ಮಂಗಳೂರು: ವೈದ್ಯರಿಂದ ಸತ್ತಿದ್ದಾನೆಂದು ಘೋಷಿಸಲ್ಪಟ್ಟ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ
ಸಮಗ್ರ ನ್ಯೂಸ್: ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು, ಅಂತ್ಯಸಂಸ್ಕಾರದ ಕಟ್ಟಿಗೆಯ ಮೇಲೆ ಇಡಬೇಕೆನ್ನುವಷ್ಟರಲ್ಲಿ ಜೀವಂತವಾಗಿದ್ದು, ಕುಟುಂಬಕ್ಕೆ ಶಾಕ್ ಮತ್ತು ಸಂತಸವನ್ನು ನೀಡಿದ ವಿಚಿತ್ರ ಘಟನೆ ನಡೆದಿದೆ. ಏನಿದು ಘಟನೆ?ಅಕ್ಟೋಬರ್ 16 ರಂದು ದೇರಳಕಟ್ಟೆಯ ಯೆನೆಪೊಯ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದ ೬೯ ವರ್ಷದ ರಘುನಾಥ ಗಟ್ಟಿ ಅವರಿಗೆ, ಅಕ್ಟೋಬರ್ 19 ರ ಸಂಜೆ ವೈದ್ಯರು ‘ಮೃತರಾಗಿದ್ದಾರೆ’ ಎಂದು ಘೋಷಿಸಿದರು. ಕುಟುಂಬಸ್ಥರು ಮರುದಿನ ಬೆಳಿಗ್ಗೆ ಮೃತದೇಹವನ್ನು ತೆಗೆದುಕೊಂಡು ಹೋಗುವುದಾಗಿ ತಿಳಿಸಿದ ಬಳಿಕ, ಆಸ್ಪತ್ರೆಯ ಸಿಬ್ಬಂದಿ ರಘುನಾಥ್ […]









