ರಾಜ್ಯ

ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ಭಾರತೀಯ ಸೇನೆಯ ಮೊದಲ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹೆಸರಿನಲ್ಲಿ ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಕೊಡಮಾಡಲಾದ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ಪತ್ರಕರ್ತ ಹೇಮಂತ್ ಸಂಪಾಜೆಗೆ ಮೈಸೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. ಮಾಜಿ ಸೈನಿಕ ಹಾಲಿ ಶಾಸಕ ಸಿ.ಎನ್.ಮಂಜೇಗೌಡ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಹೇಮಂತ್ ಸಂಪಾಜೆಯವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ ಎನ್ .ಕೆ.ಶಿವಣ್ಣ, […]

ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರಧಾನ Read More »

ನಾಲೆಗೆ ಬಿದ್ದ ಕ್ರೂಸರ್; 7 ಮಂದಿ ಸಾವು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ನಾಲೆಗೆ ಬಿದ್ದು 7 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋಕಾಕ್‍ನಿಂದ ಬೆಳಗಾವಿಗೆ ಬೆಳಗ್ಗೆ 7.30ರ ಸಮಯದಲ್ಲಿ ಬರುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲೆ ಬಳಿ ಪಲ್ಟಿಯಾಗಿ ಉರುಳಿಬಿದ್ದಿದೆ. ಈ ವೇಳೆ ಕ್ರೂಸರ್‍ನಲ್ಲಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರವಾಗಿ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 18 ಮಂದಿ ರೈಲುಹಳಿ ಜೋಡಣೆ ಕೆಲಸಕ್ಕೆಂದು ಅಕ್ಕತಂಗಿಯರ ಹಾಳದಿಂದ ಬಳ್ಳಾರಿಗೆ

ನಾಲೆಗೆ ಬಿದ್ದ ಕ್ರೂಸರ್; 7 ಮಂದಿ ಸಾವು Read More »

ನಾಳೆ(ಜೂ.27)ಯಿಂದ ಜು.4ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ|

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯು ಜೂನ್ 27ರ ಸೋಮವಾರದಿಂದ ಜುಲೈ 4ರವರೆಗೆ ನಡೆಯಲಿದ್ದು, ಈ ಬಾರಿ 94649 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪ್ರವೇಶ ಪತ್ರ ವಿತರಣೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ಅಳವಡಿಸಿಕೊಂಡಿದ್ದ ಮಾರ್ಗಸೂಚಿಯನ್ನೇ ಪೂರಕ

ನಾಳೆ(ಜೂ.27)ಯಿಂದ ಜು.4ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ| Read More »

ಚುರುಕಾದ ನೈಋತ್ಯ ಮುಂಗಾರು| ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ವರುಣಾರ್ಭಟ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ನೈಋತ್ಯ ಮುಂಗಾರು ಮಳೆ ಚುರುಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೀದರ್‌, ಕೊಪ್ಪಳ, ಹಾವೇರಿ ಧಾರವಾಡ ಜಿಲ್ಲೆಯಲ್ಲಿಯೂ ಮಳೆ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಉತ್ತರ ಕರ್ನಾಟಕ ಭಾಗದಲ್ಲಿ ಯೆಲ್ಲೋ ಅಲರ್ಟ್‌

ಚುರುಕಾದ ನೈಋತ್ಯ ಮುಂಗಾರು| ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ವರುಣಾರ್ಭಟ Read More »

ನಾವು ಶಿಕ್ಷಣ ನಿಷ್ಠರಾಗಿ ಪರಿಷ್ಕರಣೆ ಮಾಡಿದ್ದೇವೆ, ಕಮ್ಯೂನಿಸ್ಟರಾಗಿ‌ ಅಲ್ಲ; ಟೀಕೆ ಮಾಡುವುದು ಬಿಟ್ಟು ಮಾತುಕತೆಗೆ ಬರಲಿ| ಸಚಿವರ ಆರೋಪಗಳಿಗೆ ತಿರುಗೇಟು ನೀಡಿದ ಬರಗೂರು|

ಸಮಗ್ರ ನ್ಯೂಸ್: ಕಮ್ಯುನಿಸ್ಟರಾಗಿ ನಾವು ಪಠ್ಯ ಪರಿಷ್ಕರಣೆ ಮಾ‌ಡಲಿಲ್ಲ. ಶಿಕ್ಷಣ ನಿಷ್ಠರಾಗಿ ಮಾಡಿದೆವು. ಪಠ್ಯ ಪರಿಷ್ಕರಣೆಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟು ಮತ್ತು ಸಂವಿಧಾನಾತ್ಮಕ ಆಶಯಗಳನ್ನು ಪಾಲಿಸಿದ್ದೇವೆ ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ವಿವರವಾದ ಪತ್ರಿಕಾ ಹೇಳಿಕೆ ಮೂಲಕ ಸರ್ಕಾರದ ನಾಲ್ವರು ಸಚಿವರುಗಳು ಈ ಹಿಂದೆ ಮಾಡಿದ್ದ ಪ್ರತಿ ಆರೋಪಕ್ಕೂ ಅವರು ವಿವರಣೆಗಳ ಮೂಲಕ ತಿರುಗೇಟು ನೀಡಿದ್ದಾರೆ. ಮೈಸೂರು ಒಡೆಯರ ಕಾಲದ ವಿವರಗಳನ್ನು ನಾವು ಬಿಟ್ಟಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ವಾಸ್ತವವಾಗಿ 6ನೇ

