ರಾಜ್ಯ

ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ

ಸಮಗ್ರ ನ್ಯೂಸ್:ಹಿಂದೂ‌ ಕಾರ್ಯಕರ್ತ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಫೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಪ್ರಕರಣದ ಕುರಿತಾಗಿ ಮುಖ್ಯಮಂತ್ರಿಗಳು ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ […]

ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ Read More »

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾ ಮುಖಂಡ, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರುರವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಹುಟ್ಟೂರು ನೆಟ್ಟಾರಿನಲ್ಲಿ ನಡೆಯಿತು. ಪುತ್ತೂರಿನ‌ ಪ್ರಗತಿ ಆಸ್ಪತ್ರೆಯಿಂದ ಪ್ರವೀಣ್ ಮೃತದೇಹವನ್ನು ಮೆರವಣಿಗೆ ಮೂಲಕ ಹುಟ್ಟೂರು ಬೆಳ್ಳಾರೆಯ ನೆಟ್ಟಾರಿಗೆ ತರಲಾಯಿತು. ಈ ವೇಳೆ ದಾರಿಯುದ್ದಕ್ಕೂ ನೂರಾರು ಕಾರ್ಯಕರ್ತರು ಜಮಾಯಿಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪ್ರಸಂಗ ನಡೆಯಿತು. ಈ ವೇಳೆ ಅಂತಿಮ ದರ್ಶನಕ್ಕೆ ಆಗಮಿಸಿದ ಸಚಿವರಾದ ಎಸ್.ಅಂಗಾರ, ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲುರವರಿಗೆ ಪ್ರವೀಣ್ ಅಭಿಮಾನಿಗಳು ದಿಗ್ಬಂಧನ ಹಾಕಿದರು. ಬೆಳ್ಳಾರೆಯಲ್ಲಿ

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ| Read More »

ಪ್ರವೀಣ್ ಹತ್ಯೆ ಖಂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ| ಪೊಲೀಸರು ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ. ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ಹಂತಕರನ್ನು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು. ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ.

ಪ್ರವೀಣ್ ಹತ್ಯೆ ಖಂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ| ಪೊಲೀಸರು ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಆಗ್ರಹ Read More »

62ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ನಟ ಸಾಯಿಕುಮಾರ್

ಬೆಂಗಳೂರು: ಇಂದು ಸಾಯಿ ಕುಮಾರ್​ಗೆ ಹುಟ್ಟುಹಬ್ಬದ ಸಂಭ್ರಮ. ಖಾಕಿ ಇವರ ಮೇಲೆ ಸೂಟ್​ ಆಗುವಷ್ಟು ಮತ್ಯಾವ ನಟರಿಗೂ ಸೆಟ್​ ಆಗಲ್ಲ. ಇಂದು ಸಾಯಿ ಕುಮಾರ್​ 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಾಯಿ ಕುಮಾರ್ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಖ್ಯಾತ ನಟ. ಪೂರ್ಣ ಹೆಸರು ಸಾಯಿಕುಮಾರ್ ಶರ್ಮ ಪುಡಿಪೆಡ್ಡಿ. ತಂದೆ ಪಿ.ಜೆ.ಶರ್ಮಾ ನಟ ಮತ್ತು ಕಂಠದಾನ ಕಲಾವಿದರು. ತಾಯಿ ಕೃಷ್ಣ ಜ್ಯೋತಿ ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಹೋದರ ರವಿಶಂಕರ್ ಮತ್ತು ಅಯ್ಯಪ್ಪ ಕೂಡ ಕನ್ನಡ

62ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ನಟ ಸಾಯಿಕುಮಾರ್ Read More »

ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದು; 13 ಜನರಿಗೆ ಗಾಯ

ಹೊಳೆಹೊನ್ನೂರು: ಸಮೀಪದ ಅರಹತೊಳಲಿನಲ್ಲಿ ಸೋಮವಾರ ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದಿದ್ದು, 13 ಜನ ಗಾಯಗೊಂಡಿದ್ದಾರೆ. ಆ ಮನೆಯಲ್ಲಿ ನಾಲ್ಕೈದು ದಿನಗಳ ಹಿಂದೆ ವಿವಾಹ ಸಮಾರಂಭ ನಡೆದಿತ್ತು. ಮನೆಯಲ್ಲಿ ಮಲಗಿದ್ದ ಸಂಬಂಧಿಕರು ಹಾಗೂ ನವವಿವಾಹಿತನ ಮೇಲೆ ಮನೆಯ ಚಾವಣಿ ಕುಸಿದಿದೆ. ನವವಿವಾಹಿತ ಗಣೇಶ್ ಹಾಗೂ ಆತನ ಅಕ್ಕನ ಮಗನಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊಳೆ ಹೊನ್ನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್‍ನಾಯ್ಕ್, ಭದ್ರಾವತಿ ತಹಶೀಲ್ದಾರ್

ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದು; 13 ಜನರಿಗೆ ಗಾಯ Read More »

ವಿದ್ಯುತ್ ಸ್ಪರ್ಶಿಸಿ ಗರ್ಭಿಣಿ ಕಾಡಾನೆ ಸಾವು

ಕೊಡಗು: ದಕ್ಷಿಣ ಕೊಡಗಿನ ಕುಟ್ಟ ಸಮೀಪದ ಮಂಚಳ್ಳಿ ಕೊರಿಯಮಲೆ ಬೆಟ್ಟದ ಬುಡದಲ್ಲಿರುವ ಬಲ್ಯಮಾಡ ದಿ ವಿಜಯ ಎಂಬವರ ತೋಟದಲ್ಲಿ 25 ವರ್ಷ ಪ್ರಾಯದ ಗರ್ಭಿಣಿ ಕಾಡಾನೆಯೊಂದು ವಿದ್ಯುತ್ ತಗುಲಿ ಮೃತಪಟ್ಟಿದೆ. ತೋಟದಲ್ಲಿದ್ದ ಅಡಿಕೆ ಮರವನ್ನು ಬುಧವಾರ ಬೆಳಗಿನ ಜಾವ ಎಳೆದು ತಿನ್ನುವ ಸಂದರ್ಭ ವಿದ್ಯುತ್ ಸ್ಪರ್ಶಗೊಂಡಿರುವುದಾಗಿ ಹೇಳಲಾಗಿದೆ.

ವಿದ್ಯುತ್ ಸ್ಪರ್ಶಿಸಿ ಗರ್ಭಿಣಿ ಕಾಡಾನೆ ಸಾವು Read More »

ಪೋಲಿಸ್ ನೇಮಕಾತಿ ಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಹೆಡ್ ಕಾನ್ಸ್‌ಟೇಬಲ್ ಸಹಾಯಕ ವೈರ್‍ಲೆಸ್ ಅಪರೇಟರ್ (AWO)ಟೆಲಿ-ಪ್ರಿಂಟರ್ ಆಪರೇಟರ್ (TPO)} ಮತ್ತು ಕಾನ್ಸ್‌ಟೇಬಲ್ (ಚಾಲಕ-ಪುರುಷ) ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‍ಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.29 ಕೊನೆಯ

ಪೋಲಿಸ್ ನೇಮಕಾತಿ ಗೆ ಅರ್ಜಿ ಆಹ್ವಾನ Read More »

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರುಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಉದ್ವಿಗ್ನ

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ Read More »

ಒಂದನೇ ತರಗತಿಗೆ ದಾಖಲಾಗಲು 6 ವರ್ಷ ಪೂರ್ಣಗೊಂಡಿರಬೇಕು| ಪರಿಷ್ಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು 5.5 ವರ್ಷಗಳ ಬದಲಾಗಿ ಜೂನ್-01 ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂಬುದಾಗಿ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ನಡವಳಿಯನ್ನು ಹೊರಡಿಸಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಆರ್ ಟಿ ಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ

ಒಂದನೇ ತರಗತಿಗೆ ದಾಖಲಾಗಲು 6 ವರ್ಷ ಪೂರ್ಣಗೊಂಡಿರಬೇಕು| ಪರಿಷ್ಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಧಾರವಾಡ : ಭಾರತ ಸರ್ಕಾರವು ಪ್ರಿ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯಲ್ಲಿನ ವಿಕಲಚೇತನ ವಿದ್ಯಾರ್ಥಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಅರ್ಜಿಗಳನ್ನು ಆನ್‍ಲೈನ್ ವೆಬ್‍ಸೈಟ್ www.scholarship.gov.in ನಲ್ಲಿ ಸಲ್ಲಿಸಬಹುದು. ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ಮತ್ತು ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿದ್ಯಾರ್ಥಿಗಳು ಅನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಜಿಲ್ಲೆಯಲ್ಲಿನ ವಿಕಲಚೇತನ ವಿದ್ಯಾರ್ಥಿಗಳು ಯೋಜನೆಯ ಸದುಪಯೋಗ

ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »