“ಕರಾವಳಿ ಫೈರ್ ಬ್ರಾಂಡ್” ಅನಂತ ಕುಮಾರ್ ಹೆಗಡೆಗೆ ಒಲಿಯುತ್ತಾ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ?| ಅರವಿಂದ ಲಿಂಬಾವಳಿ ಹೆಸರೂ ಮಂಚೂಣಿಯಲ್ಲಿ..!
ಬೆಂಗಳೂರು: ಹಾನಗಲ್ ಉಪ ಚುನಾವಣೆಯ ಸೋಲಿನ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ನಡೆಯಲಿದೆ ಎಂಬ ಸುದ್ದಿ ಎಲ್ಲೆಡೆ ಹರಡುತ್ತಿದೆ. ಈ ಸೋಲು ರಾಜ್ಯ ಬಿಜೆಪಿಯಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ್ ಕಟೀಲ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಹೈಕಮಾಂಡ್ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಇಂದು (ನ.9) ರಾಜ್ಯ ಬಿಜೆಪಿಯ ಉಸ್ತುವಾರಿ ಅರುಣಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ನೂತನವಾಗಿಬಿಜೆಪಿಯಿಂದ ಅಧ್ಯಕ್ಷರಾಗಿ ಆಯ್ಕೆಯಾಗಬಹುದಾದ ಹೆಸರುಗಳಲ್ಲಿ ಉತ್ತರ […]








