ರಾಜ್ಯ

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು| ದ್ವಿಚಕ್ರ ವಾಹನ ಸವಾರರೆ ಎಚ್ಚರ!

ಸಮಗ್ರ ನ್ಯೂಸ್: ಹೆಲ್ಮೆಟ್‌ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ ದಂಡ, ಮೊದಲ ಎಚ್ಚರಿಕೆ ನೀಡಿ ಬಳಿಕವೂ ಮರುಕಳಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಚಾರ ಆಯುಕ್ತರು ಹೇಳಿದ್ದಾರೆ. ಇದಲ್ಲದೆ ಎಚ್ಚರಿಕೆಯ ಹೊರತಾಗಿಯೂ ಅಕ್ರಮ ಮುಂದುವರಿದರೆ ಮೂರು ತಿಂಗಳವರೆಗೆ ಪರವಾನಗಿ ರದ್ದುಪಡಿಸಲು ಆಯುಕ್ತರು ಆದೇಶ ನೀಡಿದ್ದಾರೆ. ಹೆಲ್ಮೆಟ್‌ಗೆ ಕ್ಯಾಮೆರಾ […]

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು| ದ್ವಿಚಕ್ರ ವಾಹನ ಸವಾರರೆ ಎಚ್ಚರ! Read More »

ಕೊಡಗು: ಭಾರೀ ಮಳೆಯ ಕಾರಣ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು(ಆ.8) ರಜೆ ಘೋಷಿಸಿ ಡಿಡಿಪಿಐ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಅಲ್ಲಲ್ಲಿ ಹಾನಿಯಾಗಿ, ಹೊದವಾಡ-ಕೊಟ್ಟಮುಡಿಯಿಂದ ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅರ್ಧ ಭಾಗ ಕುಸಿದಿದ್ದು, ವಾಹನ ಸಂಚಾರ ವ್ಯತ್ಯಯ ಉಂಟಾಗಿದೆ.

ಕೊಡಗು: ಭಾರೀ ಮಳೆಯ ಕಾರಣ ಶಾಲೆಗಳಿಗೆ ರಜೆ Read More »

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ

ಸಮಗ್ರ ನ್ಯೂಸ್: ಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್‌ಐ ಹೋಲ್ಡ್ಸ್‌ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ ‘ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಕಾಶ್ ರಾಜ್ ಪ್ರತಿಷ್ಠಾನದಿಂದ ಅಪ್ಪು ಎಕ್ಸ್‌ಪ್ರೆಸ್ ಹೆಸರಿನ ಆಂಬ್ಯುಲೆನ್ಸ್‌ಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ನೀಡುವ ಯೋಜನೆ ಇದೆ. ಇದಕ್ಕಾಗಿ ಕೈಜೋಡಿಸುವ ಸ್ನೇಹಿತರಿದ್ದಾರೆ. ಯಾರೂ ಕೊಡದಿದ್ದರೂ ನಾನು ದುಡಿಯುವ ಹಣದಲ್ಲೇ ಈ ಸತ್ಕಾರ್ಯ ಮಾಡುತ್ತೇನೆ

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ Read More »

ಟಾಟಾ ಸುಮೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ ಗಾಯ

ಸಮಗ್ರ ನ್ಯೂಸ್ : ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಟಾಟಾ ಸುಮೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಳ ಬಳಿಯಲ್ಲಿ ಟಾಟಾ ಸುಮೋ ಪಲ್ಟಿಯಾದ ಪರಿಣಾಮ, ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿಯನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ಮೂಲದ ಮೊಹಮ್ಮದ್ (73) ಎಂಬುದಾಗಿ ಗುರುತಿಸಲಾಗಿದೆ.

ಟಾಟಾ ಸುಮೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ ಗಾಯ Read More »

ದರ್ಗಾಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಸಮಗ್ರ ನ್ಯೂಸ್ : ಧಾರವಾಡ ಜಿಲ್ಲೆಯ ಕುಂದಗೊಳದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದರ್ಗಾಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಅ ನಡೆದಿದೆ. ಕುಂದಗೊಳದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ದರ್ಗಾಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲೇ

ದರ್ಗಾಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು Read More »

ಕೆಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಸಿಬ್ಬಂದಿ ತುಷಾರ್ ನಿಧನ

ದಾವಣಗೆರೆ : ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್‌.ಸಿ. ತುಷಾರ್‌ (33) ಶುಕ್ರವಾರ ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಸ್ಥೆಯ ಸಿಬ್ಬಂದಿಯ ಹಳೆ ಪ್ರಕರಣವೊಂದರ ವಿಚಾರಣೆ ಸಂಬಂಧ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸ್ಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್‌ ನಿಲ್ದಾಣದಲ್ಲಿ ನಿಧನರಾಗಿದ್ದಾರೆ. ತಲೆ ಸುತ್ತು ಕಾಣಿಸಿಕೊಂಡು ಆಯಾಸಗೊಂಡಿದ್ದ ಅವರನ್ನು ಬಸ್‌ನ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯಲು ಅಣಿಯಾಗುತ್ತಿದ್ದಂತೆಯೇ, ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದ್ದು, ಮೃತದೇಹವನ್ನು ಬೆಂಗಳೂರಿಗೆ ಕಳುಹಿಸಲಾಗಿದೆ.

ಕೆಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಸಿಬ್ಬಂದಿ ತುಷಾರ್ ನಿಧನ Read More »

ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿಲ್ಲ – ಸಚಿವ ಡಾ.ಕೆ.ಸುಧಾಕರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆರಂಭದಿಂದಲೇ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕೈಗೊಳ್ಳಲಾಗಿದ್ದು ಈವರೆಗೆ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಮಂಕಿಪಾಕ್ಸ್‌ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಇದಕ್ಕಾಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು 24 ಗಂಟೆಯೂ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇಥಿಯೋಪಿಯಾದಿಂದ ಬಂದಿದ್ದ

ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿಲ್ಲ – ಸಚಿವ ಡಾ.ಕೆ.ಸುಧಾಕರ್ Read More »

ರಾಜ್ಯದ ಕೋಮುದಳ್ಳುರಿಗೆ ಗೃಹಸಚಿವರ ತಲೆದಂಡ? ಇವರೇ ಮುಂದಿನ ಗೃಹಮಂತ್ರಿ

ಸಮಗ್ರ ನ್ಯೂಸ್: ಹಿಜಾಬ್ ವಿವಾದ, ಜಟ್ಕಾ ಹಲಾಲ್, ಮೈಕ್ ವಿವಾದ ಸೇರಿದಂತೆ ರಾಜ್ಯದಲ್ಲಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೋಮು ಸಂಬಂಧಿತ ವಿವಾದಗಳು ತೀವ್ರವಾಗಿದ್ದು, ಇದರ ಬೆನ್ನಲ್ಲೇ ಸರ್ಕಾರದ ಬಗ್ಗೆ ಸ್ವತಃ ಹಿಂದೂ ಕಾರ್ಯಕರ್ತರಿಗೆ ಅಸಮಾಧಾನ ಭುಗಿಲೆದ್ದಿದೆ. ಇನ್ನಷ್ಟು ತೀವ್ರವಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿರುವ ಹಿಂದೂ ಸಂಘಟನೆಯ ಕೆಲವು ಕಾರ್ಯಕರ್ತರು ಉತ್ತರ ಪ್ರದೇಶ ಮಾದರಿಯ ಕಠಿಣ ಕ್ರಮಗಳಿಗೆ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ತಲೆದಂಡವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ

ರಾಜ್ಯದ ಕೋಮುದಳ್ಳುರಿಗೆ ಗೃಹಸಚಿವರ ತಲೆದಂಡ? ಇವರೇ ಮುಂದಿನ ಗೃಹಮಂತ್ರಿ Read More »

ಚಿಕ್ಕಮಗಳೂರು : ಭಾರೀ ಮಳೆಗೆ ಗದ್ದೆಯಲ್ಲಿ ಭೂಕುಸಿತ

ಸಮಗ್ರ ನ್ಯೂಸ್: ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರಿನ ಭತ್ತದ ಗದ್ದೆಯಲ್ಲಿ ಭೂ ಕುಸಿತವಾಗಿದೆ. ಜಿಲ್ಲೆಯ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಭತ್ತದ ಗದ್ದೆಯಲ್ಲಿ ಈ ಘಟನೆ ನಡೆದಿದ್ದು, ನಾಟಿಗೆ ಸಜ್ಜಾಗಿದ್ದ ಭತ್ತದ ಗದ್ದೆಯಲ್ಲಿ ಭೂಕುಸಿತ ಉಂಟಾಗಿದೆ. ಭತ್ತದ ಗದ್ದೆಯಲ್ಲಿ ಭೂ ಕುಸಿತವಾದ ಹಿನ್ನೆಲೆ ಕೃಷಿಕರು ಆತಂಕಗೊಂಡಿದ್ದಾರೆ. ಕಳಸ ತಾಲೂಕಿನ‌ ನೆಲ್ಲಿಬೀಡು ಗ್ರಾಮದ ಮನೋಜ್ ಎಂಬುವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಭೂ ಕುಸಿತವಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಭೂ ಕುಸಿತ‌ ಸಂಭವಿಸಿದೆ. ಭತ್ತದ ಗದ್ದೆಯ

ಚಿಕ್ಕಮಗಳೂರು : ಭಾರೀ ಮಳೆಗೆ ಗದ್ದೆಯಲ್ಲಿ ಭೂಕುಸಿತ Read More »

ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ಕೆಲಸ ಸಿಗಲಿಲ್ಲ ಎಂದು ಮನನೊಂದು ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಜಿಲ್ಲೆಯ ಚಿಂತಾಮಣಿ ತಾಲೂಕಿನ ಯಗವದೇವಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶ್ರೀಕಾಂತ್ (30) ನೇಣಿಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಮೃತ ಶ್ರೀಕಾಂತ್ ಬಿ.ಕಾಂ ವ್ಯಾಸಂಗ ಮಾಡಿದ್ದು, ಕೋವಿಡ್ ನಂತರ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾನೆ. ಆದರೆ, ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಸಿಗದ ಹಿನ್ನಲೆ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ. ಕಳೆದ ದಿನ ಮನೆಯಿಂದ ಹೊರಟು ಎಲ್ಲಿಗೋ

ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ Read More »