖಲೆ ಸಮೇತ ಮಾತಾನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗೋವುಗಳಿಗೆ ಖಾಯಿಲಿ ಹೆಚ್ಚಾಗಿದೆ. ಆರು ತಿಂಗಳುಗಳಿಂದ ಲಸಿಕೆ ಹಾಕುವ ಕೆಲಸ ಮಾಡ್ತಾ ಇದ್ದಾರೆ.

ಇದೇನಾ ನಿಮ್ಮ ಗೋರಕ್ಷಣೆ? ಪೂಜೆ ಮಾಡಿ ಫೋಟೋ ತೆಗೆಸ್ಕೊಂಡರೆ ಗೋರಕ್ಷಣೆ ಆಗ್ಬಿಡುತ್ತಾ? ಸಚಿವ ಚೌಹಾಣ್ ಬೆವರಿಳಿಸಿದ ಸಿದ್ದರಾಮಯ್ಯ Read More »

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಶೀಘ್ರ ಮಾರ್ಗಸೂಚಿ ಪ್ರಕಟ| ಸರ್ಕಾರದಿಂದ ಕೊರೊನಾ ಹೈ ಅಲರ್ಟ್

ಸಮಗ್ರ ನ್ಯೂಸ್: ಕೊರೊನಾ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಮಾರ್ಗಸೂಚಿ ರಚನೆ ಮಾಡಲಾಗುತ್ತದೆ. ಆದರೆ ಈ ಬಗ್ಗೆ ಆತಂಕ ಮಾಡುವುದು ಬೇಡ. ಇಂದಿನ ಸಭೆಯಲ್ಲಿ ಚರ್ಚೆ ನಡೆಸಿದ್ದು, ಹಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಎಎಲ್​​ಐ, ಸಾರಿ ಲಕ್ಷಣಗಳು ಇರುವವರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಕಡ್ಡಾಯ ಮಾಡುವ ನಿರ್ಧಾರ ಮಾಡಲಾಗಿದೆ. ವಿಶೇಷ ಎಂದರೇ, ಒಳಾಂಗಣದಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲು

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಶೀಘ್ರ ಮಾರ್ಗಸೂಚಿ ಪ್ರಕಟ| ಸರ್ಕಾರದಿಂದ ಕೊರೊನಾ ಹೈ ಅಲರ್ಟ್ Read More »

ಶಾಸಕನಿಗೆ ಗೆಟ್ ಲಾಸ್ಟ್ ಎಂದಿದ್ದಕ್ಕೆ ಸದನದ ಅರ್ಧದಿನ ಬಲಿ| ಇಂದು ಮತ್ತಷ್ಟು ವಿಚಾರ ಚರ್ಚೆಗೆ| ಬೆಳಗಾವಿಯಿಂದ ಚಳಿಗಾಲದ ಅಧಿವೇಶನ ನೇರಪ್ರಸಾರ

ಸಮಗ್ರ ನ್ಯೂಸ್: ಶಾಸಕನಿಗೆ ಗದರಿದ ಆಡಳಿತಾರೂಢ ಪಕ್ಷದ ಸಚಿವರು ಗದರಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ಈ ಧರಣಿ ಎರಡು ಬಾರಿ ಸದನ ಮುಂದೂಡಿಕೆಯಾಗುವಂತೆ ಮಾಡಿ ಸರಿ ಸುಮಾರು ಅರ್ಧ ದಿನದ ಕಲಾಪವನ್ನು ಬಲಿ ಪಡೆದುಕೊಂಡ ಘಟನೆ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸಿದ್ದು ಸವದಿ ಪ್ರಶ್ನೆಗೆ ಶ್ರಾರಾಮುಲು ನೀಡಿದ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಪಕ್ಷಗಳ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ

ಶಾಸಕನಿಗೆ ಗೆಟ್ ಲಾಸ್ಟ್ ಎಂದಿದ್ದಕ್ಕೆ ಸದನದ ಅರ್ಧದಿನ ಬಲಿ| ಇಂದು ಮತ್ತಷ್ಟು ವಿಚಾರ ಚರ್ಚೆಗೆ| ಬೆಳಗಾವಿಯಿಂದ ಚಳಿಗಾಲದ ಅಧಿವೇಶನ ನೇರಪ್ರಸಾರ Read More »

