ರಾಜ್ಯ

ಪ.ಪೂ ಕಾಲೇಜುಗಳ‌ ಮಧ್ಯಂತರ ರಜೆ ಒಂದು ದಿನ ವಿಸ್ತರಿಸಿ ಸರ್ಕಾರ ಆದೇಶ

ಸಮಗ್ರ‌ ನ್ಯೂಸ್: ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಲ್ಲದೇ ಅಕ್ಟೋಬರ್ 14ರಿಂದ ಕಾಲೇಜುಗಳನ್ನು ಪುನರಾರಂಭಿಸಲು ಸೂಚಿಸಲಾಗಿದೆ. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಮಧ್ಯಂತರ ರಜೆಯನ್ನು ದಿನಾಂಕ 01-10-2022 ರಿಂದ 12-10-2022ರವರೆಗೆ ನಿಗದಿ ಪಡಿಸಲಾಗಿತ್ತು ಎಂದು […]

ಪ.ಪೂ ಕಾಲೇಜುಗಳ‌ ಮಧ್ಯಂತರ ರಜೆ ಒಂದು ದಿನ ವಿಸ್ತರಿಸಿ ಸರ್ಕಾರ ಆದೇಶ Read More »

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಗೀತೆಗೆ ಅಪಮಾನ ಆರೋಪದ ಮೇಲೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ಬಿಜೆಪಿ ಈ ದೂರು ನೀಡಿದ್ದು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿಗೆ ದೂರು ಸಲ್ಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಎಂಎಲ್‌ಸಿಗಳಾದ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಇಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಅವ್ರಿಗೆ ದೂರು ಸಲ್ಲಿಸಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು Read More »

ಕೇರಳ; ಭಾರಿ ಮಳೆಗೆ ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು

ಕೇರಳ: ಒಂದೇ ಕುಟುಂಬದ ಐವರು ಭೂಕುಸಿತದಿಂದ ಸಾವಿಗೀಡಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಥೋಡುಪೊಜಾ ಬಳಿ ನಡೆದಿದೆ. ಕಂಜಾರ್‌ ನಿವಾಸಿಗಳಾದ ಥಂಕಮ್ಮ(80),ಪುತ್ರ ಸೋಮನ್‌ (52)ಪತ್ನಿ ಶಾಜಿ(50),ಪುತ್ರಿ ಶಿಮಾ(30) ಮತ್ತು ದೇವಾನಂದ್‌(5)ಮೃತಪಟ್ಟ ದುರ್ದೈವಿಗಳು. ಮುಂಜಾನೆ ಮೂರರ ಸುಮಾರಿಗೆ ಘಟನೆ ನಡೆದಿದೆ. ಮೃತದೇಹಗಳನ್ನು ಅವಶೇಷಗಳಡಿಯಿಂದ ತೆಗೆಯಲಾಗಿದೆ. ಪರ್ವತ ಪ್ರದೇಶವಾದ ಇಡುಕ್ಕಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಕಾಸರಗೋಡು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕೊಟ್ಟಾಯಂ,ನೆಡುಕುನ್ನಮನ್‌,ಕರುಕಾಚಲ್‌ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿ

ಕೇರಳ; ಭಾರಿ ಮಳೆಗೆ ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು Read More »

ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು

ಬೆಂಗಳೂರು: ಬಿಎಂಟಿಸಿ ಚಾಲಕ ನೇಣಿಗೆ ಶರಣಾದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರ ಬಸ್ ಡಿಪೋ 21 ರ ಬಿಎಂಟಿಸಿ ಬಸ್​ ಚಾಲಕ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆಯೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅನೇಕ ಬಿಎಂಟಿಸಿ ನೌಕರರು ಸಾವಿಗೆ ಶರಣಾಗಿದ್ದರು. ಅದರಂತೆ ಹೊಳೆಬಸಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ತಿಂಗಳ ಕಳೆದ 21 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು Read More »

ಸಾರ್ವಜನಿಕ ಸ್ಥಳ ಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ; ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ವಸತಿ ಸಮುಚ್ಚಯಗಳ ಸಾಮಾನ್ಯ ಪ್ರದೇಶಗಳು, ಛತ್ರಗಳು, ಚಿತ್ರಮಂದಿರಗಳು, ಶಾಪಿಂಗ್‌ ಮಾಲ್‌ಗಳು, ಬಸ್‌, ಮೆಟ್ರೊ ರೈಲು, ರೈಲುಗಳು ಮತ್ತು ಇತರ ಸಾಮಾನ್ಯ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ

ಸಾರ್ವಜನಿಕ ಸ್ಥಳ ಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ; ಆರೋಗ್ಯ ಇಲಾಖೆ Read More »

ರಾಜ್ಯದಲ್ಲಿ ಮೂರು ದಿನ ಮಹಾಮಳೆ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಗೌರಿ ಗಣೇಶದ ಹಬ್ಬದ ಹೊತ್ತಲ್ಲೇ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಭಾರಿ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರದಿಂದ ಮೂರು ದಿನಗಳ ಕಾಲ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ,

