ರಾಜ್ಯ

ಹಬ್ಬದ ದಿನವೇ ಭೀಕರ ರಸ್ತೆ ಅಪಘಾತ; 7 ಜನ ಸಾವು

ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಯಾದಗಿರಿ ಜಿಲ್ಲೆಯ ಗುರುಮಟ್ಕಲ್ ಸಮೀಪ ನಡೆದಿದೆ. ಟ್ಯಾಂಕರ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಾಯಚೂರು ಜಿಲ್ಲೆ ಲಿಂಗಸುಗೂರು ಹಟ್ಟಿ ಪಟ್ಟಣದ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಕೋಡಂಗಲ್ ಗೆ ಕಾರ್ಯಕ್ಕೆ ಹೋಗಿದ್ದರು. ಹಟ್ಟಿಗೆ ವಾಪಸ್ ಬರುವಾಗ ಭೀಕರ ಅಪಘಾತ ಸಂಭವಿಸಿದೆ. ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುರುಮಠಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಹಬ್ಬದ ದಿನವೇ ಭೀಕರ ರಸ್ತೆ ಅಪಘಾತ; 7 ಜನ ಸಾವು Read More »

ಚಿಕ್ಕಮಗಳೂರು: ಭಾರೀ ಮಳೆ; ಮನೆಗಳಿಗೆ ನುಗ್ಗಿದ ನೆರೆ ನೀರು

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಲ್ಲಿ ಭಾರಿ ಮಳೆ‌ ಸುರಿಯುತ್ತಿದ್ದು, ಹಲವೆಡೆ ಮನೆಗಳಿಗೆ‌ ನೆರೆನೀರು ನುಗ್ಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದುದಿಢೀರ್ ಮಳೆಯಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳಿಗೆ ಹಾನಿಯಾಗಿದೆ. ಗ್ರಾಮದಲ್ಲಿ ಭಾರಿ ಮಳೆಯಿಂದ ರಾತ್ರಿಯಿಡೀ ಜನರು ಪರದಾಟ ನಡೆಸಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಎಲ್ಲೆಂದರಲ್ಲಿ ಮಳೆ ನೀರು ನುಗ್ಗಿದೆ. ಕೊನೆಗೆ ನೀರು ಹೊರಹಾಕಲು ಮುಖ್ಯರಸ್ತೆಯನ್ನೇ ಜನರು ಅಗೆದಿದ್ದಾರೆ. ಅಧಿಕಾರಿಗಳು ರಸ್ತೆ ಅಗೆಯಲು ಸೂಚನೆ ನೀಡಿದ್ದು, ಜನರು

ಚಿಕ್ಕಮಗಳೂರು: ಭಾರೀ ಮಳೆ; ಮನೆಗಳಿಗೆ ನುಗ್ಗಿದ ನೆರೆ ನೀರು Read More »

ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ಶುಕ್ರವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಹಾಸನ, ಶಿವಮೊಗ್ಗ, ಗದಗ, ಧಾರವಾಡ ಹಾಗೂ ಬೆಳಗಾವಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೀದರ್, ಕಲಬುರ್ಗಿ, ಬೆಂಗಳೂರು ನಗರ ಸೇರಿ 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಮತ್ತು ದಕ್ಷಿಣ

ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ Read More »

ರಾಜ್ಯದಲ್ಲಿ ಮುಂದುವರಿದ ಮಳೆ; ಎರಡು ಜಿಲ್ಲೆಗಳ‌ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಲ್ಲದೇ ಮುಂದಿನ ನಾಲ್ಕು ದಿನಗಳ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆಯ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಚಾಮರಾಜನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಾಮರಾಜನಗರ ಜಿಲ್ಲೆಯ ಶಾಲೆಗಳಿಗೆ (ಆ.5 ಮತ್ತು 6 ರಂದು) 2 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಕಳೆದ

ರಾಜ್ಯದಲ್ಲಿ ಮುಂದುವರಿದ ಮಳೆ; ಎರಡು ಜಿಲ್ಲೆಗಳ‌ ಶಾಲೆಗಳಿಗೆ ರಜೆ Read More »

ಕಾಫಿನಾಡಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ

ಚಿಕ್ಕಮಗಳೂರು : ಕಾಫಿನಾಡಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಹಾಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ 5 ಮತ್ತು 7 ರಂದು ಆರೆಂಜ್ ಅಲರ್ಟ್ ಘೋಷಣೆ ಮತ್ತು ಆಗಸ್ಟ್ 6ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ನದಿ ಮತ್ತು ತಗ್ಗು ಪ್ರದೇಶದ ಜನ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಕಾಫಿನಾಡಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ Read More »

ಚಿಕ್ಕಮಗಳೂರು: ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ; ಜಿಲ್ಲಾಡಳಿತದಿಂದ ಕಟ್ಟೆಚ್ಚರ

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಹಾಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ 5 ಮತ್ತು 7 ರಂದು ಆರೆಂಜ್ ಅಲರ್ಟ್ ಘೋಷಣೆ ಮತ್ತು ಆಗಸ್ಟ್ 6ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ನದಿ ಮತ್ತು ತಗ್ಗು ಪ್ರದೇಶದ ಜನ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು: ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ; ಜಿಲ್ಲಾಡಳಿತದಿಂದ ಕಟ್ಟೆಚ್ಚರ Read More »

ಪ್ರವೀಣ್ ಹಂತಕರನ್ನು ಟ್ರೇಸ್ ಮಾಡ್ತಿದ್ದೇವೆ, ಅಮಾಯಕರನ್ನು ಬಂಧಿಸಲ್ಲ – ಎಡಿಜಿಪಿ ಅಲೋಕ್ ಕುಮಾರ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು

ಪ್ರವೀಣ್ ಹಂತಕರನ್ನು ಟ್ರೇಸ್ ಮಾಡ್ತಿದ್ದೇವೆ, ಅಮಾಯಕರನ್ನು ಬಂಧಿಸಲ್ಲ – ಎಡಿಜಿಪಿ ಅಲೋಕ್ ಕುಮಾರ್ Read More »

ಬೈಕ್ ಮತ್ತು ಲಾರಿ ನಡುವೆ ಅಪಘಾತ; ಮೂವರು ಸಾವು

ಮೈಸೂರು:  ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟ ಘಟನೆಯೊಂದು ಎಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಬಳಿ ಮಂಗಳವಾರ ನಡೆದಿದೆ. ಮೃತರನ್ನು ಚಿಕ್ಕಲೇಗೋವಡಪುರ ನಿವಾಸಿಗಳಾದ ಸಣ್ಣಸ್ವಾಮಿ, ಪ್ರಭು, ಮಹೇಶ ಎಂದು ಗುರುತಿಸಲಾಗಿದೆ. ಹುಣಸೂರಿನಿಂದ ಎಚ್.ಡಿ.ಕೋಟೆ ಕಡೆಗೆ ಬೈಕಿನಲ್ಲಿ ಮೂವರು ಬರುತ್ತಿದ್ದರು ಎಂದು ಹೇಳಲಾಗುತ್ತಿದೆ. ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹಗಳನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಬೈಕ್ ಮತ್ತು ಲಾರಿ ನಡುವೆ ಅಪಘಾತ; ಮೂವರು ಸಾವು Read More »

ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಹೊಸದಾಗಿ 6,601 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡುವುದಕ್ಕಾಗಿ ಅನುಮತಿ ನೀಡಿ ಆದೇಶಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುವಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6601 ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶಿಸಲಾಗಿರುತ್ತದೆ ಎಂದಿದ್ದಾರೆ. ಈ ಆದೇಶದ ಅನ್ವಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 20 ಕೊಠಡಿಗಳಂತೆ

ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ Read More »

ಕೇರಳದ ಪಾಲಕ್ಕಾಡ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆ

ಕೇರಳ: ಇಲ್ಲಿನ ಪಾಲಕ್ಕಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿದೆ. ಪಾಲಕ್ಕಾಡ್‌ ಜಿಲ್ಲೆಯ ಒಂಗಲ್ಲೂರ್ ಪಟ್ಟಣದ ನಿವಾಸಿಗಳು ಈ ಪ್ರದೇಶದಲ್ಲಿ ಕ್ವಾರಿಯೊಂದರ ಬಳಿ ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ. ಬುಧವಾರದಂದು ಘಟನೆ ಬೆಳಕಿಗೆ ಬಂದಿದೆ.ಪ್ರತಿ ಬಾಕ್ಸ್‌ನಲ್ಲಿ 200 ಸ್ಟಿಕ್‌ಗಳಂತೆ 40 ಬಾಕ್ಸ್‌ಗಳಲ್ಲಿ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅಕ್ಕಪಕ್ಕದ ನಿವಾಸಿಗಳು ಇದನ್ನು ಗಮನಿಸಿ ಶೋರನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಫೋಟಕಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ

ಕೇರಳದ ಪಾಲಕ್ಕಾಡ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆ Read More »