ರಾಜ್ಯ

ಇಂದು ಪಿಯುಸಿ ಫಲಿತಾಂಶ; ಮೊಬೈಲ್ ಗೆ ಬರಲಿದೆ ಸಂದೇಶ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು (ಶನಿವಾರ) ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್‌ಸೈಟ್‌ www.karresults.nic.in ಸ್‌ಎಸ್‌ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ಪಿಯುಸಿ ಫಲಿತಾಂಶವನ್ನೂ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್‌ ಸಂಖ್ಯೆಗೆ ಕಳುಹಿಸಲಾಗುತ್ತದೆ. […]

ಇಂದು ಪಿಯುಸಿ ಫಲಿತಾಂಶ; ಮೊಬೈಲ್ ಗೆ ಬರಲಿದೆ ಸಂದೇಶ Read More »

ಹೊಟ್ಟೆಪಾಡಿಗಾಗಿ ಸಾಬೂನು ಮಾರುತ್ತಿರುವ ಚತುರ್ಭಾಷಾ ನಟಿ ಐಶ್ವರ್ಯಾ ಭಾಸ್ಕರನ್|

ಸಮಗ್ರ ನ್ಯೂಸ್: ಅವಕಾಶದ ಕೊರತೆ ಕಾರಣದಿಂದ ಬದುಕಲು ಒಂದು ಕಾಲದಲ್ಲಿ ತಮಿಳು, ಮಲಯಾಳಂ, ತೆಲುಗು ಹಾಗೂ ಕನ್ನಡ ಚಿತ್ರರಂಗದ ಟಾಪ್ ಹೀರೊಗಳೊಂದಿಗೆ ಹೀರೊಯಿನ್ ಆಗಿ ನಟಿಸಿದ್ದ ಒಂದು ಕಾಲದ ಮೇರು ನಟಿ ಐಶ್ವರ್ಯಾ ಭಾಸ್ಕರನ್ ಹೊಟ್ಟೆಪಾಡಿಗೆ ಬೀದಿಗಳಲ್ಲಿ ಸಾಬೂನು ಮಾರುತ್ತಿದ್ದಾರೆ. ಒಂದು ಕಾಲಕ್ಕೆ ಇವರು ರಜಿನಿಕಾಂತ್ ಹಾಗೂ ಮೋಹನ್ ಲಾಲ್ ಜೊತೆ ಹೀರೊಯಿನ್ ಆಗಿ ನಟಿಸಿದ್ದ ಈಕೆಗೆ ಇಂದು ಈ ಪರಿಸ್ಥಿತಿ ಒದಗಿಬಂದಿದೆ. ಸಿನಿಮಾಗಳಲ್ಲಿ ಉತ್ತುಂಗಕ್ಕೇರಿದ ನಂತರ ಐಶ್ವರ್ಯಾ ಟಿವಿ ಧಾರಾವಾಹಿಗಳಲ್ಲೂ ಮಿಂಚಿದ್ದರು. ಆದರೆ, ದಿನಗಳೆದಂತೆ ಅವರಿಗೆ

ಹೊಟ್ಟೆಪಾಡಿಗಾಗಿ ಸಾಬೂನು ಮಾರುತ್ತಿರುವ ಚತುರ್ಭಾಷಾ ನಟಿ ಐಶ್ವರ್ಯಾ ಭಾಸ್ಕರನ್| Read More »

ನಾಳೆ(ಮಾ.18) ಪಿಯುಸಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್ : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು. ಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ

ನಾಳೆ(ಮಾ.18) ಪಿಯುಸಿ ಫಲಿತಾಂಶ ಪ್ರಕಟ Read More »

ರಾಜ್ಯದಲ್ಲಿ ಏರಿಕೆ ಕಂಡ ಕೊರೊನಾ ಪಾಸಿಟಿವಿಟಿ ದರ| ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಆಯುಕ್ತ ಡಾ.ರಣದೀಪ್ ಮಾತನಾಡಿ, ಕೊರೊನಾ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಆದರೆ ಆಸ್ಪತ್ರೆಗೆ ದಾಖಲೆಯಾಗುವವರ ಸಂಖ್ಯೆ ಕಡಿಮೆ ಇದೆ.ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ ಗಮನ ಹರಿಸುತ್ತಿದ್ದು, ಕೊರೊನಾ ಲಸಿಕಾಕರಣಕ್ಕೆ ಹೆಚ್ಚಿನ‌ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕೊರೋನಾ ಶೀಘ್ರ ಪತ್ತೆಗೆ ಕೊರೋನಾ ಪರೀಕ್ಷೆ, ಐಸೋಲೇಶನ್

ರಾಜ್ಯದಲ್ಲಿ ಏರಿಕೆ ಕಂಡ ಕೊರೊನಾ ಪಾಸಿಟಿವಿಟಿ ದರ| ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ Read More »

ಮುಂದಿನ ಚುನಾವಣೆಯಲ್ಲಿ ಎಸ್.ಅಂಗಾರಗೆ ಗೇಟ್‌ಪಾಸ್!?
ಸಚಿವರಾಗಿಯೂ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲವಂತೆ ಸುಳ್ಯ ಶಾಸಕ!!

