ಈದ್ ಸಾಮೂಹಿಕ ಮೆರವಣಿಗೆಗೆ ನಿಷೇಧ| ವಾಲ್ಮೀಕಿ ಜಯಂತಿ, ಈದ್ ಮಿಲಾದ್ ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ|
ಬೆಂಗಳೂರು- ವಾಲ್ಮೀಕಿ ಜಯಂತಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ. ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಮತ್ತು ಈದ್ ಮಿಲಾದ್ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕಂದಾಯ ಇಲಾಖೆ ಹೊರಡಿಸಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿ, ಎಸ್‍ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ […]