ರಾಜ್ಯದಲ್ಲಿ ಮೂರು ದಿನ ಮಹಾಮಳೆ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »

ಭಾರೀ ಮಳೆಗೆ ಮುಳುಗಿದ ರಾಮನಗರ| ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಧ್ಯರಾತ್ರಿಯಿಂದ ಇಂದು ಬೆಳಗ್ಗೆವರೆಗೆ ಸುರಿದ ಕುಂಭದ್ರೋಣ ಮಳೆಗೆ ರಾಮನಗರ, ಕನಕಪುರ, ಚನ್ನಪಟ್ಟಣ ತಾಲ್ಲೂಕುಗಳಲ್ಲಿ ಅವಾಂತರವೇ ಸೃಷ್ಟಿಯಾಗಿದ್ದು, ಜನರು ತತ್ತರಿಸುವಂತಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರು, ಮೈಸೂರು ರಸ್ತೆಯ ಹೆದ್ದಾರಿಯಲ್ಲಿ ನೀರು ತುಂಬಿದ್ದು, ಬಸ್ಸು, ಕಾರು ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಿ ತೇಲುತ್ತಿದ್ದವು. ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿ, ಬಸವನಪುರ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯ ಅಂಡರ್‍ಪಾಸ್‍ನಲ್ಲಿ ನೀರು ತುಂಬಿದ್ದು, ವಾಹನಗಳು ಮುಳುಗಡೆಯಾಗಿವೆ. ಎರಡೂ ಕಡೆಯೂ ಟ್ರಾಫಿಕ್‍ಜಾಮ್ ಉಂಟಾಗಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ರಸ್ತೆಯಲ್ಲೇ ನಿಂತಿದ್ದವು. ಇಂದರಿಂದ

ಭಾರೀ ಮಳೆಗೆ ಮುಳುಗಿದ ರಾಮನಗರ| ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಬಾಲಕಿಯರ ‌ಮೇಲೆ ಲೈಂಗಿಕ ದೌರ್ಜನ್ಯ| ಪೋಕ್ಸೋ ಕಾಯ್ದೆಯಡಿ ಮುರುಘಾ ಮಠ‌ ಶಿವಮೂರ್ತಿ ಶರಣರು ಅರೆಸ್ಟ್

ಸಮಗ್ರ ನ್ಯೂಸ್: ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಗಂಭೀರ ಆರೋಪಕ್ಕೆ ಗುರಿಯಾಗಿದ್ದು, ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಶನಿವಾರ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮೂಲಕ ದಾಖಲಾದ ಲೈಂಗಿಕ ಕಿರುಕುಳ ದೂರಿನ ಹಿನ್ನೆಲೆ ಪೋಕ್ಸೋ ಪ್ರಕರಣ‌ ದಾಖಲಾಗಿದೆ. ಶ್ರೀಗಳ ಬಂಧನದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿರುವ ಮುರುಘಾ ಮಠದ ಮುಂಬಾಗ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶ್ರೀಗಳನ್ನು ಪೊಲೀಸ್ ಬಿಗಿ

ಬಾಲಕಿಯರ ‌ಮೇಲೆ ಲೈಂಗಿಕ ದೌರ್ಜನ್ಯ| ಪೋಕ್ಸೋ ಕಾಯ್ದೆಯಡಿ ಮುರುಘಾ ಮಠ‌ ಶಿವಮೂರ್ತಿ ಶರಣರು ಅರೆಸ್ಟ್ Read More »

ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ‌ನ್ಯೂಸ್

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ತಲಾ 265 ರೂ, ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ 295 ರೂ ಮತ್ತು 9, 10 ನೇ ತರಗತಿಯ ವಿದ್ಯಾರ್ಥಿಗಳಿಗೆ

ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ‌ನ್ಯೂಸ್ Read More »

ದೇವರಕೊಲ್ಲಿ ಬಳಿ ಗುಡ್ಡ ಕುಸಿತ| ಸಂಚಾರಕ್ಕೆ ಅಡಚಣೆ

ಸಮಗ್ರ ನ್ಯೂಸ್: ಸಂಪಾಜೆ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಎರಡು ಕಡೆ ಭೂ ಕುಸಿತ ಉಂಟಾಗಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಹಿನ್ನೆಲೆ ಸಂಪರ್ಕ ಕಡಿತವಾಗಿದ್ದು ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿವೆ. ಮಣ್ಣಿನೊಂದಿಗೆ ರಸ್ತೆ ಮೇಲೆ‌ ಮರಗಳು ಬಂದು ಬಿದ್ದಿದ್ದು, ರಸ್ತೆಯಲ್ಲಿ ಬಿದ್ದಿರುವ ಮರವನ್ನು ಪ್ರಯಾಣಿಕರು ತೆರವುಗೊಳಿಸಿದರು. ಕೊಡಗಿನ ದೇವರಕೊಲ್ಲಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆಗಳಲ್ಲಿ ಭೂಕುಸಿತದ ಪರಿಣಾಮ,

ದೇವರಕೊಲ್ಲಿ ಬಳಿ ಗುಡ್ಡ ಕುಸಿತ| ಸಂಚಾರಕ್ಕೆ ಅಡಚಣೆ Read More »