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತದಲ್ಲಿ 6 ಬಾರಿಯ ಶಾಸಕರಾಗಿ ಇದೀಗ ಸಚಿವರಾಗಿರುವ ಎಸ್ ಅಂಗಾರರು ಮುಂದಿನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುತ್ತಿಲ್ಲ ಎಂಬ ಸುದ್ದಿಗಳು ಸ್ವಪಕ್ಷದಲ್ಲೇ ಕೇಳಿ ಬರುತ್ತಿದೆ. ಹಾಗಿದ್ದರೆ ಮುಂದೆ ಬಿಜೆಪಿಯಿಂದ ಸುಳ್ಯ ‌ಕ್ಷೇತ್ರದಲ್ಲಿ ಸ್ಷರ್ದಿಸುವವರು ಯಾರು? ಎಂಬ ಕುತೂಹಲ ಮೂಡಿದೆ. ೧೯೯೪ರಿಂದ ಸುಳ್ಯ ಕ್ಷೇತ್ರದ ಶಾಸಕರಾಗಿರುವ ಅಂಗಾರರು ಜನಾನುರಾಗಿ ಹಾಗೂ ಅಜಾತ ಶತ್ರು ಎಂದೇ ಖ್ಯಾತರು. ಸರಳ ಸಜ್ಜನಿಕೆಯ ಅವರ ವ್ಯಕ್ತಿತ್ವ ಅಲ್ಲಿನ ಜನಸ್ತೋಮಕ್ಕೆ ಮೆಚ್ಚುಗೆಯಾದುದರಿಂದಲೇ ಅವರು ಹೀಗೆ ಸತತವಾಗಿ ಗೆಲುವಿನ ನಗೆ

ಮುಂದಿನ ಚುನಾವಣೆಯಲ್ಲಿ ಎಸ್.ಅಂಗಾರಗೆ ಗೇಟ್‌ಪಾಸ್!?
ಸಚಿವರಾಗಿಯೂ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲವಂತೆ ಸುಳ್ಯ ಶಾಸಕ!!
Read More »

ದಲಿತ ಮುಖಂಡನ ಹತ್ಯೆ ಪ್ರಕರಣ|ಅಂಬೇಡ್ಕರ್ ರಕ್ಷಣಾ ವೇದಿಕೆ ಖಂಡನೆ

ಸಮಗ್ರ ನ್ಯೂಸ್: ತಮಕೂರಿನ ಗುಬ್ಬಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಮಚ್ಚು-ಲಾಂಗ್ ನಿಂದ ಹಲ್ಲೆ ನಡೆಸಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ನರಸಿಂಹಮೂರ್ತಿ 50 ವರ್ಷ ಎಂಬವರ ಬರ್ಬರ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಮಾತನಾಡಿ ಇವತ್ತು ದಲಿತ ಸಮುದಾಯದವರನ್ನು ಎಲ್ಲಿ ಬೇಕೋ ಅಲ್ಲಿ ಕೊಲೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಲ್ಲಿಬೇಕಲ್ಲಿ ದಲಿತ ಸಮುದಾಯದ ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ಈಗ ಹೆಚ್ಚಾಗಿ ನಡೆಯುತ್ತಿದೆ ಇದಕ್ಕೆಲ್ಲ ಪೊಲೀಸ್ ಇಲಾಖೆ ಸರಿಯಾದ

ದಲಿತ ಮುಖಂಡನ ಹತ್ಯೆ ಪ್ರಕರಣ|ಅಂಬೇಡ್ಕರ್ ರಕ್ಷಣಾ ವೇದಿಕೆ ಖಂಡನೆ Read More »

