ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರ ಕಾನೂನು ತಂದಿದೆ. ಇದಕ್ಕೂ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಶ್ರೀಮಂತರ ಹೆಣ್ಣು ಮಕ್ಕಳಿಗೆ ಸೌಲಭ್ಯ ಇರುತ್ತದೆ. ದುಡಿಯುವ ವರ್ಗದ ಹೆಣ್ಣುಗಳಿಗೆ ಸರ್ಕಾರ ವರ್ಷಕ್ಕೆ 12 ವೇತನ ಸಹಿತ ರಜೆ ಘೋಷಿಸಿ ಈ ನೀತಿಯನ್ನು ಜಾರಿ ಮಾಡಿದೆ ಎಂದು ಹೇಳಿದ್ದಾರೆ. […]










