ರಾಜ್ಯ

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಸಮಗ್ರ ನ್ಯೂಸ್ : ಅಂಕೋಲಾ ಮೂಲದ ಸಿದ್ದಿ ಜನಾಂಗದ ಮಹಿಳೆ ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ಜನ್ಮನೀಡಿದ್ದು ತಾಯಿ- ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೆರಿಗೆ ನೋವು ಕಾಣಿಸಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲ ಮೂಲದ 27 ವರ್ಷದ ಮಹಿಳೆ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಡಾ.ಕವಿಶಾ ಭಟ್, ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ವೈದ್ಯರ ತಂಡ […]

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ Read More »

ಗೂಡ್ಸ್ ವಾಹನಕ್ಕೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ; ಚಾಲಕ ಪಾರು

ಸಮಗ್ರ ನ್ಯೂಸ್ : ಗೂಡ್ಸ್ ವಾಹನಕ್ಕೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಘಟನೆಯೊಂದು ಮಂಗಳವಾರ ಸಾಯಂಕಾಲ ತಾಲೂಕಿನ ಸಿದ್ದೇಶ್ವರ ಕ್ರಾಸ್ ಹತ್ತಿರ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬೀದರ್ ಕಡೆಯಿಂದ ಭಾಲ್ಕಿಗೆ ಪ್ರಯಾಣಿಕರ ರೈಲು ಆಗಮನದ ಸಮಯದಲ್ಲಿ ರೈಲ್ವೆ ಸಿಬ್ಬಂದಿ ಗೇಟ್ ಹಾಕಿದ್ದು, ಅಷ್ಟರಲ್ಲಿ ವೇಗವಾಗಿ ಬಂದ ಗೂಡ್ಸ್ ಟ್ರಕ್ ಗೇಟ್ ಮುರಿದು ಒಳಗೆ ನುಗ್ಗಿದೆ. ಎರಡನೇ ಗೇಟ್ ಹತ್ತಿರ ಗೂಡ್ಸ್ ವಾಹನ ನಿಂತಿದೆ. ಅಷ್ಟರಲ್ಲಿ ಎಕ್ಸ್ ಪ್ರೆಸ್ ರೈಲು ಬರುತಿತ್ತು. ಸಿಬ್ಬಂದಿ

ಗೂಡ್ಸ್ ವಾಹನಕ್ಕೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ; ಚಾಲಕ ಪಾರು Read More »

ಇಂದು ಕೊಡಗು, ದ.ಕ ಜಿಲ್ಲೆಗಳಿಗೆ ಸಚಿವ ಆರ್ ಅಶೋಕ್ ಭೇಟಿ| ಮಳೆ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ

ಸಮಗ್ರ ನ್ಯೂಸ್: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮತ್ತು ಭೂಕಂಪನ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುವರು. ಎರಡು ಜಿಲ್ಲೆಗಳಲ್ಲಿ ಮಳೆ ಹಾನಿ ಹಾಗೂ ಭೂಕಂಪನ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಲಿದ್ದಾರೆ. ಎರಡು ಜಿಲ್ಲೆಗಳಿಗೆ ಭೇಟಿ ನೀಡಲಿರುವ ಸಚಿವರು ಸ್ಥಳೀಯರಿಂದ ಮಾಹಿತಿ ಪಡೆಯಲಿದ್ದಾರೆ. ಭೂಕುಸಿತ ಮತ್ತು ಮಳೆ ಹಾನಿ ಬಗ್ಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲಿದ್ದಾರೆ. ಬೆಳಿಗ್ಗೆ 10.30 ಕ್ಕೆ ಸಂಪಾಜೆ -ಮಡಿಕೇರಿ ರಾಷ್ಟ್ರೀಯ ಹೆದ್ದಾರಿ

ಇಂದು ಕೊಡಗು, ದ.ಕ ಜಿಲ್ಲೆಗಳಿಗೆ ಸಚಿವ ಆರ್ ಅಶೋಕ್ ಭೇಟಿ| ಮಳೆ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ Read More »

ಕರಾವಳಿ, ಮಲೆನಾಡು ಈಗ “ಮಳೆನಾಡು”| ನಿಲ್ಲದ ವರ್ಷಧಾರೆಗೆ ಜನಜೀವನ ತತ್ತರ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮಳೆರಾಯ ತನ್ನ ನೈಜರೂಪ ತೋರಿಸುತ್ತಿದ್ದು ರಾಜ್ಯ ವರುಣನ ಕಾಟಕ್ಕೆ ತತ್ತರಿಸಿದೆ. ಕರಾವಳಿ ಜಿಲ್ಲೆಗಳು ಕೆರೆಯಂತಾಗಿದ್ದು ಮಲೆನಾಡು ಮಳೆನಾಡಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಕರಾವಳಿಯ ಹಲವು ಕಡೆ ಕೃತಕ ನೆರೆ ಉಂಟಾಗಿದೆ. ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು ನದಿಗಳು ಅಪಾಯದ ಮಟ್ಟ ತಲುಪಿವೆ. ಇದರಿಂದ ನದಿ ಪಾತ್ರದ ಜನರಿಗೆ ಆತಂಕ ಎದುರಾಗಿದೆ. ಇನ್ನು ಕೆಲವು ಕಡೆ ಭೂಕುಸಿತ, ಗುಡ್ಡ ಕುಸಿತದ ಆತಂಕವಾದರೆ, ಇನ್ನೂ ಕೆಲ ಪ್ರದೇಶಗಳಲ್ಲಿ ಮನೆಗಳ ಒಳಗೆ ನೀರು

ಕರಾವಳಿ, ಮಲೆನಾಡು ಈಗ “ಮಳೆನಾಡು”| ನಿಲ್ಲದ ವರ್ಷಧಾರೆಗೆ ಜನಜೀವನ ತತ್ತರ Read More »

ಹಾಸನದಲ್ಲಿ ಮಹಾಮಳೆ ಭೀತಿ|ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ(ಜು.7)ರಜೆ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ನಾಳೆ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಲೂರು, ಅರಕಲಗೂಡು, ಸಕಲೇಶಪುರ ತಾಲೂಕಿನ, ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ಆದೇಶ ಹೊರಡಿಸಿದ್ದಾರೆ. ನಾಳಿನ ಮಳೆ ಪರಿಸ್ಥಿತಿ ಗಮನಿಸಿ ಮತ್ತೆ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ.

ಹಾಸನದಲ್ಲಿ ಮಹಾಮಳೆ ಭೀತಿ|ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ(ಜು.7)ರಜೆ Read More »

ನಿರಂತರ ಮಳೆ; ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ‌ ಶಾಲಾ ಕಾಲೇಜಿಗೆ ರಜೆ; ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ Whats ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ನಾಳೆ(ಜು.7) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜುಲೈ ೭ರಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಣೆಯನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ರಜೆಯ ಅವಧಿಯನ್ನು

ನಿರಂತರ ಮಳೆ; ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ‌ ಶಾಲಾ ಕಾಲೇಜಿಗೆ ರಜೆ; ಅಲರ್ಟ್ ಘೋಷಣೆ Read More »

ಕೊಡಗಿನಲ್ಲಿ ಮುಂದುವರಿದ ಮಹಾಮಳೆ| ಜಿಲ್ಲೆಯಲ್ಲಿ ನಾಳೆಯೂ(ಜು.8) ಶಾಲಾ ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಗುರುವಾರವೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಈ ಹಿನ್ನೆಲೆಯಲ್ಲಿ ಶುಕ್ರವಾರ(ಜು.8) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಬಿ.ಸಿ. ಸತೀಶ ಅವರು ಆದೇಶ ಹೊರಡಿಸಿದ್ದಾರೆ. ಭಾರೀ ಗಾಳಿ ಮಳೆಗೆ ಜಿಲ್ಲೆಯ ಹಲವೆಡೆ ಮರಗಳು ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿದೆ. ಕೊಡ್ಲಿಪೇಟೆ ಹೋಬಳಿಯ ಶಿವರಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಸುಶೀಲಾ ಎಂಬವರ ಮನೆ ಮೇಲೆ ಮರ

