ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ
ಸಮಗ್ರ ನ್ಯೂಸ್: ಚಲಿಸುತ್ತಿರುವ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಗರದ ಆರ್.ಟಿ.ಓ ಸರ್ಕಲ್ ಬಳಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ.ಬೃಹದಾಕಾರದ ಮರ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯ ಹೆಸರು ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ Read More »








