ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ
ಮಂಗಳೂರು. ಜೂನ್ 7: ರಾಜ್ಯ ಸರ್ಕಾರ ರಾಜ್ಯವನ್ನು ಅನ್‌ಲಾಕ್ ಮಾಡುವುದಕ್ಕೆ ರೂಪುರೇಷೆ ಸಿದ್ಧಪಡಿಸುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಂಗಳವಾರದಿಂದ ಪ್ರತ್ಯೇಕ ಟಫ್ ರೂಲ್ಸ್ ಜಾರಿಯಾಗಲಿದೆ. ಜೂ.8 ರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಹೆಚ್ಚಿನ […]