ರಾಜ್ಯ

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ

ಬೆಂಗಳೂರು.ಮೇ.21: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮುಂದುವರಿದಿದ್ದು ಈ ನಿಟ್ಟಿನಲ್ಲಿ ಮುಂದಿನ ಎರಡು ವಾರ ಲಾಕ್ ಡೌನ್ ಮಾಡುವುದು ಬಹುತೇಕ ಖಚಿತವಾಗಿದೆ.ವಿಧಾನಸೌಧದಲ್ಲಿಂದು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಒಮ್ಮತ ಅಭಿಪ್ರಾಯ ವ್ಯಕ್ತವಾಗಿದೆ. ವಿಪತ್ತು ನಿರ್ವಹಣಾ ಸಮಿತಿ ಯ ಅಧಿಕಾರಿಗಳು ರಾಜ್ಯದ ಸ್ಥಿತಿಗತಿಯ ಬಗ್ಗೆ ಗಂಭೀರ ಪ್ರಸ್ತಾಪ ಮಾಡಿದ್ದು, ರಾಜ್ಯದ ಭವಿಷ್ಯದ ದೃಷ್ಟಿಯಿಂದ 15 ದಿನ ಲಾಕ್ ಡೌನ್ ಬೇಕು ಎಂದು ಒತ್ತಾಯಿಸಿದ್ದಾರೆ. ಲಾಕ್ ಡೌನ್ ತೆರವಿನಿಂದ […]

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ Read More »

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ

ಬೆಂಗಳೂರು, ಮೇ ೨೧: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗಿ ಆಂಬ್ಯುಲೆನ್ಸ್ಗಳು ಬೇಕಾ ಬಿಟ್ಟಿ ಬಾಡಿಗೆಗಳನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಉದ್ದೇಶದಿಂದ ಖಾಸಗಿ ಆಂಬ್ಯುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಂಬ್ಯುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದ್ದು, ಸಾಮಾನ್ಯ ಆಂಬ್ಯುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆಂಬ್ಯುಲೆನ್ಸ್)ಮೊದಲ ೧೦ ಕಿ.ಮೀಟರ್‌ಗಳಿಗೆ ೧೫೦೦ ರೂ.ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. ೧೦ ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ ೧೨೦ ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್,

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ Read More »

ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….!

ತಿರುವನಂತಪುರಂ: ಕೇರಳ ರಾಜ್ಯದ ಮುಖ್ಯಮಂತ್ರಿ ಎರಡನೇ ಬಾರಿಗೆ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ತಿರುವನಂತಪುರಂನ ಸ್ಟೇಡಿಯಂ ಒಂದರಲ್ಲಿ ಕೇರಳ ಹೈಕೋರ್ಟ್ ಆದೇಶದಂತೆ ಸರಳವಾಗಿ ನಡೆದ ಸಮಾರಂಭದಲ್ಲಿ ಎಲ್ ಡಿ ಎಫ್ ಮೈತ್ರಿಕೂಟದ ಇತರೆ 20 ಸಚಿವರೊಂದಿಗೆ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿರೋಧ ಪಕ್ಷ ಯುಡಿಎಫ್ ಸದಸ್ಯರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು, ಕೋರ್ಟ್ ಆದೇಶವನ್ನು ಪಾಲಿಸುವ ದೃಷ್ಟಿಯನ್ನು ಹಾಜರಾಗಿಲ್ಲ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಸ್ಪಷ್ಟೀಕರಿಸಿದ್ದಾರೆ. ಹೊಸಬರಿಗೆ ಸಚಿವಸ್ಥಾನ ನೀಡಲಾಗಿದ್ದರೂ, ಕಳೆದ ಬಾರಿ ರಾಜ್ಯ ಸರ್ಕಾರದಲ್ಲಿ ಆರೋಗ್ಯ

ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….! Read More »

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಬಾಬಾಗೌಡ ಪಾಟೀಲ್ ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಬಾಬಾಗೌಡ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಬೆಳಗಾವಿಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಪಾಟೀಲ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ Read More »

ಸರ್ಕಾರ ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ: ಡಿಕೆಶಿ

ಬೆಂಗಳೂರು: ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲೆಲ್ಲಿ, ಯಾವ ಆಸ್ಪತ್ರೆಯಲ್ಲಿ ಏನೆಲ್ಲಾ ಅನಾಹುತ ನಡೆಯುತ್ತಿದೆ ಎಂಬ ಮಾಹಿತಿ ನನಗೆ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು. ಇದು ಸಂವಿಧಾನ ಬದ್ಧವಾಗಿ ಬಂದಿರುವ ಹುದ್ದೆ, ಅಧಿಕಾರ. ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಜಿಲ್ಲೆ ಪ್ರವಾಸ ಮಾಡಿ ಅಧಿಕಾರಿಗಳ ಜತೆ ಸಭೆ ಮಾಡಿಲ್ಲವೇ? ಈ ಸಂಕಷ್ಟದ ಸಮಯದಲ್ಲಿ

ಸರ್ಕಾರ ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ: ಡಿಕೆಶಿ Read More »

