ರಾಜ್ಯ

ಕಡಬ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ದೋಲ್ಪಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಲೋಕೇಶ್(21) ಎಂದು‌ ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಈತನಿಗೆ ಕೆಲ ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿದ್ದು, ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿತ್ತು. ಬುಧವಾರ(ಜು.13) ರ ತಡರಾತ್ರಿ ಈತ ವಿಷ ಸೇವಿಸಿದ್ದು, ವಾಂತಿ ಮಾಡುತ್ತಿದ್ದ ಎನ್ನಲಾಗಿದೆ. ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾಗಿ‌ ಹೇಳಲಾಗಿದೆ. ಮೃತರು, ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಕಡಬ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಆತ್ಮಹತ್ಯೆ Read More »

ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ| ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್

ಸಮಗ್ರ ನ್ಯೂಸ್: ಕರಾವಳಿ ಹಾಗೂ ಬೆಂಗಳೂರು ಸಂಪರ್ಕ ಕೊಂಡಿಯಂತಿರುವ ಶಿರಾಡಿಘಾಟ್‌ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಶಿರಾಡಿಘಾಟ್‌ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಹಾಸನ ಎಸ್‌ಪಿ ಜೈರಾಂ ಶಂಕರ್‌ ಅವರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ಭೂ ಕುಸಿತ ಉಂಟಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದ್ದು, ಸಂಚಾರಕ್ಕೆ ಅಪಾಯವನ್ನು ತಂದೊಡ್ಡಿದೆ. ಜೊತೆಗೆ ಕಳೆದ

ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ| ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್ Read More »

ಕರಾವಳಿ ಭಾಗಕ್ಕೆ ಪಡಿತರ ವ್ಯವಸ್ಥೆ ಯಲ್ಲಿ ಕುಚ್ಚಿಗೆ ಅಕ್ಕಿ ನೀಡಲು ಮುಂದಾದ ರಾಜ್ಯ ಸರ್ಕಾರ- ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಕುಚ್ಚಿಗೆ ಅಕ್ಕಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ. ಈ ಜಿಲ್ಲೆಗಳ ಜನರಿಗೆ ಕುಚ್ಚಿಗೆ ಅಕ್ಕಿ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವಿಧಾನಸೌಧದಲ್ಲಿ ಗುರುವಾರ ಈ ಕುರಿತು ಸಭೆ ನಡೆಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯದ ನಿಯೋಗ ಈಗಾಗಲೇ ಕೇರಳಕ್ಕೆ ಭೇಟಿ

ಕರಾವಳಿ ಭಾಗಕ್ಕೆ ಪಡಿತರ ವ್ಯವಸ್ಥೆ ಯಲ್ಲಿ ಕುಚ್ಚಿಗೆ ಅಕ್ಕಿ ನೀಡಲು ಮುಂದಾದ ರಾಜ್ಯ ಸರ್ಕಾರ- ಕೋಟ ಶ್ರೀನಿವಾಸ ಪೂಜಾರಿ Read More »

ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಚಂದವಾಡ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆಯೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಅನಂತು ಧರ್ಮೇಂದ್ರ (15) ಜಾನುವಾರುಗಳಿಗೆ ಮೇವು ಹಾಕಲು ಹೋದಾಗ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು Read More »

ಶೀಘ್ರದಲ್ಲೇ ಇತಿಹಾಸದ ಪುಟಗಳನ್ನು ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ|ಕೊನೆಯ ಅಧಿವೇಶನಕ್ಕೆ ಸಿದ್ಧತೆ

ನವದೆಹಲಿ: ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ ಶೀಘ್ರವೇ ಇತಿಹಾಸದ ಪುಟಗಳನ್ನು ಸೇರಲಿದೆ. ಮಳೆಗಾಲದ ಸಂಸತ್ ಅಧಿವೇಶನ ನಡೆಯಲಿದ್ದು, ಇದೇ ಕೊನೆಯ ಅಧಿವೇಶನ ಆಗಲಿದೆ. ಸೋಮವಾರದಿಂದ ಮಳೆಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗುತ್ತಿದೆ. ಬಳಿಕ ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲದ ಅಧಿವೇಶನವನ್ನು ಸೆಂಟ್ರಲ್ ವಿಸ್ತಾರ ಭಾಗವಾಗಿ ಮೋದಿ ಸರ್ಕಾರ ನಿರ್ಮಿಸುತ್ತಿರುವ ನೂತನ ಸಂಸತ್ ಭವನದಲ್ಲಿ ನಡೆಸುವುದಾಗಿ ಈಗಾಗಲೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ. ಹಾಲಿ ಸಂಸತ್ ಭವನದಲ್ಲಿಯೇ ನೂತನ ರಾಷ್ಟ್ರಪತಿ ಚುನಾವಣೆ ಜುಲೈ 19 ರಂದು ನಡೆಯಲಿದೆ. ಆಗಸ್ಟ್

ಶೀಘ್ರದಲ್ಲೇ ಇತಿಹಾಸದ ಪುಟಗಳನ್ನು ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ|ಕೊನೆಯ ಅಧಿವೇಶನಕ್ಕೆ ಸಿದ್ಧತೆ Read More »

ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ

ಬೆಂಗಳೂರು : ವಂಚನೆ ಪ್ರಕರಣ ಸಂಬಂಧಿಸಿ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವಿರೇಂದ್ರ ಬಾಬು ಪೊಲೀಸರು ಬಂಧಿಸಿದ ಘಟನೆಯೊಂದು ನಡೆದಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬವರು ದೂರು ನೀಡಿದ್ದ

ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ Read More »

ಬಂಟ್ವಾಳ: ಜೇನುತುಪ್ಪ ಬದಲು ಬೆಲ್ಲದ ಪಾಕ ಮಾರಾಟ; ಕಾರ್ಮಿಕರಿಗೆ ಧರ್ಮದೇಟು

ಸಮಗ್ರ ನ್ಯೂಸ್: ಬಿ.ಸಿ.ರೋಡ್‌ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ್ದಾರೆ. ಕೈಕಂಬ ಜಂಕ್ಷನ್‌ನಲ್ಲಿರುವ ಕಟ್ಟಡದ ಮೇಲಂತಸ್ತಿನಲ್ಲಿ ಜೇನು ಗೂಡು ಕಟ್ಟಿತ್ತು. ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ. ಈ ನಡುವೆ ತಂಡ ಬೆಲ್ಲಪಾಕ ಹಾಗೂ ಜೇನು

ಬಂಟ್ವಾಳ: ಜೇನುತುಪ್ಪ ಬದಲು ಬೆಲ್ಲದ ಪಾಕ ಮಾರಾಟ; ಕಾರ್ಮಿಕರಿಗೆ ಧರ್ಮದೇಟು Read More »

ಇನ್ಮುಂದೆ ಕಚೇರಿಗಳಲ್ಲಿ ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡುವಂತಿಲ್ಲ| ರಾಜ್ಯ ಸರ್ಕಾರದಿಂದ ‌ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆ ಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ

ಇನ್ಮುಂದೆ ಕಚೇರಿಗಳಲ್ಲಿ ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡುವಂತಿಲ್ಲ| ರಾಜ್ಯ ಸರ್ಕಾರದಿಂದ ‌ಮಹತ್ವದ ಆದೇಶ Read More »

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ

ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್ ಪೋಥೆನ್ ಮೃತ ದೇಹವನ್ನು ಬೆಡ್‌ರೂಮ್‌ನಲ್ಲಿ ನೋಡಿ ಶಾಕ್ ಆಗಿದ್ದಾರೆ. 100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್‌ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ Read More »

ಶಿರಾಡಿ, ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ| ಘನವಾಹನ ಸಂಚಾರಕ್ಕೆ ನಿಷೇಧ

ಸಮಗ್ರ ನ್ಯೂಸ್: ರಾಜ್ಯದ ಬಯಲುಸೀಮೆಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಶಿರಾಡಿ ಮತ್ತು ಚಾರ್ಮಾಡಿ ಘಾಟ್‌ ರಸ್ತೆಗಳಲ್ಲಿ ಗುರುವಾರ ಮತ್ತೆ ರಸ್ತೆ ಕುಸಿತವಾಗಿದ್ದು, ಸಂಚಾರ ಬಂದ್‌ ಆಗುವ ಭೀತಿ ಎದುರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ಶಿರಾಡಿ ಘಾಟ್‌ನ ದೋಣಿಗಲ್‌ನಲ್ಲಿ ವಾರದ ಬಳಿಕ ಮತ್ತೆ ರಸ್ತೆ ಕುಸಿತವಾಗಿದೆ. ಇದರಿಂದಾಗಿ ಅಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಇಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಏಕಮುಖ ವಾಹನ ಸಂಚಾರಕ್ಕೆ

ಶಿರಾಡಿ, ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ| ಘನವಾಹನ ಸಂಚಾರಕ್ಕೆ ನಿಷೇಧ Read More »