ಕೊಡಗಿನಲ್ಲಿ ಮುಂದುವರಿದ ಮಹಾಮಳೆ| ಜಿಲ್ಲೆಯಲ್ಲಿ ನಾಳೆಯೂ(ಜು.8) ಶಾಲಾ ಕಾಲೇಜಿಗೆ ರಜೆ Read More »

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು

ಸಮಗ್ರ ನ್ಯೂಸ್: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ತಾವು ಧರಿಸಿದ್ದ ಬಟ್ಟೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಆಕಸ್ಮಿಕ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಕೌಸರ್ (37) ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಕಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ. ರಾಬರ್ಟ್‌ ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು Read More »

ಜಮೀರ್ ಸಂಪತ್ತಿಗೆ ಎಸಿಬಿ ಸವಾಲ್| ಆಸ್ತಿ ಮೌಲ್ಯ ನೋಡಿ ದಂಗಾದ ಅಧಿಕಾರಿಗಳು| ಲೆಕ್ಕ ಇಲ್ಲ ಪಕ್ಕಾ…! ಬಾದ್ ಷಾಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಜಾರಿ ನಿರ್ದೇಶನಾಲಯ ವರದಿ ಆಧರಿಸಿ ಶಾಸಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಎಸಿಬಿ, ಈಗ ಜಮೀರ್‌ ಸಾಮ್ರಾಜ್ಯದ ಸಂಪತ್ತಿನ ಶೋಧನೆಗೆ ಕಾರ್ಯಾಚರಣೆ ಶುರು ಮಾಡಿದೆ. ಎಸಿಬಿ ದಾಳಿ ಬಳಿಕ ಜಮೀರ್‌ಗೀಗ ಬಂಧನದ ಭೀತಿ ಎದುರಾಗಿದೆ. ಜಮೀರ್‌ ಅಹಮದ್‌ ಖಾನ್‌ ಅವರ ನಿವಾಸದ ಮೇಲೆ ನಡೆದ ದಾಳಿ ವೇಳೆ ಲಕ್ಷಾಂತರ ರು. ನಗದು, ಕೋಟ್ಯಂತರ ಮೌಲ್ಯದ ವಜ್ರ ವೈಢೂರ್ಯ, ಚಿನ್ನಾಭರಣ, ಬೆಳ್ಳಿ ವಸ್ತುಗಳು, 9 ಲೀಟರ್‌ ವಿದೇಶಿ ಮದ್ಯ,

ಜಮೀರ್ ಸಂಪತ್ತಿಗೆ ಎಸಿಬಿ ಸವಾಲ್| ಆಸ್ತಿ ಮೌಲ್ಯ ನೋಡಿ ದಂಗಾದ ಅಧಿಕಾರಿಗಳು| ಲೆಕ್ಕ ಇಲ್ಲ ಪಕ್ಕಾ…! ಬಾದ್ ಷಾಗೆ ಬಂಧನ ಭೀತಿ Read More »

ರಾಜ್ಯದಲ್ಲಿ ಪ.ಪೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಭರ್ತಿಗೆ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಅತಿಥಿ ಉಪನ್ಯಾಸಕರಿಗೆ ಈಗಿನ 9 ಸಾವಿರ ರೂ. ಗೌರವ ಸಂಭಾವನೆಯನ್ನು 12 ಸಾವಿರ ರೂ.ಗೆ ಹೆಚ್ಚಿಸಲು ಸರಕಾರವು ಅನುಮೋದನೆ ನೀಡಿದೆ. ಗೌರವ ಸಂಭಾವನೆಯನ್ನು ಹದಿನೈದು ಸಾವಿರ ರೂ.ಗೆ ಹೆಚ್ಚಿಸಬೇಕೆಂಬ ಬೇಡಿಕೆಯಿದ್ದರೂ, ಸರಕಾರವು ಮಾಸಿಕವಾಗಿ ಮೂರು ಸಾವಿರ ರೂ. ಹೆಚ್ಚಿಸಿದೆ. ರಾಜ್ಯ ಸರಕಾರವು ಒಟ್ಟು 3708

ರಾಜ್ಯದಲ್ಲಿ ಪ.ಪೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಭರ್ತಿಗೆ ನಿರ್ಧಾರ Read More »