ಮಾಜಿ ಸಚಿವ ಶ್ಯಾಮನೂರು ಪುತ್ರನ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ| ಪ್ರತ್ಯೇಕ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಶಾಮನೂರು ಶಿವಶಂಕರಪ್ಪ ಪುತ್ರ ಎಸ್​.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್​ನಲ್ಲಿ 29 ವನ್ಯ ಜೀವಿಗಳು ಪತ್ತೆಯಾಗಿವೆ. ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​ ಮೇಲೆ ನಿನ್ನೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಬ್ಬಾಳದಲ್ಲಿ ಸಂಥೀಲ್ ಎಂಬಾತನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಆರೋಪಿ ಬಳಿ ಕೃಷ್ಣ ಮೃಗದ

ಮಾಜಿ ಸಚಿವ ಶ್ಯಾಮನೂರು ಪುತ್ರನ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ| ಪ್ರತ್ಯೇಕ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ Read More »

ಪದ್ಮಶ್ರೀ ಪುರಸ್ಕೃತ ಗಮಕಿ ಎಚ್.ಆರ್ ಕೇಶವಮೂರ್ತಿ ವಿಧಿವಶ

ಸಮಗ್ರ ನ್ಯೂಸ್: ತನ್ನ ಗಮಕ ಕಲೆಯಿಂದಲೇ ದೇಶದಲ್ಲೇ ಪ್ರಸಿದ್ಧಿ ಪಡೆದಿದ್ದ ಶಿವಮೊಗ್ಗದ ಎಚ್.ಆರ್.ಕೇಶವಮೂರ್ತಿ ಅವರು (88) ಬುಧವಾರ ನಿಧನರಾದರು.ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಢುವುದನ್ನು ರೂಢಿಸಿಕೊಂಡ ಅವರು, 100 ಕ್ಕೂ ಅಧಿಕ ವಿಭಿನ್ನ ರಾಗಗಳಲ್ಲಿ

ಪದ್ಮಶ್ರೀ ಪುರಸ್ಕೃತ ಗಮಕಿ ಎಚ್.ಆರ್ ಕೇಶವಮೂರ್ತಿ ವಿಧಿವಶ Read More »

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಇಂದು ವಿಧಾನಸಭೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಸರಿಯಾಗಿ ಸಾರಿಗೆ ಬಸ್ ಇಲ್ಲದೇ, ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರು ಸಮಸ್ಯೆಗೆ ಸಿಲುಕುವಂತೆ ಆಗಿದೆ. ಕೂಡಲೇ ಸಾರಿಗೆ ಬಸ್ ಸಮಸ್ಯೆಯನ್ನು ಸರಿಪಡಿಸಬೇಕು ಎಂಬುದಾಗಿ ವಿಪಕ್ಷದ ಸದಸ್ಯರು ಸೇರಿದಂತೆ ಹಲವು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು, ಬಸ್ ಗಳಿದ್ದರೂ ಕೆಲವೆಡೆ ಬಸ್ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಮಾರ್ಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದರು. ಸಚಿವರ ಉತ್ತರದ ಬಳಿಕವೂ ತೃಪ್ತಿಗೊಳ್ಳದ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಹೀಗಾಗಿ ಕೆಲ ಕಾಲ ಸದನವನ್ನು

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ Read More »

1ನೇ ತರಗತಿಗೆ ದಾಖಲಾಗಲು 6 ವರ್ಷ ಪೂರ್ಣಗೊಳ್ಳಬೇಕು| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿದ್ದು, 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಾಡಿದೆ. ರಾಜ್ಯ ಸರ್ಕಾರವು 2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು

1ನೇ ತರಗತಿಗೆ ದಾಖಲಾಗಲು 6 ವರ್ಷ ಪೂರ್ಣಗೊಳ್ಳಬೇಕು| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »