ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯರ ಬರ್ತ್ ಡೇ ಆಚರಣೆ| ಸರಿಯಾಗಿ 12 ಗಂಟೆಗೆ ಕೇಕ್ ಕಟ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ಮಧ್ಯರಾತ್ರಿ ಹುಬ್ಬಳ್ಳಿ ಖಾಸಗಿ ಹೊಟೇಲ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಸರಿಯಾಗಿ 12 ಗಂಟೆಗೆ ಜನ್ಮದಿನ ಆಚರಣೆ ಮಾಡಿದರು. ಕೇಕ್ ಕತ್ತರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ತಿನ್ನಿಸಿದರು. ಈ ವೇಳೆ ಡಿಕೆಶಿ ಕೂಡಾ ಸಿದ್ದರಾಮಯ್ಯಗೆ ಕೇಕ್ ತಿನ್ನಿಸಿ ಶುಭ ಹಾರೈಸಿದರು. ಜನ್ಮದಿನ ಆಚರಣೆ ವೇಳೆ ಹಲವು ನಾಯಕರು ಭಾಗಿಯಾಗಿದ್ದರು. ಪಕ್ಷದ […]

ಮಾಜಿ ಸಿಎಂ ಸಿದ್ದರಾಮಯ್ಯರ ಬರ್ತ್ ಡೇ ಆಚರಣೆ| ಸರಿಯಾಗಿ 12 ಗಂಟೆಗೆ ಕೇಕ್ ಕಟ್ Read More »

ಉಕ್ಕೇರಿದ ಪಯಸ್ವಿನಿ; ಕಲ್ಲುಗುಂಡಿ ಸಂಪಾಜೆ ಜಲಾವೃತ| ಮಾಣಿ – ಮೈಸೂರು ಹೆದ್ದಾರಿ ಸಂಚಾರ ಬಂದ್| ಅಸ್ತವ್ಯಸ್ತವಾದ ಜನಜೀವನ

ಸಮಗ್ರ ನ್ಯೂಸ್: ನಿರಂತರ ಮಳೆಯಿಂದಾಗಿ‌ ಸುಳ್ಯ, ಮಡಿಕೇರಿ ತಾಲೂಕಿನ ಗಡಿಭಾಗ ಅಕ್ಷರಶಃ ನರಕ‌ ಸದೃಶವಾಗಿದೆ. ಕಲ್ಲುಗುಂಡಿ,ಸಂಪಾಜೆ, ಗೂನಡ್ಕ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲುಗುಂಡಿ ಬಳಿ ಸೇತುವೆ ಕುಸಿಯುವ ಭೀತಿ ಎದುರಾಗಿದ್ದು, ಸಂಚಾರಕ್ಕೆ ಸಂಚಕಾರ ಎದುರಾಗಿದೆ. ಇನ್ನು ಮಾಣಿ- ಮೈಸೂರು ಹೆದ್ದಾರಿಯ ಪಾಲಡ್ಕ, ಅರಂಬೂರು ಬಳಿ ಪಯಸ್ವಿನಿ ನದಿನೀರು ಹೆದ್ದಾರಿಗೆ ಹರಿದಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಟ್ರಾಫಿಕ್ ಜ್ಯಾಮ್ ಉಂಟಾಗಿದೆ. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾಗಿರುವ ಕಲ್ಲುಗುಂಡಿಯಲ್ಲೂ ಪಯಸ್ವಿನಿ ನದಿ ಹರಿದ ಪರಿಣಾಮ

ಉಕ್ಕೇರಿದ ಪಯಸ್ವಿನಿ; ಕಲ್ಲುಗುಂಡಿ ಸಂಪಾಜೆ ಜಲಾವೃತ| ಮಾಣಿ – ಮೈಸೂರು ಹೆದ್ದಾರಿ ಸಂಚಾರ ಬಂದ್| ಅಸ್ತವ್ಯಸ್ತವಾದ ಜನಜೀವನ Read More »

ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳೆದ ನೆರೆ ಸಂತ್ರಸ್ತ

ಕೊಟ್ಟಿಗೆಹಾರ: 2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಇಂದು ಕೊನೆಯುಸಿರೆಳಿದ್ದಾರೆ. ಜಾವಳಿ ಗ್ರಾ.ಪಂ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (೬೫) ೨೦೧೯ ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು. ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೂಂದಿಗೆ ವಾಸವಿದ್ದ ನಾರಾಯಣ ಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ ಜಾಗ ಹಾಗೂ ಪರ್ಯಾಯ

ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳೆದ ನೆರೆ ಸಂತ್ರಸ್ತ Read More »

ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ?

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದೊಂದು ವಾರದಲ್ಲಿ ಹಲವು ಅಹಿತಕರ ಘಟನೆಗಳು ನಡೆದಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೇರಳದ ಲಿಂಕ್ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಕೇರಳ ಗಡಿಭಾಗದಲ್ಲಿ ತಪಾಸಣೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದು, ಇರೋ ಬರೋ ವಾಹನಗಳನ್ನೆಲ್ಲಾ ತಪಾಸಣೆ ನಡೆಸುತ್ತಿದ್ದಾರೆ. ಒಂದೆಡೆ ಕ್ರಿಮಿನಲ್ ಗಳ ಕುರಿತು ಮಾಹಿತಿ ಪತ್ತೆ ಕಾರ್ಯ ನಡೆಯುತ್ತಿದ್ದು ಇದು ಎಷ್ಟು ಸೇಫ್ ಎಂಬ ಪ್ರಶ್ನೆ ಉಧ್ಬವಿಸಿದೆ.

ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ? Read More »

ಖಾಸಗಿ ಬಸ್ ಮತ್ತು ಓಮ್ನಿ ಡಿಕ್ಕಿ; ನಾಲ್ವರು ಸಾವು,ಮೂವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪ ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಳಗುಪ್ಪ ಸಮೀಪದ ಬಳೆಗಾರು ಬಳಿ ಅಪಘಾತ ಸಂಭವಿಸಿದೆ. ಮೃತಪಟ್ಟವರು ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರು. ಜೋಗ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಬಸ್ ಚಾಲಕ

ಖಾಸಗಿ ಬಸ್ ಮತ್ತು ಓಮ್ನಿ ಡಿಕ್ಕಿ; ನಾಲ್ವರು ಸಾವು,ಮೂವರಿಗೆ ಗಾಯ Read More »

ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ

ತೀರ್ಥಹಳ್ಳಿ: ಆಗುಂಬೆ ಸಮೀಪದ ನೇರಲಕೊಡಿಗೆ ಗ್ರಾಮದ ಸಮೀಪ ಸೋಮವಾರ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಭಾವೀಕೆರೆ ನಿವಾಸಿ ರಾಮನಾಯ್ಕ (68) ಅವರು ಮಂಗಳೂರಿನ ವೆನ್‌ಲಾಕ್‌ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಮೃತದೇಹ ಸಾಗಿಸುತ್ತಿದ್ದಾಗ ಘಟನೆ ನಡೆದಿದೆ. ಆಂಬುಲೆನ್ಸ್‌ನಲ್ಲಿದ್ದ ರಾಮಾನಾಯ್ಕ ಅವರ ಮಗಳು, ಸಂಬಂಧಿಕರು ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ Read More »

ಎಚ್.ಡಿ. ಕೆ ಅವರ ಬೆಂಗಾವಲು ವಾಹನ ಅಪಘಾತ; 3 ಪೋಲಿಸ್ ಸಿಬ್ಬಂದಿ ಗೆ ಗಾಯ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ ಐವರಲ್ಲಿ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಲಿಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ಹಾಗೂ ಆನಂದ್ ಹರೀಶ್​ ಎಂಬವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಮೃತ್ತೂರು

ಎಚ್.ಡಿ. ಕೆ ಅವರ ಬೆಂಗಾವಲು ವಾಹನ ಅಪಘಾತ; 3 ಪೋಲಿಸ್ ಸಿಬ್ಬಂದಿ ಗೆ ಗಾಯ Read More »

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧ

ಸುಬ್ರಹ್ಮಣ್ಯ : ಸೋಮವಾರ ಸುರಿದ ಧಾರಾಕಾರ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆಯ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಹೀಗಾಗಿ ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೋರಿದ್ದಾರೆ. ಕುಕ್ಕೆ ದೇವಳದ ಸಮೀಪ ಇರುವ ದರ್ಪಣತೀರ್ಥ ನದಿಯ ಸ್ನಾನ ಘಟ್ಟವು ಮುಳುಗಡೆಯಾಗಿದೆ. ಸಮೀಪದ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಈ ಮಧ್ಯೆ ಸುಬ್ರಹ್ಮಣ್ಯ- ಪುತ್ತೂರು- ಮಂಜೇಶ್ವರ ಅಂತರರಾಜ್ಯ ಸಂಪರ್ಕ ರಸ್ತೆಯ ಸೇತುವೆಯು ಮುಳುಗಡೆಯಾಗುವ ಸಾಧ್ಯತೆ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧ Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಆತ್ಮಹತ್ಯೆ

ಕುಂದಾಪುರ: ಮನೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕುಂಬಾಸಿ ಸಮೀಪದ ಕೊರವಡಿಯಲ್ಲಿ ಸೋಮವಾರ ನಡೆದಿದೆ. ಕೋಟ ಪಡುಕರೆ ಪ್ರೌಢಶಾಲೆಯ 10ನೇ ತರಗತಿಯ ಅನನ್ಯಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯನ್ನು ಕಂಡು ಮನೆ ಬಳಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಾಲಕಿಯನ್ನು

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಆತ್ಮಹತ್ಯೆ Read More »

ಸುಳ್ಯ: ರಣಭೀಕರ ಮಳೆ| ರಾತ್ರೋರಾತ್ರಿ ನರಕವಾದ ಬದುಕು| ಸಾವನ್ನಪ್ಪಿದ ಎಳೆ ಜೀವಗಳು; ಅತಂತ್ರವಾದ ಜನಜೀವನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಸುರಿದ ಭಾರೀ ಮಳೆಗೆ ಎರಡು ಎಳೆ ಜೀವಗಳು ಅಸು ನೀಗಿವೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ಸಂಜೆ ಸುರಿದ ಮಹಾ ಮಳೆಗೆ ಸುಬ್ರಹ್ಮಣ್ಯ, ಕೊಲ್ಲಮೊಗರು, ಕಲ್ಮಕಾರು, ಬಾಳುಗೋಡು ಭಾಗದ ಜನರಲ್ಲಿ ಆತಂಕ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದು, ಪರ್ವತಮುಖಿ ನಿವಾಸಿ ಕುಶಾಲಪ್ಪ ಎನ್ನುವವರ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಧಾರುಣ ಸಾವು

ಸುಳ್ಯ: ರಣಭೀಕರ ಮಳೆ| ರಾತ್ರೋರಾತ್ರಿ ನರಕವಾದ ಬದುಕು| ಸಾವನ್ನಪ್ಪಿದ ಎಳೆ ಜೀವಗಳು; ಅತಂತ್ರವಾದ ಜನಜೀವನ Read More »