ರಾಜ್ಯ

ಸುಳ್ಯದಲ್ಲಿ 5ನೇ ಬಾರಿ ಕಂಪಿಸಿದ ಭೂಮಿ| ಆತಂಕದಲ್ಲಿ ಹೊರಗೋಡಿ ಬಂದ ಜನತೆ

ಸಮಗ್ರ ನ್ಯೂಸ್: ಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ. ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕ ದಿಂದ ಹೊರಗೋಡಿ ಬಂದಿದ್ದಾರೆ. ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆ ದಾಖಲಾಗಿದೆ. ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ […]

ಸುಳ್ಯದಲ್ಲಿ 5ನೇ ಬಾರಿ ಕಂಪಿಸಿದ ಭೂಮಿ| ಆತಂಕದಲ್ಲಿ ಹೊರಗೋಡಿ ಬಂದ ಜನತೆ Read More »

ಸುಳ್ಯ: ಮಧ್ಯರಾತ್ರಿಯ ಭೂಕಂಪನ|ತೀವ್ರತೆ ಎಷ್ಟು? ಕೇಂದ್ರ ಬಿಂದು ಯಾವುದು?

ಸಮಗ್ರ ನ್ಯೂಸ್: ತಡರಾತ್ರಿ ಭಾರಿ ಕಂಪನದಿಂದ ಭೂಮಿ ಕಂಪಿಸಿದ್ದು ಕೊಡಗು ಹಾಗೂ ದಕ್ಷಿಣ ಕನ್ನಡದ ಗಡಿ ಭಾಗದಲ್ಲಿ ಸಿಹಿನಿದ್ರೆಯಲ್ಲಿದ್ದ ಜನರು ಹೌಹಾರಿದ್ದಾರೆ. ಭೂಕಂಪದ ತೀವ್ರತೆ 1.8ರಷ್ಟು ದಾಖಲಾಗಿತ್ತು ಎಂದು KSNDM ಕೇಂದ್ರ ಸ್ಪಷ್ಟಪಡಿಸಿದೆ. ಕಂಪನವು ಭೂಮಿಯ ೧೦ ಕಿ.ಮೀ ಅಡಿಯಲ್ಲಿ ನಡೆದಿದೆ ಎನ್ನಲಾಗಿದೆ. ಎಂ. ಚೆಂಬು ಹಾಗೂ ಪೆರಾಜೆ ಗ್ರಾಮದ ಕೇಂದ್ರ ಬಿಂದುವಿನಿಂದ ಭೂಕಂಪ ಸಂಭವಿಸಿದೆ. ಮುಂಜಾನೆ 1.15.12 ಸೆಕೆಂಡ್ ನಲ್ಲಿ ಭೂಕಂಪನ ಸಂಭವಿಸಿತ್ತು.

ಸುಳ್ಯ: ಮಧ್ಯರಾತ್ರಿಯ ಭೂಕಂಪನ|ತೀವ್ರತೆ ಎಷ್ಟು? ಕೇಂದ್ರ ಬಿಂದು ಯಾವುದು? Read More »

ಪದೇಪದೇ ನಡುಗುತ್ತಿರುವ ಕೊಡಗು; ಜಿಲ್ಲೆಯಲ್ಲಿ ಹಿರಿಯ ವಿಜ್ಞಾನಿಗಳಿಂದ ಅಧ್ಯಯನ

ಸಮಗ್ರ ನ್ಯೂಸ್: ಕಳೆದ ಐದು ದಿನಗಳ ಅವಧಿಯಲ್ಲಿ ಕೊಡಗಿನಲ್ಲಿ ಮೂರು ಬಾರಿ ಭೂಕಂಪ ಆಗುತ್ತಿದ್ದಂತೆ ಕೊಡಗು ಜಿಲ್ಲೆಗೆ ಬೆಂಗಳೂರಿನಿಂದ ಹಿರಿಯ ಭೂ ವಿಜ್ಞಾನಿಗಳ ತಂಡ ಆಗಮಿಸಿದ್ದು, ಅಧ್ಯಯನ ಆರಂಭಿಸಿದೆ. ಮಡಿಕೇರಿ ತಾಲ್ಲೂಕಿನ ಕರಿಕೆ, ಚೆಂಬು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜೂನ್ 25 ಮತ್ತು 29 ರಂದು ಎರಡು ದಿನಗಳಲ್ಲಿ ಮೂರು ಬಾರಿ ಭೂಕಂಪವಾಗಿತ್ತು. ಜೂ.28ರಂದು ನಡೆದಿದ್ದ ಭೂಕಂಪಕ್ಕೆ ಜಿಲ್ಲೆಯ ಹಲವೆಡೆ ಚಿಕ್ಕಪುಟ್ಟ ಸಮಸ್ಯೆಗಳು ಎದುರಾಗಿದ್ದವು. ಬೆಳಿಗ್ಗೆ 7.45 ಕ್ಕೆ ಚೆಂಬು ಗ್ರಾಮದಲ್ಲಿ 3.0 ರಿಕ್ಟರ್ ಪ್ರಮಾಣದ ಭೂಕಂಪವಾಗಿತ್ತು.

ಪದೇಪದೇ ನಡುಗುತ್ತಿರುವ ಕೊಡಗು; ಜಿಲ್ಲೆಯಲ್ಲಿ ಹಿರಿಯ ವಿಜ್ಞಾನಿಗಳಿಂದ ಅಧ್ಯಯನ Read More »

ಇಂದು ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್

ಸಮಗ್ರ ನ್ಯೂಸ್ : ಕರ್ನಾಟಕ ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಇಂದು ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ Read More »

ಕರಾವಳಿಯಲ್ಲಿ ಮಳೆ ಅಲರ್ಟ್| ಎರಡು ದಿನ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಜಿಲ್ಲೆಯಾದ್ಯಂತ ಬುಧವಾರದಿಂದ ಮುಂಗಾರು ಮಳೆ ವೇಗ ಪಡೆದುಕೊಂಡಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಜೂ.30 ಮತ್ತು ಜುಲೈ 1ರಂದು ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಮುಂದುವರಿಯಲಿದ್ದು, ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಗ್ರಾಮಾಂತರ ಪ್ರದೇಶದ ಅಲ್ಲಲ್ಲಿ ಮಳೆ ಸುರಿಯತೊಡಗಿತ್ತು. ದಿನವಿಡೀ ಮೋಡ ಹಾಗೂ ಮಳೆಯಾಗಿದ್ದು, ಜನತೆಯನ್ನು ಚಳಿ ಹಿಡಿಸಿದೆ. ಎಡೆಬಿಡದೆ ಸುರಿದ ಮಳೆಗೆ ಮಂಗಳೂರು ನಗರದ ತಗ್ಗು ಪ್ರದೇಶದ

ಕರಾವಳಿಯಲ್ಲಿ ಮಳೆ ಅಲರ್ಟ್| ಎರಡು ದಿನ ಭಾರೀ ಮಳೆ ಸಂಭವ Read More »

ಕೆ.ಎಸ್.ಆರ್.ಟಿ.ಸಿ ಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಬಸ್ ಪಾಸ್ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್ : 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿಯ ನಂತರವೂ ಪರೀಕ್ಷೆ ನಿಗದಿಯಾಗಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್ಸಾರ್ಟಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಪತ್ರಿಕಾ ಮಾಹಿತಿ ನೀಡಿದ್ದು, 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ತರಗತಿಗಳು ಹಾಗೂ ಪರೀಕ್ಷೆ ನಡೆಯುವುದರಿಂದ

ಕೆ.ಎಸ್.ಆರ್.ಟಿ.ಸಿ ಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಬಸ್ ಪಾಸ್ ಅವಧಿ ವಿಸ್ತರಣೆ Read More »

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ

ಸಮಗ್ರ ನ್ಯೂಸ್ : ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆಯೊಂದು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ನಡೆದಿದೆ. ಮೃತಚಾಲಕನನ್ನು ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಭಗವಂತರಾಯ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಬ್ರಹ್ಮಾವರ; ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಯೊಂದು ಜಿಲ್ಲೆಯ ತಾಲೂಕಿನ ಉಪ್ಪಿನಕೋಟೆಯ ಸಾಲಿಕೇರಿಯಲ್ಲಿ ನಡೆದಿದೆ. ಸಾಲಿಕೇರಿಯ ಶಂಕರಪ್ರಭು(82) ಮೃತ ದುರ್ದೈವಿ. ಶಂಕರ ಪ್ರಭು ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿಗೆ ಬಿದದ್ದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ಮೊದಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಹಗ್ಗದ ಸಹಾಯದಿಂದ ಶಂಕರ ಪ್ರಭು ಅವರ ಮೃತ

ಬ್ರಹ್ಮಾವರ; ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು Read More »

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

ಸಮಗ್ರ ನ್ಯೂಸ್: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ, ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಬಸ್ ಪಾಸ್ ಅವಧಿ ವಿಸ್ತರಿಸಿದ KSRTC Read More »

ಮತ್ತೆ ಹೆಚ್ಚುತ್ತಿರುವ ಕೋವಿಡ್| ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ದಿನೆ ದಿನೇ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸುವುದು, ಮಾಸ್ಕ್ ಸೇರಿದಂತೆ ಹಲವು ವಿಷಯ ಒಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ?: ಬೆಂಗಳೂರು ನಗರ ವ್ಯಾಪ್ತಿಗೆ ಅನ್ವಯಿಸಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್, ಪ್ರವೇಶ ಕುರಿತ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಸೋಂಕು ಕಂಡು ಬಂದರೆ

ಮತ್ತೆ ಹೆಚ್ಚುತ್ತಿರುವ ಕೋವಿಡ್| ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ Read More »