ರಾಜ್ಯ

ಪ್ರವೀಣ್ ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ!? ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ!!

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ಜರುಗಿದೆ . ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ […]

ಪ್ರವೀಣ್ ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ!? ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ!! Read More »

ದಿನೇಶ್ ಗುಂಡೂರಾವ್ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

ಬೆಂಗಳೂರು: ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ತುಂಬಾ ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಗರದ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರ ದಾಖಲಾಗಿದೆ. ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ ಅವರು ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದ. ಸೆ ೨ ರಂದು ಆತ ಹೊರಗೆ ಹೋದವನು ಮನೆಗೆ ವಾಪಸ್‌ ಬಂದಿಲ್ಲ ಎಂದು ದೂರು ದಾಖಲಾಗಿದೆ. ದಿನೇಶ್‌ ಗುಂಡೂರಾವ್‌ ಆಪ್ತ ಸಹಾಯಕರಿಂದ ಪೊಲೀಸ್‌ ಠಾಣೆಗೆ ದೂರು

ದಿನೇಶ್ ಗುಂಡೂರಾವ್ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ Read More »

ಹಾಲಿನ ಖರೀದಿ ದರ ಹೆಚ್ಚಳ

ಸಮಗ್ರ ನ್ಯೂಸ್ : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದಿಂದ ಸೆ.11ರಿಂದ ಹಾಲಿನ ಖರೀದಿ ದರವನ್ನು ಲೀಟರ್ ಗೆ ರೂ.1 ಹೆಚ್ಚಿಸಲಾಗಿದೆ ಎಂದು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುರುವಾರದಂದು ನಡೆದ ಆಡಳಿತ ಮಂಡಳಿ ಸಭೆಯ ತೀರ್ಮಾನದಂತೆ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ. ರೈತರು ಸದರಿ ದರ ಹೆಚ್ಚಳವನ್ನು ಸದುಪಯೋಗಪಡಿಸಿಕೊಂಡು, ಗುಣಮಟ್ಟದ ಹಾಲು ಉತ್ಪಾದನೆ ಹೆಚ್ಚಿಸಿ ಒಕ್ಕೂಟಕ್ಕೆ ಸರಬರಾಜು ಮಾಡಿ ಎಂದಿನಂತೆ ಒಕ್ಕೂಟದ

ಹಾಲಿನ ಖರೀದಿ ದರ ಹೆಚ್ಚಳ Read More »

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರದಿಂದ ಉದ್ದೇಶಿಸಲಾಗಿದ್ದು, ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2022ರ ಅಕ್ಟೋಬರ್ 09 ರಂದು ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಚಲಿಸುತ್ತಿರುವ ಬೈಕ್ ಮೇಲೆ ಮರದ ರೆಂಬೆ ಬಿದ್ದು, ಕಣ್ಣೆದುರಲ್ಲೇ ಪ್ರಾಣಬಿಟ್ಟ ಪತ್ನಿ

ಸಮಗ್ರ ನ್ಯೂಸ್: ಚಲಿಸುತ್ತಿರುವ ಬೈಕ್ ಮೇಲೆ ಮರ ಬಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. 40 ವರ್ಷದ ರುಕ್ಮಿಣಿ ಶ್ರೀಶೈಲ್ ಮರನೂರ ಮೃತ ದುರ್ದೈವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕುಳಲಿ ಗ್ರಾಮದ ರುಕ್ಮಿಣಿ ಮರನೂರ ತಮ್ಮ ಪತಿ ಜೊತೆ ಬೈಕ್​ ನಲ್ಲಿ ತೆರಳುತ್ತಿದ್ದರು. ಈ ವೇಳೆ ಜೋರಾದ ಗಾಳಿಯಿಂದ ಆಲದ ಮರದ ಕೊಂಬೆ ಇವರ ಮೇಲೆ ಬಿದ್ದಿದೆ. ಘಟನೆಯಲ್ಲಿ ಬೈಕ್​ ನಲ್ಲಿ ಹಿಂಬದಿ ಕುಳಿತಿದ್ದ ರುಕ್ಮಿಣಿ ಮೇಲೆ ಮರದ ರೆಂಬೆ ಬಿದ್ದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.

ಚಲಿಸುತ್ತಿರುವ ಬೈಕ್ ಮೇಲೆ ಮರದ ರೆಂಬೆ ಬಿದ್ದು, ಕಣ್ಣೆದುರಲ್ಲೇ ಪ್ರಾಣಬಿಟ್ಟ ಪತ್ನಿ Read More »

ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದು ಮನೆ ಬಿಟ್ಟು ಹೊರಬಂದ ಗ್ರಾಮಸ್ಥರು

