ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ
ಮೈಸೂರು: 411ನೇ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ವಿಧ್ಯುಕ್ತ ಚಾಲನೆ ದೊರೆಯಿತು. ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರು ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ವೈಭವವನ್ನು ಉದ್ಘಾಟಿಸಿದರು. ಇಂದು (ಅ.7) ಬೆಳಗ್ಗೆ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಸ್.ಎಂ. ಕೃಷ್ಣ ಅವರು 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ […]










