ರಾಜ್ಯ

ನಾಡಹಬ್ಬ ದಸರಾ ಪ್ರಯುಕ್ತ | ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್‌

ಸಮಗ್ರ ನ್ಯೂಸ್: ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒಂದು ದಿನದ ವಿಶೇಷ ಪ್ಯಾಕೇಜ್ ವ್ಯವಸ್ಥೆ ಕಲ್ಪಿಸಿದೆ. ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ ಸುತ್ತಾಡಲು ಅವಕಾಶವಿದ್ದು, ವಯಸ್ಕರಿಗೆ ₹ 400, ಮಕ್ಕಳಿಗೆ 250 ರೂ ದರ ನಿಗದಿಪಡಿಸಿದೆ. ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. ( ವಯಸ್ಕರಿಗೆ 450ರೂ , […]

ನಾಡಹಬ್ಬ ದಸರಾ ಪ್ರಯುಕ್ತ | ಊಟಿ ಸೇರಿದಂತೆ ವಿವಿಧ ಕಡೆ ಸಾರಿಗೆ ಸಂಸ್ಥೆಯಿಂದ ವಿಶೇಷ ಪ್ಯಾಕೇಜ್‌ Read More »

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯವು ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿ.ವಿ.ಗೆ ಸೇರ್ಪಡೆಯಾಗಲಿದೆ. ಮಂಗಳೂರು ವಿ.ವಿ.ಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದ್ದು, ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿ.ವಿ.ಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿ.ವಿ. ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ Read More »

ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ| ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನೆಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ| ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ Read More »

ಮೈಸೂರು: ಈಬಾರಿಯ ಮಹಿಳಾ ದಸರೆಯ ಸ್ಪೆಷಾಲಿಟಿ ಏನು ಗೊತ್ತೇ?

ಸಮಗ್ರ ನ್ಯೂಸ್: ಮೈಸೂರು ದಸರಾ ಮಹೋತ್ಸವ, ಮಹಿಳಾ ಮತ್ತು ಮಕ್ಕಳ ದಸರಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆ. 27 ರಿಂದ ಅ.1 ರವರೆಗೆ ಮಹಿಳೆಯರಿಗಾಗಿ ಮಹಿಳಾ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಹಿಳಾ ದಸರಾ ಅಂಗವಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ. 27 ರಂದು ಬೆಳಗ್ಗೆ 7:30 ರಿಂದ 9:30 ಗಂಟೆಯವರೆಗೆ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ಭಾಗವಹಿಸಲು

ಮೈಸೂರು: ಈಬಾರಿಯ ಮಹಿಳಾ ದಸರೆಯ ಸ್ಪೆಷಾಲಿಟಿ ಏನು ಗೊತ್ತೇ? Read More »

ಮೈಸೂರು: ಇಂದಿನಿಂದ 90 ದಿನಗಳ ಕಾಲ ನಡೆಯಲಿದೆ ದಸರಾ ವಸ್ತುಪ್ರದರ್ಶನ

ಸಮಗ್ರ ನ್ಯೂಸ್: ಮೈಸೂರು ದಸರಾ ಅಂಗವಾಗಿ ದೊಡ್ಡ ಕೆರೆ ಮೈದಾನದಲ್ಲಿ ಸೆ.26ರಿಂದ 90 ದಿನಗಳವರೆಗೆ ನಡೆಯಲಿರುವ ದಸರಾ ವಸ್ತುಪ್ರದರ್ಶನದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಟ ಪುನೀತ್‌ ರಾಜ್‌ಕುಮಾರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದೆ’ ಎಂದು ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ‘ಸೆ.26ರಂದು ಸಂಜೆ 4ಕ್ಕೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನವನ್ನು ಯಶಸ್ವಿ ಗೊಳಿಸಲು ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಂದರ್ಶಕರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದರು.‘ವಯಸ್ಕರಿಗೆ 30 ರೂ, ಮಕ್ಕಳಿಗೆ

ಮೈಸೂರು: ಇಂದಿನಿಂದ 90 ದಿನಗಳ ಕಾಲ ನಡೆಯಲಿದೆ ದಸರಾ ವಸ್ತುಪ್ರದರ್ಶನ Read More »

ಇಂದು ಪಿತೃಪಕ್ಷದ ಮಹಾಲಯ ಅಮಾವಾಸ್ಯೆ; ಪಿಂಡ ಪ್ರದಾನ ಮಾಡಲು ಕಾವೇರಿ ನದಿ ದಡದಲ್ಲಿ ಸಾವಿರಾರು ಮಂದಿ

