ರಾಜ್ಯ

ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಆ ಮಾತನ್ನು ಹಿಂಪಡೆಯುತ್ತೇನೆಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ. ಕುಮಾರಸ್ವಾಮಿಯವರು ಆಕ್ರೋಶಗೊಂಡು ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ಅವರ ಬಗ್ಗೆ ಮಾತನಾಡುತ್ತಾ […]

ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ Read More »

ಪರೇಶ್ ಮೇಸ್ತಾ ಪ್ರಕರಣ| ಕಾಂಗ್ರೆಸ್ ನಿಂದ ಜನಜಾಗೃತಿ ಸಮಾವೇಶ

ಸಮಗ್ರ ನ್ಯೂಸ್: ಐದು ವರ್ಷಗಳ ಹಿಂದೆ ನಡೆದ ಪರೇಶ್‌ ಮೇಸ್ತ ಸಾವಿನ ಪ್ರಕರಣವನ್ನು ಕೊಲೆಯೆಂದು ಬಿಂಬಿಸಿ ತನ್ನ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ತಿರುಗಿಬಿದ್ದಿದ್ದು, ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಹಾಕಿರುವ ಹಿನ್ನೆಲೆಯಲ್ಲಿ ಇದೀಗ ಬಿಜೆಪಿಗೆ ಚುರುಕು ಮುಟ್ಟಿಸಲು ಮುಂದಾಗಿದೆ. ಮೇಸ್ತಾ ಸಾವಿನ ಪ್ರಕರಣದ ಸಿಬಿಐ ಬಿ ರಿಪೋರ್ಟ್ ಮುಂದಿಟ್ಟು ಸಮಾವೇಶ ನಡೆಸಲಾಗುವುದು. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.

ಪರೇಶ್ ಮೇಸ್ತಾ ಪ್ರಕರಣ| ಕಾಂಗ್ರೆಸ್ ನಿಂದ ಜನಜಾಗೃತಿ ಸಮಾವೇಶ Read More »

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್

ಸಮಗ್ರ ನ್ಯೂಸ್: ಕಳಪೆ ಫಾರ್ಮ್‌ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಕೆಎಲ್ ರಾಹುಲ್, ಸಂಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗಿದ್ದಾರೆ. ನವೆಂಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೆ.ಎಲ್. ರಾಹುಲ್‌ಗೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ಈ ಮೊದಲು ಹಲವು ಬಾರಿ ಕೆಎಲ್ ರಾಹುಲ್ ಇಲ್ಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕಳೆದ ಬಾರಿ ಫಾರ್ಮ್ ಕಳೆದು ಕೊಂಡಾಗಲೂ ಇಲ್ಲಿಗೆ ಭೇಟಿ ನೀಡಿದ ನಂತರ ಅವರ ಪ್ರದರ್ಶನ

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್ Read More »

ನಂದಿನಿ‌ ಹಾಲು ಹಾಗೂ ಮೊಸರಿನ ದರದಲ್ಲಿ ಹೆಚ್ಚಳ| ನಾಳೆಯಿಂದಲೇ ನೂತನ ದರ ಜಾರಿ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುವುದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದರೆ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ಈ

ನಂದಿನಿ‌ ಹಾಲು ಹಾಗೂ ಮೊಸರಿನ ದರದಲ್ಲಿ ಹೆಚ್ಚಳ| ನಾಳೆಯಿಂದಲೇ ನೂತನ ದರ ಜಾರಿ Read More »

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ

ಸಮಗ್ರ ನ್ಯೂಸ್: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ದ ಬಿಜೆಪಿ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೇ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಆಡಳಿತ ಪಕ್ಷದ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನಾನೊಬ್ಬ ದಲಿತ ಶಾಸಕ ಎಂಬ ಕಾರಣದಿಂದ ಮೊನ್ನೆ ನನ್ನ ಕ್ಷೇತ್ರದಲ್ಲಿ ನಡೆದ ಘಟನೆ ಸಂಬಂಧ ಸೌಜನ್ಯಕ್ಕೂ ಮಾತನಾಡಿಸಿ

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ Read More »

ಚಿಕ್ಕಮಗಳೂರು : ಕಂದಕಕ್ಕೆ ಬಿದ್ದ ಜೀಪ್ | ಯುುವತಿ ಮೃತ್ಯು

ಸಮಗ್ರ ನ್ಯೂಸ್: ಚಾಲಕಿಯ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಜೀಪ್ ನಲ್ಲಿದ್ದ ಯುವತಿ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಸಂಭವಿಸಿದೆ. ಅಕ್ಷತಾ (35) ಸ್ಥಳದಲ್ಲೇ ಸಾವನ್ನಪ್ಪಿದ ಯುವತಿ. ಈಕೆ ಹೊಸಗದ್ದೆಯಿಂದ ಹೊರನಾಡಿಗೆ ಹೋಗಿದ್ದಾಗ ನಿಯಂತ್ರಣ ಕಳೆದುಕೊಂಡು ಈ ಘಟನೆ ಸಂಭವಿಸಿದೆ. ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು : ಕಂದಕಕ್ಕೆ ಬಿದ್ದ ಜೀಪ್ | ಯುುವತಿ ಮೃತ್ಯು Read More »

ಮಹಿಳೆಯರೇ…ಮುಟ್ಟಿನ ಸಮಯದಲ್ಲಿ ಸ್ಯಾನಿಟರಿ ಉಪಯೋಗ ಮಾಡ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು

ಸಮಗ್ರ ನ್ಯೂಸ್: ಭಾರತದಲ್ಲಿ ಹದಿಹರೆಯಕ್ಕೆ ಕಾಲಿಟ್ಟಿರುವ ಪ್ರತಿ ನಾಲ್ಕು ಹುಡುಗಿಯರಲ್ಲಿ ಮೂವರು ಸ್ಯಾನಿಟರಿ ಪ್ಯಾಡ್‌ಗಳನ್ನು ಬಳಸುತ್ತಾರೆ. ಮುಟ್ಟಿನ ಸಮಯದಲ್ಲಿ, ಸ್ಯಾನಿಟರಿ ಪ್ಯಾಡ್‌ಗಳನ್ನು ಬಳಸಲಾಗುತ್ತದೆ. ಆದರೆ, ಸ್ಯಾನಿಟರಿ ಪ್ಯಾಡ್‌ಗಳಿಗೆ ಸಂಬಂಧಿಸಿದ ಹೊಸ ಅಧ್ಯಯನದಲ್ಲಿ, ಇವುಗಳ ಬಳಕೆಯಿಂದ ಬಂಜೆತನ, ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂಬ ಅಂಶ ಬಹಿರಂಗವಾಗಿದೆ. ಈ ಅಧ್ಯಯನದಲ್ಲಿ ತೊಡಗಿರುವ ಎನ್‌ಜಿಒ ಟಾಕ್ಸಿಕ್ಸ್ ಲಿಂಕ್‌ನ ಕಾರ್ಯಕ್ರಮ ಸಂಯೋಜಕ ಡಾ.ಅಮಿತ್, ಎಲ್ಲೆಡೆ ಸುಲಭವಾಗಿ ಸಿಗುವ ಸ್ಯಾನಿಟರಿ ನ್ಯಾಪ್ಕಿನ್‌ಗಳಲ್ಲಿ ಇಂತಹ ಹಲವು ರಾಸಾಯನಿಕಗಳು ಪತ್ತೆಯಾಗಿದ್ದು, ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು

ಮಹಿಳೆಯರೇ…ಮುಟ್ಟಿನ ಸಮಯದಲ್ಲಿ ಸ್ಯಾನಿಟರಿ ಉಪಯೋಗ ಮಾಡ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು Read More »

ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡದಂತೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ಪಶುಪಾಲನೆ ಮಾಡುತ್ತಾ ಜೀವನ ಮಾಡುತ್ತಿರುವ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೆಎಂಎಫ್‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿ, ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ ಹಾಗೂ ಸಂಬಂಧಿಸಿದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ, ಹಾಲಿನ ದರ

ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡದಂತೆ ಸಿಎಂ ಸೂಚನೆ Read More »

ರಾಜ್ ಕುಂದ್ರಾ ಬ್ಲೂಪಿಲಂ ಮಾಡ್ತಿದ್ದದ್ದು ನಿಜ| ಆರೋಪ ಪಟ್ಟಿ ಸಲ್ಲಿಸಿದ ಮುಂಬೈ ಪೊಲೀಸರು| ಬ್ಲೂಪಿಲಂ ನಟಿಮಣಿಯರು ಯಾರ್ ಗೊತ್ತಾ?

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬ್ಲೂ ಫಿಲಂ ಚಿತ್ರೀಕರಣ ಮಾಡುತ್ತಿದ್ದು ನಿಜ ಎಂದು ಮುಂಬೈ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನಟಿಯರಾದ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾ ಈ ಅಶ್ಲೀಲ ವಿಡಿಯೋಗಳಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ. ರಾಜ್ ಕುಂದ್ರಾ ಒಟಿಟಿಗಾಗಿ ಹೋಟೆಲ್ ಗಳಲ್ಲಿ ಬ್ಲೂ ಫಿಲಂ ತೆಗೆಯುತ್ತಿದ್ದರು. ಅವರೊಂದಿಗೆ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಭಾಗಿಯಾಗಿದ್ದರು ಎಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರ ನಿರ್ಮಾಪಕ ಮೀತಾ

ರಾಜ್ ಕುಂದ್ರಾ ಬ್ಲೂಪಿಲಂ ಮಾಡ್ತಿದ್ದದ್ದು ನಿಜ| ಆರೋಪ ಪಟ್ಟಿ ಸಲ್ಲಿಸಿದ ಮುಂಬೈ ಪೊಲೀಸರು| ಬ್ಲೂಪಿಲಂ ನಟಿಮಣಿಯರು ಯಾರ್ ಗೊತ್ತಾ? Read More »

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕರ ಮೇಲೆ ಹಲ್ಲೆ ನಡೆದ ಸಂಬಂಧ ಪೊಲೀಸರು ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರನ್ನು ಬಂಧಿಸಿದ್ದಾರೆ. ಸೋಮವಾರ ಮುಂಜಾನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮಕ್ಕೆ ಹೋದ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಏನಿದು ಘಟನೆ? ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ರವಿವಾರ ಬೆಳಗ್ಗೆ ಹುಲ್ಲು ಕತ್ತರಿಸಲು ಹೋದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿತ್ತು. ದಾಳಿಯಲ್ಲಿ ಗ್ರಾಮದ ಶೋಭಾ ಸಾವನ್ನಪ್ಪಿದ್ದರು. ಕಾಡಾನೆ ಹಿಡಿಯಬೇಕು

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು Read More »