ರಾಜ್ಯ

ರಸ್ತೆ ಅಪಘಾತ ದಲ್ಲಿ ವೈದ್ಯರು ಸಾವು

ಕೊಪ್ಪಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನ ಮಂಗಳಪುರ ಬಳಿ ಗುರುವಾರ ನಡೆದ ಅಪಘಾತದಲ್ಲಿ ತಾಲ್ಲೂಕಿನ ಬೆಟಗೇರಿ ಗ್ರಾಮದ ಆರ್‌ಎಂಪಿ ವೈದ್ಯ ಕಲಿಗಣನಾಥ (65) ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಮೇಲೆಲ್ಲಾ ದಿನಬಳಕೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ ದಲ್ಲಿ ವೈದ್ಯರು ಸಾವು Read More »

ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ

ಶಿವಮೊಗ್ಗ: ಕಳೆದ ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆಯೊಂದು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮೇಗರವಳ್ಳಿಯ ಕೆಪಿ ರಸ್ತೆಯ ಸಂಜೀವ ಅವರ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿವೆ. ಇದರಿಂದ ಆ ಕುಟುಂಬದವರು ಕಂಗಾಲಾಗಿದ್ದಾರೆ. ಹೌದು, ಸಂಜೀವ ಅವರ ಪುತ್ರಿ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಅನಾರೋಗ್ಯದ ಕಾರಣ ಬುಧವಾರ ಮೃತಪಟ್ಟಿದ್ದರು. ಎರಡು ತಿಂಗಳ ಹಿಂದೆ ಅವರ ಮೊದಲ ಪುತ್ರಿ ಪೂರ್ಣಿಮಾ ಸಾವನ್ನಪ್ಪಿದ್ದರು. ಈ ಮೊದಲು ಸಂಜೀವ ಅವರ ತಾಯಿ ಮೃತಪಟ್ಟಿದ್ದರು. ಗುರುವಾರ ಬೆಳಗಿನ ಜಾವ ಸಂಜೀವ

ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ Read More »

ಸರಕು ತುಂಬಿದ ಲಾರಿಗೆ ಬೆಂಕಿ

ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸರಕು ತುಂಬಿದ ಲಾರಿಯೊಂದಕ್ಕೆ ಬೆಂಕಿ ತಾಗಿ ಲಾರಿ ಹೊತ್ತಿ ಉರಿದ ಘಟನೆಯೊಂದು ಶುಕ್ರವಾರ ಬೆಳಿಗ್ಗೆ 7.30 ಸುಮಾರಿಗೆ ನಡೆದಿದೆ. ಸಿಮೆಂಟ್ ತುಂಬಿದ ಲಾರಿಯಾಗಿದ್ದು ಲಾರಿಯ ಲೈನರ್ ಹೀಟ್ ಆಗಿ ಬೆಂಕಿ ಕಾಣಿಸಿಕೊಂಡು ಬೆಂಕಿ ಉರಿಯಿತು. ನಂತರ ಅಗ್ನಿಶಾಮಕದವರು ಸ್ಥಳಕ್ಕಾಗಮಿಸಿ ಬೆಂಕಿಯನ್ನು ಆರಿಸಿದ್ದಾರೆ. ಲಾರಿಯ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಅದರಲ್ಲಿದ್ದ ಸಿಮೆಂಟಿಗೂ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾವುದೇ ರೀತಿಯಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿಲ್ಲ.

ಸರಕು ತುಂಬಿದ ಲಾರಿಗೆ ಬೆಂಕಿ Read More »

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ| ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ| ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* Read More »

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾದ ಕಾರ್ಯಕರ್ತ ಹಂತಕರಿಂದ ಹತ್ಯೆಗೈಯಲ್ಪಟ್ಟ ಪ್ರವೀಣ್ ಕುಮಾರ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ‌ ಸಾಂತ್ವನ ಹೇಳಿದರು. ಪ್ರವೀಣ್ ಪತ್ನಿ ನೂತನಾ ಹಾಗೂ ಕುಟುಂಬಸ್ಥರನ್ನು ಸಾಂತ್ವನಗೈದ ಸಿಎಂ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದರು. ಇದೇ ವೇಳೆ ಕಾರ್ಯಕರ್ತರನ್ನು ಮಾತನಾಡಿಸಿದ ಸಿಎಂ ನಿನ್ನೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರವೀಣ್ ಕೊಲೆ‌ ಪ್ರಕರಣವನ್ನು ಎನ್ಐಎ ಗೆ

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ Read More »

ಪ್ರವೀಣ್ ಹತ್ಯೆ ನೋವು ತಂದಿದೆ; ಹಂತಕರಿಗೆ ತಕ್ಕ ಶಿಕ್ಷೆಗೆ ಕ್ರಮ| ಬೆಳ್ಳಾರೆಯಲ್ಲಿ ಬಿ.ವೈ ವಿಜಯೇಂದ್ರ ಹೇಳಿಕೆ

ಸಮಗ್ರ ನ್ಯೂಸ್: ಪ್ರವೀಣ್ ಅವರ ಹತ್ಯೆ ಬಹಳ ನೋವು ತಂದಿದೆ ಹಾಗೂ ಇದು ರಾಜ್ಯ ಸರಕಾರ ಇದೀಗ ಹಿಂದೂ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿದೆ. ನಾವು ಈ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಕಠೀಣವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಳ್ಳಾರೆಯ ನೆಟ್ಟಾರು ಪ್ರವೀಣ್ ಮನೆಗೆ ಭೇಟಿ‌ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ಈ ವಿಷಯ ತಿಳಿಸಿದರು. ಪ್ರವೀಣ್ ಬಡ ಕುಟುಂಬದ ಯುವಕ ನಮ್ಮ ಪಕ್ಷದ ಕಾರ್ಯಕರ್ತ ಹಾಗಾಗಿ

ಪ್ರವೀಣ್ ಹತ್ಯೆ ನೋವು ತಂದಿದೆ; ಹಂತಕರಿಗೆ ತಕ್ಕ ಶಿಕ್ಷೆಗೆ ಕ್ರಮ| ಬೆಳ್ಳಾರೆಯಲ್ಲಿ ಬಿ.ವೈ ವಿಜಯೇಂದ್ರ ಹೇಳಿಕೆ Read More »

ತಿರುಪತಿ; ಕಾರು ಮತ್ತು ಲಾರಿ ಅಪಘಾತ, ಕರ್ನಾಟಕದ ಇಬ್ಬರು ಸಾವು

ತಿರುಪತಿ (ಆಂಧ್ರಪ್ರದೇಶ): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಇಬ್ಬರು ಮೃತಪಟ್ಟ ಘಟನೆಯೊಂದು ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ಚಿಲ್ಲಕೂರು ಮಂಡಲದ ವಾರಗಲಿ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಸವರಾಜು ಮತ್ತು ಮಂಜು ಎಂದು ಗುರುತಿಸಲಾಗಿದ್ದು, ಕರ್ನಾಟಕದ ಯಾವ ಊರಿನವರು ಎಂದು ಇನ್ನಷ್ಟೇ ತಿಳಿಯಬೇಕಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಗಿರೀಶ್, ಶಿವರಾಮ ಕೃಷ್ಣ ಮತ್ತು ವೆಂಕಟೇಶ್ ಎಂಬವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವ. ಇವರು ಕಾರಿನಲ್ಲಿದ್ದವರು ನಾಯ್ಡು ಪೇಟೆಗೆ ಹೋಗುತ್ತಿದ್ದರು

ತಿರುಪತಿ; ಕಾರು ಮತ್ತು ಲಾರಿ ಅಪಘಾತ, ಕರ್ನಾಟಕದ ಇಬ್ಬರು ಸಾವು Read More »

ನಿಯಂತ್ರಣ ತಪ್ಪಿ ಆಂಬುಲೆನ್ಸ್ ಸೇತುವೆಗೆ ಡಿಕ್ಕಿ; ಚಾಲಕನಿಗೆ ಗಾಯ

ತುಮಕೂರು: ಶಿರಾದಿಂದ ತುಮಕೂರು ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುತ್ತಿದ್ದ ಆಂಬುಲೆನ್ಸ್ ತುಮಕೂರು ನಗರದ ಶಿರಾ ಗೇಟ್ ಎಸ್.ಮಾಲ್ ಬಳಿ ಅಪಘಾತಕ್ಕಿಡಾಗಿದೆ. ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಚಾಲಕನಿಗೆ ಗಾಯವಾಗಿದೆ. ಇನ್ನು ಈ ರಸ್ತೆ ಕಿರಿದಾಗಿದೆ. ಹಾಗಾಗಿ ಈ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ಆಂಬುಲೆನ್ಸ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕನಿಗೆ ಗಾಯಗೊಂಡಿದ್ದಾನೆ. ಚಾಲಕನಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ಆಂಬುಲೆನ್ಸ್ ಸೇತುವೆಗೆ ಡಿಕ್ಕಿ; ಚಾಲಕನಿಗೆ ಗಾಯ Read More »

ಪ್ರವೀಣ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ‌ ಜೊತೆ ಈ ವಿಷಯ ತಿಳಿಸಿದ್ದು, ಮಧ್ಯಾಹ್ನ 3.15ಕ್ಕೆ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದರು. ಸಿಎಂ ಜೊತೆ ಇನ್ನಿತರ ಪಕ್ಷದ ಮುಖಂಡರು ಆಗಮಿಸಲಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಪ್ರವೀಣ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ Read More »

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30 ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದ್ದಾರೆ. ಪ್ರವೀಣ್ ಹತ್ಯೆ ನನಗೆ ನೋವು ಹಾಗೂ ಸಂಕಟ ತಂದಿದ್ದು, ಮನಸ್ಸಿಗೆ ತುಂಬಾ ಘಾಸಿಯಾಗಿರುವುದರಿಂದ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವರ್ಷಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವ ಮುಖಂಡ

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ Read More »