ಮಂಗಳೂರು: ”ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ?” ಇಂದು ಸುಳ್ಯ ಕೋರ್ಟ್ ಗೆ ಡಿಕೆಶಿ!
ಮಂಗಳೂರು: ಸುಳ್ಯದ ವ್ಯಕ್ತಿಯೊಡನೆ ಫೋನ್ ಸಂಭಾಷಣೆ ಮೂಲಕ ಮಾತಿನ ಚಕಮಕಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ಹಿನ್ನಲೆ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಡಿಕೆಶಿ ಮಾಧ್ಯಮಗಳ ಜೊತೆ ಮಾತನಾಡಿದರು. ನಾನು ಇಂಧನ ಸಚಿವನಾಗಿದ್ದಾಗ ಯಾರೋ ಓರ್ವ ತಲೆಹರಟೆ ಮಾಡಿ ಫೋನ್ ಮಾಡಿದ್ದು ನನ್ನೊಂದಿಗೆ ಬೇಕಾಬಿಟ್ಟಿ ಮಾತನಾಡಿದ್ದ. ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ಧ ದೂರು […]