ನಾವು ಶಿಕ್ಷಣ ನಿಷ್ಠರಾಗಿ ಪರಿಷ್ಕರಣೆ ಮಾಡಿದ್ದೇವೆ, ಕಮ್ಯೂನಿಸ್ಟರಾಗಿ‌ ಅಲ್ಲ; ಟೀಕೆ ಮಾಡುವುದು ಬಿಟ್ಟು ಮಾತುಕತೆಗೆ ಬರಲಿ| ಸಚಿವರ ಆರೋಪಗಳಿಗೆ ತಿರುಗೇಟು ನೀಡಿದ ಬರಗೂರು| Read More »

ಸುಳ್ಯ: ಹಲವು ಕಡೆಗಳಲ್ಲಿ ಭೂಕಂಪನ!; ಆತಂಕಗೊಂಡ ಜನತೆ

ಸಮಗ್ರ ನ್ಯೂಸ್: ಮಡಿಕೇರಿ ತಾಲೂಕಿನ ಪೆರಾಜೆ ಹಾಗೂ ಸುಳ್ಯ ಅಡ್ತಲೆ ಭಾಗದಲ್ಲಿ ಭೂಮಿ ಕಂಪಿಸಿದ ಘಟನೆ ಇಂದು ಬೆಳಿಗ್ಗೆ 9.10 ವೇಳೆ ನಡೆದಿದೆ. ಪೆರಾಜೆ, ಅಡ್ತಲೆ ಸೇರಿದಂತೆ ಹಲವು ಕಡೆಗಳಲ್ಲಿ 45 ಸೆಕೆಂಡು ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯ ಮೂಲಗಳ ಮಾಹಿತಿ ಲಭಿಸಿದೆ. ಇನ್ನು ತಾಲೂಕಿನ, ಸಂಪಾಜೆ, ಕೊಯನಾಡು, ಐವರ್ನಾಡು, ಪೇರಾಲು, ಮಂಡೆಕೋಲು ಭಾಗಗಳಲ್ಲಿ ಭೂಕಂಪವಾಗಿದ್ದು, ಹಲವು ಕಡೆಗಳಲ್ಲಿ ಮನೆ ಗೋಡೆ ಬಿರುಕು ಬಿಟ್ಟಿದೆ. ಕಳೆದ ಕೆಲದಿನಗಳ ಹಿಂದೆ ಮಡಿಕೇರಿ, ಹಾಸನ ಜಿಲ್ಲೆಗಳಲ್ಲಿ ಭೂಕಂಪನವಾಗಿದ್ದು ಇದರ

ಸುಳ್ಯ: ಹಲವು ಕಡೆಗಳಲ್ಲಿ ಭೂಕಂಪನ!; ಆತಂಕಗೊಂಡ ಜನತೆ Read More »

ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆ| ತೆರೆದು ನೋಡಿದಾಗ ಬೆಚ್ಚಿಬಿದ್ದ ಬೆಳಗಾವಿ ಜನ| ಏನಿತ್ತು ಅದರೊಳಗೆ?

ಸಮಗ್ರ ನ್ಯೂಸ್: ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆಯೊಂದರಲ್ಲಿ ಏಳು ಭ್ರೂಣಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಹಳ್ಳಕ್ಕೆ ಚೆಲ್ಲಿದ್ದಾರೆ. ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಬಿಡಲಾಗಿದ್ದು, ಶವ ನೋಡಿದ ಜನ ಹೌಹಾರಿದ್ದಾರೆ. ಒಟ್ಟು ಐದು ಡಬ್ಬಿಗಳಲ್ಲಿ ಏಳು ಭ್ರೂಣಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಭ್ರೂಣಗಳ ಮೃತ ದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಮೃತದೇಹ ಕಂಡು

ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆ| ತೆರೆದು ನೋಡಿದಾಗ ಬೆಚ್ಚಿಬಿದ್ದ ಬೆಳಗಾವಿ ಜನ| ಏನಿತ್ತು ಅದರೊಳಗೆ? Read More »

ಚಾಲಕನ ಅಜಾಗರೂಕತೆಯಿಂದ ಕಾಲು ಮುರಿತಕ್ಕೊಳಗಾದ ಬಸ್ ಕಂಡಕ್ಟರ್

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ ಚಾಲಕ ರಸ್ತೆ ಹಂಪ್‌ ನಲ್ಲಿ ಅಜಾಗರೂಕತೆಯಿಂದ ಚಲಾಯಿಸದ ಕಾರಣ ನಿರ್ವಾಹಕನ ಕಾಲು ಮುರಿದ ಘಟನೆ ಕುಣಿಗಲ್ ತಾಲೂಕಿನ ಹಳೇಯ ರಾಷ್ಟ್ರೀಯ ಹೆದ್ದಾರಿ 48 ಗೊಟ್ಟಿಕೆರೆ ಸಮೀಪ ಶುಕ್ರವಾರ ನಡೆದಿದೆ. ಕೋಲಾರ ವಿಭಾಗದ ಬಸ್ ನಿರ್ವಾಹಕ ಸಂಗಪ್ಪ ಹಕ್ಕಿ (45) ಕಾಲು ಮುರಿದುಕೊಂಡ ನಿರ್ವಾಹಕ. ಶುಕ್ರವಾರ ಧರ್ಮಸ್ಥಳದಿಂದ ಹೊರಟ ಬಸ್ ಕುಣಿಗಲ್ ಮಾರ್ಗವಾಗಿ ಕೊಲಾರಕ್ಕೆ ತೆರಳುತ್ತಿತ್ತು. ಈ ವೇಳೆ ತಾಲೂಕಿನ ಗೊಟ್ಟಿಕೆರೆ ಬಳಿ ಚಾಲಕ ಮಹತೇಶ್ ಏಕಾಏಕಿ ಹಂಪ್‌ ಹಾರಿಸಿದ

ಚಾಲಕನ ಅಜಾಗರೂಕತೆಯಿಂದ ಕಾಲು ಮುರಿತಕ್ಕೊಳಗಾದ ಬಸ್ ಕಂಡಕ್ಟರ್ Read More »

ಸ್ವಿಸ್ ಬ್ಯಾಂಕ್ ನಲ್ಲಿ‌ ಭಾರತೀಯರ ಹೂಡಿಕೆ‌ ದಾಖಲೆ ಮಟ್ಟದಲ್ಲಿ ಹೆಚ್ಚಳ| ಕಪ್ಪುಹಣ ವಾಪಸ್ಸು ತರುವವರು ಎಲ್ಲಿ ಹೋದ್ರು?

ಸಮಗ್ರ ನ್ಯೂಸ್: ಕಪ್ಪು ಹಣವನ್ನು‌ ಭಾರತಕ್ಕೆ ತರುತ್ತೇವೆ ಎಂದು ಪ್ರಮುಖ‌ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದ ಮೋದಿ ಬಳಿಕ ಕಪ್ಪು ಹಣವನ್ನು‌ ಮರೆತೇ ಬಿಟ್ಟಿದ್ದಾರೆ. ಆದರೆ ಮೋದಿ ಆಡಳಿತದ ಅವಧಿಯಲ್ಲೇ ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಹೂಡಿಕೆ ಗಣನೀಯವಾಗಿ ಹೆಚ್ಚಾಗಿರುವ ಸ್ಪೋಟಕ ಸತ್ಯ ಬಹಿರಂಗವಾಗಿದೆ. ಸ್ವಿಜರ್ಲ್ಯಾಂಡ್ ಸೆಂಟ್ರಲ್ ಬ್ಯಾಂಕ್ ಈ ಕುರಿತು ಮಾಹಿತಿಯನ್ನು ನೀಡಿದ್ದು, 2021ರಲ್ಲಿ ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 30,500 ಕೋಟಿ ರೂ.ಗೆ ಏರಿಕೆ ಕಂಡಿದೆ. ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಹೂಡಿಕೆ 14 ವರ್ಷಗಳ ಗರಿಷ್ಠ ಮೊತ್ತಕ್ಕೆ

ಸ್ವಿಸ್ ಬ್ಯಾಂಕ್ ನಲ್ಲಿ‌ ಭಾರತೀಯರ ಹೂಡಿಕೆ‌ ದಾಖಲೆ ಮಟ್ಟದಲ್ಲಿ ಹೆಚ್ಚಳ| ಕಪ್ಪುಹಣ ವಾಪಸ್ಸು ತರುವವರು ಎಲ್ಲಿ ಹೋದ್ರು? Read More »

ಮುಂದುವರಿಯಲಿದೆ ಮತ್ತೆ ಮೂರು ದಿನ ಭಾರೀ ಮಳೆ| ಜೂ.26ರವರೆಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮಳೆಯ ಆರ್ಭಟ ಇನ್ನೂ 3 ದಿನಗಳ ಕಾಲ ಮುಂದುವರೆಯಲಿದೆ. ಜೂನ್ 26ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಹೀಗಾಗಿ, ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ

ಮುಂದುವರಿಯಲಿದೆ ಮತ್ತೆ ಮೂರು ದಿನ ಭಾರೀ ಮಳೆ| ಜೂ.26ರವರೆಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ Read More »