ಕ್ರೈಸ್ತರ ಅವಹೇಳನ ; ಸಂಸದೆ ಶೋಭಾ ವಿರುದ್ಧ ಎಫ್ಐಆರ್

ಮಂಗಳೂರು, ಮೇ 20: ಕ್ರೈಸ್ತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ, ಎಐಸಿಸಿ ಕಾರ್ಯದರ್ಶಿ ಐವನ್ ಡಿ’ಸೋಜ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಲಸಿಕೆ ಪಡೆಯದಂತೆ ಕ್ರೈಸ್ತ ಸಮುದಾಯಕ್ಕೆ ಚರ್ಚ್ ಕಡೆಯಿಂದ ಸೂಚನೆ ನೀಡಲಾಗಿದೆ ಎಂದು ಸಂಸದೆ ಶೋಭಾ ಹೇಳಿಕೆ ನೀಡಿದ್ದಾಗಿ ಸುದ್ದಿಯಾಗಿತ್ತು. ಈ ಬಗ್ಗೆ ಕ್ರೈಸ್ತ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಎಂಎಲ್ಸಿ ಐವನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ

ಕ್ರೈಸ್ತರ ಅವಹೇಳನ ; ಸಂಸದೆ ಶೋಭಾ ವಿರುದ್ಧ ಎಫ್ಐಆರ್ Read More »

ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್

ಕಳೆದೆರಡು ವಾರದಿಂದ ಕೊರೊನ ಕಂಟ್ರೋಲ್ ಗಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಹೇರಿದ್ದು, ಹಲವು ವರ್ಗಗಳ ಜನರ, ಕಾರ್ಮಿಕರ ಜೀವನ ದುರ್ಬರವಾಗಿದೆ. ಹಲವಾರು ಕುಟುಂಬಗಳು ತುತ್ತು ಅನ್ನಕ್ಕಾಗಿ ಬೀದಿಗೆ ಬಂದಿದ್ದರೆ, ಮಧ್ಯಮ ವರ್ಗದ ಜನ ಅತ್ತ ನುಂಗಲೂ ಆಗದೆ, ಇತ್ತ ಉಗುಳಲೂ ಆಗದೇ ಕಷ್ಟ ಪಡುತ್ತಿದ್ದಾರೆ. ಹಲವು ಯುವಬಳಗ ಕೆಲಸ ಕಳೆದು ಬೀದಿಗೆ ಬಂದಿದ್ದು, ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಕಷ್ಟಕ್ಕೊಳಗಾದ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಪ್ಯಾಕೇಜ್ ಮೊಣಕೈಗೆ ತುಪ್ಪ ಸವರಿದಂತಾಗಿದೆ. ಬೆಂಗಳೂರು

ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್ Read More »

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ

ಬೆಂಗಳೂರು:  ಬಹುನಿರೀಕ್ಷಿತ ರಷ್ಯಾದ ಸ್ಫುಟ್ನಿಕ್ ವಿ ಲಸಿಕೆ ಮೇ ಅಂತ್ಯ ವೇಳೆಗೆ ಬೆಂಗಳೂರಿನಲ್ಲಿ ಲಭ್ಯವಾಗುವ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಲಸಿಕೆ ಕೊರತೆ ಎದ್ದು ಕಾಣುತ್ತಿದ್ದು, ರಷ್ಯಾದ ಲಸಿಕೆ ಲಭ್ಯವಾದರೆ ಲಸಿಕೆಯ ಕೊರತೆ ಸ್ವಲ್ಪ ಮಟ್ಟಿಗೆ ಸುಧಾರಿಸಬಹುದು ಎಂದು ಅಭಿಪ್ರಾಯಿಸಲಾಗಿದೆ ಸ್ಪುಟ್ನಿಕ್ ಲಸಿಕೆ ಅಭಿಯಾನವನ್ನು ಆರಂಭಿಸುವ ಸಂಬಂಧ ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಡಾ. ರೆಡ್ಡೀಸ್ ಲ್ಯಾಬ್ ಸೋಮವಾರ ಒಪ್ಪಂದ ಮಾಡಿಕೊಂಡಿದ್ದು, ಶೀಘ್ರದಲ್ಲೇ ಬೆಂಗಳೂರಿನಲ್ಲಿರುವ ಎಲ್ಲಾ ಅಪೋಲೋ ಆಸ್ಪತ್ರೆಗಳಲ್ಲೂ ಲಸಿಕೆ ಲಭ್ಯವಾಗಲಿದೆ. ಲಸಿಕೆಯ ದರ ರೂ.1,200 ರಿಂದ 1,250 ರಲ್ಲಿ

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ Read More »

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ

ಬೆಂಗಳೂರು:ಮೇ.19: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ Read More »

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ

ಬೆಂಗಳೂರು: ದೇಶದಲ್ಲಿ ಲಸಿಕೆ ಅಭಿಯಾನ ಸರಿಯಾಗಿ ಆಗದೇ ಇರೋದಕ್ಕೆ ಮತ್ತು ಅಪಪ್ರಚಾರ ಮಾಡಿದ್ದು, ಜನರಿಗೆ ಭಯ ಹುಟ್ಟಲು ಕಾಂಗ್ರೆಸ್ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ನೀಡಲು ೧೦೦ ಕೋಟಿ ರೂ. ಕೊಡುವುದಾಗಿ ಹೇಳುತ್ತಿರೋ ಕಾಂಗ್ರೆಸ್ ವರ್ತನೆಗೆ ಕಿಡಿಕಾರಿದರು. ಕಾಂಗ್ರೆಸ್ ಶಾಸಕರು ಅ ಹಣವನ್ನು ಕೈಯಿಂದ ಕೊಡುತ್ತಿಲ್ಲ. ಶಾಸಕರ ಕ್ಷೇತ್ರ ಅಭಿವೃದ್ಧಿ ಹಣ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಆದರೆ ಲಸಿಕೆ

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ Read More »