ರಾಜ್ಯ

ದಾಖಲೆಯ ಮಳೆಗೆ ನಲುಗಿದ ಕರಾವಳಿ| 8 ಪ್ರದೇಶಗಳಲ್ಲಿ ಬರೊಬ್ಬರಿ 100 ಮೀ.ಮೀ ಮಳೆ‌!

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. 24 ಗಂಟೆಗಳಲ್ಲಿ 8 ಪ್ರದೇಶಗಳಲ್ಲಿ 100 ಮಿಲಿ ಮೀಟರ್ ಗೂ ಹೆಚ್ಚಿನ ಮಳೆಯಾಗಿದ್ದು, ಕರಾವಳಿ ಬೆಚ್ಚಿ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ಪ್ರದೇಶದಲ್ಲಿ 152.4 ಮಿಲಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ 159.8 ಮಿಲಿಮೀಟರ್ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೋಟ ವ್ಯಾಪ್ತಿಯಲ್ಲಿ 118.8 ಮಿಲಿ ಮೀಟರ್ ಮಳೆಯಾಗಿದೆ. 7 ಪ್ರದೇಶಗಳಲ್ಲಿ […]

ದಾಖಲೆಯ ಮಳೆಗೆ ನಲುಗಿದ ಕರಾವಳಿ| 8 ಪ್ರದೇಶಗಳಲ್ಲಿ ಬರೊಬ್ಬರಿ 100 ಮೀ.ಮೀ ಮಳೆ‌! Read More »

ಕೊಡಗು: ಜಿಲ್ಲೆಯ ಈ ಶಾಲೆಗಳಿಗೆ ಇಂದು(ಜು.12) ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಕೆಲವೊಂದು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿರುವ ಕೆಪಿಎಸ್ ಶಾಲೆ, ವಿರಾಜಪೇಟೆಯ ಸಂತ ಅನ್ನಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಆಡಳಿತ ಮಂಡಳಿಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿವೆ. ಇನ್ನೊಂದೆಡೆ ಮಳೆ ಹೆಚ್ಚಾಗುತ್ತಿರುವ ಕೊಡಗು ಜಿಲ್ಲೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ.

ಕೊಡಗು: ಜಿಲ್ಲೆಯ ಈ ಶಾಲೆಗಳಿಗೆ ಇಂದು(ಜು.12) ರಜೆ Read More »

ಕೊಂಚ ತಗ್ಗಿದ ಮಳೆಯಬ್ಬರ| ಇಂದಿನಿಂದ ಶಾಲಾ ಕಾಲೇಜುಗಳು ಎಂದಿನಂತೆ ಶುರು

ಸಮಗ್ರ ನ್ಯೂಸ್: ಕರಾವಳಿ‌ ಮತ್ತು ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಅಬ್ವರಿಸಿದ್ದ ಮಳೆ ಸೋಮವಾರದಿಂದ ಕೊಂಚ ಕಡಿಮೆಯಾಗಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದ.ಕ, ಉಡುಪಿ, ಉ.ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಂಭವವಿದೆ. ಮಳೆ‌ ಕೊಂಚ ತಗ್ಗಿದ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ ಕಾಲೇಜುಗಳು ಮತ್ತೆ ಎಂದಿನಂತೆ ಶುರುವಾಗಲಿವೆ. ಕಳೆದೊಂದು ವಾರದಿಂದ ನಿರಂತರ ಮಳೆ ಸುರಿದ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡಿನ ಬಹುತೇಕ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ ಮಳೆ ಕಡಿಮೆಯಾಗಿದ್ದು

ಕೊಂಚ ತಗ್ಗಿದ ಮಳೆಯಬ್ಬರ| ಇಂದಿನಿಂದ ಶಾಲಾ ಕಾಲೇಜುಗಳು ಎಂದಿನಂತೆ ಶುರು Read More »

ಮಂಗಳೂರು: ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ನಾಳೆ (ಜು.12) ಸಿಎಂ ಭೇಟಿ

ಸಮಗ್ರ ನ್ಯೂಸ್: ಭಾರೀ ಮಳೆ ಸುರಿಯುತ್ತಿರುವ ಕರಾವಳಿ ಜಿಲ್ಲೆಗಳ ಮಳೆಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಲಿದ್ದಾರೆ. ಮಳೆ ಪೀಡಿತ ಪ್ರದೇಶಗಳಾದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಭೇಟಿ ಮಾಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ. ಜು. 12ರ ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಿ, ಆ ಬಳಿಕ ಜು. 14 ಕಾರವಾರಕ್ಕೆ

ಮಂಗಳೂರು: ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ನಾಳೆ (ಜು.12) ಸಿಎಂ ಭೇಟಿ Read More »

ಭಾರೀ ಮಳೆಗೆ 20ಕ್ಕೂ ಅಧಿಕ ಮನೆಗಳು ನೆಲಸಮ

ಸಮಗ್ರ ನ್ಯೂಸ್ : ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಭಾರೀ ಮಳೆಗೆ 20ಕ್ಕೂ ಅಧಿಕ ಮನೆಗಳು ನೆಲಸಮವಾಗಿದೆ. ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಕತ್ರಿದಡ್ಡಿ, ದಿಂಡಲಕೊಪ್ಪ, ಗಲಗಿನಮಡಾ, ನಿಚ್ಚಣಕಿ, ದೇಗಾಂವ, ಚಿಕ್ಕನಂದಿಹಳ್ಳಿ, ತಿಗಡೊಳ್ಳಿ, ಬೈಲೂರು ಗ್ರಾಮಗಳಲ್ಲಿ ಮನೆ ಕುಸಿದಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಖಾನಾಪುರ ತಾಲೂಕಿನ ಗುರ್ಲಗುಂಜಿ ಗ್ರಾಮದ ಸರ್ಕಾರಿ ಶಾಲೆ ಕೊಠಡಿ ಕುಸಿದಿದ್ದು, ಶಾಲೆಗೆ ರಜೆಯಿದ್ದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಖಾನಾಪುರ ತಾಲೂಕಿನ ಶಿಕ್ಷಣ

ಭಾರೀ ಮಳೆಗೆ 20ಕ್ಕೂ ಅಧಿಕ ಮನೆಗಳು ನೆಲಸಮ Read More »

ಮದುವೆ ಹುಡುಗ ಕಪ್ಪು , ಸಮಾರಂಭದಲ್ಲಿ ಮದುವೆ ನಿರಾಕರಿಸಿದ ಹುಡುಗಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದ ಮದುವೆ ಕಾರ್ಯಕ್ರಮ ದಲ್ಲಿ ನಡೆದ ಘಟನೆಯಲ್ಲಿ ಮದುವೆಯು ಅರ್ಧ ಪ್ರಕ್ರಿಯೆ ವೇಳೆ ವಧು ಮದುವೆಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾಳೆ. ಅದಕ್ಕೆ ಆಕೆ ನೀಡಿದ ಉತ್ತರ ವರ ಬಹಳ ಕಪ್ಪಾಗಿ ಇದ್ದಾನೆಂಬುದಾಗಿ ಹೇಳಿದ್ದಾಳೆ. ಮದುವೆಯ ಸಮಾರಂಭವು ಪ್ರಾರಂಭವಾದ ತಕ್ಷಣ, ದಂಪತಿಗಳು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡರು. ಅಲ್ಲಿಂದ ಸಮಸ್ಯೆ ಶುರುವಾಯಿತು. ವಧು ನೀತಾ ಯಾದವ್​ ಎರಡು “ಫೆರಾ'(ಏಳು ಸುತ್ತು) ನಂತರ ವಿವಾಹವನ್ನು ಹಠಾತ್ತನೆ ರದ್ದುಗೊಳಿಸುವ ತನ್ನ ನಿರ್ಧಾರ ಪ್ರಕಟಿಸಿದ್ದಾಳೆ. ಆಕೆಯ

ಮದುವೆ ಹುಡುಗ ಕಪ್ಪು , ಸಮಾರಂಭದಲ್ಲಿ ಮದುವೆ ನಿರಾಕರಿಸಿದ ಹುಡುಗಿ Read More »

ಹಾಸನ: ಈ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಭಾರೀ ಮಳೆ‌ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ಅರಕಲಗೂಡು, ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ‌ಆರ್. ಗಿರೀಶ್ ರಜೆ ಘೋಷಿಸಿದ್ದಾರೆ. ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ.ಮರಗಳು ಬಿದ್ದಿರುವ ಘಟನೆ ನಡೆದಿವೆ. ಇನ್ನೊಂದೆಡೆ ಅರಕಲಗೂಡು ತಾಲ್ಲೂಕಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಈ ಮೂರು ತಾಲ್ಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಬೇಲೂರು, ಚನ್ನರಾಯಪಟ್ಟಣ, ಅರಸೀಕೆರೆ ತಾಲ್ಲೂಕುಗಳಲ್ಲಿ ಎಂದಿನಂತೆ ಶಾಲೆ-ಕಾಲೇಜು ತರಗತಿಗಳು ನಡೆಯಲಿವೆ.

ಹಾಸನ: ಈ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ; 14 ಜಿಲ್ಲೆಗಳಿಗೆ ವಿಸ್ತರಿಸಿದ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಹಿನ್ನಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ 14 ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಇನ್ನು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್‌, ಬೆಳಗಾವಿ

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ; 14 ಜಿಲ್ಲೆಗಳಿಗೆ ವಿಸ್ತರಿಸಿದ ರೆಡ್ ಅಲರ್ಟ್ Read More »

ಜಲಪ್ರಳಯ ಭೀತಿ| ಕೊಡಗಿನ ಶಾಲಾ ಕಾಲೇಜುಗಳಿಗೆ ಜು.11ರಂದು ರಜೆ ಘೋಷಿಸಿಲ್ಲ – ಡಿಸಿ ಸ್ಪಷ್ಟನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮತ್ತು ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಜುಲೈ 11 ರಂದು‌ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌ ಎಂಬ ಸಂದೇಶ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ಹೊರಡಿಸಿದೆ. ಇಂತಹ ಸುದ್ದಿಗಳನ್ನು ಹರಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಜಲಪ್ರಳಯ ಭೀತಿ| ಕೊಡಗಿನ ಶಾಲಾ ಕಾಲೇಜುಗಳಿಗೆ ಜು.11ರಂದು ರಜೆ ಘೋಷಿಸಿಲ್ಲ – ಡಿಸಿ ಸ್ಪಷ್ಟನೆ Read More »

ಚಿಕ್ಕಮಗಳೂರು: ನಿಲ್ಲದ ಮಳೆಕಾಟ: ನಾಳೆ, ನಾಡಿದ್ದು ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮತ್ತೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ, ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಜು.11 ಮತ್ತು 12 ರಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್‌ ರಮೇಶ್‌ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು: ನಿಲ್ಲದ ಮಳೆಕಾಟ: ನಾಳೆ, ನಾಡಿದ್ದು ರಜೆ ಘೋಷಣೆ Read More »