ರಾಜ್ಯ

ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ನಿಧನ

ಹಾವೇರಿ – ಪಂಜಾಬ್‍ನ ಪಠಾಣ್‍ಕೋಟ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಾಲ್ಲೂಕಿನ ಕೆ.ಬಿ.ತಿಮ್ಮಾಪುರ ಗ್ರಾಮದ ಸುತ್ತೂರು ಮಠ(40) ಮೃತಪಟ್ಟ ಯೋಧ. ಪಾರ್ಥೀವ ಶರೀರವನ್ನು ಇಂದು ಹುಟ್ಟೂರಿಗೆ ತರಲಾಗುತ್ತಿದ್ದು, ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಬಿಎಸ್‍ಎಫ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಜುಲೈ 21ರ ಮುಂಜಾನೆ ಮೃತಪಟ್ಟಿದ್ದರು. ಇಂದು ಅವರ ಮೃತದೇಹ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಅಂತ್ಯಸಂಸ್ಕಾರ ನೆರವೇರಲಿದೆ.

ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ನಿಧನ Read More »

ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ರಾಮನಗರ: ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಹೆಲಿಕಾಪ್ಟರ್ ನೋಡಲು ಸಾವಿರಾರು ಜನರು ಮುಗಿ ಬಿದ್ದಿದ್ದಾರೆ. ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ತಕ್ಷಣ ರಾಮನಗರದ ಎಸ್.ಬಿ.ಕಲ್ಯಾಣ ಮಂಟಪದ ಬಳಿ ಹೆಲಿಕಾಪ್ಟರ್ ನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಗಳು ಮಾತ್ರ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ದುರಸ್ತಿ ಬಳಿಕ ಮತ್ತೆ ಹಾರಾಟ ನಡೆಸಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ Read More »

ಕುಂದಾಪುರ: ಲಾಡ್ಜ್ ನಲ್ಲಿ ಪತ್ತೆಯಾದ ಭಿನ್ನಕೋಮಿನ ಜೋಡಿ; ಸಂಘಟನೆ ಕಾರ್ಯಕರ್ತರಿಂದ ದಾಳಿ

ಸಮಗ್ರ ನ್ಯೂಸ್: ಮಂಗಳೂರಿನಿಂದ ಬೈಂದೂರು ಸಮೀಪದ ಉಪ್ಪುಂದದ ಹೋಟೆಲ್‌ಗೆ ಬಂದಿದ್ದ ಅನ್ಯಕೋಮಿನ ಜೋಡಿಯೊಂದನ್ನು ಸಾರ್ವಜನಿಕರು ಬೈಂದೂರು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ಗುಜಿರಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಮೀರ್ ಆಲಿ (45) ಎಂಬಾತ ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ಎರ್ಟಿಕಾ ಕಾರಿನಲ್ಲಿ ಹಿಂದೂ ಧರ್ಮದ ಸುಮಾರು 28 ವರ್ಷದ ಯುವತಿಯೊಂದಿಗೆ ಉಪ್ಪುಂದದ ಪರಿಚಯ ಹೋಟೇಲ್‌ಗೆ ಕರೆ ತಂದಿದ್ದು ಲಾಡ್ಜ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವಿಚಾರ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ಗೊತ್ತಾಗಿ ಹೋಟೆಲ್‌ಗೆ ಮುತ್ತಿಗೆ ಹಾಕಿದ್ದು,

ಕುಂದಾಪುರ: ಲಾಡ್ಜ್ ನಲ್ಲಿ ಪತ್ತೆಯಾದ ಭಿನ್ನಕೋಮಿನ ಜೋಡಿ; ಸಂಘಟನೆ ಕಾರ್ಯಕರ್ತರಿಂದ ದಾಳಿ Read More »

“ಕಾಂಗ್ರೆಸ್ ‌ನ ತಾಯಿ ಬಂಜೆಯಂತೆ!”| ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಡಿಸಿಎಂ ಸವದಿ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದ ಕುರಿತಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಕಾಂಗ್ರೆಸ್ಸಿನ ತಾಯಿ ಬಂಜೆ ಆಗಿದ್ದಾಳೆ. ಗರ್ಭಿಣಿಯೂ ಆಗಲ್ಲ, ಕೂಸನ್ನೂ ಹೆರುವುದಿಲ್ಲ ಕಾಂಗ್ರೆಸ್ ಬಗ್ಗೆ ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುತ್ತಾರೆ ಅಂತಾರೆ. ನಾನು ಈ ಮಾತನ್ನ ಒಪ್ಪಲ್ಲ. ಗರ್ಭಿಣಿ ಆದರೆ ತಾನೇ ಕುಲಾಯಿ ಹೊಲೆಸುವುದು. ಕಾಂಗ್ರೆಸ್​ನಲ್ಲಿ ಕೂಸು ಹುಟ್ಟಲ್ಲ, ಕುಲಾಯಿ ಹೊಲೆಸುವ ಪ್ರಸಂಗವೂ ಬರಲ್ಲ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಾಂಗ್ರೆಸ್

