ರಾಜ್ಯ

ಮತ್ತೆ ಜನಸಾಮಾನ್ಯರಿಗೆ ತೈಲ ಬೆಲೆ ಹೊರೆ| ಗೃಹಿಣಿಯರ ಕಾಸಿಗೆ ಕತ್ತರಿ| ಪೆಟ್ರೋಲ್, ಗ್ಯಾಸ್ ದರದಲ್ಲಿ ಏರಿಕೆ

ಸಮಗ್ರ ನ್ಯೂಸ್: ಜನಸಾಮಾನ್ಯರಿಗೆ ಮೇಲಿಂದ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಎಣ್ಣೆ ಸೇರಿದಂತೆ ಇತರೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್‌ ಕೊಟ್ಟಿದೆ. ಇಂದಿನಿಂದ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದೆ. 2021ರ ಅಕ್ಟೋಬರ್‌ ನಂತರ ಇದೇ ಮೊದಲ ಬಾರಿಗೆ ದೇಸೀ LPG ಸಿಲಿಂಡರ್ ದರ ಏರಿಕೆಯಾಗಿದೆ.ಸುಮಾರು ನಾಲ್ಕೂವರೆ ತಿಂಗಳ ನಂತರ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್‌ […]

ಮತ್ತೆ ಜನಸಾಮಾನ್ಯರಿಗೆ ತೈಲ ಬೆಲೆ ಹೊರೆ| ಗೃಹಿಣಿಯರ ಕಾಸಿಗೆ ಕತ್ತರಿ| ಪೆಟ್ರೋಲ್, ಗ್ಯಾಸ್ ದರದಲ್ಲಿ ಏರಿಕೆ Read More »

ಬೆಂಗಳೂರು: 6 ರಿಂದ 8ನೇ ತರಗತಿ ಬೋಧಕರ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಟ| ಇಲ್ಲಿದೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಂದರೆ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು [ಸಾರ್ವಜನಿಕ ಶಿಕ್ಷಣ ಇಲಾಖೆ] [ನೇಮಕಾತಿ] [ವಿಶೇಷ] ನಿಯಮಗಳು – 2022 ಸಂ:ಇಪಿ 89 ಪಿಬಿಎಸ್ 2021(ಭಾಗ-1) ದಿನಾಂಕ:22-02-2022 ರ ನಿಯಮಗಳನ್ವಯ ಆಯ್ಕೆ ಮಾಡಲು ಈ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು

ಬೆಂಗಳೂರು: 6 ರಿಂದ 8ನೇ ತರಗತಿ ಬೋಧಕರ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಟ| ಇಲ್ಲಿದೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ Read More »

ಕ್ರಾಂತಿಕಾರಿ ಬದಲಾವಣೆಗೆ ಮುನ್ನುಡಿ ಬರೆದ ಕರ್ನಾಟಕ ಸರ್ಕಾರ| ಉಕ್ರೇನ್ ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಸಮಗ್ರ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ 700 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಶಿಕ್ಷಣದ ವಿಧಾನ, ಅಧಿಕೃತ ಮಾನ್ಯತೆ ನಿರ್ಧಾರಕ್ಕೆ ಉನ್ನತ ಸಮಿತಿ ರಚಿಸಲಾಗುತ್ತದೆ. ರಷ್ಯಾ -ಉಕ್ರೇನ್ ಯುದ್ಧದಿಂದ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸದ್ಯಕ್ಕೆ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ

ಕ್ರಾಂತಿಕಾರಿ ಬದಲಾವಣೆಗೆ ಮುನ್ನುಡಿ ಬರೆದ ಕರ್ನಾಟಕ ಸರ್ಕಾರ| ಉಕ್ರೇನ್ ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ Read More »

