ರಾಜ್ಯ

ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು‌ ಹತ್ಯೆಗೆ ಸಂಬಂಧಿಸಿದಂತೆ ಕರಾವಳಿಯಲ್ಲಿ ರಾಷ್ಟ್ರೀಯ ತನಿಖಾ ದಳ ತನ್ನ ಕಾರ್ಯವೈಖರಿಯನ್ನು ಚುರುಕುಗೊಳಿಸಿದ್ದು, ಗುರುವಾರ ಮುಂಜಾನೆ ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದೆ. ಪೊಲೀಸ್ ತನಿಖಾ ವರದಿ ಹೊರಬಿದ್ದ ಮೇಲೂ ಪ್ರವೀಣ್ ನೆಟ್ಟಾರು ಪ್ರಕರಣವನ್ನು ರಾಜ್ಯ ಸರಕಾರ NIA ಗೆ ವಹಿಸಿದೆ‌. ದ.ಕ ಜಿಲ್ಲೆಯಲ್ಲಿ NIA ತನಿಖೆ ಮುಂದುವರಿದಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಸಪ್ಟೆಂಬರ್ 7 ರಂದು SDPI ಹಾಗೂ PFI […]

ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ Read More »

ಇಂದು ಸಂಜೆ ಐಟಿ-ಬಿಟಿ ಕಂಪನಿಗಳ ಜೊತೆಗೆ ಸಚಿವ ಅಶ್ವತ್ಥ ನಾರಾಯಣ ಸಭೆ

ಬೆಂಗಳೂರು: ಐಟಿ-ಬಿಟಿ ಕಂಪನಿಗಳು ಮಳೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಸಂಜೆ 5 ಗಂಟೆಗೆ ನಾನಾ ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರ ಹಾಗೂ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ನಗರ ಪೊಲೀಸ್‌ ಆಯುಕ್ತರೂ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಸಚಿವ ಅಶ್ವತ್ತ ನಾರಾಯಣ ಈ ಸಭೆಯ ನೇತೃತ್ವವಹಿಸಲಿದ್ದಾರೆ.ಸರ್ಕಾರ ಕರೆದಿರುವ ಈ

ಇಂದು ಸಂಜೆ ಐಟಿ-ಬಿಟಿ ಕಂಪನಿಗಳ ಜೊತೆಗೆ ಸಚಿವ ಅಶ್ವತ್ಥ ನಾರಾಯಣ ಸಭೆ Read More »

ಶಿಕ್ಷಕರಿಗೆ  ಬಯೋಮೆಟ್ರಿಕ್ ಹಾಜರಿ ಕಡ್ಡಾಯ; ಶಾಲೆ ಆರಂಭಕ್ಕೆ 15 ನಿಮಿಷ ಮೊದಲು ಹಾಜರಿರುವಂತೆ ಸೂಚನೆ

ಸಮಗ್ರ ನ್ಯೂಸ್ : ಕೆಲವು ಶಾಲೆಗಳಲ್ಲಿ ಶಿಕ್ಷಕರು ಮಾಹಿತಿ ನೀಡದೆ ಗೈರು ಹಾಜರಾಗುತ್ತಿರುವುದು, ಅಲ್ಲದೆ ತಡವಾಗಿ ಶಾಲೆಗೆ ಬರುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಿ ಕಡ್ಡಾಯಗೊಳಿಸಲಾಗಿದ್ದು, ಜೊತೆಗೆ ಶಾಲೆ ಆರಂಭಕ್ಕೂ 15 ನಿಮಿಷ ಮೊದಲು ಹಾಜರಿರುವಂತೆ ಸೂಚಿಸಲಾಗಿದೆ. ಜೊತೆಗೆ ರಜೆ ಮೇಲೆ ತೆರಳುವಾಗ ಮೇಲಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳುವುದು ಅಗತ್ಯವಾಗಿದೆ. ಶಾಲೆಗಳಲ್ಲಿರುವ ಬಯೋಮೆಟ್ರಿಕ್ ಯಂತ್ರ ಸುಸ್ಥಿತಿಯಲ್ಲಿರುವ ಕುರಿತು ಶಾಲಾ ಮುಖ್ಯಸ್ಥರು ಮತ್ತು ಸ್ಥಳೀಯ ಅಧಿಕಾರಿಗಳು ಪರಿಶೀಲಿಸುತ್ತಿರಬೇಕು ಎಂದು ತಿಳಿಸಲಾಗಿದ್ದು,

ಶಿಕ್ಷಕರಿಗೆ  ಬಯೋಮೆಟ್ರಿಕ್ ಹಾಜರಿ ಕಡ್ಡಾಯ; ಶಾಲೆ ಆರಂಭಕ್ಕೆ 15 ನಿಮಿಷ ಮೊದಲು ಹಾಜರಿರುವಂತೆ ಸೂಚನೆ Read More »

