ರಾಜ್ಯ

ನಳಿನ್ ಹೇಳಿಕೆಗೆ ಮುನಿಸಿಕೊಂಡ ಯಡಿಯೂರಪ್ಪ| ಬೇಜವಾಬ್ದಾರಿ ಹೇಳಿಕೆಗೆ ಅಸಮಾಧಾನ|

ಬೆಂಗಳೂರು : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಮತ್ತು ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಮೊರಟಗಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಯಾರಿಗೂ ಅಗೌರವ ತರುವ ಹಾಗೆ ಯಾರೂ ಮಾತನಾಡಬಾರದು. ರಾಹುಲ್ ಗಾಂಧಿ ಅವರ ಬಗ್ಗೆ ನನಗೆ ಗೌರವ ಇದೆ. ನಳಿನ್ ಕುಮಾರ್ ರೀತಿ ಯಾರು ಮಾತನಾಡಬಾರದು ಎಂದಿದ್ದಾರೆ. ನಳಿನ್ ಕುಮಾರ್ […]

ನಳಿನ್ ಹೇಳಿಕೆಗೆ ಮುನಿಸಿಕೊಂಡ ಯಡಿಯೂರಪ್ಪ| ಬೇಜವಾಬ್ದಾರಿ ಹೇಳಿಕೆಗೆ ಅಸಮಾಧಾನ| Read More »

ಬೆಂಗಳೂರಿನ ಗುಂಡಿಗಳಿಗೆ ಪೂಜೆ ನೆರವೇರಿಸಿ ಎಎಪಿ ಪ್ರತಿಭಟನೆ| ರಸ್ತೆ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹ

ಬೆಂಗಳೂರು : ರಸ್ತೆಗಳಲ್ಲಿರುವ ಗುಂಡಿಯ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಎತ್ತಿ ಪೂಜೆ. ಅದರ ಸುತ್ತಮುತ್ತ ಸರ್ಕಾರದ ವಿರುದ್ಧ ಬರಹಗಳಿರುವ ಬೋರ್ಡ್‌ ಹಿಡಿದು ನಿಂತಿರುವ ಬಿಳಿ ಟೋಪಿಧಾರಿಗಳು. ಅವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ಧ ಆಕ್ರೋಶದ ಘೋಷಣೆಗಳು. ಇದು ಆಮ್‌ ಆದ್ಮಿ ಪಾರ್ಟಿಯು ಬುಧವಾರ ಬೆಂಗಳೂರಿನಾದ್ಯಂತ ಹಮ್ಮಿಕೊಂಡಿದ್ದ ರಸ್ತೆಗುಂಡಿ ಹಬ್ಬ ಕಾರ್ಯಕ್ರಮದಲ್ಲಿ ಕಂಡುಬಂದ ದೃಶ್ಯ. ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರದ ಅಧ್ಯಕ್ಷ ಮೋಹನ್‌ ದಾಸರಿ ನೇತೃತ್ವದಲ್ಲಿ ಬೆಂಗಳೂರಿನ ಎಲ್ಲಾ ವಿಧಾನಸಭಾ

ಬೆಂಗಳೂರಿನ ಗುಂಡಿಗಳಿಗೆ ಪೂಜೆ ನೆರವೇರಿಸಿ ಎಎಪಿ ಪ್ರತಿಭಟನೆ| ರಸ್ತೆ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹ Read More »

ಮತ್ತೆ ಮತ್ತೆ ಕಂಪಿಸುತ್ತಿರುವ ಬಸವನಾಡು ವಿಜಯಪುರ| ಇದು ಅಪಾಯದ ಮುನ್ಸೂಚನೆಯೇ?