21ದಿನಗಳ ಬಳಿಕ ತಾಯ್ನಾಡಿಗೆ ತಲುಪಿದ ನವೀನ್ ಪಾರ್ಥಿವ ಶರೀರ

ಸಮಗ್ರ ನ್ಯೂಸ್: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ ತಲುಪಿದೆ. ದುಬೈ ಮೂಲಕ ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಂತಿಮ ದರ್ಶನ ಪಡೆದರು. ಮೃತ ನವೀನ್ ಅಣ್ಣ ಹರ್ಷ ಸೇರಿದಂತೆ ಗ್ರಾಮಸ್ಥರು ಪಾರ್ಥಿವ

21ದಿನಗಳ ಬಳಿಕ ತಾಯ್ನಾಡಿಗೆ ತಲುಪಿದ ನವೀನ್ ಪಾರ್ಥಿವ ಶರೀರ Read More »

“ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ” – ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬಹಿರಂಗ ಕೊಲೆ ಬೆದರಿಕೆಯೊಡ್ಡಿದ ಇಸ್ಲಾಮಿಕ್ ಸಂಘಟನೆ

ಸಮಗ್ರ ನ್ಯೂಸ್: “ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ಇಸ್ಲಾಮಿಕ್‌ ಸಂಘಟನೆಯೊಂದು ಬಹಿರಂಗವಾಗಿಯೇ ಕೊಲೆ ಬೆದರಿಕೆ ಹಾಕಿದೆ. ಮಧುರೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡು ತೌಹೀದ್‌ ಜಮಾತ್‌(ಟಿಎನ್‌ಟಿಜೆ) ಸಂಘಟನೆಯ ನಾಯಕ ಕೊವಾಯಿ ಆರ್‌. ರೆಹಮತುಲ್ಲಾ, “ಮುಂದೊಂದು ದಿನ ಹಿಜಾಬ್‌ ತೀರ್ಪು ಕೊಟ್ಟ ಆ ನ್ಯಾಯಮೂರ್ತಿಗಳಿಗೆ ಏನಾದರೂ ಆದರೆ, ಅದಕ್ಕೆ ಅವರೇ ಹೊಣೆಗಾರರು ಹೊರತು ನಾವಲ್ಲ’ ಎಂದು ಹೇಳಿದ್ದರು. ಹಾಗೆಯೇ ಈ ರೀತಿ ಬೆದರಿಕೆ ಹಾಕಿದ್ದಕ್ಕೆ ನಮ್ಮನ್ನು ಜೈಲಿಗೆ ಹಾಕುವುದಾದರೆ ಅದನ್ನು

“ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ” – ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬಹಿರಂಗ ಕೊಲೆ ಬೆದರಿಕೆಯೊಡ್ಡಿದ ಇಸ್ಲಾಮಿಕ್ ಸಂಘಟನೆ Read More »

ಪಠ್ಯಪುಸ್ರಕದಲ್ಲಿ ಭಗವದ್ಗೀತೆ ತರಲ್ಲ – ಮಾಧುಸ್ವಾಮಿ

ಸಮಗ್ರ ನ್ಯೂಸ್: ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲ. ಪ್ರಸ್ತಾಪವೇ ಇಲ್ಲವೆಂದ ಮೇಲೆ ಚರ್ಚೆ ಯಾಕೆ? ಈ ಬಗ್ಗೆ ಶಿಕ್ಷಣ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಉಳಿದ ವಿಚಾರ ನನಗೆ ಗೊತ್ತಿಲ್ಲ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನವನ್ನು ಈ ವಾರ ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ಅಧಿವೇಶನ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಭಗವದ್ಗೀತೆಯನ್ನು ಮುಂದಿನ ವರ್ಷದಿಂದ ಪಠ್ಯದಲ್ಲಿ

ಪಠ್ಯಪುಸ್ರಕದಲ್ಲಿ ಭಗವದ್ಗೀತೆ ತರಲ್ಲ – ಮಾಧುಸ್ವಾಮಿ Read More »

ಮಂಗಳೂರು: ಬಸ್ ರಸ್ತೆಯಲ್ಲಿ ಅಡ್ಡವಾಗಿಟ್ಟು ಸಿಬ್ಬಂದಿಯ ಗುಂಪುಘರ್ಷಣೆ| ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ಸಮಯ ಪಾಲನೆಯ ವಿಷಯದಲ್ಲಿ ಎರಡು ಬಸ್‌ಗಳನ್ನು ರಸ್ತೆಯಲ್ಲಿ ಅಡ್ಡವಾಗಿಟ್ಟುಕೊಂಡು ಪರಸ್ಪರ ಜಗಳವಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡಿದ ಆರೋಪದಲ್ಲಿ ಉರ್ವ ಪೊಲೀಸರು ನಾಲ್ಕು ಮಂದಿ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಬಸ್ ಸಿಬ್ಬಂದಿಗಳಾದ ಗುಣರಾಜ್ ಶೆಟ್ಟಿ, ಸ್ಟೀವನ್ ನೆಲ್ಸನ್ ನೊರೊನ್ಹಾ, ಧನರಾಜ್ ಮತ್ತು ಶರತ್ ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಲೇಡಿಹಿಲ್ ಬಸ್ ನಿಲ್ದಾಣದ ಬಳಿ ಶುಕ್ರವಾರ ಎರಡು ಬಸ್‌ಗಳನ್ನು ಪರಸ್ಪರ ಅಡ್ಡವಾಗಿಟ್ಟು ಚಾಲಕ ಮತ್ತು ನಿರ್ವಾಹಕರು ಬೈದಾಡಿ ತಳ್ಳಾಡುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ

ಮಂಗಳೂರು: ಬಸ್ ರಸ್ತೆಯಲ್ಲಿ ಅಡ್ಡವಾಗಿಟ್ಟು ಸಿಬ್ಬಂದಿಯ ಗುಂಪುಘರ್ಷಣೆ| ನಾಲ್ವರು ಅರೆಸ್ಟ್ Read More »

ಮುಂದಿನ ಮೂರು ದಿನ ಮಳೆ ಸಾಧ್ಯತೆ| ಇದು ‘ಅಸನಿ’ ಎಫೆಕ್ಟ್

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ರೂಪಗೊಳ್ಳಲಿರುವ ‘ಅಸನಿ’ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ ‘ಅಸನಿ’ ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ಮಾತನಾಡಿ, “ಚಂಡಮಾರುತದ ಪರಿಣಾಮ ಕರ್ನಾಟಕ,

ಮುಂದಿನ ಮೂರು ದಿನ ಮಳೆ ಸಾಧ್ಯತೆ| ಇದು ‘ಅಸನಿ’ ಎಫೆಕ್ಟ್ Read More »

ಖಾಸಗಿ ಬಸ್ ಪಲ್ಟಿ ಪ್ರಕರಣ| ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ|

ಸಮಗ್ರ ಸಮಾಚಾರ: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಪಲ್ಟಿ ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಸಾರಿಗೆ ಇಲಾಖೆಯ ಸಚಿವ ಬಿ.ಶ್ರೀರಾಮುಲು ಈ ಘೋಷಣೆ ಮಾಡಿದ್ದು, ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ನೀಡುವುದು. ಇನ್ನು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು. ಇನ್ನು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 1ಲಕ್ಷ ಪರಿಹಾರ

ಖಾಸಗಿ ಬಸ್ ಪಲ್ಟಿ ಪ್ರಕರಣ| ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ| Read More »

ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ| ಪಾರ್ಥಿವ ಶರೀರ ಎಸ್.ಎಸ್ ಆಸ್ಪತ್ರೆಗೆ ಹಸ್ತಾಂತರಿಸಲು ನಿರ್ಧಾರ|

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ಮೃತವಾಗಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನವೀನ್ ಮೃತದೇಹಕ್ಕೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ, ಶವವನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾನ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ್, ಮಗನ ಮೃತದೇಹ ಸೋಮವಾರ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ| ಪಾರ್ಥಿವ ಶರೀರ ಎಸ್.ಎಸ್ ಆಸ್ಪತ್ರೆಗೆ ಹಸ್ತಾಂತರಿಸಲು ನಿರ್ಧಾರ| Read More »