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಭಾರಿ ಮಳೆಯಿಂದ ಬೆಚ್ಚಿಬಿದ್ದಿದ್ದ ರಾಮನಗರ ಜನತೆಗೆ ಇಂದು ಭೂಕಂಪನದ ಅನುಭವವಾಗಿದೆ. ರಾಮನಗರ ಜಿಲ್ಲೆಯ ಹಲವು ಕಡೆಗಳಲ್ಲಿ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಮನಗರ ತಾಲೂಕಿನ 3 ಗ್ರಾಮದಲ್ಲಿ ಭೂಕಂಪನದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಬೆಜ್ಜರಹಳ್ಳಿ ಕಟ್ಟೆ, ಪಾದರಹಳ್ಳಿ, ತಿಮ್ಮಸಂದ್ರದಲ್ಲಿ ಭೂಕಂಪನವಾಗಿದೆ. ಮುಂಜಾನೆ 5.30 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ನಿದ್ದೆಯಲ್ಲಿದ್ದವರು ಕಂಪನದಿಂದ ಆತಂಕಗೊಂಡು ಮನೆಯಿಂದ ಹೊರಗೆ ಓಡಿ ಬಂದು ತಮಗಾದ ಅನುಭವ ಹಂಚಿಕೊಂಡಿದ್ದಾರೆ.

ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದು ಮನೆ ಬಿಟ್ಟು ಹೊರಬಂದ ಗ್ರಾಮಸ್ಥರು Read More »

ಮಗಳ ಹುಟ್ಟುಹಬ್ಬದ ದಿನವೇ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮಗಳ ಹುಟ್ಟುಹಬ್ಬದ ದಿನವೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಆಂಧ್ರ ಪ್ರದೇಶದ ಅಲ್ಲೂರಿ ಸಿತಾರಾಮರಾಜು ಜಿಲ್ಲೆಯಲ್ಲಿ ನಡೆದಿದೆ. ಆನ್​ ಲೈನ್ ಲೋನ್ ಆಯಪ್ ಮಾಲೀಕನ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್​ ಅಧಿಕಾರಿಗಳು, ಕೊಳ್ಳಿ ದುರ್ಗ ರಾವ್ ಹಾಗೂ ರಮ್ಯಾ ಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 6 ವರ್ಷದ ಹಿಂದೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇವರಿಗೆ ನಾಗ ಸಾಯಿ (4), ಲಿಖಿತಾ (2)

ಮಗಳ ಹುಟ್ಟುಹಬ್ಬದ ದಿನವೇ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು Read More »

ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್ : ಕರ್ತವ್ಯ ನಿರತ ಹೆಡ್‌ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ. ನಗರದ ಲಾಡ್ಜ್ ಕೋಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಕಲ್ಯಾಣಿ ಗುಗ್ಗರಿ(45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲ್ಯಾಣಿ, ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನಸ್ಟೇಬಲ್ ಆಗಿದ್ದರು. ಅದಲ್ಲದೇ, ಕಳೆದ ರಾತ್ರಿ ಸುಸ್ತಾಗುತ್ತಿದ್ದರಿಂದ ಮಾತ್ರೆ ತೆಗೆದುಕೊಳ್ಳಲು ಲಾಡ್ಜ್ ನಲ್ಲಿದ್ದ ತಮ್ಮ ಕೋಣೆಗೆ ಹೋಗಿದ್ದರು. ಎದೆ ನೋವು ಕಾಣಿಸಿಕೊಂಡಿದ್ದರಿಂದ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದಿದ್ದರು. ಆದರೆ ನಸುಕಿನ

ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು Read More »

ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು: ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಕೊಲೆಗೈದ ದುಷ್ಕರ್ಮಿಗಳು ಪರಾರಿಯಾದ ಘಟನೆಯೊಂದು ನಗರದ ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ನಡೆದಿದೆ. 60 ವರ್ಷದ ಪ್ರಸನ್ನ ಕುಮಾರಿ ಕೊಲೆಯಾದ ನಿವೃತ್ತ ಶಿಕ್ಷಕಿ. ನಿನ್ನೆ ತಡರಾತ್ರಿ‌ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿದ್ದಾರೆ. ಸದ್ಯ ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಿವೃತ್ತ ಶಿಕ್ಷಕಿ ಪ್ರಸನ್ನ ಕುಮಾರಿ ಅವರು ವಿಜಯವಾಡ ಮೂಲದವರು ಎಂದು ತಿಳಿದುಬಂದಿದೆ.

ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿ Read More »

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ; ಓರ್ವನಿಗೆ ಚಾಕು ಇರಿದು ಕೊಲೆ

ಗದಗ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗಲಾಟೆ ವೇಳೆ ಓರ್ವನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ತೋಂಟದಾರ್ಯ ಮಠದ ಬಳಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ 27 ವರ್ಷದ ಸುದೀಪ್ ಮುಂಡೆವಾಡಿ ಎಂಬ ಯುವಕ ತೀವ್ರ ರಕ್ತಸ್ರಾವದಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ಸುದೀಪ್ ಸ್ನೇಹಿತರಾಗಿದ್ದ ಆದಿತ್ಯ ಮುತಗಾರ ಹಾಗೂ ಐದಾರು ಜನರ ಸ್ನೇಹಿತರು ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಾಲ್ಕು ಜನ ಕೈ ಕಾಲು ಹಿಡಿದುಕೊಂಡು ಹೊಟ್ಟೆ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ; ಓರ್ವನಿಗೆ ಚಾಕು ಇರಿದು ಕೊಲೆ Read More »