“ಕಾಂಗ್ರೆಸ್ ‌ನ ತಾಯಿ ಬಂಜೆಯಂತೆ!”| ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಡಿಸಿಎಂ ಸವದಿ Read More »

ಕೇರಳದಲ್ಲಿ ಪತ್ತೆಯಾಯ್ತು ಮತ್ತೊಂದು ಮಂಕಿಪಾಕ್ಸ್ ಪ್ರಕರಣ| ಕರ್ನಾಟಕದಲ್ಲಿ ಶುರುವಾಯ್ತು ಟೆನ್ಶನ್

ಸಮಗ್ರ ನ್ಯೂಸ್: ದೇಶದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲೇ ದೃಢಪಟ್ಟಿದ್ದು, ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. UAEಯಿಂದ ಮಲಪ್ಪುರಂಗೆ ಜುಲೈ 6ರಂದು ಹಿಂತಿರುಗಿದ್ದ ಕೇರಳದ 35 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಸಹ ಕೇರಳದಲ್ಲಿಯೇ ಭಾರತದ ಮೊದಲ ಎರಡು ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದವು. ಇದೀಗ 3ನೇ ಪ್ರಕರಣವೂ ಕೇರಳದಲ್ಲೇ ಖಚಿತಪಟ್ಟಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ನೆರೆಯ ರಾಜ್ಯ ಕೇರಳದಲ್ಲಿ

ಕೇರಳದಲ್ಲಿ ಪತ್ತೆಯಾಯ್ತು ಮತ್ತೊಂದು ಮಂಕಿಪಾಕ್ಸ್ ಪ್ರಕರಣ| ಕರ್ನಾಟಕದಲ್ಲಿ ಶುರುವಾಯ್ತು ಟೆನ್ಶನ್ Read More »

ರಾಯಚೂರು: ನಡುರಸ್ತೆಯಲ್ಲೇ ಗುತ್ತಿಗೆದಾರನ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಹಾಡ ಹಗಲೇ ಗುತ್ತಿಗೆದಾರನ ಮೇಲೆ ದಾಳಿ ಮಾಡಿದ ಹಂತಕರು, ನಡು ರಸ್ತೆಯಲ್ಲಿಯೇ ಮಚ್ಚಿನಿಂದ ಗುತ್ತಿಗೆದಾರನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಬಿಎಸ್ ಎನ್ ಎಲ್ ಕಚೇರಿಯ ಬಳಿಯಲ್ಲಿ ನಡೆದಿದೆ. ಹಾಡಹಗಲೇ ಗುತ್ತಿಗೆದಾರ ಮೆಹಬೂಬ್ ಆಲಿ (30) ಎಂಬುವರನ್ನು ಹಂತಕರು ಮಚ್ಚಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ನಡು ರಸ್ತೆಯಲ್ಲಿಯೇ ನಡೆದ ಈ ಘಟನೆ ಕಂಡು ರಾಯಚೂರಿನ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ಈ ಹತ್ಯೆಯ ವಿಷಯ ತಿಳಿದು ಸ್ಥಳಕ್ಕೆ ರಾಯಚೂರಿನ ಸದರ್ ಬಜಾರ್ ಠಾಣೆಯ

ರಾಯಚೂರು: ನಡುರಸ್ತೆಯಲ್ಲೇ ಗುತ್ತಿಗೆದಾರನ ಕೊಚ್ಚಿ ಕೊಲೆ Read More »

ಕನ್ನಡ ಗೊಂಬೆ ಖ್ಯಾತರಾಗಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ 2022 ಪ್ರಶಸ್ತಿ ವಿಜೇತೆ

ಬೆಂಗಳೂರು : ಕನ್ನಡದ ಗೊಂಬೆ ಎಂದು ಖ್ಯಾತರಾಗಿರುವ ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022ರ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ. ಇದೀಗ ಅವರು ಸಂತಸದ ಸುದ್ದಿಯೊಂದು ಹಂಚಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಒಂದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿಕೊಂಡಿರುವ ಸಂಸ್ಥೆ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ , ಅದನ್ನು ನಿವೇದಿತಾ ಮಾಡಿದ್ದಾರೆ.

