ಹಿರಿಯ ನಟ ರಾಜೇಶ್ ಇನ್ನಿಲ್ಲ
ಸಮಗ್ರ ನ್ಯೂಸ್ ಡೆಸ್ಕ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ನಟ ರಾಜೇಶ್ (87) ಶನಿವಾರ ಕೊನೆಯುಸಿರೆಳೆದಿದ್ದಾರೆ. ಶನಿವಾರ ಮುಂಜಾನೆ 2.30ರ ಸುಮಾರಿಗೆ ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ರಾಜೇಶ್ ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ. ಮಧ್ಯಾಹ್ನ 3:30ರ ನಂತರ […]
ಹಿರಿಯ ನಟ ರಾಜೇಶ್ ಇನ್ನಿಲ್ಲ Read More »