ವೈದ್ಯಕೀಯ ಶಿಕ್ಷಣ ಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ : 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು “ಕೇಂದ್ರೀಯ ಸೈನಿಕ ಮಂಡಳಿ” ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಚಿಸುವವರು, ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 20 ದಿನಗಳೊಳಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರ ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ ಆನ್‍ಲೈನ್ ಮೂಲಕ ಕೆ.ಎಸ್.ಬಿ

ವೈದ್ಯಕೀಯ ಶಿಕ್ಷಣ ಕ್ಕಾಗಿ ಅರ್ಜಿ ಆಹ್ವಾನ Read More »

ಬಾಲಕನಿಗೆ ಶಾಲೆಯಲ್ಲಿ ಹಾವು ಕಚ್ಚಿ ಗಂಭೀರ ಗಾಯ, ಆಸ್ಪತ್ರೆ ದಾಖಲು

ಸಮಗ್ರ ನ್ಯೂಸ್: ಶಾಲೆಯಲ್ಲಿ ಹಾವು ಕಚ್ಚಿ 12 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಅಲ್ಫಾಝ್ ಸರ್ತಾಝ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ 3:30ರ ಸುಮಾರಿಗೆ ಈ ಘಟನೆ ನಡೆದಿದೆ.‌ ಮುರ್ಡೇಶ್ವರ ನ್ಯಾಷನಲ್ ಕಾಲನಿಯಲ್ಲಿರುವ ಸರ್ಕಾರಿ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತರಗತಿಯಲ್ಲಿದ್ದ ವೇಳೆ ಕಿಟಕಿಯ ಹೊರಗೆ ಪೆನ್ಸಿಲ್‌ ಬಿದ್ದಿದ್ದು, ಅದನ್ನು ತರಲು ಹೊರಗೆ ಹೋಗುತ್ತಿದ್ದ ವೇಳೆ ಹಾವು ಬಾಲಕನ ಕಾಲಿಗೆ ಕಚ್ಚಿತು ಎಂದು ತಿಳಿದುಬಂದಿದೆ. ಕೂಡಲೇ ವಿದ್ಯಾರ್ಥಿಯನ್ನು ಮುರ್ಡೇಶ್ವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಭಟ್ಕಳ

ಬಾಲಕನಿಗೆ ಶಾಲೆಯಲ್ಲಿ ಹಾವು ಕಚ್ಚಿ ಗಂಭೀರ ಗಾಯ, ಆಸ್ಪತ್ರೆ ದಾಖಲು Read More »

ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಕಡ್ಡಾಯ ಧರಿಸಿ; ಯಾಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕಾರಿನ ಸೀಟ್ ಬೆಲ್ಟ್‌ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಮಂಗಳವಾರ ಹೇಳಿದ್ದಾರೆ. ಕಾರ್ಯಕ್ರಮವೊಂದರ ವಿಡಿಯೋವನ್ನು ಹಂಚಿಕೊಂಡ ಕೇಂದ್ರ ಸಚಿವರು, ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. “ಕಾರಿನಲ್ಲಿ ಕುಳಿತುಕೊಳ್ಳುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದನ್ನು ಈಗ ಕಡ್ಡಾಯಗೊಳಿಸಲಾಗುವುದು” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ. ಮುಂಭಾಗದ ಸೀಟ್‌ಗಳ ಜೊತೆಗೆ

ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಕಡ್ಡಾಯ ಧರಿಸಿ; ಯಾಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಕರ್ನಾಟಕದಲ್ಲಿ ಸೆ.7ರಿಂದ 9ರವರೆಗೆ ಭಾರೀ ಮಳೆ ಸಾಧ್ಯತೆ| ಕರಾವಳಿ, ಮಲೆನಾಡಿನಲ್ಲಿ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸೆ. 7ರಿಂದ ಸೆ. 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 9 ಅಂದರೆ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ

ಕರ್ನಾಟಕದಲ್ಲಿ ಸೆ.7ರಿಂದ 9ರವರೆಗೆ ಭಾರೀ ಮಳೆ ಸಾಧ್ಯತೆ| ಕರಾವಳಿ, ಮಲೆನಾಡಿನಲ್ಲಿ ಅಲರ್ಟ್ ಘೋಷಣೆ Read More »

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್‌ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್‌. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು Read More »

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ‌ ನ್ಯೂಸ್: ಅರಣ್ಯ ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ ಸಂಭವಿಸಿದೆ. ಇಂದಿಡೀ ದಿನ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು, ಅವರ ಸಹಾಯಕರು ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಅವರನ್ನು ಪರೀಕ್ಷಿಸಿದ ವೈದ್ಯರು ಸದ್ಯ ತುರ್ತು ನಿಗಾ ಘಟಕಕ್ಕೆದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಚಿವರಿಗೆ ಈ ಹಿಂದೆಯೂ

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ| ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ನಲ್ಲಿ ಏಳನೇ ವೇತನ ಆಯೋಗ ರಚಿಸಲಾ ಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನ ಸೌಧದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮಾಹಿತಿ ನೀಡಿದರು. ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ| ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ Read More »