ಕನ್ನಡ ಗೊಂಬೆ ಖ್ಯಾತರಾಗಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ 2022 ಪ್ರಶಸ್ತಿ ವಿಜೇತೆ Read More »

ಜಲಸ್ಪೋಟದ ಬಳಿಕ ಕೊಡಗಿ‌‌ನ ರಾಮಕೊಲ್ಲಿಯ ಬೆಟ್ಟ ಕುಸಿಯುವ ಆತಂಕ| 25 ಎಕ್ರೆಯಷ್ಟು ಬೆಟ್ಟ ಬಿರುಕು; ಜೀವ ಭಯದಲ್ಲಿ ಗ್ರಾಮಸ್ಥರು!

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ರಾಮಕೊಲ್ಲಿಯಲ್ಲಿ ಜುಲೈ 18 ರಂದು ಜಲಸ್ಫೋಟ ಆಗಿದ್ದು ಇದೀಗ ಇದೇ ಬೆಟ್ಟ ಸಂಪೂರ್ಣ ಕುಸಿಯುವ ಆತಂಕ ಎದುರಾಗಿದೆ. ರಾಮಕೊಲ್ಲಿಯ ಮೇಲ್ಭಾಗದಲ್ಲಿರುವ ಕಡ್ಯದ ಮನೆಯ ಮೇಲ್ಭಾಗದಲ್ಲಿ ಜಲಸ್ಫೋಟ ಆಗಿದ್ದರಿಂದ ಐದು ಕಿಲೋಮೀಟರ್ ದೂರದ ಕೆಳಭಾಗದಲ್ಲಿರುವ ರಾಮಕೊಲ್ಲಿಯ ಸೇತುವೆ ಕೊಚ್ಚಿಹೋಗಿತ್ತು. ಮೇಲ್ಭಾಗದಿಂದ ನೂರಾರು ಮರ, ಗಿಡ ಮತ್ತು ಬಂಡೆಗಳ ಸಮೇತ ಎಲ್ಲವೂ ತರಗೆಲೆಯಂತೆ ಕೊಚ್ಚಿಹೋಗಿದ್ದವು. ಇದನ್ನು ಕಂಡಿದ್ದ ರಾಮಕೊಲ್ಲಿಯ ಜನತೆ ಬೆಚ್ಚಿಬಿದ್ದಿದ್ದರು. ಆದರೆ ಈಗ ರಾಮಕೊಲ್ಲಿಯ ಮೇಲ್ಭಾಗದಲ್ಲಿರುವ ಬೆಟ್ಟದ ಬರೋಬ್ಬರಿ 25

ಜಲಸ್ಪೋಟದ ಬಳಿಕ ಕೊಡಗಿ‌‌ನ ರಾಮಕೊಲ್ಲಿಯ ಬೆಟ್ಟ ಕುಸಿಯುವ ಆತಂಕ| 25 ಎಕ್ರೆಯಷ್ಟು ಬೆಟ್ಟ ಬಿರುಕು; ಜೀವ ಭಯದಲ್ಲಿ ಗ್ರಾಮಸ್ಥರು! Read More »

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು.23ರವರೆಗೆ ಭಾರೀ ಮಳೆ ಸಾಧ್ಯತೆ; ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳಲ್ಲಿ ಶನಿವಾರದ (ಜು.23) ವರೆಗೆಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು, ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಯಾವುದೇ ಅಲರ್ಟ್‌ ನೀಡಲಾಗಿಲ್ಲ. ಶನಿವಾರದಿಂದ ಸೋಮವಾರದ ತನಕ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗುರುವಾರದಿಂದ ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ,

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು.23ರವರೆಗೆ ಭಾರೀ ಮಳೆ ಸಾಧ್ಯತೆ; ಎಲ್ಲೋ ಅಲರ್ಟ್ ಘೋಷಣೆ Read More »

ಶಿರಾಡಿ ಘಾಟ್ ನಲ್ಲಿ ಹಗಲು ಲಘು ವಾಹನ ಸಂಚಾರಕ್ಕೆ ಅವಕಾಶ – ಹಾಸನ ಡಿಸಿ ಗಿರೀಶ್ ಆರ್ ಆದೇಶ

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಕಾರು, ಜೀಪು, ಟೆಂಪೊ, ಮಿನಿ ವ್ಯಾನ್‌, ಸಾರಿಗೆ ಸಂಸ್ಥೆಯ ಬಸ್‌, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6

ಶಿರಾಡಿ ಘಾಟ್ ನಲ್ಲಿ ಹಗಲು ಲಘು ವಾಹನ ಸಂಚಾರಕ್ಕೆ ಅವಕಾಶ – ಹಾಸನ ಡಿಸಿ ಗಿರೀಶ್ ಆರ್ ಆದೇಶ Read More »