ರಾಜ್ಯ

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ| ಒಟ್ಟು 20 ರಜೆಗಳಿಗೆ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ ಮಂಜೂರಾತಿ ನೀಡಿದ್ದು, ಭಾನುವಾರ ಬರುವ ಮಹಾ ಶಿವರಾತ್ರಿ (ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ (ಅ.25), ಕನ್ನಡ ರಾಜ್ಯೋತ್ಸವ (ನ.1) ಹಾಗೂ ನರಕ ಚತುರ್ದಶಿ (ನ.8) ಮತ್ತು ಎರಡನೇ

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ| ಒಟ್ಟು 20 ರಜೆಗಳಿಗೆ ಸಚಿವ ಸಂಪುಟ ಅನುಮೋದನೆ Read More »

ಮೇಕೆದಾಟು ಯೋಜನೆ| ಕರ್ನಾಟಕಕ್ಕೆ ಸುಪ್ರೀಂ ನಲ್ಲಿ ಗೆಲುವು; ತಮಿಳುನಾಡು ರಿಟ್ ಅರ್ಜಿ ವಜಾ

ಸಮಗ್ರ ನ್ಯೂಸ್: ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ

ಮೇಕೆದಾಟು ಯೋಜನೆ| ಕರ್ನಾಟಕಕ್ಕೆ ಸುಪ್ರೀಂ ನಲ್ಲಿ ಗೆಲುವು; ತಮಿಳುನಾಡು ರಿಟ್ ಅರ್ಜಿ ವಜಾ Read More »

ರಾಜ್ಯದ ಮಹಿಳಾ‌ ನೌಕರರಿಗೆ ಋತುಚಕ್ರ ರಜೆ ಮಂಜೂರುಗೊಳಿಸಿ‌ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಮಹಿಳಾ ನೌಕರರಿಗೆ ಒಂದು ದಿನ ‘ಋತುಚಕ್ರ ರಜೆ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18

ರಾಜ್ಯದ ಮಹಿಳಾ‌ ನೌಕರರಿಗೆ ಋತುಚಕ್ರ ರಜೆ ಮಂಜೂರುಗೊಳಿಸಿ‌ ಆದೇಶ Read More »

ಧರ್ಮಸ್ಥಳದಲ್ಲಿ ಸತ್ತ ಹಿಂದೂ ಹೆಣ್ಮಕ್ಕಳಿಗೆ ನ್ಯಾಯ ಕೇಳಿದ್ರೆ ನಾನು ಎಡಪಂಥೀಯಳೇ? ಮಾಧ್ಯಮಗಳಿಗೆ ತಿರುಗೇಟು ನೀಡಿದ ನಾಗಲಕ್ಷ್ಮಿ ಚೌದರಿ

ಸಮಗ್ರ ನ್ಯೂಸ್: ಧರ್ಮಸ್ಥಳದ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ಆಗ್ರಹಿಸಿದ್ದಕ್ಕೆ ನನ್ನನ್ನು ಎಡಪಂಥೀಯಳು ಎಂದು ಜರಿಯಲಾಗುತ್ತಿದೆ. ಅಲ್ಲಿ ಅನ್ಯಾಯವಾಗಿ ಪ್ರಾಣ ಬಿಟ್ಟವರು ಹಿಂದೂ ಹೆಣ್ಣುಮಕ್ಕಳೇ ಎಂಬುದು ನೆನಪಿರಲಿ. ಹೆಣ್ಣಿಗೆ ನ್ಯಾಯ ಕೇಳುವುದು ತಪ್ಪೇ? ನನ್ನ ಜಾತಿ, ಮತ, ಪಂಥ ಎಲ್ಲವೂ ಹೆಣ್ಣು ಮಾತ್ರ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ತಮ್ಮನ್ನು ಟೀಕಿಸಿದ ಮಾಧ್ಯಮಗಳು ಮತ್ತು ಟೀಕಾಕಾರರಿಗೆ ಖಡಕ್ ಉತ್ತರ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಹಲವು ವರ್ಷಗಳಿಂದ ಸರಣಿ ಕೊಲೆ ಮತ್ತು

ಧರ್ಮಸ್ಥಳದಲ್ಲಿ ಸತ್ತ ಹಿಂದೂ ಹೆಣ್ಮಕ್ಕಳಿಗೆ ನ್ಯಾಯ ಕೇಳಿದ್ರೆ ನಾನು ಎಡಪಂಥೀಯಳೇ? ಮಾಧ್ಯಮಗಳಿಗೆ ತಿರುಗೇಟು ನೀಡಿದ ನಾಗಲಕ್ಷ್ಮಿ ಚೌದರಿ Read More »

ದೆಹಲಿ ಸ್ಪೋಟ ಪ್ರಕರಣ| ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ

ಸಮಗ್ರ ನ್ಯೂಸ್: ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ದೆಹಲಿ ಸ್ಪೋಟ ಪ್ರಕರಣ| ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ Read More »

