ರಾಜ್ಯ

ಕೇರಳ ಇನ್ಮುಂದೆ ‘ಕೇರಳಂ’| ಹೆಸರು ಬದಲಾವಣೆ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ

ಸಮಗ್ರ ನ್ಯೂಸ್: ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್​ನ ಕೇರಳ ಎಂಬ ಹೆಸರಿನ ಬದಲು ಕೇರಳ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಇದಕ್ಕೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆಯೂ ಸಿಕ್ಕಿದೆ. ಇನ್ನು

ಕೇರಳ ಇನ್ಮುಂದೆ ‘ಕೇರಳಂ’| ಹೆಸರು ಬದಲಾವಣೆ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ Read More »

ಉದ್ಯೋಗದ ಆಮಿಷವೊಡ್ಡಿ‌ ಸೆಕ್ಸ್ ದಂಧೆ| ಸಹೋದರಿಯರಿಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಉದ್ಯೋಗ ನೀಡುವ ಆಮಿಷವೊಡ್ಡಿ ಯುವತಿಯರನ್ನು ಸೆಕ್ಸ್ ರಾಕೆಟ್‌ಗೆ ತಳ್ಳುವುದು ಮತ್ತು ಬಲವಂತದ ಮತಾಂತರ ಮಾಡುತ್ತಿದ್ದ ಆರೋಪದ ಮೇಲೆ ಭೋಪಾಲ್‌ನಲ್ಲಿ ಇಬ್ಬರು ಸಹೋದರಿಯರನ್ನು ಪೊಲೀಸರು ಬಂಧಿಸಿದ್ದಾರೆ. ಅಮ್ರೀನ್ ಮತ್ತು ಆಫ್ರೀನ್ ಎಂಬ ಸಹೋದರಿಯರು ಹಾಗೂ ಅವರ ಸಹಚರ ಚಂದನ್ ಯಾದವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಲಾಲ್, ಚಾನು ಮತ್ತು ಯಾಸಿರ್ ಎಂಬ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.21 ಮತ್ತು 32 ವರ್ಷದ ಇಬ್ಬರು ಮಹಿಳೆಯರು ಬಾಗ್ ಸೇವಾನಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಜಾಲ

ಉದ್ಯೋಗದ ಆಮಿಷವೊಡ್ಡಿ‌ ಸೆಕ್ಸ್ ದಂಧೆ| ಸಹೋದರಿಯರಿಬ್ಬರು ಅರೆಸ್ಟ್ Read More »

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ…

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಯಾರಿ ಅಂತಿಮ ಘಟ್ಟ ತಲುಪಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.ವಿಜ್ಞಾನ ವಿಭಾಗದಲ್ಲಿ

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ… Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: 2026ರ ಫೆಬ್ರವರಿಯ ಕೊನೆಯ ವಾರದಲ್ಲಿ ಅನೇಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಸಕಾರಾತ್ಮಕ ಅಂಶಗಳು ಇರಲಿದ್ದು, ಜೀವನ ಸುಖಮಯ ಎನಿಸಲಿದೆ. ಕುಜನು ಉಚ್ಚಸ್ಥಾನವನ್ನು ಬಿಟ್ಟು ಮುಂದಕ್ಕೆ ಹೋಗಲಿದ್ದಾನೆ, ಮಾತ್ರವಲ್ಲ ಐದು ಗ್ರಹಗಳ ಯೋಗ ಸಂಭವಿಸುವುದು. ಅಪರೂಪದ ಸಂಯೋಗವೂ ಆಗಿದ್ದು ಅನೇಕ ಶುಭಗಳನ್ನು ನಿರೀಕ್ಷಿಸಬಹುದು. ಈ ವಾರದಲ್ಲಿ ನಿಮ್ಮ ರಾಶಿಗಳ ವಾರಭವಿಷ್ಯ ಹೇಗಿದೆ ನೋಡೋಣ… ​ಮೇಷ:ಈ ವಾರ ಸೂರ್ಯ ಮತ್ತು ಬುಧನ ಸಂಚಾರದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭದಾಯಕವಾಗಿದ್ದರೂ, ಮಂಗಳನ ಪ್ರಭಾವದಿಂದ ಕೋಪ ಹೆಚ್ಚಾಗಬಹುದು. ಕುಟುಂಬದಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸಾಮಾಜಿಕ‌ ಹೋರಾಟಗಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿರುದ್ಧ ಸತತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ದೂರು ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು

ಸಾಮಾಜಿಕ‌ ಹೋರಾಟಗಾರ ಸ್ನೇಹಮಯಿ ಕೃಷ್ಣ ಅರೆಸ್ಟ್ Read More »

ಕಡಬ ಮೂಲದ ಯುವಕ ಐರ್ಲೆಂಡ್ ನಲ್ಲಿ ನಿಗೂಢ ಸಾವು

ಸಮಗ್ರ ನ್ಯೂಸ್: ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಅವರ ಪುತ್ರ ಸಾಂಜೋ ಸುನಿಲ್ (31) ಎಂದು ಗುರುತಿಸಲಾಗಿದೆ. ಇವರು ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದಲ್ಲಿ ವಾಸವಾಗಿದ್ದರು. ಗುರುವಾರ ಸಾಂಜೋ ಸುನಿಲ್ ಅವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಐರಿಶ್ ಪೊಲೀಸರು ಪ್ರಾಥಮಿಕ

ಕಡಬ ಮೂಲದ ಯುವಕ ಐರ್ಲೆಂಡ್ ನಲ್ಲಿ ನಿಗೂಢ ಸಾವು Read More »

ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ. ಮಲೆನಾಡಲ್ಲಿಯೂ 2-3 ದಿನಗಳಲ್ಲಿ ಮಳೆಯಾಗಿವ ಮುನ್ಸೂಚನೆ ಇದ್ದು, ಕಾಫಿ ಬೆಳೆಗಾರರಿಗೆ ಇದು ಸಿಹಿಸುದ್ದಿಯಾಗಿದೆ.ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಮತ್ತು ಉತ್ತರ

ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ Read More »

ಸಾರಿಗೆ ಸಿಬ್ಬಂದಿಗಳ 26 ತಿಂಗಳ ಹಿಂಬಾಕಿ ನೀಡಲು ನಿರ್ಧಾರ

ಸಮಗ್ರ ನ್ಯೂಸ್: ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ ಹಿಂಬಾಕಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 2024ರ ಜನವರಿ 1ರಿಂದ ಆಗಬೇಕಿದ್ದ ಪರಿಷ್ಕೃತ ವೇತನ ವಿಚಾರಕ್ಕೆ ಸಂಬಂಧಿಸಿದಂತೆ 2025ರ ಮಾರ್ಚ್ 1 ರಿಂದ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಜಾರಿ ಮಾಡಲಾಗಿದೆ. ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಸ್ಪಂದಿಸಿದ ಸರ್ಕಾರ ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ

ಸಾರಿಗೆ ಸಿಬ್ಬಂದಿಗಳ 26 ತಿಂಗಳ ಹಿಂಬಾಕಿ ನೀಡಲು ನಿರ್ಧಾರ Read More »

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಪಂಚ ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಮೇಲಾಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶುಕ್ರವಾರ ‘ಸಾವಿರ ದಿನ’ ಪೂರೈಸಿದೆ. ಪಂಚ ಗ್ಯಾರಂಟಿಗಳಿಂದ ಗಲ್ಲಿಯಿಂದ ದಿಲ್ಲಿ, ನ್ಯೂಯಾರ್ಕ್‌ವರೆಗೂ ಚರ್ಚೆಯಾಗಿರುವ ಸರ್ಕಾರ ತನ್ನ ಸಾವಿರ ದಿನ ಪೂರೈಸಿದೆ. ಈ ಮೈಲುಗಲ್ಲಿನ ನೆನಪಿಗಾಗಿ ‘1001’ನೇ ದಿನವಾದ ಶನಿವಾರ ‘ಭೂ ಗ್ಯಾರಂಟಿ’ ಘೋಷಣೆ ಮಾಡುತ್ತಿದೆ. ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್‌ ಭೂ ಗ್ಯಾರಂಟಿ

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ Read More »

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ

ಸಮಗ್ರ ನ್ಯೂಸ್: ಪಿಯುಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ ಅವಕಶ ಕಲ್ಪಿಸಲಾಗುವುದು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದವರೆಗೂ ಉಚಿತ ಬಸ್ ಪ್ರಯಾಣವಿರಲಿದೆ ಎಂದು ತಿಳಿಸಿದೆ. ಕೆ.ಎಸ್.ಆರ್.ಟಿ.ಸಿ ಈ ನಿರ್ಧಾರ ಪಿಯುಸಿ ವಿದ್ಯಾಅರ್ಥಿಗಳಿಗೆ ಪರೀಕ್ಷೆಗೆ ತೆರಳುವವರಿಗೆ ಸಾಕಷ್ಟು ಅನುಕೂಲವಾಗಲಿದೆ.

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ Read More »