ಸಮಗ್ರ ನ್ಯೂಸ್: ಇಂದು ಪಿತೃಪಕ್ಷದ ಮಹಾಲಯ ಅಮಾವಾಸ್ಯೆ ಹಿನ್ನೆಲೆ ರಾಜ್ಯದ ವಿವಿಧ ಮೂಲಗಳಿಂದ ಪಿಂಡ ಪ್ರದಾನ ಮಾಡಲು ಕಾವೇರಿ ನದಿ ದಡಕ್ಕೆ ಆಗಮಿಸಿದ ಸಾವಿರಾರು ಮಂದಿ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದಾರೆ. ಶ್ರೀರಂಗಪಟ್ಟಣದ ಕಾವೇರಿ ನದಿ ತಟದಲ್ಲಿ ಆಸ್ತಿಕರ ಜನ ಜಾತ್ರೆ ನಡೆಯುತ್ತದೆ. ಈ ಹಿನ್ನೆಲೆ ಕಾವೇರಿ ನದಿ ತಟದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದ್ದು, ತಮ್ಮ ಕುಟುಂಬದ ಹಿರಿಯರಿಗೆ ಪಶ್ಚಿಮವಾಹಿನಿ, ಸ್ನಾನಘಟ್ಟ, ಗೋಸಾಯಿಘಾಟ್ ಹಾಗೂ ಸಂಗಮದಲ್ಲಿ ಪಿಂಡ ತರ್ಪಣ ಮಾಡಲಾಗುತ್ತಿದೆ. ಪಿಂಡ ಪ್ರದಾನ ಮಾಡಲು ಕಾವೇರಿ ನದಿ

ಇಂದು ಪಿತೃಪಕ್ಷದ ಮಹಾಲಯ ಅಮಾವಾಸ್ಯೆ; ಪಿಂಡ ಪ್ರದಾನ ಮಾಡಲು ಕಾವೇರಿ ನದಿ ದಡದಲ್ಲಿ ಸಾವಿರಾರು ಮಂದಿ Read More »

108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು

ಸಮಗ್ರ ನ್ಯೂಸ್:  ಆಸ್ಪತ್ರೆಗೆ ದಾಖಲಾಗಬೇಕಿದ್ದ ಮಹಿಳೆಯೊಬ್ಬರು ಆಂಬುಲೆನ್ಸ್ ಸಿಗದೇ ಸಾವನ್ನಪ್ಪಿದ ಘಟನೆಯೊಂದು ತುಮಕೂರಿನಲ್ಲಿ ನಡೆದಿದೆ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದ ಪರಿಣಾಮ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಐಡಿಹಳ್ಳಿಯ 65 ವರ್ಷದ ಜಯಮ್ಮ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬದವರು 108 ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಕರೆ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರೂ ಆಂಬುಲೆನ್ಸ್ ಬಂದಿಲ್ಲ. ಮಧುಗಿರಿ ತಾಲೂಕು ಆರೋಗ್ಯಾಧಿಕಾರಿಗೆ ಕರೆ ಮಾಡಿದ ಜಯಮ್ಮ ಕುಟುಂಬ ಆಂಬುಲೆನ್ಸ್

108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು Read More »

ಎರಡು ದಿನಗಳಿಂದ 108 ಆಂಬುಲೆನ್ಸ್ ಸೇವೆಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ, ಜನರ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ. ಯಾವುದೋ ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ ಯಾರೂ ಸಹ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ತಿಳಿದುಬಂದಿದೆ. ಜಿವಿಕೆ ಏಜನ್ಸಿ ಮೂಲಕ 108 ಆಂಬುಲೆನ್ಸ್ ಸೇವೆ ನಡೆಯುತ್ತಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ತುರ್ತು ಸೇವೆ ಬಂದ್ ಆಗಿದೆ. ಎರಡು ದಿನಗಳಿಂದ ಈ ಸಮಸ್ಯೆಯಾಗಿದ್ದರೂ ಆರೋಗ್ಯ ಇಲಾಖೆಯಾಗಲಿ, ಸರ್ಕಾರವಾಗಲಿ ಈ

ಎರಡು ದಿನಗಳಿಂದ 108 ಆಂಬುಲೆನ್ಸ್ ಸೇವೆಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ, ಜನರ ಆಕ್ರೋಶ Read More »

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ

ಸಮಗ್ರ ನ್ಯೂಸ್ : ಬೆಸ್ಕಾಂನ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದ್ದು, ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ. ಈ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹಾಗೂ ಅರ್ಜಿ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ Read More »

ಸೇತುವೆ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ

ಸಮಗ್ರ ನ್ಯೂಸ್: ಸೇತುವೆ ಬಳಿ ಬೈಕ್ ಬಿಟ್ಟು ಯುವಕನೊಬ್ಬ ನಾಪತ್ತೆಯಾದ ಘಟನೆಯೊಂದು ಪಡುಕೆರೆಯ ಪಾಪನಾಸಿನಿ ನದಿ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನನ್ನು ದಾವಣಗೆರೆ ಮೂಲದ ಶಿವ ಎಂದು ಗುರುತಿಸಲಾಗಿದೆ. ಯುವಕ ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಎಂದು ಹೇಳಲಾಗಿದ್ದು, ಪಾಪನಾಸಿನಿ ನದಿಗೆ ಕಟ್ಟಲಾಗಿರುವ ಸೇತುವೆ ಬಳಿ ಬೈಕ್ ಪತ್ತೆಯಾಗಿದ್ದು, ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ ಯುವಕನಿಗಾಗಿ ಸ್ಥಳೀಯ ಮುಳುಗು ತಜ್ಞರಿಂದ ಶೋಧ ನಡೆಸಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ Read More »