ಇಂದಿನಿಂದ ಸಿಇಟಿ ಪರೀಕ್ಷೆ; ಸಿಸಿ ಟಿವಿ ಕಣ್ಗಾವಲಿನಲ್ಲಿ‌ ನಡೆಯಲಿದೆ ಎಕ್ಸಾಂ

ಸಮಗ್ರ ನ್ಯೂಸ್: ಇಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಇದೇ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ. `16ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ಜರುಗಲಿದೆ’. 18ರ

ಇಂದಿನಿಂದ ಸಿಇಟಿ ಪರೀಕ್ಷೆ; ಸಿಸಿ ಟಿವಿ ಕಣ್ಗಾವಲಿನಲ್ಲಿ‌ ನಡೆಯಲಿದೆ ಎಕ್ಸಾಂ Read More »

“ಮೇಲುಕೋಟೆ ಬಾಹುಬಲಿ” ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

ಸಮಗ್ರ ನ್ಯೂಸ್: ಮೇಲುಕೋಟೆಯ ಬಾಹುಬಲಿ ಎಂದೇ ಹೆಸರಾಗಿದ್ದ 75 ವರ್ಷದ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಸೋಮವಾರ ವಿಧಿವಶರಾಗಿದ್ದಾರೆ. ರಾಮಸ್ವಾಮಿ ಅಯ್ಯಂಗಾರ್ ರವರು ಯೋಗಾ ನರಸಿಂಹ ಸ್ವಾಮಿ ಬೆಟ್ಟದ ದೇವಾಲಯದಲ್ಲಿ ಅಡುಗೆ ಮನೆ ಕೈಂಕರ್ಯ ಮಾಡುತ್ತಿದ್ದರು. ಅವರು ಭಾರಿ ಗಾತ್ರದ ಪಾತ್ರೆಯಲ್ಲಿ ಬೆಟ್ಟದ ಮಧ್ಯದ ಭಾಗದ ಬಾವಿಯಿಂದ ನೀರು ತೆಗೆದುಕೊಂಡು ನೂರಾರು ಮೆಟ್ಟಿಲುಗಳನ್ನು ಹತ್ತಿ ನರಸಿಂಹನ ಅಭಿಷೇಕ ಮತ್ತು ಪ್ರಸಾದಗಳಿಗೆ ಸೇವೆ ಸಮರ್ಪಿಸಿದ್ದರು. ಈ ಕಾರಣಕ್ಕಾಗಿಯೇ ಅವರನ್ನು ಮೇಲುಕೋಟೆಯ ಬಾಹುಬಲಿ ಎಂದೇ ಗುರುತಿಸಲಾಗುತ್ತಿತ್ತು. ತಮ್ಮ ಸೇವಾವಧಿಯಲ್ಲಿ ಒಂದು ದಿನವೂ

“ಮೇಲುಕೋಟೆ ಬಾಹುಬಲಿ” ರಾಮಸ್ವಾಮಿ ಅಯ್ಯಂಗಾರ್ ವಿಧಿವಶ Read More »

ನ್ಯಾ. ಭೀಮನಗೌಡ ಸಂಗನ ಗೌಡ ಪಾಟೀಲ್ ಲೋಕಾಯುಕ್ತರಾಗಿ ನೇಮಕ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಖಾಲಿ ಇದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕರ್ನಾಟಕ ರಾಜ್ಯ ಉಪಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಶಿಫಾರಸಿನ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಾಯುಕ್ತರನ್ನಾಗಿ ನೇಮಕ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

ನ್ಯಾ. ಭೀಮನಗೌಡ ಸಂಗನ ಗೌಡ ಪಾಟೀಲ್ ಲೋಕಾಯುಕ್ತರಾಗಿ ನೇಮಕ Read More »

ಧರ್ಮಸ್ಥಳ: ರಸ್ತೆಗೆ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿ ಹೊಡೆದು ಉದ್ಯಮಿ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟ ಬರುವ ಹಾದಿಯಲ್ಲಿ ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ಸವಾರರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 5 ರ ಸುಮಾರಿಗೆ ನಡೆದಿದೆ. ಮೃತಪಟ್ಟವರನ್ನು 42 ವರ್ಷದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು ಧರ್ಮಸ್ಥಳದಲ್ಲಿ ವಾಸವಾಗಿದ್ದರು. ಮುಂಜಾನೆ ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟಕ್ಕೆ ಬರುವ ಮಾರ್ಗ ಮಧ್ಯ ರಸ್ತೆಗೆ ಬಿದ್ದಿದ್ದ ಮರವನ್ನು

ಧರ್ಮಸ್ಥಳ: ರಸ್ತೆಗೆ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿ ಹೊಡೆದು ಉದ್ಯಮಿ ಸಾವು Read More »