ರಾಜ್ಯ

ನಿಲ್ಲಿಸಿದ್ದ ಜಾಗದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಮಂಡ್ಯ: ಎಲೆಕ್ಟ್ರಿಕ್ ಸ್ಕೂಟರ್ ನಿಲ್ಲಿಸಿದ್ದ ಜಾಗದಲ್ಲಿಯೇ ಹೊತ್ತಿ ಉರಿದ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಜಯಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ವ್ಯಕ್ತಿ ಎಲೆಕ್ಟ್ರಿಕ್ ಸ್ಕೂಟರ್ ನ್ನು ಕಾಂಪ್ಲೆಕ್ಸ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದರು. ಇದ್ದಕ್ಕಿದ್ದಂತೆ ಬೈಕ್ ಹೊತ್ತಿ ಉರಿಯಲು ಆರಂಭಿಸಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಿಲ್ಲಿಸಿದ್ದ ಜಾಗದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ Read More »

ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ; ಬೆಂಗಳೂರಿನ ಮೂವರು ಪೋಲಿಸ್ ಸಿಬ್ಬಂದಿ ಬಲಿ

ಬೆಂಗಳೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ ಗ್ರಾಮದ ಬಳಿ ಅಪಘಾತದ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ತಿರುಪತಿಗೆ ಹೋಗುತ್ತಿದ್ದ ವೇಳೆ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ತೂರಿನ

ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ; ಬೆಂಗಳೂರಿನ ಮೂವರು ಪೋಲಿಸ್ ಸಿಬ್ಬಂದಿ ಬಲಿ Read More »

ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಸಿಲಿಂಡರ್ ಸ್ಫೋಟ ದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ತಾಯಮ್ಮ (55) ಗಂಭೀರ ಗಾಯಗೊಂಡಿರುವ ಮಹಿಳೆ ಎಂದು ಗುರುತಿಸಲಾಗಿದೆ. ಗಾಯಗೊಂಡ ತಾಯಮ್ಮನನ್ನು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿದೆ. ಬೆಂಗಳೂರು ಗ್ರಾಮಾಂತರ ತಿರುಮಲಶೆಟ್ಟಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯ Read More »

ರಸ್ತೆಯಲ್ಲಿ ಬಿದ್ದಿದ್ದ 45ಲಕ್ಷ ರೂ ನ್ನು ಪೋಲಿಸ್ ಠಾಣೆಗೆ ಒಪ್ಪಿಸಿ ಪ್ರಮಾಣಿಕತೆ ಮೆರೆದ ಟ್ರಾಫಿಕ್ ಪೋಲಿಸ್ ಸಿಬ್ಬಂದಿ

ರಾಯಪುರ : ಛತ್ತೀಸ್​ಗಢದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದ ವೇಳೆ 45 ಲಕ್ಷ ರೂಪಾಯಿಯುಳ್ಳ ಬ್ಯಾಗ್ ಸಿಕ್ಕಿದ್ದು, ಈ ಬ್ಯಾಗ್ ಅನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ, ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಶನಿವಾರ ಟ್ರಾಫಿಕ್ ಪೊಲೀಸ್‌ ಅಧಿಕಾರಿ, 45 ಲಕ್ಷ ಇರುವ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ. ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ 2000 ಮತ್ತು 500

ರಸ್ತೆಯಲ್ಲಿ ಬಿದ್ದಿದ್ದ 45ಲಕ್ಷ ರೂ ನ್ನು ಪೋಲಿಸ್ ಠಾಣೆಗೆ ಒಪ್ಪಿಸಿ ಪ್ರಮಾಣಿಕತೆ ಮೆರೆದ ಟ್ರಾಫಿಕ್ ಪೋಲಿಸ್ ಸಿಬ್ಬಂದಿ Read More »

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದು, ಸವಾರ ಮೃತ್ಯು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್‌ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆಯೊಂದು ಹೆದ್ದಾರಿಯ ಬನ್ನಿಕುಪ್ಪೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಹುಣಸೂರು ತಾಲೂಕಿನ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ನಿವಾಸಿ ಚೇತನ್ ರಾಜ್ (24) ಮೃತ ದುರ್ದೈವಿ. ಮೈಸೂರಿನಲ್ಲಿ ಅಂಗಡಿ ಇಟ್ಟು ಕೊಂಡಿರುವ ಚೇತನ್ ರಾಜ್ ತಮ್ಮ ಬೈಕಿನಲ್ಲಿ ರಾತ್ರಿ ಮನೆಗೆ ಬರುತ್ತಿದ್ದ ವೇಳೆ ಮೈಸೂರು- ಬಂಟ್ವಾಳ ಹೆದ್ದಾರಿಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು‌ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಭಾನುವಾರ ಬೆಳಗ್ಗೆ ದಾರಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದು, ಸವಾರ ಮೃತ್ಯು Read More »

ರಾಜ್ಯದಲ್ಲಿ ‌ಮುಂದಿನ‌ ಎರಡು‌ ದಿನ‌ ಭಾರೀ ಮಳೆ – ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ

ರಾಜ್ಯದಲ್ಲಿ ‌ಮುಂದಿನ‌ ಎರಡು‌ ದಿನ‌ ಭಾರೀ ಮಳೆ – ಹವಾಮಾನ ಇಲಾಖೆಯಿಂದ ಎಚ್ಚರಿಕೆ Read More »

ಕೊಡಗಿನಲ್ಲಿ ಪದೇಪದೇ ಭೂಕಂಪ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಪದೇ ಪದೇ ಭೂ ಕುಸಿತ ಮತ್ತು ಭೂಕಂಪ ಆಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನರು ಸಹಜವಾಗಿಯೇ ಭಯಭೀತರಾಗಿದ್ದಾರೆ. ಆದರೆ ಅದಕ್ಕೆ ನಿಖರ ಕಾರಣವನ್ನು ಪತ್ತೆ ಹಚ್ಚಲು ಸರ್ಕಾರ ಈವರೆಗೆ ಮುಂದಾಗಿಲ್ಲ. ಹಾಗಾಗಿ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಗೀತಾಮಿಶ್ರಾ ಆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದು, ಪಿಐಎಲ್‌ ಅರ್ಜಿಯನ್ನು ಆಲಿಸಿದ ಹಂಗಾಮಿ ಸಿಜೆ ಅಲೋಕ್‌ ಅರಾಧೆ ಅವರಿದ್ದ ವಿಭಾಗೀಯಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ನಡೆಸಲು ವಿಶೇಷ ತಂಡ

ಕೊಡಗಿನಲ್ಲಿ ಪದೇಪದೇ ಭೂಕಂಪ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ Read More »

ಸ್ಕಾರ್ಪಿಯೋ- ಲಾರಿ ನಡುವೆ ಭೀಕರ ಅಪಘಾತ| ಒಂದೇ ಕುಟುಂಬದ 5 ಮಂದಿ‌‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಲಾರಿ ಮತ್ತು ಸ್ಕಾರ್ಪಿಯೋ ನಡುವೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ‌ ಜಿಲ್ಲೆಯಲ್ಲಿ ‌ನಡೆದಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ಟಾಟಾ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ ಐವರುಉ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ

ಸ್ಕಾರ್ಪಿಯೋ- ಲಾರಿ ನಡುವೆ ಭೀಕರ ಅಪಘಾತ| ಒಂದೇ ಕುಟುಂಬದ 5 ಮಂದಿ‌‌ ಸ್ಥಳದಲ್ಲೇ ಸಾವು Read More »

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸಾವು

ತುಮಕೂರು : ಊರುಕೆರೆ ಬಳಿಯಲ್ಲಿ ರಸ್ತೆಯ ಬಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಪಂಚರ್‌ ಆಗಿದ್ದ ಲಾರಿಯನ್ನು ರಸ್ತೆಯ ಬಳಿ ನಿಲ್ಲಿಸಿದ್ದರು. ಈ ವೇಳೆ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಊರುಕೆರೆ ಬಳಿ ನಡೆದಿದೆ. ಬೊಮ್ಮನಹಳ್ಳಿಯ ನವೀನ್‌ ಕುಮಾರ್‌ (34) ಮೃತ ಪಟ್ಟ ಬೈಕ್‌ ಸವಾರ. ತುಮಕೂರಿನ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸಾವು Read More »

ಮಂಗಳೂರು ನಿಂದ ಹೊಸದುರ್ಗ ಕ್ಕೆ ಪ್ರತಿಷ್ಠಿತ ವೋಲ್ಟೋ ಸಾರಿಗೆ ಆರಂಭ

ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು-ಹೊಸದುರ್ಗ ಮಾರ್ಗದಲ್ಲಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ. ಸಾರಿಗೆಯು ಮಂಗಳೂರಿನಿಂದ ರಾತ್ರಿ 9.30 ಕ್ಕೆ ಹೊರಟು ಸುರತ್ಕಲ್-ಪಡುಬಿದ್ರೆ-ಉಡುಪಿ-ಮಣಿಪಾಲ- ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ- ಶಿವಮೊಗ್ಗ-ಹೊಳೆಹೊನ್ನೂರು – ಚೆನ್ನಗಿರಿ-ಹೊಳಲ್ಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಬೆಳಗ್ಗೆ 5.45 ಕ್ಕೆ ಹಾಗೂ ಮರುಪ್ರಯಾಣದಲ್ಲಿ ಹೊಸದುರ್ಗದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಗ್ಗೆ 6.15 ಕ್ಕೆ ಮಂಗಳೂರನ್ನು ತಲಪುತ್ತದೆ. ಸಾರಿಗೆಯಲ್ಲಿ ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ.

ಮಂಗಳೂರು ನಿಂದ ಹೊಸದುರ್ಗ ಕ್ಕೆ ಪ್ರತಿಷ್ಠಿತ ವೋಲ್ಟೋ ಸಾರಿಗೆ ಆರಂಭ Read More »