ರಾಜ್ಯ

ರಾಜ್ಯದಲ್ಲಿ ಪ್ರೌಢಶಿಕ್ಷಣ ಹಾಗೂ ಪಿಯು ಶಿಕ್ಷಣ ಇಲಾಖೆ ವಿಲೀನಕ್ಕೆ ಅಸ್ತು

ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ ಸಚಿವರು ‘ ರಾಷ್ಟ್ರೀಯ ಶಿಕ್ಷಣ ನೀರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು. ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ […]

ರಾಜ್ಯದಲ್ಲಿ ಪ್ರೌಢಶಿಕ್ಷಣ ಹಾಗೂ ಪಿಯು ಶಿಕ್ಷಣ ಇಲಾಖೆ ವಿಲೀನಕ್ಕೆ ಅಸ್ತು Read More »

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಪೊಲೀಸರ ದಾಳಿ ನಡೆದ ಬಳಿಕ ಎಲ್ಲ ಕಡೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ಪೊಲೀಸ್‌ ಕಮೀಷನರ್‌ಗಳು, ಎಲ್ಲ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದ

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್ Read More »

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ

ಸಮಗ್ರ ನ್ಯೂಸ್: ಪ್ರಸಿದ್ದ ನಾಗಾರಾಧನಾ ಪುಣ್ಯತಾಣ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಇನ್ನು ಮುಂದೆ ನಡೆಸಲ್ಪಡುವ ‌ಸೇವೆಗಳಿಗೆ 4200 ರೂ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿದ್ದು, ಭಕ್ತಾದಿಗಳಿಗೆ ದರ ಏರಿಕೆ‌ ಬಿಸಿ ತಟ್ಟಿದೆ. ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಶ್ರೀ ದೇವಳದಲ್ಲಿ ಸರ್ಪದೋಷ ನಿವಾರಣೆಗಾಗಿನಡೆಸುವ ಸರ್ಪಸಂಸ್ಕಾರ ಸೇವೆಯ ಸೇವಾ

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ Read More »

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್

ಸಮಗ್ರ ನ್ಯೂಸ್: ಎನ್ ಐ ಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ನನ್ನು ಬಂಧಿಸಿದ್ದಾರೆ. ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ ಐ ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ. ಯಾಸಿರ್ ಹಸನ್ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಿಸಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.‌ ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್ ನಡೆಸುತ್ತಿದ್ದನು ಎಂಬ ಆರೋಪದಡಿ ಅಧಿಕೃತವಾಗಿ ಯಾಸಿರ್ ಹಸನ್ ನ್ನು ಬಂಧಿಸಿ ಕರೆ ತರಲಾಗುತ್ತಿದೆ ಎಂಬ

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್ Read More »

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ಸಾರಿಗೆ ಇಲಾಖೆಯಲ್ಲಿ 2814 ಚಾಲಕ, ನಿರ್ವಾಹಕ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೊಸದಾಗಿ 2814 ಚಾಲಕರು ಹಾಗೂ ನಿರ್ವಾಹಕರ ನೇಮಕಾತಿಗೆ ತೀರ್ಮಾನಿಸಲಾಗಿದೆ. ಸಾರಿಗೆ ಸಚಿವ ಶ್ರೀರಾಮುಲು ವಿಧಾನಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ನಿಂಬಣ್ಣನವರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.ಕೊರೋನಾ ಕಾರಣದಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಚಾಲನೆ ನೀಡಲಾಗಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ. 2814 ಸಿಬ್ಬಂದಿ ನೇಮಕ ಮಾಡಲಾಗುವುದು. ಮತ್ತು ಅಗತ್ಯ ಇರುವ ಕಡೆ ನಿಯೋಜಿಸಲಾಗುವುದು ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ಸಾರಿಗೆ ಇಲಾಖೆಯಲ್ಲಿ 2814 ಚಾಲಕ, ನಿರ್ವಾಹಕ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ Read More »

ಹಿಜಾಬ್ ವಿವಾದ ವಿಚಾರಣೆ ಮುಕ್ತಾಯ| ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಸಮಗ್ರ‌ ನ್ಯೂಸ್: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಹಿಜಾಬ್ ಕುರಿತು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ವಾದ-ಪ್ರತಿವಾದಗಳನ್ನು ಆಲಿಸಿದ್ದು, ತೀರ್ಪು ಕಾಯ್ದಿರಿಸಿದೆ. ಕಳೆದ 10 ದಿನಗಳಿಂದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳಿಗೆ ಅವಕಾಶವಿಲ್ಲ, ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ

ಹಿಜಾಬ್ ವಿವಾದ ವಿಚಾರಣೆ ಮುಕ್ತಾಯ| ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ Read More »

ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ಮುಖಾಮುಖಿ/ವಯಸ್ಸಿನ ಕುರಿತು ಲಘು ಸಂಭಾಷಣೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮುಖಾಮುಖಿಯಾದರು. ಈ ವೇಳೆ ಇಬ್ಬರು ನಾಯಕರು ವಯಸ್ಸಿನ ಕುರಿತು ಲಘು ಸಂಭಾಷಣೆ ನಡೆಸಿದರು. ಮಾಜಿ ಸಿಎಂ ಯಡಿಯೂರಪ್ಪ ಬರುವಾಗ ಎದುರಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಿಕ್ಕಿದ್ದಾರೆ. ಆ ವೇಳೆ ಬಿಎಸ್‍ವೈ ಬಳಿ ಸಿಎಂ, ಸರ್ ಕೌನ್ಸಿಲ್‍ಗೆ ಹೋಗ್ತಾ ಇದ್ದೇನೆ ಎಂದು ಹೇಳಿ ಅಲ್ಲಿಂದ ಹೊರಟಿದ್ದಾರೆ. ಬಳಿಕ ವಿಧಾನ ಸಭೆಯ ಆಡಳಿತ ಪಕ್ಷದ ಮೊಗಸಾಲೆಗೆ ಹೋಗುವ ದಾರಿಯಲ್ಲಿ ಎದುರಿಗೆ ಸಿಕ್ಕ

ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ಮುಖಾಮುಖಿ/ವಯಸ್ಸಿನ ಕುರಿತು ಲಘು ಸಂಭಾಷಣೆ Read More »

ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆ ಸೆ.26 ಕ್ಕೆ ಭೋಜನಕೂಟ ಆಯೋಜನೆ

ಸಮಗ್ರ ನ್ಯೂಸ್ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯೋತ್ಸವ ಕಾರ್ಯಕ್ರಮದ ಯಶಸ್ವಿ ಹಿನ್ನೆಲೆ ಇದೇ ತಿಂಗಳ 26ನೇ ತಾರೀಕಿನಂದು ಭೋಜನಕೂಟವನ್ನು ಆಯೋಜನೆ ಮಾಡಿದ್ದಾರೆ. ಬೆಂಗಳೂರಿನ ಕೊಡವ ಸಮಾಜ ಭವನದಲ್ಲಿ ಮಧ್ಯಾಹ್ನ ಸುಮಾರು 2,000 ಜನರಿಗೆ ಭೋಜನಕೂಟವನ್ನು ಆಯೋಜನೆ ಮಾಡಿದ್ದು ಆಹ್ವಾನಿಸಲಾಗಿದೆ. ಭೋಜನಕೂಟದಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಸಂಸದರು, ಕೆಪಿಸಿಸಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳಿಗೂ ಸಹ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿದೆ.

ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆ ಸೆ.26 ಕ್ಕೆ ಭೋಜನಕೂಟ ಆಯೋಜನೆ Read More »

ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

ಬೆಂಗಳೂರು: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ , ಟೆರಸ್ಸ್‌ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಯ 100ಕ್ಕೂ ಹೆಚ್ಚು

ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ Read More »

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು

ಸಮಗ್ರ ನ್ಯೂಸ್ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನನ್ನು ಪೊಲೀಸರು ಬಂಧಿಸಿದ್ದಾರೆ. ಗಬ್ಬೂರು ಹೋಬಳಿಯ ಬೂರಿನಾಳ ಗ್ರಾಮದ ರೈತ ಸಿದ್ದಯ್ಯ ಪೂಜಾರಿ ತನ್ನ ಸ್ವಂತ ಜಮೀನಿನಲ್ಲಿ ಹತ್ತಿ ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆ ಬೆಳೆದಿದ್ದ. ಮಾಹಿತಿ ಪಡೆದ ಪೋಲಿಸರು ದಾಳಿ ನಡೆಸಿ ಸುಮಾರು 1.49 ಕೆ.ಜಿ ಒಣ ಗಾಂಜಾ, 760 ಗ್ರಾಂ ಹಸಿ ಗಾಂಜಾ ಮತ್ತು 2750 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಗಬ್ಬೂರು ಠಾಣೆಯ ಪೊಲೀಸರು ಆರೋಪಿ

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು Read More »