ರಾಜ್ಯ

ಮಾಜಿ ಕ್ರಿಕೆಟಿಗನ ಪುತ್ರ ಈಗ ‘ಅವನಲ್ಲ ಅವಳು’! ಲಿಂಗ ಬದಲಾವಣೆ ಮಾಡಿಕೊಂಡ ಆರ್ಯನ್

ಸಮಗ್ರ ನ್ಯೂಸ್: ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಪುತ್ರ ಆರ್ಯನ್ ಬಂಗಾರ್ ಅವರು ಲಿಂಗ ಬದಲಾವಣೆ ಚಿಕಿತ್ಸೆಗೆ ಒಳಗಾಗಿದ್ದು, ತಮ್ಮ ಹೆಸರನ್ನು ಅನಾಯಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. 23 ವರ್ಷದ ಆರ್ಯನ್ ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಭಾರತದ ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿಯೊಂದಿಗೆ ಮತ್ತು ಅವರ ತಂದೆಯೊಂದಿಗೆ ಕೆಲವು ಹಳೆಯ ಚಿತ್ರಗಳನ್ನು ಪೋಸ್ಟ್ ಲಿಂಗ ಬದಲಾವಣೆಯ ಥೆರಪಿಯೊಂದಿಗೆ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ 10 ತಿಂಗಳ ನಂತರ, ಕ್ರಿಕೆಟಿಗ […]

ಮಾಜಿ ಕ್ರಿಕೆಟಿಗನ ಪುತ್ರ ಈಗ ‘ಅವನಲ್ಲ ಅವಳು’! ಲಿಂಗ ಬದಲಾವಣೆ ಮಾಡಿಕೊಂಡ ಆರ್ಯನ್ Read More »

ಚಾರ್ಮಾಡಿ ಘಾಟ್ ರಸ್ತೆ ದ್ವಿಪಥಕ್ಕೆ 343.74 ಕೋಟಿ ಬಿಡುಗಡೆ – ಸಂಸದ ಚೌಟ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ

ಚಾರ್ಮಾಡಿ ಘಾಟ್ ರಸ್ತೆ ದ್ವಿಪಥಕ್ಕೆ 343.74 ಕೋಟಿ ಬಿಡುಗಡೆ – ಸಂಸದ ಚೌಟ Read More »

ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ‌ ಪತ್ನಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಮಹತ್ವದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದೆ. ಈಗಾಗಲೇ ಈ ಯೋಜನೆಯ ಹಣವನ್ನೇ ಬಳಸಿಕೊಂಡು ಮಹಿಳೆಯರು ಗೃಹ ಉಪಯೋಗಿ ವಸ್ತುಗಳು, ತಮ್ಮ ಮಕ್ಕಳಿಗೆ ವಾಹನಗಳನ್ನು ಕೊಡಿಸಿದ ಉದಾಹರಣೆಗಳಿವೆ. ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಗೃಹಿಣಿಯೊಬ್ಬರು ತನ್ನ ಪತಿಗೆ ಸ್ಕೂಟರ್ ಕೊಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹಾಗಾದರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ‌ ಪತ್ನಿ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ

ಸಮಗ್ರ ನ್ಯೂಸ್:ನಗರದ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಆರನೇ ಆರೋಪಿ ಫೈಸಲ್ ಎಂಬಾತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ’ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶಂಕೆ ವ್ಯಕ್ತಪಡಿಸಿದೆ. ಕಳೆದ ಮಾರ್ಚ್ 1ರಂದು ಕೆಫೆಗೆ ಬಂದಿದ್ದ ಶಂಕಿತನೊಬ್ಬ ಬ್ಯಾಗ್‌ನಲ್ಲಿ ತಂದಿದ್ದ ಕಚ್ಚಾ ಬಾಂಬ್ ಅನ್ನು ಕೆಫೆಯಲ್ಲಿ ಇಟ್ಟು ಪರಾರಿ ಆಗಿದ್ದ. ಗ್ರಾಹಕರು ಗಾಯಗೊಂಡಿದ್ದರು.ತನಿಖೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು, ಪಶ್ಚಿಮ ಬಂಗಾಳದಲ್ಲಿ ಶಂಕಿತ ಉಗ್ರರಾದ ಮುಸಾವೀ‌ರ್ ಹುಸೇನ್ ಶಾಜೀದ್‌ ಹಾಗೂ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಅವರನ್ನು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ Read More »

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಂದು ಭಾರೀ ಮಳೆ ಸುರಿಯುವ ಸೂಚನೆ ಸಿಕ್ಕಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮಾತ್ರ ಕಾಣಿಸಿಕೊಳ್ಳುತ್ತಿದೆ. ಆದರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು?