ವಿಜಯಪುರ : ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಆತಂಕದಿಂದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಇಂದು ಬೆಳಗ್ಗೆ 10.30 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೂಕಂಪನ‌ ಅನುಭವ ಆಗುತ್ತಿರುವ ಕಾರಣ ಜನರಲ್ಲಿ ಆತಂಕ ಮನೆ ಮಾಡಿದ್ದು, ಇಂದು ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮಕ್ಕೆ ನ್ಯಾಶನಲ್ ಜಿಯೋಫಿಜಿಕಲ್

ಮತ್ತೆ ಮತ್ತೆ ಕಂಪಿಸುತ್ತಿರುವ ಬಸವನಾಡು ವಿಜಯಪುರ| ಇದು ಅಪಾಯದ ಮುನ್ಸೂಚನೆಯೇ? Read More »

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದ ವೈಷ್ಣವಿ ದಯಾನಂದ

ಮಡಿಕೇರಿ: ಗರಿಷ್ಠ ಸಂಖ್ಯೆಯ ಪ್ರಾಣಿಗಳ ಹೆಸರು ಮತ್ತು ಅವುಗಳ ಮರಿಗಳನ್ನು ಹೇಳುವುದರ ಮೂಲಕ ವೈಷ್ಣವಿ.ಕೆ.ಡಿ.ಇಂಡಿಯಾ ಬುಕ್ ಆಫ್ ರೆಕಾರ್ಡ್ ಲ್ಲಿ ಸ್ಥಾನ ಪಡೆದಿದ್ದಾಳೆ ಮಡಿಕೇರಿಯ ವೈಷ್ಣವಿ ದಯಾನಂದ್. ಇವಳು ಕೂಡಕಂಡಿ ಓಂಶ್ರೀ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಮಡಿಕೇರಿಯ ಸಹ ಪ್ರಾಧ್ಯಾಪಕ ಡಾ.ದಯಾನಂದ. ಕೆ.ಸಿ ಯವರ ಪುತ್ರಿ. ಈಕೆ ಮಡಿಕೇರಿ ಸಂತ ಜೋಸೆಫರ ಶಾಲೆಯ ಒಂದನೆ ತರಗತಿಯ ವಿದ್ಯಾರ್ಥಿನಿ.

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದ ವೈಷ್ಣವಿ ದಯಾನಂದ Read More »

ವಾಲ್ಮೀಕಿ ಜಯಂತಿ| ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ ಸಿಎಂ|

ಬೆಂಗಳೂರು : ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2020 ಹಾಗೂ 2021 ನೇ ಸಾಲಿನ ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ವಾಲ್ಮೀಕಿ ಜಯಂತಿಯಂದು ನೀಡಲಾಗುವಂತ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಿಸಿದೆ. 2020ನೇ ಸಾಲಿಗೆ ಐದು ಸಾಧಕರು ಹಾಗೂ 2021ನೇ ಸಾಲಿಗೆ ಆರು ಸಾಧಕರು ಸೇರಿದಂತೆ 11 ಸಾಧಕರಿಗೆ ಈ ಬಾರಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2020 ನೇ ಸಾಲಿನಲ್ಲಿ ವಾಲ್ಮೀಕಿ

ವಾಲ್ಮೀಕಿ ಜಯಂತಿ| ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ ಸಿಎಂ| Read More »