ಕರ್ನಾಟಕ, ತಮಿಳುನಾಡಿಗೆ ಖಾಸಗಿ ಬಸ್ ಸಂಚಾರ ಸ್ಥಗಿತಕ್ಕೆ ಕೇರಳ‌ ಬಸ್ ಮಾಲೀಕರ ನಿರ್ಧಾರ

ಸಮಗ್ರ ನ್ಯೂಸ್: ಕೇರಳದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಐಷಾರಾಮಿ ಬಸ್ ಮಾಲೀಕರ ಸಂಘ ಭಾನುವಾರ ಪ್ರಕಟಿಸಿದೆ. ಕೇರಳದಿಂದ ತಮಿಳುನಾಡು ಮತ್ತು ಕರ್ನಾಟಕಕ್ಕೆ ಅಂತರರಾಜ್ಯ ಪ್ರವಾಸಿ ಬಸ್ ಸೇವೆಗಳನ್ನು ಸೋಮವಾರ ಸಂಜೆ 6 ಗಂಟೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್ ಮಾಲೀಕರ ಸಂಘ, ಕೇರಳ ರಾಜ್ಯ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ. ನೆರೆಯ ರಾಜ್ಯಗಳು ಭಾರಿ ದಂಡ ವಿಧಿಸಲು, ಕಾನೂನುಬಾಹಿರ ರಾಜ್ಯ ಮಟ್ಟದ ತೆರಿಗೆಗಳನ್ನು ವಿಧಿಸಲು ಮತ್ತು ಕೇರಳ ನಿರ್ವಾಹಕರಿಗೆ ಸೇರಿದ ಅಖಿಲ ಭಾರತ

ಕರ್ನಾಟಕ, ತಮಿಳುನಾಡಿಗೆ ಖಾಸಗಿ ಬಸ್ ಸಂಚಾರ ಸ್ಥಗಿತಕ್ಕೆ ಕೇರಳ‌ ಬಸ್ ಮಾಲೀಕರ ನಿರ್ಧಾರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನವೆಂಬರ್‌ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ ಬನ್ನಿ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಬಹಳ ಅನುಕೂಲಕರ ದಿನಗಳ ತರಲಿದೆ. ನಿಮ್ಮ ಹಲವು ಕೆಲಸಗಳನ್ನು ಈ ವಾರ ಪೂರ್ಣ ಮಾಡುವಿರಿ. ಹಾಗೆ ಹೊಸ ಕೆಲಸಗಳನ್ನು ಆರಂಭಿಸುವಿರಿ. ಈ

ದ್ವಾದಶ ರಾಶಿಗಳ ವಾರಭವಿಷ್ಯ Read More »

ರೈತರ ಹೋರಾಟಕ್ಕೆ ‌ಮಣಿದ‌ ಸರ್ಕಾರ| ಟನ್ ಗೆ ₹3300 ನಿಗದಿ| ಹೋರಾಟಗಾರರಿಂದ ಸಂಭ್ರಮಾಚರಣೆ

ಸಮಗ್ರ ನ್ಯೂಸ್: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.

ರೈತರ ಹೋರಾಟಕ್ಕೆ ‌ಮಣಿದ‌ ಸರ್ಕಾರ| ಟನ್ ಗೆ ₹3300 ನಿಗದಿ| ಹೋರಾಟಗಾರರಿಂದ ಸಂಭ್ರಮಾಚರಣೆ Read More »

ಬೆಳಗಾವಿ: ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ| ರಾ.ಹೆದ್ದಾರಿ ತಡೆದು ಪ್ರತಿಭಟನೆ| ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಬೆಳಗಾವಿಯ ಹತ್ತರಗಿ ಬಳಿ ರೈತರು ಉಗ್ರ ಸ್ವರೂಪದ ಹೋರಾಟ ನಡೆಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತರಗಿ ಬಳಿ ಹೆದ್ದಾರಿಯಲ್ಲಿ ಬೀಡು ಬಿಟ್ಟಿರುವ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು. ಆದರೆ ಹೆದ್ದರೈ ಬಂದ್ ಮಾಡದಂತೆ ಪೊಲೀಸರು ಪ್ರತಿಭಟನಾಕಾರರ

ಬೆಳಗಾವಿ: ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ| ರಾ.ಹೆದ್ದಾರಿ ತಡೆದು ಪ್ರತಿಭಟನೆ| ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಲ್ಲು ತೂರಾಟ Read More »

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (MRP) ನಿಗದಿ ಮಾಡಬೇಕಿರುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ರಾಜ್ಯ ಸರ್ಕಾರದ ಮೇಲಿನ ಒತ್ತಡವನ್ನು ತಗ್ಗಿಸಿ, ಹೋರಾಟದ ದಿಕ್ಕನ್ನು ಕೇಂದ್ರದತ್ತ ತಿರುಗಿಸುವ ರಾಜಕೀಯ ನಡೆ ಪ್ರದರ್ಶಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ Read More »