ಸಮಗ್ರ ನ್ಯೂಸ್: ತಾಯಿ ಮತ್ತು ಮಗನ ನಡುವಿನ ಜಗಳದಿಂದ ಒಂದು ಅಹಿತಕರ ಘಟನೆ ನಡೆದಿದೆ. ಠಾಣೆಯಲ್ಲಿ ಜಗಳದ ವೇಳೆ ತಾಯಿಯ ಪ್ರಚೋದನೆಯಿಂದ ಮಗ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಹಲ್ಲೆಗೊಳಗಾದ ಪಿಎಸ್‌ಐ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ. ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್‌ಐ (PSI) ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್‌ಔಟ್ ಆಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು? Read More »

ದ.ಕ ಜಿಲ್ಲೆಯಲ್ಲೂ ವಕ್ಫ್ ಬೋರ್ಡ್ ನಿಂದ ಆಸ್ತಿ ಕಬಳಿಕೆ ಆರೋಪ| ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಭೂಮಿ ನೋಂದಣಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ನೋಂದಣಿಯಾಗಿದೆ. 2018 ರಲ್ಲಿ ವಕ್ಫ್ ಕಾನೂನು ಬಳಸಿ ಈ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಂಡಿದೆ. ಸರ್ವೆ ನಂಬರ್ 436\ 11 ರಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ಪಹಣಿಪತ್ರದ ಕಾಲಂ 11 ರಲ್ಲಿ ವಕ್ಫ್ ಬೋರ್ಡ್ ಹೆಸರು ಬರೆಯಲಾಗಿರುವುದು

ದ.ಕ ಜಿಲ್ಲೆಯಲ್ಲೂ ವಕ್ಫ್ ಬೋರ್ಡ್ ನಿಂದ ಆಸ್ತಿ ಕಬಳಿಕೆ ಆರೋಪ| ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಭೂಮಿ ನೋಂದಣಿ Read More »

40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ

ಸಮಗ್ರ ನ್ಯೂಸ್: ರಾಜ್ಯದ ಒಟ್ಟಾರೆ ಸಾಲದ ಮೊತ್ತವು 5.53 ಲಕ್ಷ ಕೋಟಿ ರೂ.ಗೆ ತಲುಪಿದ್ದು, ಇದೀಗ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ತಲಾ 20 ಸಾವಿರ ಕೋಟಿ ರೂ. ಅಭಿವೃದ್ಧಿ (ಸರಳ) ಸಾಲ ಪಡೆಯಲು ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ರಾಜ್ಯ ಸರಕಾರ ಅನುಮತಿ ಪಡೆದುಕೊಂಡಿದೆ. ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರ ಸರಕಾರದಿಂದ 6,855ಕೋಟಿ ರೂ. ಹಾಗೂ ಮುಕ್ತ ಮಾರುಕಟ್ಟೆಯಿಂದ 96,840 ಕೋ.ರೂ. ಸೇರಿ ಒಟ್ಟು 1.05 ಲಕ್ಷ ಕೋ.ರೂ.ಸಾಲ ಪಡೆಯುವ ಅಂದಾಜು ಮಾಡಿದ್ದ ಸರಕಾರ, ಸೆಪ್ಟಂಬರ್‌ ವರೆಗೆ 4 ಸಾವಿರ

40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ Read More »

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಬಿಕಾರಾಮ್ ಬಂಧನ!

ಸಮಗ್ರ ನ್ಯೂಸ್: ಬಾಲಿವುಡ್ ಕಿಂಗ್ ಖಾನ್ ಖ್ಯಾತಿಯ ನಟ ಸಲ್ಮಾನ್ ಖಾನ್‌ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ರಾಜಸ್ತಾನ ಮೂಲದ ಬಿಕಾರಾಮ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಹಾವೇರಿ ನಗರದ ಗೌಡರ ಓಣಿಯಲ್ಲಿ ಬಂಧಿಸಿದ್ದಾರೆ. ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಸಂದೇಶ ಹಾಗೂ ಆತನ ಮೊಬೈಲ್ ಟವ‌ರ್ ಸೇರಿದಂತೆ ವಿವಿಧ ತಾಂತ್ರಿಕ ಮಾಹಿತಿಗಳನ್ನು ಸಂಗ್ರಹಿಸುತ್ತಾ ಆತನನ್ನು ಹುಡುಕಿಕೊಂಡ ಬಂದ ಮುಂಬೈ ಪೊಲೀಸರು ಸೀದಾ ಕರ್ನಾಟಕದ ಏಲಕ್ಕಿ ನಾಡು ಹಾವೇರಿಗೆ ಬಂದಿದ್ದಾರೆ. ಹಾವೇರಿ ನಗರದಲ್ಲಿನ ಗೌಡರ ಓಣಿಯಲ್ಲಿ ಬಾಡಿಗೆ ರೂಮು

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಬಿಕಾರಾಮ್ ಬಂಧನ! Read More »

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಮುಜುರಾಯಿ ಇಲಾಖೆಯ ‘ಎ’ ಗ್ರೇಡ್ ದೇವಸ್ಥಾನ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ಆಗ್ರಹಿಸಿ ನವೆಂಬರ್ 11 ರಂದು ದೇವಸ್ಥಾನದ ವಠಾರದಲ್ಲಿ ನ್ಯಾಯ ಸಿಗುವವರೆಗೆ ಧರಣಿ ನಡೆಸಲಾಗುತ್ತದೆ ಎಂದು ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ Read More »