ಅ.24ರಿಂದ ಒಂದು ವಾರ ಕನ್ನಡ ಕಂಪು| ವಿಶಿಷ್ಟ ಕಾರ್ಯಕ್ರಮಕ್ಕೆ ತಯಾರಿ|

ಬೆಂಗಳೂರು: ರಾಜ್ಯಾದ್ಯಂತ 66ನೇ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಣೆ ಮಾಡುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೇ ತಿಂಗಳ 24ರಿಂದ 30ರವರೆಗೆ ಒಂದು ವಾರ ಕಾಲ ‘ಕನ್ನಡಕ್ಕಾಗಿ ನಾವು’ ಎಂಬ ಅಭಿಯಾನ ಹಮ್ಮಿಕೊಂಡಿದೆ. ಮಾತಾಡ್‌ ಮಾತಾಡ್‌ ಕನ್ನಡ ಎಂಬ ಘೋಷ ವಾಕ್ಯದ ಕಲ್ಪನೆಯಲ್ಲಿ ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸಲಾಗಿದ್ದು, ಈ ಒಂದು ವಾರ ಕಾಲ ಆರು ರೀತಿಯ ಅಭಿಯಾನಗಳನ್ನು ಕೈಗೊಳ್ಳಲಾಗುತ್ತದೆ. ಅಭಿಯಾನದ ವೇಳೆ ಎಲ್ಲರೂ ಕನ್ನಡದಲ್ಲಿಯೇ ಮಾತನಾಡುವುದು, ಕನ್ನಡದಲ್ಲಿಯೇ ವ್ಯವಹರಿಸುವುದು, ಸಾಮಾಜಿಕ ಜಾಲತಾಣದಲ್ಲಿ ಎಲ್ಲರೂ ಕನ್ನಡವನ್ನೇ ಬಳಸುವುದು,

ಅ.24ರಿಂದ ಒಂದು ವಾರ ಕನ್ನಡ ಕಂಪು| ವಿಶಿಷ್ಟ ಕಾರ್ಯಕ್ರಮಕ್ಕೆ ತಯಾರಿ| Read More »

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ

ಸಿಂದಗಿ: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕೆಂಡ ಕಾರಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಂದಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಒಬ್ಬ ಬೇಜವಾಬ್ದಾರಿ, ಅಪ್ರಬುದ್ಧ ರಾಜಕಾರಣಿ. ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಚ್ಚನ ತರಹ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ.

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ Read More »

ಡೀಸೆಲ್‌ ಬೆಲೆ ಇಳಿಸದಿದ್ದರೆ ಅನಿರ್ಧಿಷ್ಟಾವಧಿ ಲಾರಿ ಮುಷ್ಕರ| ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಾರಿ ಮಾಲೀಕರು|

ಬೆಂಗಳೂರು: ಡೀಸೆಲ್‌ ಮೇಲೆ ವಿಧಿಸಿರುವ ವ್ಯಾಟ್‌ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಡಿಸೇಲ್ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ ಕಳೆದ ಒಂದು ವರ್ಷದಲ್ಲಿ ಡೀಸೆಲ್ ಬೆಲೆ 26 ರೂಪಾಯಿಯಷ್ಟು ಹೆಚ್ಚಾಗಿದೆ.‌ ರಾಜ್ಯದಲ್ಲಿರುವ ಆರು ಲಕ್ಷ ಲಾರಿಗಳಲ್ಲಿ ಶೇ. 30 ರಷ್ಟು ಲಾರಿಗಳು ಶೆಡ್ ಸೇರಿವೆ. ದಿನದಿಂದ‌

ಡೀಸೆಲ್‌ ಬೆಲೆ ಇಳಿಸದಿದ್ದರೆ ಅನಿರ್ಧಿಷ್ಟಾವಧಿ ಲಾರಿ ಮುಷ್ಕರ| ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಾರಿ ಮಾಲೀಕರು| Read More »

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ|

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯೊಂದಿಗೆ ಚರ್ಚಿಸಿದ್ದು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯನ್ನು ಪ್ರಧಾನಿ ಅವಲೋಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ರಾತ್ರಿಯಿಂದ ನೈನಿತಾಲ್ ಮತ್ತು ಕೌಶಾನಿಯಿಂದ ಮುನ್ಸಿವರೆಗೆ ಹೋಗುವ ದಾರಿಯಲ್ಲಿ ಹಲವಾರು ಭೂಕುಸಿತಗಳು ಸಂಭವಿಸಿವೆ. ಕೌಶನಿಯ ವಿವಿಧ ಸ್ಥಳಗಳಲ್ಲಿ ಸುಮಾರು 500 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಅಲ್ಮೋರಾ ಜಿಲ್ಲೆಯಲ್ಲಿ ಭಾರೀ

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ| Read More »

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »