ರಾಜ್ಯ

ಕೊನೆಗೂ ಪಠ್ಯಪುಸ್ತಕ ಸೇರಿದ ನಾರಾಯಣ ಗುರು| ಸ್ಪಷ್ಟನೆ ನೀಡಿದ ಗೃಹಸಚಿವ

ಸಮಗ್ರ ನ್ಯೂಸ್: ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಸ್ಪಷ್ಟ ಪಡಿಸಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಬ್ರಹ್ಮರ್ಷಿ ನಾರಾಯಣ ಗುರುಗಳ ಪಠ್ಯವನ್ನು ಪ್ರಸ್ತುತ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಅಳವಡಿಸಿರುವುದನ್ನು […]

ಕೊನೆಗೂ ಪಠ್ಯಪುಸ್ತಕ ಸೇರಿದ ನಾರಾಯಣ ಗುರು| ಸ್ಪಷ್ಟನೆ ನೀಡಿದ ಗೃಹಸಚಿವ Read More »

ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ನಾಲ್ವರು ಸಾವು

ಹೈದರಾಬಾದ್: ವಿದ್ಯುತ್ ತಂತಿ ಸ್ಪರ್ಶದಿಂದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆಯೊಂದು ಕಾಮರೆಡ್ಡಿ ಜಿಲ್ಲೆಯ ದೇವನಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ. ಇಬ್ಬರು ಮಕ್ಕಳು ತಮ್ಮ ಮನೆಯ ಬಳಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಕ್ಕೀಡಾಗಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಧಾವಿಸಿದಾಗ ಅವರಿಗೂ ಕೂಡ ವಿದ್ಯುತ್ ತಗುಲಿದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅಹ್ಮದ್, ಪರ್ವೀನ್ ಮತ್ತು ಅವರ ಮಕ್ಕಳಾದ ಅದ್ನಾನ್ ಮತ್ತು ಮಹಿಮ್

ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ನಾಲ್ವರು ಸಾವು Read More »

ಸದ್ಯದಲ್ಲೇ ಕ್ರೇಜಿಸ್ಟಾರ್ ಮನೆಯಲ್ಲಿ ಮದುವೆ ಸಂಭ್ರಮ

ಬೆಂಗಳೂರು: ರವಿಚಂದ್ರ ಮಗಳ ಮದುವೆ ಇತ್ತೀಚೆಗಷ್ಟೇ ಅದ್ದೂರಿಯಾಗಿ ನಡೆಸಿ, ಆರಾಮವಾಗಿದ್ದ ಕ್ರೇಜಿಸ್ಟಾರ್ ಗೆ ಇದೀಗ ಮತ್ತೆ ಅವರ ಮನೆಯಲ್ಲಿ ಮಂಗಳವಾದ್ಯ ಮೊಳಗಲಿದೆ. ಅಂದರೆ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಹಿರಿಯ ಮಗ ಮನೋರಂಜನ್‌ ಮದುವೆಗೆ ರೆಡಿಯಾಗಿದ್ದಾರೆ. ಹೌದು ಅವರ ಮದುವೆ ಅಗಸ್ಟ್‌ 21 ಹಾಗೂ 22 ರಂದು ಬೆಂಗಳೂರಿನಲ್ಲೇ ಮನೋರಂಜನ್ ಸಪ್ತಪದಿ ತುಳಿಯಲಿದ್ದಾರೆ. ಇದೊಂದು ಅರೇಂಜ್ಡ್ ಮ್ಯಾರೇಜ್ ಆಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮೂಲದ ಹುಡುಗಿಯನ್ನು ಮನೋರಂಜನ್ ಕೈ ಹಿಡಿಯಲಿದ್ದಾರೆ. ಇದನ್ನು ರವಿಚಂದ್ರನ್‌ ಅವರೇ ಹುಡುಗಿಯನ್ನು

ಸದ್ಯದಲ್ಲೇ ಕ್ರೇಜಿಸ್ಟಾರ್ ಮನೆಯಲ್ಲಿ ಮದುವೆ ಸಂಭ್ರಮ Read More »

ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ

ಮಡಿಕೇರಿ : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ ಬಂದಿದೆ. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಲಿ ಕೆಲಸಕ್ಕೆ ತೆರಳುವಾಗ ದುರಂತ ಸಂಭವಿಸಿದೆ. ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್‌ ಪೂಜಾರಿ (22) ಮೃತ ದುರ್ದೈವಿ, ಮೂರನೇ ಮೈಲು ನಿವಾಸಿ ಬಿ.ಎನ್‌.ಕೋಟಿ (60 )ಗಾಯಗೊಂಡ ಕಾರ್ಮಿಕರಾಗಿದ್ದಾರೆ.

ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ Read More »

ಎರಡು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿ ಹಂದಿಗನೂರಿನಲ್ಲಿ ಈ ಘಟನೆ ನಡೆದಿದ್ದು, ಅವ್ವಮ್ಮಾ ಶ್ರೀಶೈಲ ಗುಬ್ಬೆವಾಡ (32) ತನ್ನ 3 ವರ್ಷದ ಹಾಗೂ 1 ವರ್ಷದ ಹೆಣ್ಣು ಮಗುವನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವ್ವಮಾ ಕಳೆದ 6 ತಿಂಗಳಿನಿಂದ ಖಿನ್ನತೆಗೆ ಒಳಗಾಗಿದ್ದು, ಪತಿ ಶ್ರೀಶೈಲ ಗುಬ್ಬೆವಾಡ ಕುರಿಮೇಯಿಸಲು ಹೋಗಿದ್ದ ವೇಳೆ ಮಕ್ಕಳನ್ನು ಬಾವಿಗೆ

ಎರಡು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ Read More »

ವಿಟ್ಲ: ಕುಡಿದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ , ಓರ್ವ ಗಂಭೀರ

ವಿಟ್ಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆಯೊಂದು ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಟ್ಲ: ಕುಡಿದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ , ಓರ್ವ ಗಂಭೀರ Read More »

ಸುಳ್ಯ ; ಗೃಹಪ್ರವೇಶಕ್ಕೆ ಸಜ್ಜಾದ ಮನೆ ಭಾರೀ ಮಳೆಗೆ ನೆಲಸಮ

ಸುಳ್ಯ: ಭಾರೀ ಮಳೆಯಿಂದಾಗಿ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ನೆಲಸಮವಾಗಿರುವ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಕಂಡಿತ್ತು. ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿದ್ದು, ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಅಷ್ಟು ಹೊತ್ತಿಗಾಗಲೇ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ

ಸುಳ್ಯ ; ಗೃಹಪ್ರವೇಶಕ್ಕೆ ಸಜ್ಜಾದ ಮನೆ ಭಾರೀ ಮಳೆಗೆ ನೆಲಸಮ Read More »

ಸುಳ್ಯ: ಮನವಿ ಸ್ವೀಕರಿಸದೇ ತೆರಳಿದ ಸಿಎಂ|‌ ಅಂಗಾರರ ಕ್ಷೇತ್ರಕ್ಕೆ ಬಂದು ಲಘುಬಗೆಯಿಂದ ದೌಡಾಯಿಸಿದ್ದೇಕೆ?

ಸಮಗ್ರ ನ್ಯೂಸ್: ಸಚಿವ ಎಸ್.ಅಂಗಾರ ಅವರ ಸ್ವಕ್ಷೇತ್ರಕ್ಕೆ ರಾಜ್ಯದ ಮುಖ್ಯ ಮಂತ್ರಿ ಆಗಮಿಸಿದ್ದು ಜನರ ಸಮಸ್ಯೆ ಆಲಿಸದೆ ತೆರಳಿದ್ದು, ಕ್ಷೇತ್ರದ ಜನತೆ ಬೇಸರಗೊಂಡು ವಾಪಾಸು ನಡೆದ ಘಟನೆ ಸೋಮವಾರ ನಡೆದಿದೆ. ಮಳೆಹಾನಿ ವೀಕ್ಷಣೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುಳ್ಯ ತಾಲೂಕಿನ ಗಡಿಯಲ್ಲಿ ಸ್ವಾಗತಿಸಲಾಗಿತ್ತು. ಸಿ.ಎಂ ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿಗಳು ತುರ್ತಾಗಿ ನಿರ್ಗಮಿಸಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳು, ಸಚಿವರು,

ಸುಳ್ಯ: ಮನವಿ ಸ್ವೀಕರಿಸದೇ ತೆರಳಿದ ಸಿಎಂ|‌ ಅಂಗಾರರ ಕ್ಷೇತ್ರಕ್ಕೆ ಬಂದು ಲಘುಬಗೆಯಿಂದ ದೌಡಾಯಿಸಿದ್ದೇಕೆ? Read More »

ಮಳೆಯಲ್ಲಿ ಆಟ ಆಡಬೇಡ ತಾಯಿ ಹೇಳಿದ್ದಕ್ಕೆ ಕೋಪಗೊಂಡು ಬಾಲಕ ನೇಣುಬಿಗಿದು ಆತ್ಮಹತ್ಯೆ

ಕೋಟ :  ಮಳೆಯಲ್ಲಿ ಆಟ ಆಡದಂತೆ ತಾಯಿ ಬುದ್ಧಿ ಮಾತು ಹೇಳಿದ್ದಕ್ಕೆ 9ನೇ ತರಗತಿ ಬಾಲಕನೊಬ್ಬ ಕೋಪಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬ್ರಹ್ಮಾವರ ತಾಲೂಕಿನ ಕಾರ್ಕಡದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಾರ್ಕಡ ನಿವಾಸಿ ಲಕ್ಷ್ಮಿ ಎಂಬವರ ಮಗ, ಕೋಟ ವಿವೇಕ ಹೈಸ್ಕೂಲಿನಲ್ಲಿ 9ನೇ ತರಗತಿಯ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಕಾರ್ಕಡದಲ್ಲಿ ವೀರಭದ್ರ ಕ್ಯಾಂಟೀನ್ ನಡೆಸಿಕೊಂಡಿದ್ದು, ಶಾಲಾ ರಜೆ ಹಿನ್ನೆಲೆ ನಾಗೇಂದ್ರ ಕಾರ್ಕಡ ಶಾಲಾ ಮೈದಾನದಲ್ಲಿ ಆಟ ಆಡಲು ಹೋಗಿದ್ದ ಎನ್ನಲಾಗಿದೆ.

ಮಳೆಯಲ್ಲಿ ಆಟ ಆಡಬೇಡ ತಾಯಿ ಹೇಳಿದ್ದಕ್ಕೆ ಕೋಪಗೊಂಡು ಬಾಲಕ ನೇಣುಬಿಗಿದು ಆತ್ಮಹತ್ಯೆ Read More »

1ರಿಂದ 12ನೇ ತರಗತಿ ಮಕ್ಕಳಿಗೆ ಪ್ರಥಮ ಭಾಷೆಯಲ್ಲಿ ಕನ್ನಡ ಭಾಷಾ ಕಲಿಕೆ ಕಡ್ಡಾಯ; ರಾಜ್ಯ ಸರ್ಕಾರ ದಿಂದ ಕೇಂದ್ರ ಸರ್ಕಾರ ಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು : ರಾಜ್ಯದ 1 ರಿಂದ 12 ನೇ ತರಗತಿವರೆಗಿನ ಮಕ್ಕಳಿಗೆ ಪ್ರಥಮ ಭಾಷೆಯಲ್ಲಿ ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸಬೇಕು, ದ್ವಿತೀಯ ಭಾಷೆಯಾಗಿ ಇಂಗ್ಲಿಷ್ ಮತ್ತು ತೃತೀಯ ಭಾಷೆಯಾಗಿ ಭಾರತದ ಯಾವುದಾದರೊಂದು ಭಾಷೆಯನ್ನು ಕಲಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರ ನೇತೃತ್ವದ ಕಾರ್ಯಪಡೆ ರಚಿಸಿತ್ತು. ಈ ಕಾರ್ಯಪಡೆಯು 26 ವಿಷಯಗಳಿಗೆ

1ರಿಂದ 12ನೇ ತರಗತಿ ಮಕ್ಕಳಿಗೆ ಪ್ರಥಮ ಭಾಷೆಯಲ್ಲಿ ಕನ್ನಡ ಭಾಷಾ ಕಲಿಕೆ ಕಡ್ಡಾಯ; ರಾಜ್ಯ ಸರ್ಕಾರ ದಿಂದ ಕೇಂದ್ರ ಸರ್ಕಾರ ಕ್ಕೆ ಪ್ರಸ್ತಾವನೆ ಸಲ್ಲಿಕೆ Read More »